ಸಚಿವ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ, ಕಲ್ಯಾಣ ಕರ್ನಾಟಕದ ನಾಲ್ಕು ಜಿಲ್ಲೆಗಳ ಸಂಪೂರ್ಣ ಕಡೆಗಣನೆ: ಈಶ್ವರ ಖಂಡ್ರೆ ಕಿಡಿ

ಯಾದಗಿರಿ:ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ದೇಶದ ಸಾಮಾನ್ಯ ವರ್ಗದ ಜನರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯ ಕೃಷ್ಣಾ ಹಾಗೂ ಭೀಮಾ ನದಿ ಪಾತ್ರದಲ್ಲಿ ಪ್ರವಾಹ ಪರಸ್ಥಿತಿ ನಿರ್ಮಾಣವಾಗಿದ್ದು, ಇಲ್ಲಿನ ಪ್ರವಾಹ ಪ್ರದೇಶಗಳನ್ನು … Continued

ಬೊಮ್ಮಾಯಿ ಸರ್ಕಾರದ ನೂತನ ಸಚಿವರಾಗಿ 29 ಶಾಸಕರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟಕ್ಕೆ ನೂತನ ಸಾರಥಿಗಳಾಗಿ ಇಂದು (ಬುಧವಾರ) 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಮಧ್ಯಾಹ್ನ 2.15ಕ್ಕೆ ರಾಜಭವನದ ಗಾಜಿನ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ, 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಒಂದು ಬಾರಿಗೆ ಐವರು ಶಾಸಕರಿಗೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ … Continued

ಬೊಮ್ಮಾಯಿ ಸಚಿವ ಸಂಪುಟದಲ್ಲಿ 13 ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಇಲ್ಲ..!

ಬೆಂಗಳೂರು: ಪ್ರಾದೇಶಿಕ ಸಮತೋಲನ ಹಾಗೂ ಜಾತಿವಾರು ಪ್ರಾತಿನಿಧ್ಯಕ್ಕೆ ಒತ್ತು ನೀಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ 13 ಜಿಲ್ಲೆಗಳಿಗೆ ಸಚುವ ಸಂಪುಟದಲ್ಲಿ ಪ್ರಾತಿನಿಧ್ಯವೇ ಇಲ್ಲ..! ಮೈಸೂರು, ಕಲಬುರಗಿ, ರಾಮನಗರ, ಕೊಡಗು, ರಾಯಚೂರು, ಹಾಸನ, ವಿಜಯಪುರ,   ದಾವಣಗೆರೆ, ಕೋಲಾರ, ಯಾದಗಿರಿ, ಚಿಕ್ಕಮಗಳೂರು,ಚಾಮರಾಜ ನಗರ ಜಿಲ್ಲೆಗಳಿಗೆ ಸಂಪುಟದಲ್ಲಿ ಸ್ಥಾನಮಾನ ಸಿಕ್ಕಿಲ್ಲ. ಕೇವಲ 18 ಜಿಲ್ಲೆಗಳಿಗೆ ಮಾತ್ರ ಮಣೆ … Continued

ತಮ್ಮ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದ ಮೂವರು ಮಂತ್ರಿಯಾಗದಂತೆ ನೋಡಿಕೊಂಡ ಯಡಿಯೂರಪ್ಪ

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಸಡ್ಡು ಹೊಡೆದಿದ್ದ ಪ್ರಮುಖ ಮೂವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಈ ಮೂವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಳಾಗುತ್ತಾರೆ ಎಂಬ ನಿರೀಕ್ಷೆ ಮಾಡಲಾಗಿತ್ತು. ಅದರಲ್ಲೂ … Continued

ಬೊಮ್ಮಾಯಿ ಸಂಪುಟದಲ್ಲಿ ಕಲಬುರಗಿ, ರಾಯಚೂರು, ಯಾದಿಗಿರಿ ಜಿಲ್ಲೆ ಕಡೆಗಣನೆ

ಯಾದಗಿರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಸಂಪುಟದಲ್ಲಿ ಯಾದಗಿರಿ, ರಾಯಚೂರು ಮತ್ತು ಕಲಬುರಿಗ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧಯ ಸಿಕ್ಕಿಲ್ಲ. ಕಳೆದ ಬಾರಿಯೂ ಈ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿರಲಿಲಿಲ್ಲ. ಯಾದಗಿರಿ ಜಿಲ್ಲೆಯಿಂದ ರಾಜೂ ಗೌಡ ಅವರಿಗೆ ಈ ಬಾರಿ ಸಂಪುಟ ಸ್ಥಾನ ಸಿಗುತ್ತದೆ ಎಂಬ ಬಲವಾದ ನಂಬಿಕೆ ಇತ್ತು. ಆದರೆ ಅಂತಿಮ ಗಳಿಗೆಯಲ್ಲಿ ಅವರಿಗೆ ಸಚಿವ … Continued

