ತಾಪಂ-ಜಿಪಂ ಮೀಸಲಾತಿ ನಿಗದಿಗೆ ಸಚಿವ ಈಶ್ವರಪ್ಪ ಅಸಮಾಧಾನ

ಕಲಬುರಗಿ: ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಪ್ರತಿನಿಧಿಯಾಗಿ ಇದು ನನ್ನ ವಯಕ್ತಿಕ ಅಭಿಪ್ರಾಯವೇ ಹೊರತು ಸಚಿವನಾಗಿ ಅಲ್ಲ ಎಂದು ಹೇಳಿದ್ದಾರೆ. ಡಿಸೆಂಬರ್ ವರೆಗೆ ಚುನಾವಣೆ ಮುಂದೂಡಬೇಕೆಂದು ಸರ್ಕಾರ ರಾಜ್ಯ … Continued

ಸಿಎಂ ಬಿಎಸ್ ವೈಗೆ ಬಿಗ್ ರಿಲೀಫ್ : ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸುವಂತೆ ಕೋರಿದ್ದ ಅರ್ಜಿ ವಜಾ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಆಪ್ತರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ತನಿಖೆ ನಡೆಸಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. 2021ರ ಜೂನ್ 6 ರಂದು ಟಿ.ಜೆ.ಅಬ್ರಹಾಂ ಭ್ರಷ್ಟಾಚಾರ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪುತ್ರ … Continued

ಐಟಿ ನಿಯಮಗಳ ವಿವಾದ: ಅನುಸರಣೆ ವಿರುದ್ಧ ಕೇಂದ್ರ ಕ್ರಮ ಕೈಗೊಂಡರೆ ಟ್ವಿಟರ್‌ಗೆ ಯಾವುದೇ ರಕ್ಷಣೆ ಇಲ್ಲ ಎಂದ ದೆಹಲಿ ಹೈಕೋರ್ಟ್

ನವದೆಹಲಿ: ಭಾರತ ಮೂಲದ ಅನುಸರಣೆ ಅಧಿಕಾರಿಗಳನ್ನು ನೇಮಿಸುವ ಷರತ್ತುಗಳನ್ನು ಒಳಗೊಂಡಂತೆ ಹೊಸ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮ 2021 ಅನ್ನು ಅನುಸರಿಸದಿದ್ದರೆ ಟ್ವಿಟರ್ ತನ್ನ ಕಾನೂನು ರಕ್ಷಣೆಯನ್ನು ಕಳೆದುಕೊಳ್ಳಲಿದೆ ಎಂದು ದೆಹಲಿ ಹೈಕೋರ್ಟ್ ಗುರುವಾರ ಸಾಮಾಜಿಕ ಮಾಧ್ಯಮ ಟ್ವಿಟ್ಟರಿಗೆ ತಿಳಿಸಿದೆ. ಟ್ವಿಟರ್ ನೇಮಕ ಮಾಡಿದ ಮಧ್ಯಂತರ ಅಧಿಕಾರಿಗಳಿಗೆ ಎರಡು ದಿನಗಳೊಳಗೆ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ನಿರ್ದೇಶಿಸಿದೆ. … Continued

ನಿಯಮ ಉಲ್ಲಂಘನೆ: 14 ಬ್ಯಾಂಕುಗಳಿಗೆ ದಂಡ ವಿಧಿಸಿದ ಆರ್‌ಬಿಐ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ) ನಿಯಮಗಳ ಉಲ್ಲಂಘನೆಗೆ ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ಬ್ಯಾಂಕುಗಳು ಒಳಗೊಂಡಂತೆ ಸುಮಾರು 14 ಬ್ಯಾಂಕುಗಳಿಗೆ ಭಾರಿ ಮೊತ್ತದ ದಂಡ ವಿಧಿಸಿದೆ. ಇತ್ತೀಚೆಗೆ ಆರ್‌ಬಿಐ ಯು ದೊಡ್ಡ ಗ್ರೂಪ್ ನ ಕಂಪನಿಗಳ ಅಕೌಂಟ್ ಪರಿಶೀಲಿಸಿದಾಗ ಈ 14 ಬ್ಯಾಂಕುಗಳು ಆರ್‌ಬಿಐನ ಒಂದು ಅಥವಾ ಒಂದಕ್ಕಿಂತ ಹೆಚ್ಚಿನ ನಿಯಾಮಾವಳಿಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ … Continued

