ಪ. ಬಂ. ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆ ಪ್ರಶ್ನಿಸಿ ರಾಜ್ಯದ ಮನವಿ; ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರದ ವೇಳೆ ನಡೆದ ಕೊಲೆ, ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳನ್ನು ಸಿಬಿಐ ತನಿಖೆಗೆ ಆದೇಶಿಸಿದ್ದ ಕೋಲ್ಕತ್ತಾ ಹೈಕೋರ್ಟ್‌ ನಿರ್ಧಾರ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ಸಂಬಂಧ ಸುಪ್ರೀಂಕೋರ್ಟ್‌ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠ ಕೇಂದ್ರ … Continued

ಮತ್ತೊಂದು ದಿಢೀರ್‌ ಬೆಳವಣಿಗೆಯಲ್ಲಿ ಪಂಜಾಬ್ ಸಚಿವೆ ರಜಿಯಾ ಸುಲ್ತಾನಾ ರಾಜೀನಾಮೆ

ಮತ್ತೊಂದು ದಿಢೀರ್‌ ಬೆಳವಣಿಗೆಯಲ್ಲಿ ಪಂಜಾಬ್ ಸಚಿವೆ ರಜಿಯಾ ಸುಲ್ತಾನಾ ಮಂಗಳವಾರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ. ರಜಿಯಾ ಸುಲ್ತಾನಾ ತಮ್ಮ ರಾಜೀನಾಮೆ ಪತ್ರದಲ್ಲಿ “ನವಜೋತ್ ಸಿಂಗ್ ಸಿಧುಗೆ ಬೆಂಬಲಿಸಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಚರಣ್ಜಿತ್ … Continued

ಆತ ಸ್ಥಿರ ಮನುಷ್ಯನಲ್ಲ ಎಂದು ನಾನು ನಿನಗೆ ಹೇಳಿದ್ದೆ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ ನಂತರ ಅಮರಿಂದರ್‌ ಹೇಳಿಕೆ

ನವದೆಹಲಿ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನವಜೋತ್ ಸಿಂಗ್ ಸಿಧು (Navjot Singh Sidhu) ಅವರನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ (Captain Amarinder Singh) “ಅವರು ಸ್ಥಿರ ಮನುಷ್ಯನಲ್ಲ” ಎಂದು ಹೇಳಿದ್ದಾರೆ. ಆತ ಸ್ಥಿರ ಮನುಷ್ಯನಲ್ಲ ಮತ್ತು ಗಡಿ ರಾಜ್ಯ … Continued

ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ..!

ನವದೆಹಲಿ: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಆದಾಗ್ಯೂ, ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ನವಜೋತ್ ಸಿಂಗ್ ಸಿಧು ಅವರು ಟ್ವಿಟ್ಟರ್ ನಲ್ಲಿ ತಮ್ಮ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ಪಂಜಾಬ್‌ನ ಭವಿಷ್ಯ … Continued

ಮಹಾರಾಷ್ಟ್ರ: ಸೇತುವೆ ಮೇಲೆ ನೀರು ಹರಿದು ಕೊಚ್ಚಿ ಹೋದ ಬಸ್‌

ಮುಂಬೈ: ಮಹಾರಾಷ್ಟ್ರದ ಯವತ್ಮಲ್ ಜಿಲ್ಲೆಯ ಉಮರ್ಕೇಡ್ ಪಟ್ಟಣದಿಂದ ಸುಮಾರು 3 ಕಿಮೀ ದೂರದಲ್ಲಿ ತುಂಬಿ ಹರಿಯುತ್ತಿದ್ದ ನಾಲಾ ಪ್ರವಾಹದಲ್ಲಿ ಮಂಗಳವಾರ ಬೆಳಿಗ್ಗೆ ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ಸು ಕೊಚ್ಚಿ ಹೋಗಿದೆ. ಉಮ್ ದಹಗಾಂವ್ ಸೇತುವೆಯಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಚಾಲಕ ಹಾಗೂ … Continued

ಉರಿ ಸೆಕ್ಟರ್​​ನಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲ: ಓರ್ವ ಪಾಕ್ ಉಗ್ರನ ಹತ್ಯೆ, ಮತ್ತೊಬ್ಬನ ಸೆರೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿನ ಗಡಿ ನಿಯಂತ್ರಣ ರೇಖೆಯಲ್ಲಿ ಸೋಮವಾರ ರಾತ್ರಿ (Line of Control) ಸೇನೆಯು ಭಯೋತ್ಪಾದಕರು ಒಳನುಸುಳುವುದನ್ನು ವಿಫಲಗೊಳಿಸಿದೆ. ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಉಗ್ರನನ್ನು ಸೇನಾಪಡೆ ಹತ್ಯೆ ಮಾಡಿದ್ದು ಇನ್ನೊಬ್ಬನನ್ನು ಸೆರೆಹಿಡಿಯಲಾಗಿದೆ. ಈ ವೇಳೆ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅನುಮಾನಾಸ್ಪದ ಚಲನೆಯನ್ನು ಗಮನಿಸಿದ ನಂತರ ಬಾರಾಮುಲ್ಲಾ ಜಿಲ್ಲೆಯ ಉರಿ … Continued

