ಭಾರತದಲ್ಲಿ ಕೋವಿಡ್‌ನ BA.4 ಮತ್ತು BA.5 ರೂಪಾಂತರಗಳ ಉಪಸ್ಥಿತಿ ದೃಢೀಕರಿಸಿದ INSACOG

ನವದೆಹಲಿ: ಭಾರತದಲ್ಲಿ ಕೋವಿಡ್-19 ವೈರಸ್‌ನ BA.4 ಮತ್ತು BA.5 ರೂಪಾಂತರಗಳ ಪತ್ತೆಯಾಗಿವೆ ಎಂಬುದನ್ನು ಕೇಂದ್ರೀಯ ಸಂಸ್ಥೆ INSACOG ಭಾನುವಾರ ದೃಢಪಡಿಸಿದೆ. BA.4 ಮತ್ತು BA.5 ಈ ವರ್ಷದ ಜನವರಿಯಲ್ಲಿ ಕೋವಿಡ್ ಸಾಂಕ್ರಾಮಿಕದ ಮೂರನೇ ಅಲೆಗೆ ಕಾರಣವಾಗಿದ್ದರ ಹಿಂದಿದ್ದ ಒಮಿಕ್ರಾನ್ ರೂಪಾಂತರದ ಉಪವಿಭಾಗಗಳಾಗಿವೆ. ವರದಿಗಳ ಪ್ರಕಾರ, ದಕ್ಷಿಣದ ರಾಜ್ಯಗಳಾದ ತಮಿಳುನಾಡು ಮತ್ತು ತೆಲಂಗಾಣದಲ್ಲಿ ಎರಡೂ ಉಪವಿಭಾಗಗಳು ಪತ್ತೆಯಾಗಿವೆ. … Continued

ಕ್ವಾಡ್ ಶೃಂಗಸಭೆ: ಜಪಾನ್‌ಗೆ ತೆರಳಿದ ಪ್ರಧಾನಿ ಮೋದಿ; ಜಪಾನಿನ 36 ಸಿಇಒಗಳೊಂದಿಗೆ ಸಭೆ

ನವದೆಹಲಿ: ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಜಪಾನ್‌ಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಕ್ವಾಡ್ ಶೃಂಗಸಭೆಯು ಪ್ರಭಾವಿ ಗುಂಪಿನ ಸದಸ್ಯ ರಾಷ್ಟ್ರಗಳ ನಡುವೆ ಸಹಕಾರವನ್ನು ಹೆಚ್ಚಿಸುವ ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಬೆಳವಣಿಗೆಗಳನ್ನು ಚರ್ಚಿಸುವ ಗುರಿಯನ್ನು ಈ ಸಭೆ ಹೊಂದಿದೆ. … Continued

ಕೇಂದ್ರದ ಬೆನ್ನಲ್ಲೇ ಪೆಟ್ರೋಲ್-ಡೀಸೆಲ್ ಮೇಲಿನ ವ್ಯಾಟ್‌ ಇಳಿಸಿದ ಮಹಾರಾಷ್ಟ್ರ, ರಾಜಸ್ಥಾನ, ಒಡಿಶಾ, ಕೇರಳ

ನವದೆಹಲಿ: ಕೇಂದ್ರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಗ್ರಾಹಕರಿಗೆ ಹೆಚ್ಚಿನ ಪರಿಹಾರವನ್ನು ನೀಡಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರೆ ನೀಡಿದ ನಂತರ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಕೇರಳ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿವೆ. ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಲೀಟರ್‌ಗೆ 2.08 ರೂ … Continued

