ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್‌; ಹಲವು ಕಡೆ ದಾಳಿ

ಬೆಂಗಳೂರು: ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾ ರೆಡ್ಡಿ ಮನೆ ಹಾಗೂ ಕಚೇರಿಯ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ( ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾ ರೆಡ್ಡಿಗೆ ಸೇರಿದ 5 ಸ್ಥಳಗಳ ಮೇಲೆ ಇ.ಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ಇದೇ ರೀತಿಯಲ್ಲಿ ಇತರರ ಮೇಲೆ ದಾಳಿ … Continued

ರಾಜಕಾರಣಿಗಳ ಹೆಸರು ಬಳಸಿ 30 ಕೋಟಿ ರೂ. ವಂಚನೆ ಆರೋಪ ; ಮಹಿಳೆ ಬಂಧನ

ಬೆಂಗಳೂರು: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ  ಸೇರಿದಂತೆ ರಾಜಕೀಯ ನಾಯಕರ ಹೆಸರು ಹೇಳಿಕೊಂಡು ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇರೆಗೆ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಕೊಂಡಿದ್ದ ಸವಿತಾ ತನಗೆ ಹಲವು ರಾಜಕೀಯ ನಾಯಕರು ಗೊತ್ತು ಎಂದು ಹೇಳಿ ಪರಿಚಿತರೆಂದು ಹೇಳಿಕೊಂಡು ವಂಚಿಸುತ್ತಿದ್ದ ಆರೋಪದ … Continued

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ ; ಪರಿಷತ್‌ ಸದಸ್ಯ ರವಿಕುಮಾರಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬಿಜೆಪಿ ವಿಧಾನ ಪರಿಷತ್‌ ಸದಸ್ಯರಾದ ರವಿಕುಮಾರ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯದ … Continued

ಅತ್ಯಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರುವಂತೆ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಮೊದಲಿಗೆ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರಬೇಕು. ಪ್ರಜ್ವಲ್‌ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯವು 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ. ಎರಡನೇ ಬಾರಿಗೆ ಜಾಮೀನು ಕೋರಿ ಪ್ರಜ್ವಲ್‌ … Continued

ಬೆಳಗಾವಿಯಲ್ಲಿ ಮನಕಲಕುವ ಘಟನೆ : ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಸಾವು, ಪುತ್ರಿ ಸ್ಥಿತಿ ಗಂಭೀರ

ಬೆಳಗಾವಿ: ಒಂದೇ ಕುಟುಂಬದ ನಾಲ್ವರು ವಿಷಸೇವಿಸಿದ ನಂತರ ಮೂವರು ಸಾವಿಗೀಡಾಗಿರುವ ಮನಕಲಕುವ ಘಟನೆ ಬೆಳಗಾವಿಯಲ್ಲಿ ಖಾಸಭಾಗದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಖಾಸಬಾಗದ ಜೋಶಿ ಮಾಳದ‌ ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳು ಬೆಳಿಗ್ಗೆ 9ಗಂಟೆ ಸುಮಾರಿಗೆ ವಿಷ ಸೇವಿಸಿರುವ ಮಾಹಿತಿ ಲಭ್ಯವಾಗಿದ್ದು, ಇದರಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. … Continued

ಗ್ರೀನ್ ಆಸ್ಕರ್ – ಆಶ್ಡನ್‌ ಪ್ರಶಸ್ತಿ : ಸೆಲ್ಕೋ ಸಾಧನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ

