ಮಹಾರಾಷ್ಟ್ರದ ಗಡ್‌ಚಿರೋಲಿಯಲ್ಲಿ ಪೊಲೀಸರ ಎನ್‌ಕೌಂಟರ್‌ನಲ್ಲಿ 26 ಮಾವೋವಾದಿಗಳು ಹತ

ಮುಂಬೈ: ಮುಂಬೈನಿಂದ 900 ಕಿಮೀ ದೂರದಲ್ಲಿರುವ ಪೂರ್ವ ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳ ಪ್ರಮುಖ ಯಶಸ್ಸಿನಲ್ಲಿ ಕನಿಷ್ಠ 26 ನಕ್ಸಲರು ಹತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ನಾವು ಇದುವರೆಗೆ 26 ನಕ್ಸಲರ ಶವಗಳನ್ನು ಅರಣ್ಯದಿಂದ ವಶಪಡಿಸಿಕೊಂಡಿದ್ದೇವೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ಹೇಳಿದ್ದಾರೆ. ಕೊಲ್ಗುಟ್-ದಂಡತ್‌ನ ದಟ್ಟ ಅರಣ್ಯದಲ್ಲಿ … Continued

ದೆಹಲಿ ವಾಯು ಮಾಲಿನ್ಯದ ಮಟ್ಟ ಹೆಚ್ಚಳ: ಒಂದು ವಾರ ಶಾಲೆಗಳು ಬಂದ್‌, ಸರ್ಕಾರಿ ಸಿಬ್ಬಂದಿಗೆ ವರ್ಕ್‌ ಫ್ರಂ ಹೋಮ್‌ -ಸಿಎಂ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರದಿಂದ ಒಂದು ವಾರದವರೆಗೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಶನಿವಾರ ಪ್ರಕಟಿಸಿದ್ದಾರೆ. ಮಕ್ಕಳು ಕಲುಷಿತ ಗಾಳಿಯನ್ನು ಉಸಿರಾಡದಂತೆ ನೋಡಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಸಚಿವಾಲಯದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು. ಅಲ್ಲದೆ, ಸರ್ಕಾರಿ ಅಧಿಕಾರಿಗಳು ಒಂದು ವಾರ … Continued

ಬಿಎಸ್‌ಎನ್‌ಎಲ್‌ ಆಫರ್‌…187 ರೂ. ಪ್ಲಾನ್ 28 ದಿನಗಳವರೆಗೆ 2ಜಿಬಿ ದೈನಂದಿನ ಡೇಟಾ

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ (BSNL) ಟೆಲಿಕಾಂ ಗ್ರಾಹಕರಿಗೆ ಬಂಪರ್ ಆಫರ್ ಬಿಡುಗಡೆ ಮಾಡಿದೆ. ಇದರಲ್ಲಿ ಅತ್ಯುತ್ತಮ ವ್ಯಾಲಿಡಿಟಿ, ಅನಿಯಮಿತ ವಾಯ್ಸ್‌ ಕರೆ (Unlimited Voice Call) ಹಾಗೂ ಡೇಟಾ ಪ್ರಯೋಜನಗಳನ್ನು ಒಳಗೊಂಡಿದೆ. ಈ 187 ರೂ.ಗಳ ಪ್ರಿಪೇಯ್ಡ್​ ಯೋಜನೆಯಲ್ಲಿ 2GB ದೈನಂದಿನ ಡೇಟಾ ಮತ್ತು ದಿನಕ್ಕೆ 100 SMS ಸೌಲಭ್ಯ ಒದಗಿಸುತ್ತದೆ. ಒಟ್ಟು 28 ದಿನಗಳ … Continued

ದೆಹಲಿಯಲ್ಲಿ ವಾಯುಮಾಲಿನ್ಯ ಏರಿಕೆ : ಎರಡು ದಿನ ಲಾಕ್‌ಡೌನ್‌ಗೆ ಸುಪ್ರೀಂಕೋರ್ಟ್‌ ಸಲಹೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಏರಿಕೆ ಆಗುತ್ತಿರುವ ವಾಯುಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌ ವಾಯ ಗುಣಮಟ್ಟ ತೀವ್ರ ಕುಸಿದಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಲಾಕ್‌ಡೌನ್ ಮಾಡುವಂತೆ ಸಲಹೆ ನೀಡಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯದ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ದೆಹಲಿಯ 17 ವರ್ಷದ ವಿದ್ಯಾರ್ಥಿ ಆದಿತ್ಯ ದುಬೆ ಸವೋಚ್ಚ … Continued

