ಮಹತ್ವದ ನಿರ್ಧಾರ…ಮಾರ್ಚ್‌ 16ರಿಂದ ದೇಶದಲ್ಲಿ 12-14 ವಯಸ್ಸಿನ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡಲು ಆರಂಭ

ನವದೆಹಲಿ: ಭಾರತವು ತನ್ನ ಕೋವಿಡ್-19 ಲಸಿಕೆ ವ್ಯಾಪ್ತಿಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಮಾರ್ಚ್ 16 ರಿಂದ ದೇಶದಲ್ಲಿ 12 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಹಾಕಲು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸೋಮವಾರ ಪ್ರಕಟಿಸಿದ್ದಾರೆ. ಮುನ್ನೆಚ್ಚರಿಕೆ ಡೋಸ್ ಪಡೆಯಲು 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ನೀಡಲು ನೀಡಲಾಗುತ್ತದೆ. ಆ … Continued

9 ಹಾವು, 43 ಜೀವಂತ ಹಲ್ಲಿಗಳನ್ನು ಚಡ್ಡಿಯಲ್ಲಿ ಇಟ್ಟುಕೊಂಡಿದ್ದ ಭೂಪ…!

ಲಾಸ್ ಏಂಜಲೀಸ್: ಕಳ್ಳಸಾಗಾಣಿಕೆದಾರನೊಬ್ಬ ಹಾವುಗಳು ಮತ್ತು ಕೊಂಬಿನ ಹಲ್ಲಿಗಳನ್ನು ತನ್ನ ಚಡ್ಡಿಯಲ್ಲಿ ಸುತ್ತ ಬಚ್ಚಿಟ್ಟುಕೊಂಡು ಅಮೆರಿಕಕ್ಕೆ ನುಸುಳಲು ಯತ್ನಿಸಿದ್ದಾನೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಜೀವಂತ ಸರೀಸೃಪಗಳನ್ನು ಸಣ್ಣ ಚೀಲಗಳಲ್ಲಿ ಕಟ್ಟಿ ವ್ಯಕ್ತಿ ಪ್ಯಾಂಟ್ ಪಾಕೆಟ್‌ಗಳಲ್ಲಿ ಹುದುಗಿಸಿ ಇಟ್ಟುಕೊಂಡಿದ್ದ. ಆತ ಪ್ರಯಾಣಿಸುತ್ತಿದ್ದ ಟ್ರಕ್ ಅನ್ನು ಪರಿಶೀಲಿಸುವಾಗ ಸಿಬಿಪಿ ಅಧಿಕಾರಿಗಳು ಈ ಸರೀಸೃಪಗಳನ್ನು ಗುರುತಿಸಿದ್ದಾರೆ. ವ್ಯಕ್ತಿಯನ್ನು ಬಂಧಿಸಿ … Continued

ಕೇವಲ ಸೂರ್ಯನನ್ನೇ ಸೇವಿಸಿ ಬರೋಬ್ಬರಿ 27 ವರ್ಷ ಉಪವಾಸವಿದ್ದ ಅಚ್ಚರಿಯ ಸಾಧಕ ಇನ್ನಿಲ್ಲ…ಈ ಸಾಧನಕದ್ದು ಗಿನ್ನೆಸ್ ವಿಶ್ವ ದಾಖಲೆ

ತಿರುವನಂತಪುರ: ವರ್ಷಗಳ ಕಾಲ ಸೌರಶಕ್ತಿಯಿಂದ ಬದುಕುಳಿದಿದ್ದ 85 ವರ್ಷದ ಹೀರಾ ರತನ್ ಮಾಣೆಕ್ ಅವರು ಶನಿವಾರ ಇಲ್ಲಿ ನಿಧನರಾದರು. ‘ಸೋಲಾರ್ ಹೀಲಿಂಗ್ ಟೆಕ್ನಿಕ್’ ಪ್ರತಿಪಾದಕ, ಮಾಣೆಕ್ ಅವರು ತಮ್ಮ ದೇಹವನ್ನು ಪ್ರಯೋಗಾಲಯವಾಗಿ ಪರಿವರ್ತಿಸಿ ಮಾನವರು ಕೇವಲ ನೀರನ್ನು ಮಾತ್ರ ಸೇವಿಸಿ ಮತ್ತು ಸೂರ್ಯನ ಶಕ್ತಿಯನ್ನು ಬಳಸಿಕೊಂಡು ಆರೋಗ್ಯಕರ ಜೀವನವನ್ನು ನಡೆಸಬಹುದು ಎಂದು ಜಗತ್ತಿಗೆ ಯಶಸ್ವಿಯಾಗಿ ಸಾಬೀತುಪಡಿಸಿದವರಾಗಿದ್ದರು. … Continued