ಕಾಶ್ಮೀರ ಎನ್ ಕೌಂಟರ್: ಇಬ್ಬರು ಎಲ್‌ಇಟಿ ಉಗ್ರರು ಸೇರಿ ಐವರು ಉಗ್ರರು ಹತ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ನಡೆದ ಮೂರು ಪ್ರತ್ಯೇಕ ಘಟನೆಯಲ್ಲಿ ಭದ್ರತಾ ಪಡೆಗಳು ಐವರು ಉಗ್ರರನ್ನು ಹತ್ಯೆ ಮಾಡಿದೆ. ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಈ ಎನ್ ಕೌಂಟರ್ ಗಳು ನಡೆದಿದೆ ಎಂದು ವರದಿಯಾಗಿದೆ. ಕುಲ್ಗಾಮ್ ಜೊದಾರ್ ಪ್ರದೇಶದಲ್ಲಿ ಉಗ್ರರಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ನಡೆಸಿದೆ. ಉಗ್ರರು ಗುಂಡು ಹಾರಿದ … Continued

ಐಟಿ ನಿಯಮ ಪಾಲಿಸಲು ಇನ್ನೂ 8 ವಾರಗಳು ಬೇಕು ಎಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿದ ಟ್ವಿಟ್ಟರ್‌

ನವದೆಹಲಿ: ಹೊಸ ಐಟಿ ನಿಯಮಗಳಿಗೆ ಅನುಸಾರವಾಗಿ ನಿವಾಸಿ ಕುಂದುಕೊರತೆ ಅಧಿಕಾರಿಯನ್ನು (ಆರ್‌ಜಿಒ) ನೇಮಕ ಮಾಡಲು ಇನ್ನೂ ಎಂಟು ವಾರಗಳು ಬೇಕಾಗುತ್ತದೆ ಎಂದು ಟ್ವಿಟ್ಟರ್ ಗುರುವಾರ ದೆಹಲಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಹೊಸ ಐಟಿ ನಿಯಮಗಳ ಅನುಸರಣೆ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸುವ ದೆಹಲಿ ಹೈಕೋರ್ಟಿಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಟ್ವಿಟರ್ ಭಾರತದಲ್ಲಿ ಸಂಪರ್ಕ ಕಚೇರಿ ಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ … Continued

ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ನಿಧನ

ಶಿಮ್ಲಾ: ಹಿಮಾಚಲಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರಸಿಂಗ್ (87) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ಬೆಳಗಿನ ಜಾವ ನಿಧನರಾಗಿದ್ದಾರೆ, ವೀರಭದ್ರಸಿಂಗ್ ಇಂದಿರಾಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೀರಭದ್ರ ಸಿಂಗ್ ಅವರಿಗೆ ಏಪ್ರಿಲ್ 13ರಂದು ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬಳಿಕ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಕೆಲವೇದಿನಗಳ ಬಳಿಕ ಮತ್ತೆ ಆರೋಗ್ಯ ಸ್ಥಿತಿ … Continued

ಪುನರ್ರಚಿಸಿದ ಕೇಂದ್ರ ಸಚಿವ ಸಂಪುಟಕ್ಕೆ ಮತ್ತೆ ಏಳು ಮಹಿಳೆಯರ ಸೇರ್ಪಡೆ, ಒಟ್ಟು ಮಹಿಳಾ ಸಚಿವರ ಸಂಖ್ಯೆ 11