ಕೋವಿಡ್‌ ಲಸಿಕೆ ತೆಗೆದುಕೊಳ್ಳಲು ನಿರಾಕರಿಸಿದ ಭಾರತದ ಖ್ಯಾತ ಆಟಗಾರ: ಮುಷ್ತಾಕ್ ಅಲಿ ಟ್ರೋಫಿಗೆ ಕೈಬಿಟ್ಟ ಆಯ್ಕೆಗಾರರು..!

ಭಾರತದ ಮಾಜಿ ಬ್ಯಾಟರ್ ಮುರಳಿ ವಿಜಯ್ ಅವರು ಕೋವಿಡ್ -19 ವಿರುದ್ಧ ಲಸಿಕೆ ಹಾಕಿಸಿಕೊಳ್ಳದ ಕಾರಣಕ್ಕೆ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿಗೆ ತಮಿಳುನಾಡು ಆಯ್ಕೆದಾರರು ತಮ್ಮ ಹೆಸರನ್ನು ಪರಿಗಣಿಸದ ಕಾರಣ ವೃತ್ತಿಪರ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. . 37 ವರ್ಷದ ವಿಜಯ್ ತಮಿಳುನಾಡು ಪರ ಆಡುತ್ತಿದ್ದಾರೆ. ಆದರೆ, ಈ ಬಾರಿ ಅವರಿಗೆ ಅವಕಾಶ ಸಿಕ್ಕಿಲ್ಲ. … Continued

ಮಣಿಪುರದಲ್ಲಿ ಭಯೋತ್ಪಾದಕರ ಹೊಂಚುದಾಳಿಯಲ್ಲಿ ಕರ್ನಲ್, ಪತ್ನಿ-ಮಗ, ನಾಲ್ವರು ಯೋಧರು ಸೇರಿ 7 ಸಾವು

ಗುವಾಹತಿ: ಮಣಿಪುರದ ಮ್ಯಾನ್ಮಾರ್ ಗಡಿಯಲ್ಲಿ ಭಯೋತ್ಪಾದಕರು ನಡೆಸಿದ ಹೊಂಚುದಾಳಿಯಲ್ಲಿ ಭಾರತೀಯ ಸೇನೆಯ ಕರ್ನಲ್, ಅವರ ಪತ್ನಿ ಮತ್ತು ಮಗ ಮತ್ತು ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕ ದಾಳಿ – ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ ಅತ್ಯಂತ ಮಾರಣಾಂತಿಕ ದಾಳಿಯಾಗಿದ್ದು, ಮಣಿಪುರದ ಚುರಾಚಂದಪುರ ಜಿಲ್ಲೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. 46 … Continued

ಜಾರ್ಖಂಡ್‌: ಕುಖ್ಯಾತ ನಕ್ಸಲ್ ನಾಯಕ ಕಿಶನ್‌ ದಾ-ಪತ್ನಿ ಸೆರೆ, ಈತನ ತಲೆಗೆ 1 ಕೋಟಿ ರೂ. ಬಹುಮಾನವಿತ್ತು..!

ರಾಂಚಿ: ಜಾರ್ಖಂಡ್ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಮಾವೊವಾದಿ ನಾಯಕ ಪ್ರಶಾಂತ್ ಬೋಸ್ ಅಲಿಯಾಸ್ ಕಿಶನ್ ದಾ ನನ್ನು ಬಂಧಿಸಿದ್ದಾರೆ. ಈತನ ತಲೆಗೆ ೧ ಕೋಟಿ ರೂ. ಬಹುಮಾನ ಘೋಷಿಸಲಾಗಿತ್ತು. ಪ್ರಶಾಂತ್ ಬೋಸ್ ಜೊತೆಗೆ ಈತನ ಪತ್ನಿ ಶೀಲಾ ಮರಾಂಡಿಯನ್ನು ಸಹ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 75 ವರ್ಷದ ಬೋಸ್, ನಿಷೇಧಿತ … Continued

