ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ 9 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು; ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಆಗಸ್ಟ್​ 24ರ ವರೆಗೂ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ನಾಳೆಯಿಂದ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್​ 23 ಮತ್ತು 24ರಂದು ಮುಖ್ಯವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ … Continued

ಮಾಜಿ ಸಚಿವ ವಿನಯ ಕುಲಕರ್ಣಿ ಹಿಂಡಲಗಾ ಜೈಲಿನಿಂದ ಬಿಡುಗಡೆ

ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಶನಿವಾರ ಬಿಡುಗಡೆಯಾಗಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದ್ದು, ಹೀಗಾಗಿ ಬಳಿಕ 9 ತಿಂಗಳ ಬಳಿಕ ವಿನಯ್ ಕುಲಕರ್ಣಿ ಇಂದು (ಶನಿವಾರ) ಬಿಡುಗಡೆಗೊಂಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಅವರನ್ನು ಹಿಂಡಲಗಾ ಜೈಲಧಿಕಾರಿಗಳು ಪ್ರಕ್ರಿಯೆ … Continued

ವಿಶ್ವಪ್ರಸಿದ್ಧ ಹಂಪಿ ದೇವಸ್ಥಾನಕ್ಕೆ ಉಪರಾಷ್ಟ್ರಪತಿ ಭೇಟಿ

ಹೊಸಪೇಟೆ: ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಶನಿವಾರ ವಿಶ್ವಪ್ರಸಿದ್ಧ ಹಂಪಿ ದೇವಸ್ಥಾನಕ್ಕೆ ಭೇಟಿ ನೀಡುವರು. ಅವರ ಭೇಟಿ ಹಿನ್ನೆಲೆಯಲ್ಲಿ ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠಲ ದೇವಸ್ಥಾನದಲ್ಲಿ ಕೆಂಪು ನೆಲಹಾಸು ಹಾಕಲಾಗಿದೆ. ವಿರೂಪಾಕ್ಷೇಶ್ವರ ದೇಗುಲದಲ್ಲಿ ಪೂಜೆ ನೆರವೇರಿಸುವ ಅವರು, ಕೃಷ್ಣ ದೇವಸ್ಥಾನ, ಕಡಲೆಕಾಳು, ಸಾಸಿವೆಕಾಳು, ಕಮಲ ಮಹಲ್, ಮಹಾನವಮಿ ದಿಬ್ಬ, ವಿಜಯ ವಿಠಲ ದೇವಸ್ಥಾನಕ್ಕೆ ತೆರಳಿ ಕಲ್ಲಿನ … Continued

ಭೂಮಿಯೊಳಗಿಂದ ಭಾರಿ ಸದ್ದು, ಭೂಕಂಪನದ ಅನುಭವ; ಬೆಚ್ಚಿಬಿದ್ದ ಜನರು

ಕಲಬುರಗಿ: ಶುಕ್ರವಾರ ರಾತ್ರಿ ಕಲಬುರಗಿ ಜಿಲ್ಲೆಯ ಕೆಲಗ್ರಾಮಗಳಲ್ಲಿ ಗ್ರಾಮದ ಜನರು ಸದ್ದಿಗೆ ಹಾಗೂ ಭೂಮಿ ಕಂಪಿಸಿದ್ದಕ್ಕೆ ಬೆಚ್ಚಿಬಿದ್ದಿದ್ದಾರೆ. ಗಡಿಕೇಶ್ವರ ಸಮೀಪದ ಕೇರಳ್ಳಿ ಗ್ರಾಮದಲ್ಲೂ ಭೂಮಿಯಿಂದ ಭಾರಿ ಸದ್ದು ಕೇಳಿಬಂದಿದೆ ಎಂದು ವರದಿಯಾಗಿದೆ. ನೆಲದೊಳಗಿನಿಂದ ಒಂದೇ ದಿನದಲ್ಲಿ ಮೂರು ಸಲ ಭಾರಿ ಸದ್ದು ಕೇಳಿ ಬಂದಿದ್ದು, ಜನರಿಗೆ ಭೂಕಂಪನದ ಅನುಭವ ಕೂಡ ಆಗಿದೆ. ಜಿಲ್ಲೆಯ ಗಡಿಕೇಶ್ವರ ಗ್ರಾಮಸ್ಥರು … Continued

6 ಇಂಜಿನಿಯರಿಂಗ್ ಕಾಲೇಜುಗಳನ್ನು ಮುಚ್ಚಲು ವಿಟಿಯು ಆದೇಶ

ಬೆಂಗಳೂರು : ಗುಣಮಟ್ಟದ ಶಿಕ್ಷಣ ನೀಡುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಕರ್ನಾಟಕದ ಆರು ಇಂಜಿನಿಯರ್‌ ಕಾಲೇಜುಗಳು ಬಂದ್‌ ಆಗಲಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕಾಲೇಜುಗಳನ್ನು ಮುಚ್ಚುವಂರತೆ ಆದೇಶ ಹೊರಡಿಸಿದೆ. ಇತ್ತೀಚೆಗೆ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಂಗಳೂರಿನ ಆಲ್ಫಾ ಕಾಲೇಜ್ ಆಫ್ ಇಂಜಿನಿಯರಿಂಗ್, ಬೆಳಗಾವಿಯ ಶೇಖ್ ಇಂಜಿನಿಯರಿಂಗ್ ಕಾಲೇಜು, ಬೆಂಗಳೂರಿನ ಇಸ್ಲಾಮಿಯಾ … Continued

