ಕುಮಟಾ: ಚಿತ್ರಗಿ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಕುಮಟಾ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡಿವೆ ಎಂದು ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು. ಚಿತ್ರಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಉಚಿತ ಕೋವಿಡ್‌ ಲಸಿಕೆ ನೀಡಿ … Continued

ನಿವೃತ್ತ ಪ್ರಾಚಾರ್ಯ ಜಿ. ವಿ. ಭಟ್ಟ ಕೊಂಕೇರಿ ನಿಧನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡತೋಕದ ಕೊಂಕೇರಿಯವರಾದ ನಿವೃತ್ತ ಪ್ರಾಚಾರ್ಯ ಜಿ. ವಿ. ಭಟ್ಟ (87) ಕೊಂಕೇರಿ ಶನಿವಾರ ನಿಧನರಾದರು. ಕಾರವಾರದ ಪ್ರತಿಷ್ಠಿತ ದಿವೇಕರ ಕಾಲೇಜಿನ ಪ್ರಥಮ ಪ್ರಾಚಾರ್ಯರಾಗಿದ್ದರು ಸತತವಾಗಿ 23 ವರ್ಷ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ತಮ್ಮ ಮೂಲ ಮನೆ ಕಡತೋಕದಲ್ಲಿ ನೆಲೆಸಿ ಅನೇಕ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. … Continued

ಕುಮಟಾ: ಹಿರಿಯ ಕಾಂಗ್ರೆಸ್‌ ನಾಯಕ ಮೋಂಟಿ ಫರ್ನಾಂಡಿಸ್‌ ನಿಧನ

ಕುಮಟಾ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಮೋಂಟಿ ಫಾರ್ನಾಂಡಿಸ್ ಗುರುವಾರ ನಿಧನರಾಗಿದ್ದಾರೆ. ಸರಳ ವ್ಯಕ್ತಿತ್ವದ ಅವರು ಕಾಂಗ್ರೆಸ್‌ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಎಲ್ಲ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಪಕ್ಷಾತೀತವಾಗಿ ಉತ್ತಮ ಸಂಬಂಧಹೊಂದಿದ್ದರು. ಅವರು ಪತ್ನಿ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕುಮಟಾದಲ್ಲಿ ಆನ್‌ಲೈನ್ ಷೇರು ಮಾರುಕಟ್ಟೆಯು ಆರಂಭ … Continued

ಬೆತ್ತಗೇರಿ ರಮಾನಂದ ಭಟ್ಟ ನಿಧನ

ಕುಮಟಾ : ತಾಲೂಕಿನ ಬೆತ್ತಗೇರಿಯ ರಮಾನಂದ ಭಟ್ಟ (65) ಭಾನುವಾರ ಹೃದಯಘಾತದಿಂದ ನಿಧನರಾಗಿದ್ದಾರೆ. ಧಾರೇಶ್ವರದ ಬಿಜೆಪಿಯ ಭೂತ ಮಟ್ಟದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸುದೀರ್ಘ ಕಾಲದಿಂದ ಶ್ರೀ ರಾಮಚಂದ್ರಾ ಪುರ ಮಠದ ಬಿಂದು-ಸಿಂಧು ಯೋಜನೆಯ ಪ್ರಧಾನ, ರಾಗಿ ವಲಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು, ಸಂತಾಪ: ರಮಾನಂದ ಭಟ್‌ ಅವರ ನಿಧನಕ್ಕೆ ಶಾಸಕ ದಿನಕರ ಶೆಟ್ಟಿ, ಹವ್ಯಕ … Continued

ಕುಮಟಾ: ಗೋ ಗ್ರೀನ್‌ನಲ್ಲಿ ಹವ್ಯಕ ಸೇವಾ ಪ್ರತಿಷ್ಠಾನದ ಸಮಾವೇಶ: ತಮ್ಮತನ ಉಳಿಸಿಕೊಳ್ಳಲು ಸಂಘಟನೆ ಬೇಕು- ಕಾಗೇರಿ

ಕುಮಟಾ: ನಮ್ಮ ಬದುಕಿನ ಮಧ್ಯೆ ಬರುವ ಸಮಸ್ಯೆ ನಿವಾರಣೆಗೆ  ಹಾಗೂ ತಮ್ಮತನ ಉಳಿಸಿಕೊಳ್ಳಲು ಸಂಘಟನೆ ಬೇಕು ಎಂದು ವಿಧಾಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಡಗಣಿಯ ಗೊ ಗ್ರೀನ್ ಮೈದಾನದಲ್ಲಿ ನಡೆದ ಹವ್ಯಕ ಸೇವಾ ಪ್ರತಿಷ್ಠಾನ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ವ್ಯವಹಾರಿಕ ಜಂಜಾಟದಲ್ಲಿ ಇರುತ್ತಾರೆ. ಇದರ ಮಧ್ಯೆ … Continued

