ಬಿಹಾರದ ಎರಡು ಜಿಲ್ಲೆಗಳಲ್ಲಿ ಕಳ್ಳಬಟ್ಟಿ ಸೇವನೆಯಿಂದ 24 ಜನರ ಸಾವು

ಪಾಟ್ನಾ: ಕಳ್ಳಬಟ್ಟಿ ಸೇವಿಸಿ ಬಿಹಾರದ ಗೋಪಾಲ್​ಗಂಜ್ ಜಿಲ್ಲೆಯಲ್ಲಿ 16 ಹಾಗೂ ಪಶ್ಚಿಮ ಚಂಪಾರಣ್‌ ಜಿಲ್ಲೆಯಲ್ಲಿ 8 ಸೇರಿದಂತೆ ಒಟ್ಟು 24 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವು ಜನರು ಅಸ್ವಸ್ಥಗೊಂಡಿದ್ದಾರೆ. ಬಿಹಾರದಲ್ಲಿ ಸಂಪೂರ್ಣ ಪಾನನಿಷೇಧ ಜಾರಿಯಲ್ಲಿದ್ದರೂ ಈ ದುರ್ಘಟನೆ ಸಂಭವಿಸಿದ್ದು, ಪಶ್ಚಿಮ ಚಂಪಾರಣ್ ಜಿಲ್ಲೆಯ ಕೇಂದ್ರ ಸ್ಥಾನವಾಗಿರುವ ಬೆಟ್ಟಯಾ ಸಮೀಪದ ತೆಲ್ಹುವಾ ಗ್ರಾಮದಲ್ಲಿ ನವೆಂಬರ್ 4 ರಂದು … Continued

ಕಾನ್ಪುರದಲ್ಲಿ ಇಂದು ಮತ್ತೆ 30 ಮಂದಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆ..!

ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ ಇಂದು (ನವೆಂಬರ್ 4) ಮತ್ತೆ 30 ಜನರಿಗೆ ಝಿಕಾ ವೈರಸ್​ ಪತ್ತೆ ಆಗಿದೆ. ಜಿಲ್ಲೆಯಲ್ಲಿ ಇದುವರೆಗೆ ಝಿಕಾ ವೈರಸ್​ ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆ ಆಗಿದೆ. ಬುಧವಾರ (ನವೆಂಬರ್ 3) ವಾಯುಪಡೆಯ ಆರು ಸಿಬ್ಬಂದಿಯೂ ಸೇರಿದಂತೆ ಜಿಲ್ಲೆಯ 25 ಮಂದಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾಗಿತ್ತು. ಝಿಕಾ ವೈರಸ್ ಸೋಂಕು ಸೊಳ್ಳೆಗಳಿಂದ … Continued

ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದು ತನ್ನೂರಿಗೆ ಬಸ್​ ಸಂಪರ್ಕ ಪಡೆದ ಬಾಲಕಿ…!

ಹೈದರಾಬಾದ್: ತೆಲಂಗಾಣದ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ ತನ್ನ ಗ್ರಾಮಕ್ಕೆ ಸ್ಥಗಿತಗೊಂಡಿರುವ ಬಸ್ ಸೇವೆಯನ್ನು ಮರುಸ್ಥಾಪಿಸಲು ಸಹಾಯ ಕೋರಿ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರಿಗೆ ಪತ್ರ ಬರೆದಿದ್ದಾಳೆ. ಮುಖ್ಯನ್ಯಾಯಮೂರ್ತಿಗಳು ಈ ಪತ್ರವನ್ನು ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಟಿಎಸ್‌ಆರ್‌ಟಿಸಿ)ಗೆ ಕಳುಹಿಸಿದ ನಂತರ ರಂಗಾ ರೆಡ್ಡಿ ಜಿಲ್ಲೆಯ ಈ … Continued

ದೆಹಲಿಯಲ್ಲಿ ಇಬ್ಬರು ಡ್ರಗ್ ಪೆಡ್ಲರ್‌ ಗಳ ಬಂಧನ:18 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ನವದೆಹಲಿ: ಮಾದಕ ವಸ್ತುಗಳನ್ನು ಕಳ್ಳಸಾಗಾಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಸುಲ್ತಾನ್ ಪುರಿಯಲ್ಲಿ ದೆಹಲಿ ಪೋಲಿಸರು ಬಂಧಿಸಿದ್ದಾರೆ. ದಾಳಿಯ ಸಮಯದಲ್ಲಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 18 ಕೋಟಿ ರೂ. ಮೌಲ್ಯದ 6 ಕೆಜಿ ಹೆರಾಯಿನ್ ಅನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಡ್ರಗ್ ಕಾರ್ಟೆಲ್ ಕಿಂಗ್ ಪಿನ್ ತೈಮೂರ್ ಖಾನ್ ಆಲಿಯಾಸ್ ಭೋಲಾ ಅವರ ಸಹಾಯಕ ಆಸಿಮ್ … Continued

ನವೆಂಬರ್ 8 ರಿಂದ ಭಾರತದ ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಅಮೆರಿಕ ಪ್ರವೇಶಕ್ಕೆ ಅನುಮತಿ

