ಕುಮಟಾ ಡಾ.ಬಾಳಿಗಾ ವಾಣಿಜ್ಯ ಕಾಲೇಜ್ ಮುಖ್ಯ ಗ್ರಂಥಪಾಲಕ‌ ಡಾ. ಶಿವಾನಂದ ಬುಳ್ಳಾಗೆ ಸೋಶಿಯಲ್ ಸೈಂಟಿಸ್ಟ್ ಪ್ರಶಸ್ತಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಮುಖ್ಯ ಗ್ರಂಥಪಾಲಕರಾದ ಡಾ. ಶಿವಾನಂದ ಬುಳ್ಳಾ ಅವರ ಪಿ.ಎಚ್.ಡಿ ಪ್ರಬಂಧ ಹಾಗೂ ಗ್ರಂಥಾಲಯ ವಿಜ್ಞಾನಕ್ಕೆ ನೀಡಿದ ಅಮೂಲ್ಯ ವೈಜ್ಞಾನಿಕ ಕೊಡುಗೆಗಾಗಿ, ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ “ಗ್ರಾಬ್ಸ್ ಬೆಸ್ಟ್ ಸೋಶಿಯಲ್ ಸೈಂಟಿಸ್ಟ್ ಪ್ರಶಸ್ತಿ” ನೀಡಲಾಗಿದೆ. ಚೆನ್ನೈನ ಆನಂದಭವನ ಸಭಾಂಗಣದಲ್ಲಿ ಅಸೋಸಿಯೇಶನ್ ಆಫ್ … Continued

ಮಲ್ಲಾಪುರದಲ್ಲಿ ಏಪ್ರಿಲ್‌ 30ರಂದು ಭಾವಗೀತೆ-ಭಕ್ತಿಗೀತೆಗಳ ಪ್ರಸ್ತುತಿ ಭಾವಧಾರಾ ಕಾರ್ಯಕ್ರಮ

ಕುಮಟಾ: ಕೂಜಳ್ಳಿಯ ಷಡಕ್ಷರಿ ಗವಾಯಿಗಳ ಅಕಾಡೆಮಿ ವತಿಯಿಂದ ಭಾವಗೀತೆ ಹಾಗೂ ಭಕ್ತಿಗೀತೆಗಳ ಕಾರ್ಯಕ್ರಮ ಭಾವಧಾರಾ ಏಪ್ರಿಲ್‌  30ರಂದು ಕೂಜಳ್ಳಿ ಸಮೀಪದ ಮಲ್ಲಾಪುರದ ಗುರುಮಠದಲ್ಲಿ ನಡೆಯಲಿದೆ. ಏಪ್ರಿಲ್‌ 30ರಂದು ಮಧ್ಯಾಹ್ನ 3ರಿಂದ ರಾತ್ರಿ 8ರ ವರೆಗೆ ಕಾರ್ಯಕ್ರಮ ನಡೆಯಲಿದ್ದು ಅನೇಕ ಹಿರಿಯ-ಕಿರಿಯ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಶ್ರೀಲತಾ ಗುರುರಾಜ ಆಡುಕಳ, ಗಣೇಶ ಭಟ್‌ ಕಡತೋಕ, ಅಶ್ವಿನಿ ಕುಮಟಾ, ಧನ್ಯಾ … Continued

ಏಪ್ರಿಲ್‌ ೨೫ರಂದು ಜಿಲ್ಲಾಮಟ್ಟದ ಹೆಬ್ಬಾರ ಟ್ರೋಫಿ ಕಬಡ್ಡಿ ಪಂದ್ಯಾವಳಿ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ನಂದೊಳ್ಳಿಯ ಶ್ರೀ ಸಿದ್ಧಿವಿನಾಯಕ ಗೆಳೆಯರ ಬಳಗ (ಕಬಡ್ಡಿ) ಸಮಿತಿಯ ಆಶ್ರಯದಲ್ಲಿ ಏಪ್ರಿಲ್‌ ೨೫ ರಂದು ನಂದೊಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಮ್ಯಾಟ್ ಹೆಬ್ಬಾರ ಟ್ರೋಫಿ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ಪ್ರಥಮ ಬಹುಮಾನ ೨೫೦೦೧, ದ್ವಿತೀಯ ಬಹುಮಾನ ೧೫೦೦೧, ತೃತೀಯ ೧೦೦೦೧, ಚತುರ್ಥ ಬಹುಮಾನ ೭೦೦೧ ರೂ.ಗಳ ಬಹುಮಾನವಿದೆ. … Continued

