ವೀಡಿಯೊ…| ಚುನಾವಣಾ ರ‍್ಯಾಲಿಯಲ್ಲಿ ಬಿಜೆಪಿ ನಾಯಕನ ನೆನೆದು ಕಣ್ಣೀರಿಟ್ಟ ಪ್ರಧಾನಿ ಮೋದಿ ; ಭಾಷಣ ಕೆಲಕಾಲ ಸ್ಥಗಿತ

ಸೇಲಂ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡಿನ ಸೇಲಂನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ 2013 ರಲ್ಲಿ ತಮಿಳುನಾಡಿನ ಸೇಲಂನಲ್ಲಿ ಹತ್ಯೆಗೀಡಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್‌’ ವಿ ರಮೇಶ ಅವರನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. “ಇಂದು, ನಾನು ಆಡಿಟರ್ ರಮೇಶ ಅವರನ್ನು ನೆನಪಿಸಿಕೊಳ್ಳುತ್ತೇನೆ” ಎಂದು ಹೇಳಿದ ಪ್ರಧಾನಿ ಮೋದಿ ಭಾವುಕರಾಗಿ ಒಂದು … Continued

ಜೆಎಂಎಂ ತೊರೆದು ಬಿಜೆಪಿಗೆ ಸೇರ್ಪಡೆಯಾದ ಮಾಜಿ ಸಿಎಂ ಹೇಮಂತ್ ಸೊರೇನ್ ಅತ್ತಿಗೆ ಸೀತಾ ಸೊರೇನ್

ರಾಂಚಿ : ಜಾರ್ಖಂಡದ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್(Hemant Soren) ಅತ್ತಿಗೆ ಸೀತಾ ಸೊರೇನ್ (Sita Soren)​ ಅವರು ಜಾರ್ಖಂಡ್​ ಮುಕ್ತಿ ಮೋರ್ಚಾ(ಜೆಎಂಎಂ)ಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರು ಜಾಮಾ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ತಮ್ಮ ಪತಿ ದುರ್ಗಾ ಸೊರೇನ್ ಅವರ ನಿಧನದ ನಂತರ ಪಕ್ಷವು ತನಗೆ ಮತ್ತು ತಮ್ಮ … Continued

ಲೋಕಸಭೆ ಚುನಾವಣೆ: ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ ; ಪಿಎಂಕೆಗೆ 10 ಸ್ಥಾನಗಳು

ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ತಮಿಳುನಾಡಿನ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಜೊತೆ ಬಿಜೆಪಿ ಮಂಗಳವಾರ ತನ್ನ ಚುನಾವಣಾ ಪೂರ್ವ ಮೈತ್ರಿಯನ್ನು ಅಂತಿಮಗೊಳಿಸಿದೆ. ಮೈತ್ರಿಯ ಸೀಟು ಹಂಚಿಕೆಯ ಸೂತ್ರದ ಪ್ರಕಾರ, ಪಿಎಂಕೆಗೆ ತಮಿಳುನಾಡಿನಲ್ಲಿ 10 ಲೋಕಸಭಾ ಸ್ಥಾನಗಳನ್ನು ನೀಡಲಾಗಿದೆ.. ಪಿಎಂಕೆ ಪಕ್ಷವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ಕ್ಕೆ ಸೇರ್ಪಡೆಗೊಳ್ಳುವ ಮತ್ತು ರಾಜ್ಯದಲ್ಲಿ ಸಂಸತ್ತಿನ … Continued

