ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

ಮಂಗಳೂರು : ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ನಂತರ ಮದುವೆ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಶುಕ್ರವಾರ (ಏಪ್ರಿಲ್‌ 26) ನಡೆದಿದೆ ಎಂದು ವರದಿಯಾಗಿದೆ. ಕೊಣಾಲು ಗ್ರಾಮದ ಕೋಲ್ಪೆಯ ಉಮೇಶ ಎಂಬವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ಸರಸ್ವತಿ … Continued

ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು : ಬರ ಪರಿಹಾರ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆದ ಬಳಿಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅಲ್ಲದೆ, ತಮಿಳುನಾಡಿಗೆ 275 ಕೋಟಿ ರೂ. ನೆರೆ ಪರಿಹಾರವನ್ನು ಕೂಡ ಬಿಡುಗಡೆ ಮಾಡಿದೆ. ಕಳೆದ ವರ್ಷ ನೈರುತ್ಯ ಮಾನ್ಸೂನ್‌ ವಿಫಲವಾಗಿ ರಾಜ್ಯದಲ್ಲಿ ಭೀಕರ … Continued

ಏಪ್ರಿಲ್‌ 30 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವೆಡೆ ಮಳೆ ಏಪ್ರಿಲ್‌ 30ರಿಂದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐಎಂಡಿ ಪ್ರಕಾರ ಏಪ್ರಿಲ್‌ 27, 28 ಮತ್ತು 29ರಂದು ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ. ಏಪ್ರಿಲ್‌ 30 ರಿಂದ ಮೇ 3 ರವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಏಪ್ರಿಲ್‌ 30ರಂದು ಬೀದರ, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, … Continued

ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ…

ಬೆಂಗಳೂರು:  ಲೋಕಸಭಾ ಚುನಾವಣೆ ಕರ್ನಾಟಕದ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ಪೂರ್ಣಗೊಂಡಿದೆ. ಇತ್ತೀಚಿನ ಮಾಹಿತಿಯ ಪ್ರಕಾರ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 69.23 ರಷ್ಟು ಮತದಾನ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಮೂಲಸೌಕರ್ಯ ನೀಡದೇ ಇದ್ದುದ್ದಕ್ಕೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಮತಯಂತ್ರಕ್ಕೆ ಹಾನಿ ಮಾಡಿದ್ದು ಹೊರತುಪಡಿಸಿದರೆ ರಾಜ್ಯದಲ್ಲಿ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಈ … Continued

ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಚಿರತೆ ನುಗ್ಗಿದ್ದು, ಮನೆಯೊಳಗೆ ಅಡಗಿ ಕುಳಿತದೆ. ಅದು ಇಬ್ಬರ ಮೇಲೆ ದಾಳಿ ನಡೆಸಿದ್ದು, ಒಬ್ಬರಿಗೆ ಗಂಭೀರವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಮದ್ಯಾಹ್ನ 4 ಗಂಟೆ ಸುಮಾರಿಗೆ ಬಾಡದ ಮಾದರಿ ರಸ್ತೆ ಬಳಿ … Continued

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಧರ್ಮದ ಆಧಾರದಲ್ಲಿ ಮತ ಯಾಚನೆ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶುಕ್ರವಾರ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಿತು. ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ. ಜನ … Continued

ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ, ಇವಿಎಂಗೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಕೆಲವು ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಮತ್ತು ಗ್ರಾಮಸ್ಥರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಅರಣ್ಯದೊಳಗೆ ಇರುವ ಈ ಗ್ರಾಮದಲ್ಲಿ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು … Continued

ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೆಂಗಳೂರಿನ ಮತಗಟ್ಟೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಮಹಿಳೆಯೊಬ್ಬರ ಜೀವ ಉಳಿದಿದೆ. ಬೆಂಗಳೂರಿನಲ್ಲಿ ಮತದಾನ ಮಾಡಲು ಬಂದಾಗ ಹೃದಯಾಘಾತದಿಂದ ಕುಸಿದುಬಿದ್ದ ಮಹಿಳೆಗೆ ತ್ವರಿತಗತಿಯಲ್ಲಿ ವೈದ್ಯರು ಸ್ಪಂದಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂಸವಾರಿ ದಿನ್ನೆಯಲ್ಲಿ ಮತದಾನ ಮಾಡಲು ಮಹಿಳೆ ಆಗಮಿಸಿದ್ದರು. ವೈದ್ಯರು … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರದಿಂದ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಎಚ್ಚರಿಕೆ ನೀಡಿದ್ದು, ಜನರು ಬೆಳಗ್ಗೆ 11 ರಿಂದ ಸಂಜೆ 4 ರವರೆಗೆ ಆದಷ್ಟು ಹೊರಗೆ ಹೋಗಬೇಡಿ ಎಂದು ಸಲಹೆ ನೀಡಿದೆ. ಏಪ್ರಿಲ್‌ 26ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, … Continued

ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ಹುಬ್ಬಳ್ಳಿ: ಹತ್ಯೆಗೀಡಾದ ನೇಹಾ ಹಿರೇಮಠ (Neha Hiremath) ಮನೆಗೆ ಗುರುವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನೇಹಾ ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಹಿರೇಮಠ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ನಿಮ್ಮ ಕುಟುಂಬದ ಜೊತೆಗೆ ನಾವಿದ್ದೇವೆ ಅಂತ ಭರವಸೆ ನೀಡಿದರು. … Continued