ವಾರದೊಳಗೆ ರಾಜ್ಯ ಸಚಿವ ಸಂಪುಟ ರಚನೆ ಸಾಧ್ಯತೆ; ನಡ್ಡಾ ಭೇಟಿ ಬಳಿಕೆ ಸಿಎಂ ಬೊಮ್ಮಾಯಿ ಹೇಳಿಕೆ

ನವದೆಹಲಿ: ವಾರದೊಳಗೆ ರಾಜ್ಯ ಸಚಿವ ಸಂಪುಟದ ರಚನೆಯಾಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹೇಳಿದ್ದಾರೆ. ಇಂದು ೯ಶುಕ್ರವಾರ) ಪ್ರಧಾನಿ ಭೇಟಿ ಬಳಿಕೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿನಡ್ಡಾ ಅವರ ಜೊತೆಗೆ ಸಂಪುಟ ರಚನೆ ಕುರಿತು ಚರ್ಚಿಸಿದ್ದೇನೆ. ಮತ್ತೆ ದೆಹಲಿಗೆ ಬರಬೇಕೋ ಬೇಡವೋ ಎಂಬುದನ್ನು ಅವರು ತಿಳಿಸುತ್ತಾರೆ. ಕೆಲವೆ ದಿನಗಳಲ್ಲಿ ಸಂಪುಟ … Continued

ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಸಿಎಂ ಬೊಮ್ಮಾಯಿ ತಮ್ಮನ್ನು ಭೇಟಿಯಾದ ನಂತರ ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಬಸವರಾಜ ಬೊಮ್ಮಾಯಿ ಇದೇ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ … Continued

ಪರ್ತಗಾಳಿ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಪೀಠಾರೋಹಣ ಸಂಪನ್ನ

ಪಣಜಿ: ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ೨೪ನೇ ಪೀಠಾಧಿಪತಿಗಳಾಗಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಶುಕ್ರವಾರ ಗುರುಪೀಠಾರೋಹಣಗೈದರು. ಗೋವಾದ ಕಾಣಕೋಣದಲ್ಲಿರುವ ಶ್ರೀ ಪರ್ತಗಾಳಿ ಜೀವೋತ್ತಮ ಮಠದಲ್ಲಿ ನಡೆದ ಶುಕ್ರವಾರ ಮಧ್ಯಾಹ್ನ ೩.೧೦ಕ್ಕೆ ನಡೆದ ಸರಳ , ಸುಂದರ ಕಾರ್ಯಕ್ರಮದಲ್ಲಿ ಪೀಠಾರೋಹಣದ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಮಠದ ಸಂಪ್ರದಾಯದಂತೆ ಶ್ರೀಗಳು ಪೀಠಾರೋಹಣಗೈದರು. ಈ … Continued

ಸಚಿವಾಕಾಂಕ್ಷಿ ರೇಣುಕಾಚಾರ್ಯಗೆ ಮತ್ತೆ ಸಿಡಿ ಭೀತಿ..?; ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಆದ ಬಳಿಕ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಪ್ರಯತ್ನ ಮಾಡುತ್ತಿರುವ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರಿಗೆ ಈಗ ಸಿಡಿ ಭಯ ಶುರುವಾಗಿದೆ. ಹೀಗಾಗಿ ಅವರು ಈಗ ಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ವಿರುದ್ಧ ಯಾವುದೇ ಸಿಡಿಯನ್ನು ಪ್ರಸಾರ ಮಾಡದಂತೆ … Continued

ವರಿಷ್ಠರಿಗೆ ಬೆದರಿಕೆ ಹಾಕಿ ಯಡಿಯೂರಪ್ಪ ನನಗೆ ಸಿಎಂ ಸ್ಥಾನ ತಪ್ಪಿಸಿದರು: ಯತ್ನಾಳ ಹೊಸ ಬಾಂಬ್..!

ವಿಜಯಪುರ: ಬಿ.ಎಸ್. ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿದ ಬಳಿಕ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಮತ್ತೊಂದು ರಾಜಕೀಯ ಬಾಂಬ್‌ ಸಿಡಿಸಿದ್ದಾರೆ. ನನಗೆ ಮುಖ್ಯಮಂತ್ರಿ ಆಗುವ ಅವಕಾಶವಿತ್ತು, ಆದರೆ ಯಡಿಯೂರಪ್ಪ ನನಗೆ ಅವಕಾಶ ತಪ್ಪಿಸಿದರು. ಯತ್ನಾಳ್ ಅವರನ್ನ ಮುಖ್ಯಮಂತ್ರಿ ಮಾಡಿದರೆ ಮೂರು ತಿಂಗಳಲ್ಲಿ ಸರ್ಕಾರ‌ ಕೆಡಹುತ್ತೇನೆ ಎಂದು ಕೇಂದ್ರದ ನಾಯಕರಿಗೆ ಯಡಿಯೂರಪ್ಪ ಬೆದರಿಕೆ ಹಾಕಿದ್ದರು ಎಂದು … Continued