ಬೆಂಗಳೂರಲ್ಲಿ ದಿನಕ್ಕೆ 500 ಮಿಲಿಯನ್ ಲೀಟರ್ ನೀರಿನ ಕೊರತೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಪ್ರತಿದಿನ 2,600 ಎಂಎಲ್‌ಡಿ ನೀರು (ಎಂಎಲ್‌ಡಿ) ಕೊರತೆ ಎದುರಾಗಿದ್ದು, ಪ್ರತಿದಿನ ಸಭೆ ನಡೆಸಿ ವಾರಕ್ಕೊಮ್ಮೆ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಮುಖ್ಯಮಂತ್ರಿಗಳ ಪ್ರಕಾರ, ಬೆಂಗಳೂರಿನಲ್ಲಿ 14,000 ಬೋರ್‌ವೆಲ್‌ಗಳಿದ್ದು, ಅವುಗಳಲ್ಲಿ 6,900 ಬತ್ತಿ ಹೋಗಿವೆ. ಜಲಮೂಲಗಳು ಅತಿಕ್ರಮಿಸಲ್ಪಟ್ಟಿವೆ ಅಥವಾ ಸತ್ತಿವೆ. ಬೆಂಗಳೂರಿಗೆ 2,600 ಎಂಎಲ್‌ಡಿ … Continued

ಲೋಕಸಭೆ ಚುನಾವಣೆ : ಬಿಹಾರದಲ್ಲಿ ಎನ್‌ ಡಿ ಎ ಸೀಟು ಹಂಚಿಕೆ ಅಂತಿಮ ; ಈ ಬಾರಿ ಬಿಜೆಪಿಯೇ ದೊಡ್ಡಣ್ಣ…ಆ ಸ್ಥಾನ ಬಿಟ್ಟುಕೊಟ್ಟ ಜೆಡಿಯು…!

ನವದೆಹಲಿ: ಎನ್‌ಡಿಎ ಸೋಮವಾರ ಸಂಜೆ ಬಿಹಾರದಲ್ಲಿ ತನ್ನ ಸೀಟು ಹಂಚಿಕೆ ಸೂತ್ರವನ್ನು ಔಪಚಾರಿಕವಾಗಿ ಪ್ರಕಟಿಸಿದ್ದು, ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಅದನ್ನು ‘ದೊಡ್ಡಣ್ಣ’ನ ಸ್ಥಾನದಲ್ಲಿ ಇರಿಸಿದೆ. ಬಿಹಾರದಲ್ಲಿ ಈ ಹಿಂದೆ ಮೈತ್ರಿಕೂಟದಲ್ಲಿ ದೊಡ್ಡಣ್ಣನ ಸ್ಥಾನ ಪಡೆದಿದ್ದ ಮುಖ್ಯಮಂತ್ರಿ ನಿತೀಶಕುಮಾರ ಅವರ ಜೆಡಿಯು ಪಕ್ಷವು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಚಿರಾಗ ಪಾಸ್ವಾನ್ ಅವರ ಲೋಕ ಜನಶಕ್ತಿ … Continued

ಸಚಿವರಾಗಿ ಪೊನ್ಮುಡಿ ನೇಮಿಸಲು ರಾಜ್ಯಪಾಲ ಆರ್.ಎನ್.ರವಿ ನಿರಾಕರಣೆ ; ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಶಿಫಾರಸಿನಂತೆ ಡಿಎಂಕೆಯ ಹಿರಿಯ ನಾಯಕ ಕೆ ಪೊನ್ಮುಡಿ ಅವರನ್ನು ಸಚಿವರನ್ನಾಗಿ ನೇಮಿಸಲು ರಾಜ್ಯಪಾಲ ಆರ್.ಎನ್. ರವಿ ಅವರು ನಿರಾಕರಿಸಿದ್ದು, ಇದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್‌ ಸೋಮವಾರ ಸಮ್ಮತಿಸಿದೆ. ರಾಜ್ಯಪಾಲರು ಇತ್ತೀಚೆಗೆ ಮಾಜಿ ಉನ್ನತ ಶಿಕ್ಷಣ ಸಚಿವರ ಪೊನ್ಮುಡಿ ಅವರನ್ನು ರಾಜ್ಯ ಸಚಿವ … Continued