ಕುಮಟಾ: ಅದ್ಧೂರಿಯಾಗಿ ನಡೆದ ಬಾಡದ ಶ್ರೀಕಾಂಚಿಕಾ ಪರಮೇಶ್ವರಿ ದೇವಿಯ ರಥೋತ್ಸವ

ಕುಮಟಾ;ಉತ್ತರ ಕನ್ನಡ ಜಿಲ್ಲೆಯ ಹೆಸರುವಾಸಿ ಜಾತ್ರೆಗಳಲ್ಲೊಂದಾದ ಬಾಡದ ಶ್ರೀಕಾಂಚಿಕಾ ಪರಮೇಶ್ವರಿ ದೇವಿಯ ರಥೋತ್ಸವು ಶನಿವಾರ ನಡೆಯಿತು. ಇದು ಪ್ರತಿವರ್ಷ ಚೈತ್ರ ಶುದ್ಧ ಹುಣ್ಣಿಮೆ ದಿನದಂದು ನಡೆಯುತ್ತದೆ.ಕೊರೊನಾ ಕಾರಣದಿಂದ ಕಳೆದ ಎರಡು ವರ್ಷದಿಂದ ರಥೋತ್ಸವ ಸ್ಥಗಿತವಾಗಿತ್ತು.ಈ ವರ್ಷ ಯಾವುದೇ ಆತಂಕವಿಲ್ಲದೆ ರಥೋತ್ಸವ ಅದ್ಧೂರಿಯಾಗಿ ಸಂಪನ್ನವಾಯಿತು. ಸಾವಿರಾರು ಜನರು ರಥೋತ್ಸವದಲ್ಲಿ ಭಾಗವಹಿಸಿ ಶ್ರೀದೇವಿಗೆ ವಿವಿಧ ಹರಕೆ ಪೂಜೆಯನ್ನು ನೆರವೇರಿಸಿದರು. … Continued

ನನಗೆ ಅಧಿಕಾರ ಕೊಟ್ಟಿದ್ದು ಶಿಕ್ಷಕ ಸಮುದಾಯ, ಅವರಿಗೆಂದೂ ಅನ್ಯಾಯ ಮಾಡಲು ಬಿಡುವುದಿಲ್ಲ: ಸಭಾಪತಿ ಹೊರಟ್ಟಿ

ಧಾರವಾಡ : ಕಳೆದ ನಲವತ್ತೆರಡು ವರ್ಷಗಳ ಹಿಂದೆ ಶಿಕ್ಷಕ ಸಮುದಾಯ ನನ್ನ ಕೈಗೆ ಅಧಿಕಾರವನ್ನು ಕೊಟ್ಟರು. ಅಂದಿನಿಂದ ಇಂದಿನ ವರೆಗೂ ನನಗೆ ಅಧಿಕಾರ ಕೊಟ್ಟ ಶಿಕ್ಷಕ ಸಮುದಾಯದವರಿಗೆ ನಾನೆಂದೂ ಕೈಕೊಟ್ಟಿಲ್ಲ, ಅನ್ಯಾಯ ಮಾಡಿಲ್ಲ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಇಲ್ಲಿಯ ಜನತಾ ಶಿಕ್ಷಣ ಸಮಿತಿಯ (ಜೆ.ಎಸ್.ಎಸ್) ಪರವಾಗಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ … Continued

ಧಾರವಾಡ: ನಾಳೆ ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿಗೆ ಅಭಿನಂದನಾ ಸಮಾರಂಭ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಪರವಾಗಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಏಪ್ರಿಲ್‌ ೯ ರಂದು ಬೆಳಿಗ್ಗೆ ೧೦:೩೦ಕ್ಕೆ ಧಾರವಾಡದ ಜೆ.ಎಸ್.ಎಸ್ ಸನ್ನಿಧಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಲಿದ್ದಾರೆ. ಖ್ಯಾತ ಸಂಸ್ಕೃತ ವಿದ್ವಾಂಸ ವೆಂಕಟ ನರಸಿಂಹ ಜೋಶಿಯ ಶುಭಾಶಂಸನೆ … Continued