ನವದೆಹಲಿ: ಮೋದಿ ಕ್ಯಾಬಿನೆಟ್ ಪುನರ್ರಚನೆಯಲ್ಲಿ ಬುಧವಾರ ಮೀನಾಕ್ಷಿ ಲೇಖಿ, ಶೋಭಾ ಕರಂದ್ಲಾಜೆ ಮತ್ತು ಅನುಪ್ರಿಯಾ ಸಿಂಗ್ ಪಟೇಲ್ ಸೇರಿದಂತೆ ಇನ್ನೂ ಏಳು ಮಹಿಳಾ ಸದಸ್ಯರು ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಇದರಿಂದ ಒಟ್ಟಾರೆ ಮಹಿಳಾ ಕ್ಯಾಬಿನೆಟ್ ಮಂತ್ರಿಗಳ ಸಂಖ್ಯೆಯನ್ನು 11 ಕ್ಕೆ ತೆಗೆದುಕೊಂಡಿದ್ದಾರೆ, ಇದು ಅತ್ಯಧಿಕವಾಗಿದೆ. ಬುಧವಾರ 15 ಹೊಸ ಕ್ಯಾಬಿನೆಟ್ ಮಂತ್ರಿಗಳು ಮತ್ತು 28 ರಾಜ್ಯ ಸಚಿವರು … Continued

ಪ್ರಧಾನಿ ಮೋದಿಯವರ ಹೊಸ ಸಚಿವ ಸಂಪುಟ: ಯಾರಿಗೆ ಯಾವ ಖಾತೆ ಹಂಚಿಕೆ- ಪೂರ್ಣ ಪಟ್ಟಿ ಇಲ್ಲಿದೆ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಹೊಸ ಮಂತ್ರಿಗಳಿಗೆ ಬುಧವಾರ ರಾತ್ರಿ ಖಾತೆಗಳನ್ನು ಹಂಚಿಕೆ ಮಾಡಿದೆ. ಪ್ರಮುಖ ಪುನರ್ರಚನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸರ್ಬಾನಂದ ಸೋನೊವಾಲ್, ನಾರಾಯಣ್ ರಾಣೆ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಕ್ಯಾಬಿನೆಟ್ ಮಂತ್ರಿಗಳಾಗಿ ಸೇರ್ಪಡೆ ಮಾಡಿದ್ದಾರೆ. ಇದೇವೇಳೆ ಆರೋಗ್ಯ ಸಚಿವ ಹರ್ಷ್ ವರ್ಧನ್, ಐಟಿ ಮತ್ತು ಕಾನೂನು ಸಚಿವ … Continued

ಮೋದಿ ಕ್ಯಾಬಿನೆಟ್‌ ಪುನರ್ರಚನೆ : 43 ಸಚಿವರಲ್ಲಿ ಕರ್ನಾಟಕದ ನಾಲ್ವರಿಗೆ ಅವಕಾಶ..ಸಚಿವರ ಪಟ್ಟಿ ಇಲ್ಲಿದೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಮೊದಲ ಕ್ಯಾಬಿನೆಟ್ ಪುನರ್ರಚನೆಯಲ್ಲಿ 43 ಸದಸ್ಯರು ಬುಧವಾರ ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಲ್ಲಿ ಕರ್ನಾಟಕದ ನಾಲ್ವರಿಗೆ ಅದೃಷ್ಟ ಒಲಿದಿದೆ.  ಚಿಕ್ಕಮಗಳೂರು-ಉಡುಪಿ ಸಂಸದೆ ಶೋಬಾ ಕರಂದ್ಲಾಜೆ, ಚಿತ್ರದುರ್ಗ  ಸಂಸದ ನಾರಾಯಣಸ್ವಾಮಿ, ಬೀದರ ಸಂಸದ ಭಗವಂತ ಖೂಬಾ ಹಾಗೂ ರಾಜ್ಯಸಭಾ ಸದಸ್ಯ ರಾಜೀವ ಚಂದ್ರಶೇಖರ ಅವರು ಸಚಿವರಾಗಿ ಪ್ರಮಾಣ ವಚನ … Continued