ಲೋಕಸಭೆ ಚುನಾವಣೆ : 6 ರಾಜ್ಯಗಳ ಗೃಹ ಕಾರ್ಯದರ್ಶಿಗಳು, ಪಶ್ಚಿಮ ಬಂಗಾಳದ ಪೊಲೀಸ್ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಹಲವು ರಾಜ್ಯಗಳಲ್ಲಿ ಹಲವಾರು ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಭಾರತೀಯ ಚುನಾವಣಾ ಆಯೋಗ(ಇಸಿಐ) ಸೋಮವಾರ ಸೂಚನೆ ನೀಡಿದೆ. ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗವು ಆದೇಶಿಸಿದೆ. ಹೆಚ್ಚುವರಿಯಾಗಿ, ಚುನಾವಣಾ ಸಮಿತಿಯು … Continued

ಮಾರ್ಚ್‌ 21ರೊಳಗೆ ಚುನಾವಣಾ ಬಾಂಡ್‌ಗಳ ಸಂಪೂರ್ಣ ವಿವರ ನೀಡಿ : ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ತಾಕೀತು

ನವದೆಹಲಿ: ಚುನಾವಣಾ ಬಾಂಡ್‌ ಕುರಿತ ಸಂಪೂರ್ಣ ಮಾಹಿತಿಯನ್ನು ಬಹಿರಂಗಗೊಳಿಸಬೇಕು ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ(ಎಸ್‌ಬಿಐ)ಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಾಕೀತು ಮಾಡಿದೆ. ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಇದೇ ತಿಂಗಳು ಮಾರ್ಚ್ 21ರೊಳಗೆ ಬಿಡುಗಡೆ ಮಾಡಬೇಕು ಎಂದು ಎಸ್‌ಬಿಐಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ತಾಕೀತು ಮಾಡಿದೆ. … Continued

ತೆಲಂಗಾಣ ರಾಜ್ಯಪಾಲರ ಹುದ್ದೆಗೆ ತಮಿಳಿಸೈ ಸೌಂದರರಾಜನ್ ರಾಜೀನಾಮೆ

ಹೈದರಾಬಾದ್‌ : ಲೋಕಸಭೆ ಚುನಾವಣೆಗೆ ಮುನ್ನ ತೆಲಂಗಾಣ ರಾಜ್ಯಪಾಲ ಮತ್ತು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ತಮಿಳಿಸೈ ಸೌಂದರರಾಜನ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯನ್ನು ಪುದುಚೇರಿ ರಾಜಭವನ ಖಚಿತಪಡಿಸಿದೆ. ವರದಿಗಳ ಪ್ರಕಾರ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. “ತೆಲಂಗಾಣದ ಗೌರವಾನ್ವಿತ ರಾಜ್ಯಪಾಲರು ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಡಾ ತಮಿಳಿಸೈ ಸೌಂದರರಾಜನ್ … Continued

ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ 3ನೇ ಮಹಾಯುದ್ಧದ ಬಗ್ಗೆ ಎಚ್ಚರಿಕೆ ನೀಡಿದ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌

ಮಾಸ್ಕೋ: ರಷ್ಯಾ ಮತ್ತು ಅಮೆರಿಕ ನೇತೃತ್ವದ ನ್ಯಾಟೋ ಮಿಲಿಟರಿ ಮೈತ್ರಿಕೂಟದ ನಡುವಿನ ನೇರ ಸಂಘರ್ಷವು ಮೂರನೇ ಮಹಾಯುದ್ಧದಿಂದ ಒಂದು ಹೆಜ್ಜೆ ದೂರದಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಸೋಮವಾರ ಪಶ್ಚಿಮ ದೇಶಗಳಿಗೆ ಎಚ್ಚರಿಸಿದ್ದಾರೆ. ಆದರೆ ಅಂತಹ ಸನ್ನಿವೇಶವನ್ನು ಯಾರೂ ಬಯಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಉಕ್ರೇನ್ ಯುದ್ಧವು 1962 ರ ಕ್ಯೂಬನ್ ಕ್ಷಿಪಣಿ ಬಿಕ್ಕಟ್ಟಿನ … Continued