ಭಾರತದಲ್ಲಿ ಮೇ 2020ಕ್ಕಿಂತ ಕಡಿಮೆ ಕೊರೊನಾ ಸೋಂಕು ದಾಖಲು

ನವದೆಹಲಿ: ಭಾರತವು ದೈನಂದಿನ ಕೋವಿಡ್‌-19 ಪ್ರಕರಣಗಳಲ್ಲಿ ಮತ್ತಷ್ಟು ಕುಸಿತವನ್ನು ಕಂಡಿದೆ, ಸೋಮವಾರ 2,503 ಹೊಸ ಸೋಂಕುಗಳು ದಾಖಲಾಗಿವೆ, ಇದು ಮೇ 2020ಕ್ಕಿಂತ ಕಡಿಮೆಯಾಗಿದೆ. ಸಕ್ರಿಯ ಪ್ರಕರಣಗಳು 36,168 ಕ್ಕೆ ಇಳಿದಿದೆ ಎಂದು ಸೋಮವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ತಾಜಾ ಪ್ರಕರಣಗಳೊಂದಿಗೆ, ಒಟ್ಟು ಕೋವಿಡ್‌-19 ಪ್ರಕರಣಗಳ ಸಂಖ್ಯೆ 4,29,93,494 ಕ್ಕೆ ಏರಿದೆ. 27 … Continued

ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಪಿಕ್​ ಪಾಕೆಟ್​ ಮಾಡಿ ಸಿಕ್ಕಿಬಿದ್ದ ನಟಿ..! ವ್ಯಾನಿಟಿ ಬ್ಯಾಗ್ ನಲ್ಲಿ ಸಿಕ್ಕಿತು ಹಲವರ ಪರ್ಸ್

ಕೋಲ್ಕತ್ತಾ: ಪಿಕ್​ ಪಾಕೆಟ್​ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ನಟಿ ರೂಪಾ ದತ್ತ ಅವರನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದ ಸ್ಥಳದಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ನಟಿ ರೂಪಾ ದತ್ತಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಲ್ಕತ್ತಾದ ಬಿಧನ್ ​ನಗರ ಉತ್ತರ ಪೊಲೀಸ್​ ಠಾಣೆಯ ಪ್ರಕಾರ, ಕಸದ … Continued

ಕೆನಡಾದಲ್ಲಿ ರಸ್ತೆ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳ ಸಾವು

ನವದೆಹಲಿ: ಸ್ಥಳೀಯ ಕಾಲಮಾನ ಶನಿವಾರ ಮುಂಜಾನೆ 3:45ಕ್ಕೆ ಕೆನಡಾದ ಟೊರೊಂಟೊ ಬಳಿ ನಡೆದ ರಸ್ತೆ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆನಡಾದ ಸುದ್ದಿ ವಾಹಿನಿ CP24 ಪ್ರಕಾರ, ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ವ್ಯಾನ್ ಒಂಟಾರಿಯೊದಲ್ಲಿನ ಹೆದ್ದಾರಿಯಲ್ಲಿ ಟ್ರಾಕ್ಟರ್-ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಹರ್‌ಪ್ರೀತ್ ಸಿಂಗ್, ಜಸ್ಪಿಂದರ್ … Continued

ಸಿಸಿಎಸ್ ಸಭೆ: ಉಕ್ರೇನ್‌ನಲ್ಲಿ ಹತ್ಯೆಗೀಡಾದ ಭಾರತೀಯ ವಿದ್ಯಾರ್ಥಿ ಮೃತದೇಹ ಮರಳಿ ತರಲು ಸರ್ವ ಪ್ರಯತ್ನಕ್ಕೆ ಪ್ರಧಾನಿ ಸೂಚನೆ

