ಬೊಮ್ಮಾಯಿ ಮಂತ್ರಿಮಂಡಲ ರಚನೆ: 8 ಹಿರಿಯ ಶಾಸಕರಿಗೆ ಕೊಕ್​..ಯುವ ಮುಖಗಳಿಗೆ ಮಣೆ..?!

ಬೆಂಗಳೂರು: ಭಾನುವಾರ ರಾತ್ರಿ ಬಿಜೆಪಿ ಹೈಕಮಾಂಡ್​ ಆದೇಶದ ಮೇರೆಗೆ ದೆಹಲಿಗೆ ದಿಢೀರ್‌ ಪ್ರಯಾಣ ಬೆಳೆಸಿದ್ದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಸೋಮವಾರ ರಾತ್ರಿ ಮೋತಿಲಾಲ್​ ರಸ್ತೆಯಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಮನೆಗೆ ಸಂಭಾವ್ಯ ಸಚಿವರ ಪಟ್ಟಿ ಹಿಡಿಡುಕೊಂಡು ಹೋಗಿ ಚರ್ಚೆ ನಡೆಸಿದ್ದರು. ಮಂಗಳವಾರ ಸಂಪುಟ ಪಟ್ಟಿ ಅಂತಿಮಗೊಳಿಸಿಕೊಂಡೇ ತವರಿಗೆ ಮರಳಲು ನಿರ್ಧರಿಸಿ ದೆಹಲಿಯಲ್ಲಿ ಠಿಕಾಣಿ ಹೂಡಿದ್ದ … Continued

ಕರ್ನಾಟಕದಲ್ಲಿ ಮಂಗಳವಾರ 1674 ಜನರಿಗೆ ಕೊರೊನಾ ಸೋಂಕು, ಮೂರು ಜಿಲ್ಲೆಗಳಲ್ಲಿ ಶೂನ್ಯ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 1674 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೇ ಸಮಯದಲ್ಲಿ 38 ಸೋಂಕಿತರು ಮೃತಪಟ್ಟಿದ್ದಾರೆ ಹಾಗೂ 1376 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,09,958 ಕ್ಕೆ ಏರಿಕೆಯಾಗಿದೆ. ಇದುವರೆಗೆ 36,650 ಸೋಂಕಿತರು ಮೃತಪಟ್ಟಿದ್ದಾರೆ. 28,49,003 ಸೋಂಕಿತರು ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.38 ರಷ್ಟು ಇದೆ. ರಾಜ್ಯದಲ್ಲಿ … Continued

ಹಾವೇರಿ: ಶಾಸಕ ಓಲೇಕಾರಗೆ ಸಚಿವ ಸ್ಥಾನ ನೀಡಲು ಪಟ್ಟುಹಿಡಿದು ನೀರಿನ ಟ್ಯಾಂಕ್ ಏರಿದ ಅಭಿಮಾನಿಗಳು…!!

ಹಾವೇರಿ:ರಾಜ್ಯದಲ್ಲಿ ಸಿಎಂ ಬದಲಾವಣೆ ಸರ್ಕಸ್ ಬಳಿಕ  ಸಂಪುಟ ರಚನೆ ಕಸರತ್ತು ಜೋರಾಗಿದೆ. ಶಾಸಕರು ದೆಹಲಿಗೆ ದೌಡಾಯಿಸಿ ಮಂತ್ರಿ ಸ್ಥಾನಕ್ಕೆ ಲಾಭಿ ನಡೆಸಿದ್ದರೇ, ಹಾವೇರಿ ಶಾಸಕರ ಅಭಿಮಾನಿಗಳು ನೀರಿನ ಟ್ಯಾಂಕ್ ಏರಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಹಾವೇರಿ ಶಾಸಕ ನೆಹರು ಓಲೇಕಾರಗೆ ಸಚಿವ ಸ್ಥಾನ ನೀಡುವಂತೆ ಒತ್ತಯಿಸಿ ಇಬ್ಬರು ಅಭಿಮಾನಿಗಳು ನೀರಿನ ಟ್ಯಾಂಕ್ ಏರಿ ಸಾರ್ವಜನಿಕರ ಗಮನ ಸೆಳೆದ … Continued

ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಬರುವವರಿಗೆ ಆರ್‌ಟಿ -ಪಿಸಿಆರ್ ಪರೀಕ್ಷೆ ಕಡ್ಡಾಯ

ಬೆಂಗಳೂರು: ಹೊರರಾಜ್ಯಗಳಿಂದ ಬರುವವರಿಗೆ ಆರ್‌ಟಿ -ಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದ್ದು, ವರದಿ ಬರುವವರೆಗೆ ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ. ಟೆಸ್ಟ್ ವರದಿ ಬರುವವರಿಗೆ ಪಾಲಿಕೆ ಹೊಟೇಲ್‍ಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗುತ್ತದೆ. ನಾವು ಮಾಡುವ ಮೂಲಭೂತ ವ್ಯವಸ್ಥೆ ಅವರಿಗೆ ಬೇಡವೆಂದರೆ ಅವರ ಅನುಕೂಲಕ್ಕೆ ತಕ್ಕಹಾಗೆ ಹೊಟೇಲ್ ವ್ಯವಸ್ಥೆ ಮಾಡಿಕೊಳ್ಳಬಹುದು. ಕೆಲವು ಹೊಟೇಲ್‍ಗಳನ್ನು … Continued

ನಾಳೆಯಿಂದ ಆರಂಭವಾಗಬೇಕಿದ್ದ ಕರ್ನಾಟಕ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಾಳೆಯಿಂದ (ಆಗಸ್ಟ್‌ 4) ಪ್ರಾರಂಭವಾಗಬೇಕಿದ್ದ ಪದವಿ ತರಗತಿಗಳ ಪ್ರವೇಶ ಪ್ರಕ್ರಿಯೆ ಮುಂದೂಡಲಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆಯನ್ನು ಆಗಸ್ಟ್‌ 4ರಿಂದ ಪ್ರಾರಂಭಿಸಲು ಕಾಲೇಜು ಶಿಕ್ಷಣ ಇಲಾಖೆ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು.ಆದರೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ … Continued

ಆಗಸ್ಟ್ 10ರಂದು ದೇಶಾದ್ಯಂತ ವಿದ್ಯುತ್ ನೌಕರರ ಮುಷ್ಕರ:ದೇಶವ್ಯಾಪಿ ವಿದ್ಯುತ್‌ ಸ್ಥಗಿತ

ಬೆಂಗಳೂರು: ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಆಗಸ್ಟ್ 10ರಂದು ದೇಶಾದ್ಯಂತ ವಿದ್ಯುತ್ ನೌಕರರು ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಹೀಗಾಗಿ ದೇಶವ್ಯಾಪಿ ವಿದ್ಯುತ್ ಸ್ಥಗಿತವಾಗಲಿದೆ. ವಿದ್ಯುತ್ ಖಾಸಗೀಕರಣ ವಿರೋಧಿಸಿ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದು, ವಿದ್ಯುತ್ ಕಂಪನಿಗಳನ್ನು ಸರ್ಕಾರ ಖಾಸಗೀಕರಣ ವಿರೋಧಿಸಿ ದೇಶಾದ್ಯಂತ ಈ ಪ್ರತಿಭಟನೆ ನಡೆಯಲಿದೆ ಎಂದು ನೌಕರರ ಸಂಘಟನೆಗಳು ತಿಳಿಸಿವೆ. ವಿದ್ಯುತ್ ಕಂಪನಿಗಳಿಂದ ಆಗಿರುವ … Continued

ಇಂದಿನಿಂದ ಬೆಂಗಳೂರಲ್ಲಿ ಮತ್ತೆ ಕಟ್ಟುನಿಟ್ಟಿನ ನೈಟ್ ಕರ್ಫ್ಯೂ ಜಾರಿ..!