ಉತ್ತರ ಪ್ರದೇಶದ ಐಎಎಸ್ ಅಧಿಕಾರಿ ಮೊಹಮ್ಮದ್ ಇಫ್ತಿಖರುದ್ದೀನ್ ವಿರುದ್ಧ ಹಿಂದೂ ವಿರೋಧಿ ಪ್ರಚಾರದ ಆರೋಪ

ಕಾನ್ಪುರ: ಉತ್ತರ ಪ್ರದೇಶದಲ್ಲಿ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಐಎಎಸ್ ಅಧಿಕಾರಿ ಮೊಹಮ್ಮದ್ ಇಫ್ತಿಖರುದ್ದೀನ್ ವಿರುದ್ಧ ಮಠ ಮಂದಿರ ಸಮನ್ವಯ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷ ಭೂಪೇಶ್ ಅವಸ್ಥಿ ಈ ಆರೋಪಗಳನ್ನು ಮಾಡಿದ್ದಾರೆ. ಮೊಹಮ್ಮದ್ ಇಫ್ತಿಖರುದ್ದೀನ್ ಪ್ರಸ್ತುತ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ … Continued

ಗುಡ್‌ ನ್ಯೂಸ್..ಭಾರತದ ದೈನಂದಿನ ಕೋವಿಡ್ -19 ಪ್ರಕರಣಗಳು 6 ತಿಂಗಳಲ್ಲೇ ಮೊದಲ ಬಾರಿಗೆ 20,000ಕ್ಕಿಂತ ಕಡಿಮೆ..!

ಭಾರತದ ದೈನಂದಿನ ಕೋವಿಡ್ -19 ಪ್ರಕರಣಗಳು 6 ತಿಂಗಳಲ್ಲೇ ಮೊದಲ ಬಾರಿಗೆ 20,000ಕ್ಕಿಂತ ಕಡಿಮೆ..! ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 18,795 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ಸೋಮವಾರ ದಾಖಲಿಸಿದ್ದಕ್ಕಿಂತ 27.8 ಶೇಕಡಾ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ತಿಳಿಸಿದೆ. ಕಳೆದ ಆರು ತಿಂಗಳಲ್ಲಿ ಮೊದಲ … Continued

ಅನಿಯಮಿತ ಭೂ ಮಂಜೂರಾತಿ: ಪಶ್ಚಿಮ ಬಂಗಾಳ ಸರ್ಕಾರ, ಸೌರವ್ ಗಂಗೂಲಿಗೆ ದಂಡ ಹಾಕಿದ ಕೋಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ: ಕೋಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಪೀಠವು ನ್ಯೂ ಟೌನ್ ಪ್ರದೇಶದಲ್ಲಿ ಶಾಲೆಯನ್ನು ಸ್ಥಾಪಿಸಲು ಅನಿಯಮಿತ ಭೂಮಿ ಹಂಚಿಕೆಗಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ 10,000 ರೂ.ಗಳ ಟೋಕನ್ ದಂಡ ಮತ್ತು ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಪಶ್ಚಿಮ ಬಂಗಾಳ ವಸತಿ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಡಬ್ಲ್ಯುಬಿಐಐಡಿಸಿಒ) ತಲಾ 50 ಸಾವಿರ ರೂ.ಗಳ ದಂಡ ವಿಧಿಸಿದೆ. … Continued

ವಿಜಯ್ ಮಕ್ಕಳ ಇಯಕ್ಕಂ ವಿಸರ್ಜನೆ: ತಮಿಳು ನಟ ವಿಜಯ್ ಕಾನೂನು ಕ್ರಮದ ನಂತರ ನ್ಯಾಯಾಲಯಕ್ಕೆ ತಿಳಿಸಿದ ತಂದೆ

ಚೆನ್ನೈ: ತಾವು ಸ್ಥಾಪಿಸಿದ ಮತ್ತು ಅವರ ಮಗನ ಹೆಸರಿನ ರಾಜಕೀಯ ಸಂಸ್ಥೆ ವಿಜಯ್ ಮಕ್ಕಳ ಇಯಕ್ಕಂ ಅನ್ನು ವಿಸರ್ಜಿಸಲಾಗಿದೆ ಎಂದು ನಟ ವಿಜಯ್ ತಂದೆ ಸೋಮವಾರ ಚೆನ್ನೈ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು, ಚೆನ್ನೈ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ, ವಿಜಯ್ ಅವರ ತಂದೆ ಎಸ್.ಎ.ಚಂದ್ರಶೇಖರ್ ಅವರು, ” ಸಂಸ್ಥೆಯ ಎಲ್ಲ ಸದಸ್ಯರಿಗೆ ಪೂರ್ವ … Continued