ಧಾರವಾಡ ಹಾಲು ಒಕ್ಕೂಟಕ್ಕೆ ಅಧ್ಯಕ್ಷರ ಅವಿರೋಧ ಆಯ್ಕೆ,ಇನ್ಮುಂದೆ ಶಂಕರ ಮುಗದ ಸಾರಥ್ಯ

ಧಾರವಾಡ: ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಮುಖಂಡ ಶಂಕರ ಮುಗದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಶಂಕರ ಮುಗದ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹಾವೇರಿ, ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದ … Continued

ಜನ ಬಯಸಿದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೇನೆ: ಅಭಿಷೇಕ್ ಅಂಬರೀಷ

ಮಂಡ್ಯ: ಈಗ ಕನ್ನಡದ ಖ್ಯಾತ ನಟ ಅಂಬರೀಷ ಅವರ ಪುತ್ರ ತನ್ನ ತಾಯಿಯ ಹಾದಿಯಲ್ಲೇ ಸಾಗಲಿದ್ದಾರಾ ಎಂಬ ಪ್ರಶನೆ ಏಳುವಂತೆ ಮಾಡಿದೆ. ಅಂಬರೀಷ ಅವರ ಪುತ್ರ ಅಭಿಷೇಕ ಅವರು ನೀಡಿದ ಹೇಳಿಕೆಯೇ ಇದಕ್ಕೆ ಕಾರಣ. ಜನ ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು … Continued

ಹುಬ್ಬಳ್ಳಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಧು ಬಂಗಾರಪ್ಪ

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್. ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು. ಹುಬ್ಬಳ್ಳಿಯಲ್ಲಿ ಇಂದು (ಶುಕ್ರವಾರ) ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಕ್ಷದ … Continued

ಸ್ವಾಭಿಮಾನ, ಗೌರವ ಬಿಟ್ಟು ಸಂಪುಟ ಸೇರುವುದಿಲ್ಲ: ಶೆಟ್ಟರ ಪುನರುಚ್ಚಾರ

ಹುಬ್ಬಳ್ಳಿ: ತಾನು ಸಚಿವ ಸಂಪುಟ ಸೇರುವುದಿಲ್ಲ ಎಂದು ನಿನ್ನೆಯೂ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ, ಆದರೆ ನಾನು ಸೇರಬಾರದು ಎಂದು ನಿರ್ಧರಿಸಿದ್ದೇನೆ ಎಂದು ಜಗದೀಶ ಶೆಟ್ಟರ ಹೇಳಿದರು. ಹುಬ್ಬಳ್ಳಿ ಆರ್​ಎಸ್​ಎಸ್​ ಕಚೇರಿ ಕೇಶವ ಕುಂಜಕ್ಕೆ ಗುರುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು,ನನ್ನ ನಿರ್ಧಾರ ಸ್ಪಷ್ಟವಾಗಿದೆ. ಯಡಿಯೂರಪ್ಪ … Continued

ಕಿರಿಯರಿಗೆ ಅವಕಾಶ ನೀಡಲು ಸಂಪುಟ ಸೇರದಿರಲು ಶೆಟ್ಟರ ನಿರ್ಧಾರ: ಬಿಎಸ್‍ವೈ

ಬೆಂಗಳೂರು: ಮಾಜಿ ಸಚಿವ ಜಗದೀಶ್ ಶೆಟ್ಟರ್ ಅವರು ಬೆಳಗ್ಗೆ ಬಂದು ಮಾತನಾಡಿದ್ದಾರೆ. ಕಿರಿಯರಿಗೆ ಅವಕಾಶ ನೀಡಲು ಸಂಪುಟ ಸೇರದಿರುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಆರ್‍ಎಸ್‍ಎಸ್‍ನ ಕೇಶವಕೃಪಾಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಬೆಳಗ್ಗೆ ಬಂದು ಮಾತನಾಡಿದರು. ತಮ್ಮ ನಿರ್ಧಾರದ ಬಗ್ಗೆ ನನಗೆ ತಿಳಿಸಿದರು. ಕಿರಿಯರಿಗೆ … Continued