ಕುಮಟಾ: ಟಿ.ಡಿ.ಕಾಮತ್‌ ನಿಧನ

ಕುಮಟಾ: ಮೂಲತಃ ಕುಮಟಾದವರಾದ ಹಾಲಿ ಮುಂಬೈ ನಿವಾಸಿಯಾಗಿದ್ದ ಟಿ.ಡಿ.ಕಾಮತ್‌ ಅವರು ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಮೃತರು ಒಬ್ಬ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇವರು ಕುಮಟಾದ ಪ್ರಸಿದ್ಧ ಜವಳಿ ವ್ಯಾಪಾರಿ ಡಿ.ಟಿ. ಕಾಮತ್‌ ಅವರ ಪುತ್ರರಾಗಿದ್ದರು. ಅಶೋಕ ಲೇಲ್ಯಾಂಡ್‌ ಸೇರಿದಂತೆ ಹಲವು ಕಂಪನಿಗಳಲ್ಲಿ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಟಿ.ಡಿ.ಕಾಮತ್‌ ಕುಮಟಾದ … Continued

ಸ್ವಾಸ್ಥ್ಯ ಸಮಾಜಕ್ಕೆ ಲಿಂಗ ಸಮಾನತೆ ಅವಶ್ಯ: ವಾಣಿಶ್ರೀ ಪ್ರಸಾದ

ಧಾರವಾಡ: ಸಮಾಜದಲ್ಲಿ ಮಹಿಳೆಯರು, ಪುರುಷರು ಪ್ರತಿಯೊಂದರಲ್ಲೂ ಸರಿ ಸಮಾನರು. ಇದರಲ್ಲಿ ಯಾವುದೇ ಭೇದ-ಭಾವ ಇರಬಾರದು ಎಂದು ಧಾರವಾಡದ ವಾಣಿಶ್ರೀ ಅಜಿತ ಪ್ರಸಾದ ಹೇಳಿದರು. ವಿದ್ಯಾಗಿರಿಯ ಜೆ.ಎಸ್.ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಮಹಿಳೆಯರಿಗೆ ವಿದ್ಯಾಭ್ಯಾಸ, ಉದ್ಯೋಗಾವಕಾಶ … Continued

ವ್ರತ-ಧರ್ಮಾಚರಣೆ ಇಂದಿನ ಅವಶ್ಯ : ಸೋಂದಾ ಜೈನ ಮಠದ ಶ್ರೀ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ

ಧಾರವಾಡ: ಅಹಿಂಸೆ, ಅಪರಿಗ್ರಹ ಇಂದಿನ ಅವಶ್ಯಕತೆಗಳಾಗಿವೆ. ಹಿಂಸೆಯಿಂದ ಇಡೀ ವಿಶ್ವವೇ ನಲುಗಿ ಹೋಗಿದೆ. ವ್ರತ-ಧರ್ಮಾಚರಣೆಯಿಂದ ಮನಸ್ಸಿಗೆ ಶಾಂತಿ ಪ್ರಾಪ್ತಿಯಾಗಿ ನಮ್ಮಲ್ಲಿರುವ ಕೆಟ್ಟ ವಿಚಾರಗಳನ್ನು ದೂರವಿಡಬಹುದು. ಆಗ ಸಮಾಜದಲ್ಲಿ ಶಾಂತಿ, ಸಾಮರಸ್ಯ ಉಂಟಾಗುತ್ತದೆ ಎಂದು ಸೋಂದಾ ಜೈನ ಮಠದ ಶ್ರೀ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಹೇಳಿದರು. ಧಾರವಾಡ ನಗರದ ಸನ್ಮತಿ ಜಿನ ಮಂದಿರದಲ್ಲಿ ನಡೆದ ನೂತನ ಏಕಶಿಲಾ … Continued

ಡಾ.ಅಜಿತ ಪ್ರಸಾದಗೆ ಬಂಗಾರದ ಪದಕ ನೀಡಿ ಸನ್ಮಾನಿಸಿದ ಡಾ.ವೀರೇಂದ್ರ ಹೆಗ್ಗಡೆ

ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ದಶಮಾನೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕಾಲೇಜಿನ ಯಶಸ್ಸಿಗೆ ಕಾರಣೀಕರ್ತರಾದ ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದರವರಿಗೆ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಂಗಾರದ ಪದಕವನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರವರು ಉಪಸ್ಥಿತರಿದ್ದರು.