ಗೋಕರ್ಣ ಕೋಟಿತೀರ್ಥದಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿ ಸಾವು

ಗೋಕರ್ಣ: ಇಲ್ಲಿನ ಕೋಟಿ ತೀರ್ಥದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಯೋರ್ವ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಕುಮಟಾ ತಾಲೂಕಿನ ಹೆರವಟ್ಟಾ ನಿವಾಸಿ ದಾಮು ನಾರಾಯಣ ಗೌಡ (37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕೆಲಸಗಾರನಾಗಿರುವ  ಈತ ಕೋಟಿ ತೀರ್ಥದ ಕಟ್ಟೆಯ ಮೇಲೆ ಹೋಗುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವುದಾಗಿ ತಿಳಿದು … Continued

ಆರು ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು..ಕರ್ನಾಟಕದಲ್ಲಿ 1785 ಜನರಿಗೆ ಹೊಸ ಸೋಂಕು..

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 1785 ಜನರಿಗೆ ಕೊರೋನಾ ಸೋಂಕು ದಾಖಲಾಗಿದೆ.ಇದೇ ಸಮಯದಲ್ಲಿ 25 ಸೋಂಕಿತರು ಮೃತಪಟ್ಟಿದ್ದಾರೆ ಹಾಗೂ 1651 ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,13,512 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,12,368 ಜನ ಗುಣಮುಖರಾಗಿದ್ದು, 36,705 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್‌ ಸಕಾರಾತ್ಮಕ ದರ ಶೇಕಡ 1.10 ರಷ್ಟು … Continued

೪.೫೦ ಕೋಟಿ ರೂ.ಮೌಲ್ಯದ ರಕ್ತಚಂದನ ವಶ, ಇಬ್ಬರ ಬಂಧನ

ಬೆಂಗಳೂರು: ಅಕ್ರಮವಾಗಿ ದಾಸ್ತಾನು ಮಾಡಿಟ್ಟು ಹೊರ ದೇಶಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ಕೂವರೆ ಕೋಟಿ ರೂ. ಮೌಲ್ಯದ ರಕ್ತಚಂದನ ಮರದ ತುಂಡುಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಕಮ್ಮನಹಳ್ಳಿಯ ಆನಂದ್‌ಕುಮಾರ್ (೫೧), ಅನಿಲ್‌ಸಿಂಘಿ (೪೭) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ೪.೫ ಕೋಟಿ ರೂ. ಮೌಲ್ಯದ ೯೧೩೫ ಕೆಜಿ ತೂಕದ ರಕ್ತಚಂದನ ಮರದ … Continued

ಅಧಿಕೃತವಾಗಿ ಕಮಲದ ಪಕ್ಷ ಸೇರಿದ ಬಿಎಸ್‌ಪಿ ಉಚ್ಚಾಟಿತ ಶಾಸಕ ಎನ್.ಮಹೇಶ

ಚಾಮರಾಜನಗ: ಕೊಳ್ಳೇಗಾಲದ ಬಿಎಸ್ಪಿ ಉಚ್ಚಾಟಿತ ಶಾಸಕ ಎನ್.ಮಹೇಶ್ ಇಂದು (ಗುರುವಾರ) ಕಮಲಪಾಳಯಕ್ಕೆ ಸೇರಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಶಾಸಕ ಎನ್. ಮಹೇಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮೂರು ಬಾರಿ ಸೋತರೂ ಧೃತಿಗೆಡದೆ ಕಳೆದ ಇಪ್ಪತ್ತು ವರ್ಷಗಳಿಂದ ತಮ್ಮ ಹೋರಾಟದ ಮೂಲಕವೇ … Continued

ಮೇಕೆದಾಟು ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಅಣ್ಣಾಮಲೈಗೆ ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು: ತಮಿಳುನಾಡಿನಲ್ಲಿ ಕರ್ನಾಟಕದ ಮೇಕೆದಾಟು ವಿಚಾರವನ್ನು ರಾಜಕಾರಣಕ್ಕೆ ಬಳಕೆ ಮಾಡುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕರ್ನಾಟಕದ ಪಕ್ಷದವರು ಕೂಡ ತಮಿಳುನಾಡು ರಾಜಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆ ಮಾಡುವ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈಗಾಗಲೇ ಕೇಂದ್ರ ನೀರಾವರಿ ಸಚಿವರ … Continued