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ತಹಬದಿಗೆ ತರಲು ಇನ್ನಿಲ್ಲದ ಹರಸಾಹಸ ಪಡುತ್ತಿರುವ ಬಿಬಿಎಂಪಿ ಇಂದಿನಿಂದ ಕಟ್ಟುನಿಟ್ಟಿನ ನೈಟ್ ಕರ್ಫ್ಯೂ ಜಾರಿಗೆ ಮುಂದಾಗಿದೆ. ಇಲ್ಲಿಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿದ್ದರೂ ಯಾರೂ ಪಾಲನೆ ಮಾಡುತ್ತಿರಲಿಲ್ಲ. ಪೊಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಸಹ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಸೋಂಕು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ನಗರದಲ್ಲೂ ಕಳೆದ ಕೆಲವು … Continued

ಕರ್ನಾಟಕದಲ್ಲಿ ಬಹುದೊಡ್ಡ ರಾಜಕೀಯ ವ್ಯಾಕ್ಯೂಮ್‌ ಇದೆ… ಆಮ್‌ ಆದ್ಮಿ ಪಾರ್ಟಿ ಆ ವ್ಯಾಕ್ಯೂಮ್‌ ತುಂಬುತ್ತದೆ

ಸಂದರ್ಶನ: ರಘುಪತಿ ಯಾಜಿ ಹುಬ್ಬಳ್ಳಿ : ಕರ್ನಾಟಕದಲ್ಲಿ ರಾಜಕೀಯ ವಾಕ್ಯೂಮ್‌ ಇದೆ.ಇಲ್ಲಿ ಕೇವಲ ಅಧಿಕಾರಕ್ಕಾಗಿ ರಾಜಕಾರಣ ನಡೆಯುತ್ತಿದೆಯೇ ಹೊರತು ಆಡಳಿತಕ್ಕಾಗಿ ರಾಜಕಾರಣ ನಡೆಯುತ್ತಿಲ್ಲ. ಇದು ಜನರಿಗೂ ಗೊತ್ತಿದೆ. ಆದರೆ ಅವರ ಮುಂದೆ ಪರ್ಯಾಯ ಆಯ್ಕೆಗಳಿಲ್ಲ. ಈ ವ್ಯಾಕ್ಯೂಮ್‌ (ಜಾಗ) ತುಂಬಲೇ ಬೇಕಿದೆ. ಇಲ್ಲದಿದ್ದರೆ ಇಲ್ಲಿ ಕೇವಲ ಅಧಿಕಾರ (ಪವರ್‌) ನಡೆಯುತ್ತದೆಯೇ ಹೊರತು ಆಡಳಿತ (ಅಡ್ಮಿನಿಸ್ಟ್ರೇಶನ್‌) ನಡೆಯುವುದಿಲ್ಲ. … Continued

ಸಚಿವರು, ಡಿಸಿಎಂ ಬಗ್ಗೆ ಇಂದು ಸಂಜೆ ಗೊತ್ತಾಗಲಿದೆ, ವರಿಷ್ಠರ ತೀರ್ಮಾನ ಅಂತಿಮ: ಬೊಮ್ಮಾಯಿ

ನವದೆಹಲಿ: ರಾಜ್ಯ ಸಚಿವ ಸಂಪುಟ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆ ಚರ್ಚೆ ನಡೆಸಿದ್ದೇನೆ. ಬಿಜೆಪಿ ಅಧ್ಯಕ್ಷರು ಕೆಲವಷ್ಟು ಸಲಹೆ ನೀಡಿದ್ದಾರೆ. ಹೈಕಮಾಂಡ್‌ ಒಳ್ಳೆಯ ತೀರ್ಮಾನ ಮಾಡುವ ವಿಶ್ವಾಸವಿದೆ. ಮಂಗಳವಾರ (ಆಗಸ್ಟ್ 3) ಸಂಜೆ ನೂತನ ಸಚಿವರ ಪಟ್ಟಿ ಪ್ರಕಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ದೆಹಲಿ ಜೆಪಿ ನಡ್ಡಾ ನಿವಾಸದ … Continued

ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ಕೊರೊನಾ ವಾರಿಯರ್ಸ್ ಎಂದು ಘೋಷಣೆ

ಬೆಂಗಳೂರು: ಆರ್​ಡಿಪಿಆರ್​ನ ಎಲ್ಲ ಸಿಬ್ಬಂದಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್​ ಇಲಾಖೆ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. 2020ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ನೀಡಲಾಗಿದ್ದು, ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿಪಂ, ತಾಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಮೊದಲ … Continued