ಗುಲಾಂ ನಬಿ ಆಜಾದ್‌ಗೆ ಪದ್ಮ ಪ್ರಶಸ್ತಿ: ಕಾಂಗ್ರೆಸ್‌ನ ಕೆಲ ಮುಖಂಡರಿಂದ ಅಭಿನಂದನೆ…ಆದ್ರೆ ಪಕ್ಷದ ಹೈಕಮಾಂಡ್ ಮೌನ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಪದ್ಮ ಪ್ರಶಸ್ತಿ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿನ ಒಡಕನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ. ಹಳೆಯ ಪಕ್ಷದ ಹಲವಾರು ನಾಯಕರು ಆಜಾದ್ ಅವರ ಪದ್ಮ ಪ್ರಶಸ್ತಿಯನ್ನು ಶ್ಲಾಘಿಸಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಈ ವಿಷಯದಲ್ಲಿ ಮೌನ ವಹಿಸಿದೆ. ಗುಲಾಂ ನಬಿ ಆಜಾದ್ ಅವರ ಕೊಡುಗೆಯನ್ನು ರಾಷ್ಟ್ರ ಗುರುತಿಸುತ್ತಿರುವಾಗ … Continued

ರೈಲ್ವೇ ಉದ್ಯೋಗಕ್ಕಾಗಿ ಪ್ರತಿಭಟನೆ ವೇಳೆ ಬಿಹಾರ ನಿಲ್ದಾಣದಲ್ಲಿ ರೈಲಿಗೆ ಬೆಂಕಿ | ದೃಶ್ಯ ವಿಡಿಯೊದಲ್ಲಿ ಸೆರೆ

ನವದೆಹಲಿ: ನೇಮಕಾತಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ರೈಲ್ವೇ ಉದ್ಯೋಗ ಆಕಾಂಕ್ಷಿಗಳನ್ನು ಪ್ರತಿಭಟಿಸಿ ರೈಲೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿದೆ. ಆಕ್ರೋಶಗೊಂಡ ಪ್ರತಿಭಟನಾಕಾರರು ರೈಲುಗಳನ್ನು ಧ್ವಂಸಗೊಳಿಸಿದರು ಮತ್ತು ಕಲ್ಲು ತೂರಾಟ ನಡೆಸಿದರು. ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಾದ್ಯಂತ ಕಲ್ಲುಗಳು ಕಂಡುಬಂದಿವೆ ಮತ್ತು ದೃಶ್ಯಗಳು ರೈಲಿನ ಕಿಟಕಿಗಳನ್ನು ಒಡೆದಿರುವುದನ್ನು ತೋರಿಸಿದೆ. ರೈಲ್ವೇ ನೇಮಕಾತಿ ಪರೀಕ್ಷೆಗಳ ಆಯ್ಕೆ ಪ್ರಕ್ರಿಯೆ ವಿರೋಧಿಸಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ … Continued

ಕೊಟ್ಟ ಮಾತಿನಂತೆ ಕಿಕ್ ಸ್ಟಾರ್ಟ್ ಜೀಪ್ ತಯಾರಿಸಿದ ವ್ಯಕ್ತಿಗೆ ಹೊಸ ವಾಹನ ಗಿಫ್ಟ್ ನೀಡಿದ ಆನಂದ ಮಹೀಂದ್ರಾ

ಮುಂಬೈ: ಹಲವಾರು ವಾಹನಗಳ ಬಿಡಿಭಾಗಗಳನ್ನು ಉಪಯೋಗಿಸಿ ಹೊಸ ಮಾದರಿಯ ಕಿಕ್ ಸ್ಟಾರ್ಟ್ ಜೀಪ್ ತಯಾರಿಸಿದ್ದ ವ್ಯಕ್ತಿಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ನೂತನ ವಾಹನ ಉಡುಗೊರೆಯಾಗಿ ನೀಡಿದ್ದಾರೆ. ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ತಯಾರಿಸಿದ ಕಿಕ್-ಸ್ಟಾರ್ಟ್‌ ಜೀಪ್‌ ವಿಡಿಯೊ ಹಂಚಿಕೊಂಡಿದ್ದ ಆನಂದ್ ಮಹೀಂದ್ರಾ, ಅವರಿಗೆ ಮಹಿಂದ್ರಾ ಕಮಪನಿಯ ಬೊಲೆರೋ ಕಾರು ಗಿಫ್ಟ್ ನೀಡುವುದಾಗಿ ಮಾತು ಕೊಟ್ಟಿದ್ದರು. ಈಗ … Continued