ಕುಮಟಾ: ನಿವೃತ್ತ ತಹಶೀಲ್ದಾರ ಮೇಘರಾಜ ನಾಯ್ಕ ನಿಧನ

ಕುಮಟಾ: ನಗರದ ಪೋಸ್ಟಲ್ ಕಾಲೋನಿ ಸಮೀಪದ ನಿವಾಸಿ ನಿವೃತ್ತ ತಹಸೀಲ್ದಾರ ಮೇಘರಾಜ್ ನಾಯ್ಕ್ (62) ಗುರುವಾರ ಮುಂಜಾನೆ ನಿಧನರಾದರು. ಅವರು ಕುಮಟಾದಲ್ಲಿ ತಹಸೀಲ್ದಾರ ಆಗಿದ್ದಾಗ ನೆರೆ ಹಾವಳಿ ಹಾಗೂ ಕೊರೊನಾ ಸಾಂಕ್ರಾಮಿಕ ರೋಗದಿಂದ ಉದ್ಭವಿಸಿದ ಪರಿಸ್ಥಿತಿಯ ನಿರ್ವಹಣೆಯಲ್ಲಿ ಹಗಲು ರಾತ್ರಿ ಕೆಲಸ ಮಾಡಿದ್ದರು. ಮೂಲತಃ ಕುಮಟಾ ತಾಲೂಕಿನ ಕಾಗಾಲ ಗ್ರಾಮದವರಾಗಿದ್ದ ಮೇಘರಾಜ ನಾಯ್ಕ ಅವರು ವಿಧಾನ … Continued

ಕುಮಟಾ: ಬಾಳಿಗಾ ಕಾಲೇಜಿನಲ್ಲಿ ರಾಜ್ಯಮಟ್ಟದ ಫ್ಲೋರ್ ಬಾಲ್ ಪಂದ್ಯಾವಳಿ ಉದ್ಘಾಟನೆ

ಕುಮಟಾ: ಡಾ. ಎ. ವಿ. ಬಳಿಗಾ ವಾಣಿಜ್ಯ ಮಹಾವಿದ್ಯಾಯದ ಕ್ರೀಡಾಂಗಣದಲ್ಲಿ ಭಾನುವಾರ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಫ್ಲೋರ್ ಬಾಲ್ ಪಂದ್ಯಾವಳಿಯ ಉದ್ಘಾಟನೆ ನಡೆಯಿತು. ಶಾಸಕ ದಿನಕರ್ ಶೆಟ್ಟಿ ಪಂದ್ಯಾವಳಿ ಉದ್ಘಾಟಿಸಿದರು. ದೇಶದಲ್ಲಿ ಕ್ರಿಕೆಟ್ ಜನಪ್ರಿಯತೆ ಹೆಚ್ಚಿದೆ. ಆದರೂ ಇತರ ಕ್ರೀಡೆಗೆ ಮಹತ್ವ ಬರುತ್ತಿದೆ. ಫ್ಲೋರ್ ಬಾಲ್ ಒಂದು ನೂತನ ಕ್ರೀಡೆ. ರಾಜ್ಯ ಮಟ್ಟದ … Continued

ಬಿ.ಇಡಿ. ಪರೀಕ್ಷೆಯಲ್ಲಿ ಧಾರವಾಡ ಜೆಎಸ್ಎಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ಧಾರವಾಡ : ೨೦೨೧-೨೨ ನೇ ಸಾಲಿನ ಬಿ.ಇಡಿ.-೧ ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಧಾರವಾಡ ವಿದ್ಯಾಗಿರಿಯ ಶ್ರೀ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯರ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಮಂದಸ್ಮಿತ ರಾಘುನವರ (೯೧.೮೩%), ಸಂಗೀತ ಹೆಚ್. ಆರ್. (೯೧.೩೩%) ಮತ್ತು ಸಾನುಬಾರ ಹಿತ್ತಲಮನಿ (೯೧%) ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಉಳಿದೆಲ್ಲ ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. … Continued

ಜೆಎಸ್ಎಸ್  ಸಂಸ್ಥೆಯ ಶಾಲೆಯ ಮಕ್ಕಳು ರಾಷ್ಟ್ರಮಟ್ಟದ ಜಿಮ್ನಾಸ್ಟಿಕ್ ಸ್ಪರ್ಧೆಗೆ ಆಯ್ಕೆ

ಧಾರವಾಡ: ಜನತಾ ಶಿಕ್ಷಣ ಸಮಿತಿಯ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಜಿಮ್ನಾಸ್ಟಿಕ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿ ವೈಯಕ್ತಿಕ ವೀರಾಗ್ರಣಿ ಮತ್ತು ಚಿನ್ನ ಮತ್ತು ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಹಾಗೂ ಸಂಸ್ಥೆಗೆ ಹಾಗೂ ಶಾಲೆಗೆ ಅಪಾರ ಕೀರ್ತಿ ತಂದಿದ್ದಾರೆ. ಎಲ್ಲ ವಿದ್ಯಾರ್ಥಿಗಳ ಸಾಧನೆಯನ್ನು … Continued

ರ‍್ಯಾಪಿಡ್ ಸಂಸ್ಥೆ-ಜೆಎಸ್‌ಎಸ್ ಮಂಜುನಾಥೇಶ್ವರ ಸ್ನಾತಕ-ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಒಡಂಬಡಿಕೆ

ಮಹಿಳಾ ಸಬಲೀಕರಣಕ್ಕಾಗಿ ಮಹಿಳೆಯರಿಗಾಗಿ ವಿವಿಧ ಕ್ಷೇತಗಳಲ್ಲಿ ಪರಸ್ಪರ ಸಹಾಯ ಮಾಡಲು ಧಾರವಾಡದ ರ‍್ಯಾಪಿಡ್ ಸಂಸ್ಥೆ, ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿತು. ಈ ಸಂದರ್ಭದಲ್ಲಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಮಾಳವಿಕಾ ಕಡಕೋಳ, ಸ್ನೇಹಾ ದೇಶಪಾಂಡೆ ಮಹಾವೀರ ಉಪಾದ್ಯೆ ಉಪಸ್ಥಿತರಿದ್ದರು.