ಬುದ್ಧಿವಾದ ಹೇಳಿದ್ದಕ್ಕೆ 3 ವರ್ಷದ ಅಣ್ಣನ ಮಗನನ್ನೇ ಕೊಲೆ ಮಾಡಿದ ತಮ್ಮ

ಬಾಗಲಕೋಟೆ: ಅಣ್ಣ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡು ಈತ 3 ವರ್ಷದ ಅಣ್ಣನ ಮಗುವಿಗೆ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬೆನಕನವಾಡಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಬಾಲಕನನ್ನು ಬೆನಕನವಾಡಿ ಗ್ರಾಮದ ಮಾರುತಿ ವಾಲಿಕಾರ ಎಂಬವರ 3 ವರ್ಷದ ಮಗ ಮಧುಕುಮಾರ ಎಂದು ಗುರುತಿಸಲಾಗಿದೆ. ಈ ಮಗುವಿನ … Continued

ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಯೂ ಟ್ಯೂಬ್ ಚಾನೆಲ್‌

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಾಲಯ ಹಾಗೂ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಡಿ.ಹರ್ಷೇಂದ್ರಕುಮಾರ ಅವರ ವಿರುದ್ಧ ಯಾವುದೇ ಅವಹೇಳನಕಾರಿ ವಿಷಯ ಪ್ರಕಟಿಸದಂತೆ ಹಾಗೂ ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್‌ ಚಾನೆಲ್‌ಗಳಿಗೆ ನಿರ್ಬಂಧ ವಿಧಿಸಿದ್ದ ಬೆಂಗಳೂರು ನಗರ ಸಿವಿಲ್ ಮತ್ತು … Continued

ಸವದತ್ತಿ : ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಚ್ಚಿನಿಂದ ದಾಳಿ ಮಾಡಿದ ಪತಿ…!

ಬೆಳಗಾವಿ : ವಿವಾಹ ವಿಚ್ಛೇದನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ನ್ಯಾಯಾಲಯ ಸಂಕಿರ್ಣದಲ್ಲಿ ಮಂಗಳವಾರ ಸಂಭವಿಸಿದೆ. ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಎಂಬಾತ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, … Continued

ಧರ್ಮಸ್ಥಳದ ದೇವಸ್ಥಾನ, ಕಾರ್ಯದರ್ಶಿ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ನಿರ್ಬಂಧ

ಬೆಂಗಳೂರು : ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರ ವಿರುದ್ಧ ಯಾವುದೇ ಮಾನಹಾನಿಕರ ವಿಷಯವನ್ನು ಪ್ರಕಟಿಸುವುದನ್ನು ಮತ್ತು ಪ್ರಸಾರ ಮಾಡುವುದನ್ನು ನಿರ್ಬಂಧಿಸಿ ಬೆಂಗಳೂರಿನ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ಆದೇಶಿಸಿದೆ. ಶ್ರೀ ಮಂಜುನಾಥಸ್ವಾಮಿ ದೇವಾಲಯದ ಕಾರ್ಯದರ್ಶಿ ಸಲ್ಲಿಸಿದ ಮಾನಹಾನಿ ಮೊಕದ್ದಮೆ ಅರ್ಜಿ ಸಂಬಂಧ ಈ ಆದೇಶ ಹೊರಡಿಸಲಾಗಿದೆ ಎಂದು … Continued

ಕಾಲೇಜಿನಲ್ಲಿ ರ‍್ಯಾಗಿಂಗಿಗೆ ಹೆದರಿ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಬೆಂಗಳೂರು : ರ‍್ಯಾಗಿಂಗ್‌ಗೆ ಹೆದರಿ ಆರ್ಕಿಟೆಕ್ಚರ್ ವಿದ್ಯಾರ್ಥಿಯೊಬ್ಬ ವೀಡಿಯೊ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ನೆಲಮಂಗಲ ನಂದರಾಮಯ್ಯನ ಪಾಳ್ಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮೃತನನ್ನು ಹಾಸನ ಮೂಲದ ಚನ್ನಕೇಶವ ಹಾಗೂ ತುಳಸಿ ದಂಪತಿಯ ಹಿರಿಯ ಮಗ ಅರುಣ (22) ಎಂದು ಗುರುತಿಸಲಾಗಿದೆ. ಜುಲೈ 11ರಂದು ತಂದೆ, ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಅರುಣ … Continued

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿ (ಜುಲೈ 22) ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಅಲ್ಲದೆ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ … Continued

ಮುಡಾ ಪ್ರಕರಣ | ಸಿದ್ದರಾಮಯ್ಯ ಪತ್ನಿ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌; ಇ.ಡಿ.ಗೆ ತರಾಟೆ

ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ನೀಡಲಾದ ಸಮನ್ಸ್ ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಿದ್ದರಾಮಯ್ಯ ಅವರ ಆಪ್ತ … Continued

ಅಂಕೋಲಾ : ಬಸ್‌ ಹಳ್ಳಕ್ಕೆ ಬಿದ್ದು ಓರ್ವ ಸಾವು, 18 ಜನರಿಗೆ ಗಾಯ

ಕಾರವಾರ : ಖಾಸಗಿ ಬಸ್ಸೊಂದು ಪಲ್ಟಿಯಾಗಿ ಸೇತುವೆಯ ಕೆಳಗೆ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ 3 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತ ಸಂಭವಿಸಿದ್ದು ಇದರಲ್ಲಿ ಓರ್ವರು ಸ್ಥಳದಲ್ಲಿಯೇ … Continued

ವಿವಾಹಿತ ಮಹಿಳೆಗೆ ಮದುವೆಯಾಗುವಂತೆ ಕಿರುಕುಳ; ಬುದ್ಧಿವಾದ ಹೇಳಿದ್ದಕ್ಕೆ ಆಕೆಯ ಸಂಬಂಧಿಯ ಕತ್ತು ಕೊಯ್ದ…!

ಬೆಂಗಳೂರು : ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ವಿವಾಹಿತ ಮಹಿಳೆಗೆ ಮದುವೆಯಾಗುವಂತೆ ಕಿರುಕುಳ ನೀಡುತ್ತಿದ್ದ ಯುವಕನಿಗೆ ಬುದ್ಧಿ ಹೇಳಿದ ಮಹಿಳೆಯ ಸಂಬಂಧಿಯ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಎಚ್‌ಎಎಲ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಜುಲೈ ೧೭ರಂದು ನಡೆದಿದ್ದು, ಗಾಯಗೊಂಡಿರುವ ಖಾಸಗಿ ಕಂಪನಿಯ ಉದ್ಯೋಗ ಪ್ರಶಾಂತ ಎಂಬವರು ಈಗ ಆಸ್ಪತ್ರೆಯಲ್ಲಿ … Continued

ಸವದತ್ತಿ | ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಸಾವು

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದ ಕಾಲುವೆ ಬಳಿ ಇರುವ ಕೃಷಿ ಹೊಂಡದಲ್ಲಿ ಮುಳುಗಿ ತಂದೆ, ಮಗ ಮೃತಪಟ್ಟ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬಸವರಾಜ ನೀಲಪ್ಪ ಕೆಂಗೇರಿ(40), ಅವರ ಪುತ್ರ ಧರೆಪ್ಪ (14) ಎಂದು ಗುರುತಿಸಲಾಗಿದೆ. ಬಸವರಾಜ, ಧರೆಪ್ಪ ಮತ್ತು ಭಾಗಪ್ಪ ಸಣ್ಣಕ್ಕಿ (16) ಹುರಳಿ ಬೆಳೆಗೆ ಔಷಧ … Continued