ಜನನಿಬಿಡ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿದ ಲೋಡ್ ತುಂಬಿದ ಟ್ರಾಲಿ…!: ವೀಕ್ಷಿಸಿ

ಅತ್ಯಂತ ಜನನಿಬಿಡ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡ ಲೋಡ್ ತುಂಬಿದ ಟ್ರಾಲಿಯೊಂದು ಹಿಮ್ಮುಖವಾಗಿ ಚಲಿಸಿ ಆತಂಕ ಸೃಷ್ಟಿಸಿದೆ ಘಟನೆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪೂರ್ಣ ಪ್ರಮಾಣದಲ್ಲಿ ಲೋಡ್‌ ಆಗಿರುವ ಟ್ರಾಲಿ ನಿಯಂತ್ರಣ ಕಳೆದುಕೊಂಡ ಪರಿಣಾಮ ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿದೆ. ಅದರ ಹಿಂದೆಯೇ ಕೆಲವರು ಕೂಗುತ್ತ ಓಡುವುದು ವಿಡಿಯೊದಲ್ಲಿ ಕಾಣುತ್ತದೆ. ಹಿಮ್ಮುಖವಾಗಿ ಚಲಿಸಿದ ಟ್ರಾಲಿ … Continued

ನವೆಂಬರ್ 30 ರೊಳಗೆ ಭಾರತದ 90% ಜನರಿಗೆ ಕೋವಿಡ್‌ 1ನೇ ಡೋಸ್ ನೀಡುವ ಗುರಿ, ಸದ್ಯಕ್ಕೆ ಬೂಸ್ಟರ್ ಡೋಸ್ ಇಲ್ಲ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ‘ಹರ್ ಘರ್ ದಸ್ತಕ್’ ಉಪಕ್ರಮದ ಅಡಿಯಲ್ಲಿ ಭಾರತವು ನವೆಂಬರ್ 30 ರೊಳಗೆ 90% ವಯಸ್ಕರಿಗೆ 1ನೇ ಡೋಸ್ ಕೋವಿಡ್‌-19 ಲಸಿಕೆ ನೀಡುವ ಗುರಿ ಹೊಂದಿದೆ. ಇದನ್ನು ನವೆಂಬರ್ 3ರಂದು ಪ್ರಾರಂಭಿಸಲಾಗಿದ್ದು, ಈ ತಿಂಗಳ ಅವಧಿಯ ಅಭಿಯಾನವು ಇನ್ನೂ ಡೋಸ್ ತೆಗೆದುಕೊಳ್ಳದವರಿಗೆ ಮತ್ತು ಎರಡನೇ ಡೋಸ್ ಅವಧಿ ಮೀರಿದವರಿಗೆ ಮನೆ-ಮನೆಗೆ ಲಸಿಕೆ ನೀಡುವುದನ್ನು … Continued

ಕಾಶ್ಮೀರ ಕಣಿವೆಯಲ್ಲಿ 38 ಪಾಕಿಸ್ತಾನಿ ಭಯೋತ್ಪಾದಕರು ಸಕ್ರಿಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದಿಂದ ಬಂದ 38 ಭಯೋತ್ಪಾದಕರು ಸಕ್ರಿಯರಾಗಿದ್ದಾರೆ, ಭಯೋತ್ಪಾದಕರನ್ನು ಮಟ್ಟಹಾಕಲು ಭದ್ರತಾ ಪಡೆಗಳು ಶೀಘ್ರದಲ್ಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಿವೆ ಎಂದು ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ, 38 ಭಯೋತ್ಪಾದಕರಲ್ಲಿ 27 ಮಂದಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ಸೇರಿದವರು ಮತ್ತು 11 ಮಂದಿ ಜೈಷ್-ಎ-ಮೊಹಮ್ಮದ್ (ಜೆಇಎಂ) ಜೊತೆ ಸಂಬಂಧ ಹೊಂದಿದ್ದಾರೆ. ಈ ಪಾಕಿಸ್ತಾನಿ ಭಯೋತ್ಪಾದಕರು … Continued