ಮುರ್ಡೇಶ್ವರ: ಸಮುದ್ರದ ಅಲೆ ರಭಸಕ್ಕೆ ಮಗುಚಿದ ದೋಣಿ: ಸಹಾಯಕ್ಕೆ ಮೊರೆ, ಮೀನುಗಾರರ ರಕ್ಷಣೆ

ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಮುರ್ಡೇಶ್ವರದ ಅರಬ್ಬಿ ಸಮುದ್ರಲ್ಲಿ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುವ ವೇಳೆ ಅಲೆಯ ರಭಸಕ್ಕೆ ಗಿಲ್ನಟ್ ದೋಣಿ ಮಗುಚಿದ ಕಾರಣ 7 ಮಂದಿ ಮೀನುಗಾರರು ಅಪಾಯದಲ್ಲಿದ್ದ ಘಟನೆ ವರದಿಯಾಗಿದೆ. ಜನಾರ್ದನ ಹರಿಕಾಂತ ಎಂಬುವವರಿಗೆ ಸೇರಿದ ಜಲಗಂಗಾ ದೋಣಿ ಮುರ್ಡೇಶ್ವರದ ಬಳಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ತೆರಳಿ ವಾಪಾಸ್ಸಾಗುವ ವೇಳೆ ಅಲೆಯ … Continued

ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 2018ರಲ್ಲಿ ನಡೆದ ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ರೋಷನ್ ಬೇಗ್ ಅವರನ್ನು ಸಿಬಿಐ ನವೆಂಬರ್ 22ರಂದು ಬಂಧಿಸಿತ್ತು. ಐಎಂಎ ವಂಚನೆ ಪ್ರಕರಣದ … Continued

ಮಾಜಿ ಸಚಿವ, ಶಾಸಕ ಜಮೀರ್‌ ಆಹ್ಮದ್‌ ಮನೆ, ಕಚೇರಿ ಮೇಲೆ ಐಟಿ ಅಲ್ಲ, ಇಡಿ ದಾಳಿ..!

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಎಂಬ ಖಚಿತ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಆರಂಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದಲೇ ದಾಳಿ ನಡೆದಿದೆ ಎಂಬಂತೆ ಇಡೀ ಪ್ರಕರಣ ಬಿಂಬಿತವಾಗಿತ್ತು. ಇದೀಗ ಜಾರಿ ನಿರ್ದೇಶನಾಲಯ ಜಮೀರ ಅಹ್ಮದ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ. ಐಎಂಎ ಪ್ರಕರಣ ಸಂಬಂಧ … Continued

ಪ್ರವಾಹ-ಕೋವಿಡ್​ ನಿರ್ವಹಣೆಗೆ ನಾಳೆಯಿಂದಲೇ ಉಸ್ತುವಾರಿ ಜಿಲ್ಲೆಗಳಿಗೆ ಸಚಿವರು; ಜಿಲ್ಲೆಗಳ ಹಂಚಿಕೆ ಮಾಡಿ ಆದೇಶ

ಬೆಂಗಳೂರು: ಕಳೆದ ಹತ್ತು ದಿನಗಳಿಂದ ರಾಜ್ಯದಲ್ಲಿ ನೆರೆ ಹಾವಳಿಯಿಂದ ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಅನೇಕ ಜಿಲ್ಲೆಗಳು ತತ್ತರಿಸಿದೆ. ಈ ನಡುವೆ ಕೋವಿಡ್​ ಸೋಂಕು ಕೂಡ ಹೆಚ್ಚಿರುವುದು ಸಾಕಷ್ಟು ಆತಂಕ ಮೂಡಿಸಿ ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ​ ಬೊಮ್ಮಾಯಿ ನೂತನ ಸಚಿವರಿಗೆ ಮೊದಲ ದಿನವೇ ಖಡಕ್​ ಆದೇಶ ನೀಡಿದ್ದು,, ಪ್ರತಿ ಜಿಲ್ಲೆಗಳಿಗೂ ತೆರಳಿ … Continued

ಸಚಿವರಿಗೆ ಒಂದೆರಡು ದಿನದಲ್ಲಿ ಖಾತೆ ಹಂಚಿಕೆ, ಶೀಘ್ರದಲ್ಲೇ ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಬೊಮ್ಮಾಯಿ

ಬೆಂಗಳೂರು: ಎಸ್​ಟಿಪಿಎಸ್​​ ಹಣ ಬೇರೆ ಇಲಾಖೆಗೆ ನೀಡುತ್ತಿದ್ದ ಹಿನ್ನೆಲೆ ಶೀಘ್ರದಲ್ಲೇ ಎಸ್​ಟಿ ಸಚಿವಾಲಯ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನೂತನ ಸಚಿವರೊಂದಿಗೆ ಸಭೆ ನಡೆಸಿದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಸ್​ಟಿ ಸಮುದಾಯದ ಬೇಡಿಕೆಯಂತೆ ಪ್ರತ್ಯೇಕ ಸಚಿವಾಲಯ​ ರಚನೆ ಮಾಡುತ್ತೇವೆ.  ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಂತೆ ಎಸ್.ಟಿ.ಪಿ. ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ … Continued