2022-23ರಲ್ಲಿ ರೈತರ ರಸಗೊಬ್ಬರಕ್ಕೆ ಹೆಚ್ಚುವರಿಯಾಗಿ ₹ 1.10 ಲಕ್ಷ ಕೋಟಿ ಸಬ್ಸಿಡಿ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ರಸಗೊಬ್ಬರ ದರದಲ್ಲಿ ಭಾರಿ ಏರಿಕೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು ಹೆಚ್ಚುವರಿಯಾಗಿ ₹ 1.10 ಲಕ್ಷ ಕೋಟಿ ಮೊತ್ತವನ್ನು ರಸಗೊಬ್ಬರ ಸಬ್ಸಿಡಿಗೆ ನೀಡುವುದಾಗಿ ಹೇಳಿದೆ. ಜಾಗತಿಕ ಮಟ್ಟದಲ್ಲಿ ಆಗಿರುವ ಬೆಲೆ ಏರಿಕೆಯ ಪರಿಣಾಮವನ್ನು ರಸಗೊಬ್ಬರ ಸಬ್ಸಿಡಿ ದರ ಏರಿಕೆಯ ಮೂಲಕ ರೈತರಿಗೆ ಹೊರೆಯಾಗದಂತೆ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ 2022-23ನೇ ಹಣಕಾಸು ವರ್ಷಕ್ಕೆ ರಸಗೊಬ್ಬರಕ್ಕೆ … Continued

ಗಾಂಜಾ ಅಮಲಿನಲ್ಲಿ ತನ್ನ ಮರ್ಮಾಂಗವನ್ನೇ ತಾನೇ ಕತ್ತರಿಸಿಕೊಂಡ..! ಧರ್ಮದ ಭಯಕ್ಕೆ ಈ ಕೃತ್ಯ…!

ಅಸ್ಸಾಂನಲ್ಲಿ ಮೇ 19 ರಂದು ಬೆಳಕಿಗೆ ಬಂದ ಈ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ಡ್ರಗ್ಸ್‌ ಅಮಲಿನಲ್ಲಿ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡಿದ್ದಾನೆ. ಎಂಡಿ ಸಹಜುಲ್ ಅಲಿ ಎಂಬ ವ್ಯಕ್ತಿ ಗಾಂಜಾ ಸೇದಿದ ನಂತರ ತನ್ನ ಮರ್ಮಾಂಗ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಸೋನಿತ್‌ಪುರ ಜಿಲ್ಲೆಯ ದೇಕರ್ ​​ಗ್ರಾಮದವರಾದ ಅಲಿ ಮಾನಸಿಕವಾಗಿ ತೊಂದರೆಗೊಳಗಾಗಿದ್ದಾನೆ ಎಂದು ವರದಿಯಾಗಿದೆ. ಆತ … Continued

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯಾವಳಿ, ಇಂಗ್ಲೆಂಡ್ ವಿರುದ್ಧ ಟೆಸ್ಟ್‌ಗೆ ಭಾರತದ ತಂಡ ಪ್ರಕಟ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಮುಂಬರುವ ಐದು ಪಂದ್ಯಗಳ ಟಿ 20 ಸರಣಿಗೆ ಭಾನುವಾರ ತಂಡಗಳನ್ನು ಪ್ರಕಟಿಸಲಾಗಿದೆ. ಹಾಗೂ ಇಂಗ್ಲೆಂಡ್ ವಿರುದ್ಧದ ಮರುನಿಗದಿಪಡಿಸಲಾದ 5 ನೇ ಟೆಸ್ಟ್‌ಗೂ ತಂಡ ಪ್ರಕಟಿಸಲಾಗಿದೆ. ಚೇತೇಶ್ವರ ಪೂಜಾರ ಅವರು ಭಾರತದ ಟೆಸ್ಟ್ ತಂಡಕ್ಕೆ ಪುನರಾಗಮನ ಮಾಡಿದ್ದಾರೆ. ಉಮ್ರಾನ್ ಮಲಿಕ್ ಮತ್ತು ಅರ್ಷದೀಪ್ ಸಿಂಗ್ ಅವರಂತಹ ಯುವ ಆಟಗಾರರು ದಕ್ಷಿಣ ಆಫ್ರಿಕಾ … Continued

ಅರ್ಜುನ್ ಸಿಂಗ್ ಘರ್ ವಾಪ್ಸಿ: ಮೂರು ವರ್ಷಗಳ ನಂತರ ತೃಣಮೂಲ ಕಾಂಗ್ರೆಸ್‌ಗೆ ಮರಳಿದ ಬಿಜೆಪಿ ಸಂಸದ..!