ನವದೆಹಲಿ: ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷದ ಸಂದರ್ಭದಲ್ಲಿ ಭಾರತದ ಭದ್ರತಾ ಸನ್ನದ್ಧತೆ ಮತ್ತು ಚಾಲ್ತಿಯಲ್ಲಿರುವ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತಾ ಕ್ಯಾಬಿನೆಟ್ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಿದ್ದರು ಎಂದು ಅಧಿಕೃತ ಪ್ರಕಟಣೆ ಭಾನುವಾರ ತಿಳಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ … Continued

ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಮುಂದುವರಿಕೆ…: 4 ತಾಸುಗಳ ಪೋಸ್ಟ್‌ ಮಾರ್ಟಮ್‌ ನಂತರ ಕಾಂಗ್ರೆಸ್ ನಿರ್ಧಾರ

ನವದೆಹಲಿ: ಇತ್ತೀಚೆಗೆ ನಡೆದ ರಾಜ್ಯ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ದೃಷ್ಟಿಯಿಂದ ನಾಯಕತ್ವ ಬದಲಾವಣೆಯ ಬೇಡಿಕೆಗಳ ನಡುವೆ ಇಂದು, ಭಾನುವಾರ ಸಂಜೆ ನಾಲ್ಕೂವರೆ ಗಂಟೆಗಳ ಕಾಲ ನಡೆದ ಬೃಹತ್ ಸಭೆಯ ನಂತರ ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಉಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಕ್ಷವು ಶೀಘ್ರದಲ್ಲೇ ಚಿಂತನ ಶಿಬಿರ ನಡೆಸಲಿದೆ ಹಾಗೂ ಕಾಂಗ್ರೆಸ್ ಹಂಗಾಮಿ … Continued

ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪೋಲೆಂಡ್‌ಗೆ ತಾತ್ಕಾಲಿಕ ಸ್ಥಳಾಂತರ

ನವದೆಹಲಿ: ಯುಕ್ರೇನ್‌ನ ಯುದ್ಧಪೀಡಿತ ದೇಶದಲ್ಲಿ ಭದ್ರತಾ ಪರಿಸ್ಥಿತಿ ವೇಗವಾಗಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಭಾರತವು ತನ್ನ ರಾಯಭಾರ ಕಚೇರಿಯನ್ನು ಅಲ್ಲಿಂದ ತಾತ್ಕಾಲಿಕವಾಗಿ ಪೋಲೆಂಡ್‌ಗೆ ಸ್ಥಳಾಂತರಿಸಲು ನಿರ್ಧರಿಸಿದೆ. ಉಕ್ರೇನಿಯನ್ ರಾಜಧಾನಿ ಕೀವ್ ಮತ್ತು ಇತರ ಹಲವಾರು ಪ್ರಮುಖ ನಗರಗಳ ಮೇಲೆ ರಷ್ಯಾದ ದಾಳಿಗಳು ಹೆಚ್ಚುತ್ತಿರುವ ಮಧ್ಯೆ ಈ ನಿರ್ಧಾರವು ಬಂದಿದೆ. ದೇಶದ ಪಶ್ಚಿಮ ಭಾಗಗಳಲ್ಲಿನ ದಾಳಿಗಳು ಸೇರಿದಂತೆ ಉಕ್ರೇನ್‌ನಲ್ಲಿ … Continued

ಮಣಿಪುರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಜೆಡಿಯು ಬೆಂಬಲ

ಇಂಫಾಲ: ಮಣಿಪುರದ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಗೆಲುವು ಸಾಧಿಸಿರುವ ಬಿಜೆಪಿಗೆ ಜೆಡಿಯು ಬೆಂಬಲ ಘೋಷಿಸಿದೆ. ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಜೊತೆ ಬಿಜೆಪಿ ಮೈತ್ರಿಯನ್ನು ಮುಂದುವರೆಸಲಿದೆ ಎಂದು ಹಾಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ತಿಳಿಸಿದ್ದಾರೆ. ಈ ನಡುವೆ ಮಣಿಪುರದಲ್ಲಿ ಶೇ 10.77ರಷ್ಟು ಮತ ಗಳಿಕೆ ಮೂಲಕ 6 ಸ್ಥಾನ ಗೆದ್ದಿರುವ ಜನತಾ ದಳ(ಸಂಯುಕ್ತ) … Continued