ನವದೆಹಲಿ: ಭಾರತ್ ಬಯೋಟೆಕ್‌ನ ಕೋವಿಡ್-19 ಲಸಿಕೆ ಕೋವಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ತುರ್ತು ಬಳಕೆ ಅನುಮೋದನೆ ನೀಡಿದ ಒಂದು ದಿನದ ನಂತರ, ನವೆಂಬರ್ 8 ರಿಂದ ಕೋವಾಕ್ಸಿನ್ ಲಸಿಕೆ ಪಡೆದವರಿಗೆ ಅಮೆರಿಕ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಇದು ಎಫ್‌ ಡಿಎ ಅನುಮೋದಿತ ಅಥವಾ ಅಧಿಕೃತ ಮತ್ತು ಡಬ್ಲ್ಯುಎಚ್‌ಒ (WHO) ತುರ್ತು ಬಳಕೆಯ ಪಟ್ಟಿ ಲಸಿಕೆಗಳಿಗೆ … Continued

ಮಾಜಿ ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ ಅಂಗೀಕರಿಸಿದ ಕಾಂಗ್ರೆಸ್‌

ಚಂಡೀಗಡ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನೀಡಿರುವ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಾದ ಸೋನಿಯಾಗಾಂಧಿ ಅಂಗೀಕರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಬರೆದ ಏಳು ಪುಟಗಳ ಪತ್ರದಲ್ಲಿ … Continued

ನಮ್ಮ ಸೈನಿಕರೇ ಭಾರತ ಮಾತೆಗೆ ಸುರಕ್ಷಾ ಕವಚ; ಸೈನಿಕರ ಜೊತೆ ದೀಪಾವಳಿ ಆಚರಿಸಲು ಬಂದ ಪ್ರಧಾನಿ ಮೋದಿ ಬಣ್ಣನೆ

ಸೈನಿಕರ ಜೊತೆ ದೀಪಾವಳಿ ಆಚರಿಸಲು ಕಾಶ್ಮೀರದ ರಜೌರಿ ನೌಶೇರಾ ಸೆಕ್ಟರ್‌ಗೆ ಬಂದಿಳಿದ ಪ್ರಧಾನಿ ಮೋದಿ ನವದೆಹಲಿ: ನಮ್ಮ ದೇಶದ ಸೈನಿಕರು ಭಾರತ ಮಾತೆಗೆ ಸುರಕ್ಷಾ ಕವಚದಂತಿದ್ದಾರೆ. ಅವರು ಭಾರತಾಂಬೆಗೆ ಯಾರಿಂದಲೂ ಯಾವುದೇ ತೊಂದರೆಯಾಗಲು ಬಿಡುವುದಿಲ್ಲ. ನಾನಿಂದು ಒಬ್ಬನೇ ಇಲ್ಲಿಗೆ ಬಂದಿಲ್ಲ. ನನ್ನೊಂದಿಗೆ ಕೋಟ್ಯಂತರ ಭಾರತೀಯರ ಆಶೀರ್ವಾದವನ್ನು ಸೈನಿಕರಿಗಾಗಿ ಹೊತ್ತು ತಂದಿದ್ದೇನೆ. ಎಂದು ಪ್ರಧಾನ ಮಂತ್ರಿ ನರೇಂದ್ರ … Continued

ಭಾರತದಲ್ಲಿ 12,885 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 12,885 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಬುಧವಾರ ವರದಿ ಮಾಡಿದ್ದಕ್ಕಿಂತ ಶೇ.8.3ರಷ್ಟು ಹೆಚ್ಚಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮುಂಜಾನೆ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ತಾಜಾ ಪ್ರಕರಣಗಳೊಂದಿಗೆ, ದೇಶದ ಒಟ್ಟಾರೆ ಪ್ರಕರಣ 3,43,21,025 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 461 ಜನರು … Continued

ಕೇಂದ್ರದ ಸೂಚನೆ ನಂತರ 9 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ವ್ಯಾಟ್ ಕಡಿತ

ನವದೆಹಲಿ: ಕೇಂದ್ರದಿಂದ ಸೂಚನೆ ಬಂದ ನಂತರ ಎನ್‌ಡಿಎ ಆಡಳಿತವಿರುವ 9 ರಾಜ್ಯಗಳು ನವೆಂಬರ್ 3 ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತ ಮಾಡಿವೆ. “ಕರ್ನಾಟಕ ಸರ್ಕಾರವು ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 7 ರೂಪಾಯಿ ಇಳಿಸಲು ನಿರ್ಧರಿಸಿದೆ. ಇದರಿಂದ ಬೊಕ್ಕಸಕ್ಕೆ 2,100 ಕೋಟಿ ರೂಪಾಯಿ ನಷ್ಟವಾಗುತ್ತದೆ” ಎಂದು ಕರ್ನಾಟಕ ಮುಖ್ಯಮಂತ್ರಿ … Continued

ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರವಾಗಿ ಕೇಂದ್ರದಿಂದ 17,000 ಕೋಟಿ ರೂ. ಬಿಡುಗಡೆ

ನವದೆಹಲಿ: ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್ ಟಿ ಪರಿಹಾರವಾಗಿ ಸರ್ಕಾರ ಬುಧವಾರ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ, 2021-22ನೇ ಸಾಲಿನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಒಟ್ಟು 60,000 ಕೋಟಿ ರೂಪಾಯಿ ಜಿಎಸ್ ಟಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಜಿಎಸ್ ಟಿ … Continued