ನವದೆಹಲಿ: ಅರ್ಜುನ್ ಸಿಂಗ್ ಬಿಜೆಪಿ ತೊರೆದು ಭಾನುವಾರ ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ಗೆ ಮರಳಿದ್ದಾರೆ. ಅವರು ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಉಪಾಧ್ಯಕ್ಷರಾಗಿದ್ದರು. 2019ರಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು. ಭಾನುವಾರ ಮಧ್ಯಾಹ್ನ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದರು. ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ … Continued

ದೆಹಲಿಯ ಕುತುಬ್ ಮಿನಾರ್ ಸಂಕೀರ್ಣ ಉತ್ಖನನದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ನವದೆಹಲಿ: ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶಿಸಿದೆ ಎಂಬ ವರದಿಗಳು ಹೊರಬಂದ ನಂತರ, ಸಂಸ್ಕೃತಿ ಸಚಿವ ಜಿ.ಕೆ. ರೆಡ್ಡಿ ಅಂತಹ ಯಾವುದೇ ನಿರ್ದೇಶನವನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವರದಿಗಳ ಕುರಿತು ಪ್ರತಿಕ್ರಿಯಿಸಿದ ಜಿ.ಕೆ.ರೆಡ್ಡಿ, ‘ಅಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದಿದ್ದಾರೆ. ಕುತುಬ್ … Continued

ಏಕರೂಪ ನಾಗರಿಕ ಸಂಹಿತೆ, ಜನಸಂಖ್ಯೆ ನಿಯಂತ್ರಣ ಕಾನೂನು ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ರಾಜ್ ಠಾಕ್ರೆ ಒತ್ತಾಯ

ಪುಣೆ: ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಭಾನುವಾರ (ಮೇ 22) ಪುಣೆಯಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಏಕರೂಪ ನಾಗರಿಕ ಸಂಹಿತೆ ಮತ್ತು ಜನಸಂಖ್ಯೆ ನಿಯಂತ್ರಣ ಕಾನೂನನ್ನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆಯನ್ನು ಶೀಘ್ರವಾಗಿ ಜಾರಿಗೆ ತರಲು ನಾನು ಪ್ರಧಾನಿಯವರನ್ನು ವಿನಂತಿಸುತ್ತೇನೆ, ಜನಸಂಖ್ಯೆ ನಿಯಂತ್ರಣದ ಬಗ್ಗೆ ಕಾನೂನನ್ನು … Continued

ಮಾರಣಾಂತಿಕ ಅನಿಲವಿದೆ, ಬೆಂಕಿಕಡ್ಡಿ ಹಚ್ಚಬೇಡಿ…: ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ಪುತ್ರಿಯರಿಂದ ಚಿಲ್ಲಿಂಗ್ ನೋಟ್

ನವದೆಹಲಿ;ಶನಿವಾರ ದೆಹಲಿಯ ವಸಂತ ವಿಹಾರ ಪ್ರದೇಶದ ಫ್ಲಾಟ್‌ನಲ್ಲಿ ಒಂದೇ ಕುಟುಂಬದ ಮಹಿಳೆ ಮತ್ತು ಆಕೆಯ ಇಬ್ಬರು ಪುತ್ರಿಯರು ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದು, ಇದು ಶಂಕಿತ ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಹೇಳಲಾಗಿದೆ. ಘಟನಾ ಸ್ಥಳದಿಂದ ಆತ್ಮಹತ್ಯೆ ಪತ್ರ ವಶಪಡಿಸಿಕೊಳ್ಳಲಾಗಿದೆ. ಡಿಸಿಪಿ ಸೌತ್ ವೆಸ್ಟ್ ಪ್ರಕಾರ, ವಸಂತ ಅಪಾರ್ಟ್‌ಮೆಂಟ್ … Continued