ಮೆಗಾಸ್ಟಾರ್‌ ಚಿರಂಜೀವಿಗೆ ಕೊರೊನಾ ಸೋಂಕು

ಹೈದರಾಬಾದ್: ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿರುವ ನಟ ಚಿರಂಜೀವಿ, ನನಗೆ ಕೋವಿಡ್-19 ಸೋಂಕಿನ ಕೆಲ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟೆಸ್ಟ್ ಮಾಡಿಸಿದಾಗ ಕಳೆದ ರಾತ್ರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಾನು ಮನೆಯಲ್ಲೇ ಐಸೋಲೇಷನ್‍ಗೆ ಒಳಗಾಗಿದ್ದೇನೆ. ಕೆಲದಿನಗಳಿಂದ ನನ್ನ ಸಂಪರ್ಕಕ್ಕೆ ಯಾರೆಲ್ಲ … Continued

ನಾವು ಹಿಂದಿ ವಿರೋಧಿಸುವುದಿಲ್ಲ, ಆದರೆ ಹಿಂದಿ ಹೇರಿಕೆ ವಿರೋಧಿಸುತ್ತೇವೆ: ತಮಿಳುನಾಡು ಸಿಎಂ ಸ್ಟಾಲಿನ್

ಚೆನ್ನೈ: 1967ರಲ್ಲಿ ಅಣ್ಣಾ (ಸಿಎನ್ ಅಣ್ಣಾದೊರೈ) ಅಧಿಕಾರಕ್ಕೆ ಬಂದಾಗ ದ್ವಿಭಾಷಾ ನೀತಿಯನ್ನು ಜಾರಿಗೆ ತಂದು ರಾಜ್ಯಕ್ಕೆ ತಮಿಳುನಾಡು ಎಂದು ಹೆಸರಿಟ್ಟರು ಎಂದು ಮುಖ್ಯಮಂತ್ರಿ ಸ್ಟಾಲಿನ್ ಅವರು ‘ಮೊಝಿಪೋರ್’ (ಭಾಷೆಗಾಗಿ ಸಮರ) ಹುತಾತ್ಮರಿಗೆ ಸನ್ಮಾನ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದ್ದಾರೆ. “ರಾಜ್ಯ ಭಾಷೆಗಳನ್ನು ರಾಷ್ಟ್ರದ ಅಧಿಕೃತ ಭಾಷೆಗಳನ್ನಾಗಿ ಮಾಡುವ ಕಾನೂನುಗಳನ್ನು ತಿದ್ದುಪಡಿ ಮಾಡಲು ನಾವು ಇನ್ನೂ ಹೆಣಗಾಡುತ್ತಿದ್ದೇವೆ” ಎಂದು … Continued

ಗುಲಾಂ ನಬಿ ಆಜಾದ್‌ಗೆ ಪದ್ಮ ಪ್ರಶಸ್ತಿ ಘೋಷಣೆ ನಂತರ ಕಾಂಗ್ರೆಸ್‌ಗೆ ಅವರ ಸೇವೆ ಅಗತ್ಯವಿಲ್ಲ ಎಂದು ವ್ಯಂಗ್ಯವಾಡಿದ ಕಪಿಲ್ ಸಿಬಲ್

ನವದೆಹಲಿ: ಗುಲಾಂ ನಬಿ ಆಜಾದ್ ಅವರ ಕೊಡುಗೆಗಳನ್ನು ರಾಷ್ಟ್ರ ಗುರುತಿಸುತ್ತಿರುವಾಗ ಕಾಂಗ್ರೆಸ್‌ಗೆ ಅವರ ಸೇವೆಯ ಅಗತ್ಯವಿಲ್ಲ ಎಂಬುದು ವಿಪರ್ಯಾಸ ಎಂದು ಪಕ್ಷದಲ್ಲಿ ಸಾಂಸ್ಥಿಕ ಸುಧಾರಣೆಗಳನ್ನು ಬಯಸುತ್ತಿರುವ ಹಿರಿಯ ನಾಯಕ ಮತ್ತು ಜಿ-23ರ ಗುಂಪಿನ ಸದಸ್ಯ ಕಪಿಲ್ ಸಿಬಲ್ ಹೇಳಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಈ ವರ್ಷದ ಪದ್ಮ ಪ್ರಶಸ್ತಿಗೆ ಆಯ್ಕೆ … Continued