ಬೆಂಗಳೂರು: ಈಚೆಗಷ್ಟೇ ಇಂಗ್ಲೆಂಡಿನ ಪ್ರತಿಷ್ಠಿತ ಗ್ರೀನ್ ಆಸ್ಕರ್ – ಆಶ್ಡನ್‌ ಜಾಗತಿಕ ಪ್ರಶಸ್ತಿಯಿಂದ ವಿಶ್ವದಲ್ಲಿಯೇ 3ನೇ ಸಲ ಗುರುತಿಸಲ್ಪಟ್ಟ ಭಾರತದ ಸೆಲ್ಕೋ ಸೋಲಾರ್ ಸಂಸ್ಥೆಯ ಸಾಧನೆಯನ್ನು ಕೇಂದ್ರ ಪರ್ಯಾಯ ಇಂಧನ ಸಚಿವ ಪ್ರಹ್ಲಾದ ಜೋಶಿ ಶ್ಲಾಘಿಸಿದ್ದಾರೆ ಹಾಗೂ ಸಂಸ್ಥೆಯ ಈ ಹಿರಿಮೆಗೆ ಅಭಿನಂದಿಸಿದ್ದಾರೆ. ವಿಕೇಂದ್ರೀಕೃತ ಸೌರ ವಿದ್ಯುತ್ ಬಳಕೆಯಿಂದ ಬಡತನ ನಿವಾರಿಸುವಲ್ಲಿ ಸೆಲ್ಕೋ ಸಂಸ್ಥೆಯ ನಿಲುವು … Continued

ಮೈಯಲ್ಲಿ ಹೊಕ್ಕಿದ್ದ ದೆವ್ವ ಬಿಡಿಸಲು ಥಳಿತ ; ಮಹಿಳೆ ಸಾವು

ಶಿವಮೊಗ್ಗ: ಮಹಿಳೆಯ ಮೈಯಲ್ಲಿ ದೆವ್ವ (devil) ಹೊಕ್ಕಿದೆ ಎಂದು ಭಾವಿಸಿ ಮನಸೋ ಇಚ್ಛೆ ಥಳಿಸಿದ್ದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ಗೀತಮ್ಮ(53) ಎಂದು ಗುರುತಿಸಲಾಗಿದೆ. ಮೈಯಲ್ಲಿ ದೆವ್ವವಿದೆ ಎಂದು ಬಿಡಿಸುವ ನೆಪದಲ್ಲಿ ಗೀತಮ್ಮ ಅವರಿಗೆ ಥಳಿಸಿದ ಆಶಾ ಳನ್ನು … Continued

ವೀಡಿಯೊ…| ಶ್ರೀರಂಗಪಟ್ಟಣ : ಫೋಟೊಕ್ಕೆ ಪೋಸ್ ನೀಡುವಾಗ ಸೇತುವೆಯಿಂದ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಪಿಕ್ನಿಕ್ ವೇಳೆ ಕಾವೇರಿ ನದಿ ಬಳಿ ಫೋಟೋ ತೆಗೆದುಕೊಳ್ಳಲು ಹೋಗಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶ್ರೀರಂಗಪಟ್ಟಣದಲ್ಲಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದುರಂತದ ವೀಡಿಯೊ ವೈರಲ್ ಆಗಿದ್ದು, ಆಯತಪ್ಪಿ ಬಿದ್ದ ನಂತರ ವ್ಯಕ್ತಿ ಕಾವೇರಿ ನದಿಯ ಬಲವಾದ ಪ್ರವಾಹದಲ್ಲಿ … Continued

ಬಂಟ್ವಾಳ | ಯುವತಿಗೆ ಇರಿದು ನಂತ್ರ ಆತ್ಮಹತ್ಯೆಗೆ ಶರಣಾದ ಯುವಕ

ಮಂಗಳೂರು : ಯುವಕನೊಬ್ಬ ಪ್ರೇಯಸಿಗೆ ಚಾಕುವಿನಿಂದ ಇರಿದು, ನಂತರ  ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಫರಂಗಿಪೇಟೆ ನಿವಾಸಿ ದಿವ್ಯಾ ಅಲಿಯಾಸ್ ದೀಕ್ಷಿತಾ (26) ಹಾಗೂ ಕೋಡ್ಮನ್ ಗ್ರಾಮದ ನಿವಾಸಿ ಸುಧೀರ (30) ಎಂಬಾತ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. … Continued