ಹುಬ್ಬಳ್ಳಿಯಿಂದ ಉಳವಿ, ಧರ್ಮಸ್ಥಳ, ಇಡಗುಂಜಿಗೆ ಬಸ್ ಸಂಚಾರ ಪುನಾರಂಭ

ಹುಬ್ಬಳ್ಳಿ: ಕೋವಿಡ್ ಎರಡನೆ ಅಲೆ ಲಾಕ್‌ಡೌನ್ ಕಾರಣದಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿಯಿಂದ ಉಳವಿ, ಧರ್ಮಸ್ಥಳ, ಇಡಗುಂಜಿ ಮತ್ತಿತರ ಧಾರ್ಮಿಕ ಸ್ಥಳಗಳಿಗೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ ಎಂದು ಹುಬ್ಬಳ್ಳಿ ವಾಯವ್ಯ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಕೋವಿಡ್ ಎರಡನೆ ಅಲೆ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಧಾರ್ಮಿಕ ಕ್ಷೇತ್ರಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. … Continued

ಕರ್ನಾಟಕದಲ್ಲಿ ಶುಕ್ರವಾರ 1,453 ಮಂದಿಗೆ ಕೊರೊನಾ ಸೋಂಕು…

ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ (ಶುಕ್ರವಾರ) 1,453 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 17 ಮಂದಿ ಮೃತಪಟ್ಟಿದ್ದಾರೆ. ವೆ. ಇಂದು 1,408 ಮಂದಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.1.83 ಮತ್ತು ಮರಣ ಪ್ರಮಾಣ ಶೇ.1.16 ರಷ್ಟಿದೆ. ಇದುವರೆಗೂ ರಾಜ್ಯದಲ್ಲಿ 29,36,077 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು 37,105 … Continued

ಹಲವು ವರ್ಷಗಳಿಂದ ಒಂದೆಕಡೇ ಇದ್ದ ವಿಧಾನ ಪರಿಷತ್​ನ 30 ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕಳೆದ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಬೇರೂರಿದ್ದ ಕರ್ನಾಟಕ ವಿಧಾನ ಪರಿಷತ್​ನ 30 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆದೇಶಿಸಿದ್ದಾರೆ. ಈ ಮೂಲಕ ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಆಯಕಟ್ಟಿನ ಸ್ಥಳಗಳಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತ ತಮ್ಮದೇ … Continued

ಹಂಪಿ ಪ್ರವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತ

ಹುಬ್ಬಳ್ಳಿ:ಹೊಸಪೇಟೆ ಮತ್ತು ಐತಿಹಾಸಿಕ ಹಂಪಿ ಪ್ರವಾಸಕ್ಕೆ ಕೈಗೊಂಡಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಎಂ.ಉಷಾ ಅ ಇಂದು ಸಂಜೆ (ಶುಕ್ರವಾರ) ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು. ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ , ಮಾಜಿ ಮುಖ್ಯಮಂತ್ರಿ,ಶಾಸಕ ಜಗದೀಶ್ ಶೆಟ್ಟರ್ ಶಾಲು ಹಾಕಿ … Continued

ಇಬ್ಬರ ಅಂಗಾಂಗ ದಾನ, 14 ಜನರಿಗೆ ಜೀವದಾನ

ಮೈಸೂರು: ಮಿದುಳು ವೈಫಲ್ಯಕ್ಕೆ ಒಳಗಾಗಿದ್ದ ಇಬ್ಬರ ಅಂಗಾಗಗಳನ್ನು ದಾನ ಮಾಡಲಾಗಿದ್ದು, ಇದರಿಂದ 14 ಜನರಿಗೆ ಜೀವದಾನವಾಗಿದೆ. ಈ ಇಬ್ಬರು ದಾನ ಮಾಡಿದ ಅಂಗಗಳು 14 ಜೀವಗಳನ್ನು ಉಳಿಸಿವೆ. ೪ ಮೂತ್ರ ಪಿಂಡಗಳು (ಕಿಡ್ನಿ) 2 ಲಿವರ್, 4 ಹೃದಯದ ಕವಾಟ, 4 ಕಾರ್ನಿಯಗಳನ್ನುಈ ಇಬ್ಬರು ದಾನಮಾಡಿದ್ದರು. ಅದನ್ನು ಒಂದೇ ಬಾರಿ 14 ಜನರಿಗೆ ಅಳವಡಿಸಲಾಯಿತು. ಹುಣಸೂರಿನ … Continued