ಭಾರತದಲ್ಲಿ ಹೊಸದಾಗಿ 2.85 ಲಕ್ಷ ಕೋವಿಡ್-19 ಪ್ರಕರಣಗಳು ದಾಖಲು; ಧನಾತ್ಮಕ ದರ 16.16%ರಷ್ಟು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2.85 ಲಕ್ಷ ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ದೇಶಾದ್ಯಂತ ಒಟ್ಟು ಪ್ರಕರಣಗಳ ಸಂಖ್ಯೆ 4 ಕೋಟಿಗಿಂತ ಹೆಚ್ಚು ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ದೃಢಪಡಿಸಿದೆ. ಏತನ್ಮಧ್ಯೆ, ಇದೇ ಅವಧಿಯಲ್ಲಿ 665 ಹೊಸ ವೈರಸ್ ಸಂಬಂಧಿತ ಸಾವುಗಳು ವರದಿಯಾಗಿದ್ದು, ಇದು ಸಾವಿನ ಸಂಖ್ಯೆಯನ್ನು … Continued

ಸೇಡು ತೀರಿಸಿಕೊಳ್ಳುತ್ತೇವೆ, ನಮ್ಮ ಸರ್ಕಾರ ಬರಲಿದೆ: ಹಿಂದೂಗಳಿಗೆ ಎಸ್‌ಪಿ ಮುಸ್ಲಿಂ ಅಭ್ಯರ್ಥಿಯ ಬಹಿರಂಗ ಬೆದರಿಕೆ ವಿಡಿಯೊ ವೈರಲ್

ಮೀರತ್: ಸಮಾಜವಾದಿ ಪಕ್ಷದ ಮುಸ್ಲಿಂ ಅಭ್ಯರ್ಥಿ ಆದಿಲ್ ಚೌಧರಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸಲಿದೆ ಮತ್ತು ನಮ್ಮನ್ನು ದಬ್ಬಾಳಿಕೆ ಮಾಡುತ್ತಿರುವವರ ಮೇಲೆ ಸೇಡು ತೀರಿಸಿಕೊಳ್ಳಲಿದೆ ಎಂದು ಹೇಳಿರುವ ವಿಡಿಯೋ ಈಗ ವೈರಲ್ ಆಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಇನ್ಶಾ ಅಲ್ಲಾಹ್, ನಾವು ಅವರನ್ನು ಬಿಡುವುದಿಲ್ಲ, ಅವರು ನಮಗೆ … Continued

ಧಾರವಾಡ: ಕೂರಿಗೆ ತಜ್ಞ ಅಬ್ದುಲ್ ಖಾದರ್ ನಡಕಟ್ಟಿನರಿಗೆ ಪದ್ಮಶ್ರೀ ಪುರಸ್ಕಾರದ ಗೌರವ

ಧಾರವಾಡ: ಈ ಬಾರಿ ಧಾರವಾಡ ಜಿಲ್ಲೆಯ ಕೂರಿಗೆ ತಜ್ಞ ಅಬ್ದುಲ್ ಖಾದರ್ ನಡಕಟ್ಟಿನ (69 ವರ್ಷ) ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ನಿವಾಸಿ ಅಬ್ದುಲ್ ಖಾದರ್ ನಡಕಟ್ಟಿನ ಅವರು ಬಿತ್ತನೆ ಕೂರಿಗೆ ಅನ್ವೇಷಣೆ ಮಾಡಿದ್ದು, ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿದೆ. ಅವರು ಬಿತ್ತನೆ ಸಮಸ್ಯೆ ಕಂಡುಕೊಂಡು ಅನುಕೂಲಕರ ಕೂರಿಗೆ ಅಭಿವೃದ್ಧಿಪಡಿಸಿದ್ದಾರೆ. ಅಲ್ಲದೇ ವಿವಿಧ … Continued

ನನಗೆ ಪ್ರಶಸ್ತಿ ನೀಡಿದ್ದರೆ, ನಾನು ನಿರಾಕರಿಸುತ್ತೇನೆ: ಪದ್ಮಭೂಷಣ ಸ್ವೀಕರಿಸಲು ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯ

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಸಿಪಿಐ(ಎಂ) ನಾಯಕ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ. ಹೇಳಿಕೆಯೊಂದರಲ್ಲಿ, ಬುದ್ಧದೇವ್ ಭಟ್ಟಾಚಾರ್ಜಿ ಅವರು, “ನನಗೆ ಈ ಪ್ರಶಸ್ತಿಯ ಬಗ್ಗೆ ಏನೂ ತಿಳಿದಿಲ್ಲ, ಯಾರೂ ನನಗೆ ಈ ಬಗ್ಗೆ ಏನನ್ನೂ ಹೇಳಿಲ್ಲ, ಅವರು ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ … Continued