ಇಂದು ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಯಾಗುವವರ ಪಟ್ಟಿ ಇಲ್ಲಿದೆ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರುವವರ ಪಟ್ಟಿ ಅಂತಿಮಗೊಂಡಿದೆ. ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್​ ಭೇಟಿ ಮಾಡಿ ಸಚಿವರ ಪಟ್ಟಿ ಫೈನಲ್​​​ ಆದ ಬಳಿಕ ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದರು. ಮುಖ್ಯಮಂತ್ರಿ ಬೊಮ್ಮಾಯಿ ಈವರೆಗೆ 26 ಶಾಸಕರಿಗೆ ಕರೆ ಮಾಡಿ ಸಚಿವ ಸ್ಥಾನ ನೀಡಿರುವ ವಿಷಯವನ್ನು ಖಚಿತಪಡಿಸಿದ್ದಾರೆ. ಇಂದು ಮಧ್ಯಾಹ್ನ … Continued

ಇಂದು 11 ಗಂಟೆಗೆ ನೂತನ ಸಚಿವರ ಪಟ್ಟಿ ರಿಲೀಸ್, ಮಧ್ಯಾಹ್ನ ಪ್ರಮಾಣ ವಚನ : ಬೊಮ್ಮಾಯಿ

ಬೆಂಗಳೂರು : ನೂತನ ಸಚಿವರ ಪಟ್ಟಿಯನ್ನು ಇಂದು ಬೆಳಗ್ಗೆ 11 ಗಂಟೆಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ನೂತನಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಹೊಸ ಸಂಪುಟ ರಚನೆ ಮಾಡುವ ಬಗ್ಗೆ ಚರ್ಚೆಗಳು ಬಿರುಸಾಗಿ ನಡೆಯುತ್ತಿವೆ. ಇದೇ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದ ಬೊಮ್ಮಾಯಿ ಬೆಂಗಳೂರಿಗೆ … Continued

ಗಸ್ತುತಂಡದ ಮೇಲೆ ಉಗ್ರರ ದಾಳಿ: ಕಲಬುರಗಿ ಯೋಧ ಸೇರಿ ಇಬ್ಬರು ಹುತಾತ್ಮ

ಕಲಬುರಗಿ: ತ್ರಿಪುರದ ಧಲೈ ಜಿಲ್ಲೆಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಸೈನಿಕರ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ರಾಜ್ಯದ ಕಲಬುರಗಿ ಜಿಲ್ಲೆಯ ಓರ್ವ ಸೈನಿಕ ಸೇರಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ತಾಲ್ಲೂಕಿನ ಚಿಂಚನಸೂರ ಗ್ರಾಮದ ಯೋಧ ರಾಜಕುಮಾರ ಎಂ. ಮಾವಿನ್ ಎಂಬ ಯೋಧ ಈ ಘಟನೆಯಲ್ಲಿ ಹುತಾತ್ಮನಾಗಿದ್ದಾರೆ. ಸಬ್​​ಇನ್​​​ಸ್ಪೆಕ್ಟರ್​ … Continued

ಅನುದಾನ ಬಿಡುಗಡೆ: ಪಕ್ಷಭೇದ ಮರೆತು ಮರೆತು ವಿಧಾನ ಪರಿಷತ್ ಸದಸ್ಯರು ರಾಜ್ಯ ಸರ್ಕಾರದ ಮೇಲೆ ಗರಂ

ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಸದಸ್ಯರು ಪಕ್ಷಭೇದ ಮರೆತು ಸರ್ಕಾರದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರೊಂದಿಗೆ ಬಿಜೆಪಿ ಸದಸ್ಯರೂ ಸರ್ಕಾರದ ಮೇಲೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದೆಡೆ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಯಾವುದೇ ಕೆಲಸಗಳು ಸರಿಯಾಗಿ ಆಗುತ್ತಿಲ್ಲ. ಏಕವ್ಯಕ್ತಿ ಸಂಪುಟದ ಸರ್ಕಾರ ರಾಜ್ಯದಲ್ಲಿದೆ. ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು … Continued

ಕರ್ನಾಟಕದಲ್ಲಿ ಸಚಿವ ಸಂಪುಟಕ್ಕೆ ಮುಹೂರ್ತ ಫಿಕ್ಸ್‌: ನಾಳೆ ಮಧ್ಯಾಹ್ನ ಸಚಿವರ ಪ್ರಮಾಣ ವಚನ..!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಗೆ ಮುಹೂರ್ತ ಕೊನೆಗೂ ನಿಗದಿಯಾಗಿದೆ. ಆಗಸ್ಟ್​ 4ರ (ಬುಧವಾರ) ನಾಳೆ ಮಧ್ಯಾಹ್ನ 2:15ರ ಸುಮಾರಿಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಈಗಾಗಲೇ ಹೈಕಮಾಂಡ್​ನಿಂದ ಪಟ್ಟಿ ರವಾನೆಯಾಗಿದ್ದು, 24 ರಿಂದ 26 ಶಾಸಕರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ, ಹಸ್ತಾಂತರವಾಗುವವರೆಗೆ … Continued