ರಾಜ್ಯದಲ್ಲಿ ಇನ್ನೂ ೫ ದಿನ ಮಳೆ ಮುನ್ಸೂಚನೆ: ಇಂದು ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ತೀವ್ರವಾಗಿದ್ದು, ಕಳೆದ ಹತ್ತು ದಿನಗಳಿಂದ ರಾಜ್ಯದ ಹಲವೆಡೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಳೆ ಹಾನಿಯನ್ನು ವೀಕ್ಷಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಅವರು ರವಿವಾರ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿದ್ದಾರೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳು ಪ್ರವಾಹ … Continued

ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಪ್ರವಾಹ: ಭಾಗಶಃ ಮುಳುಗಿದ ಗೋಕಾಕ

posted in: ರಾಜ್ಯ | 0

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯತ್ತಿರುವ ಮಳೆಗೆ ಹಲವು ನದಿಗಳು ಉಕ್ಕೇರಿದ್ದು, ನದಿಗಳ ಪ್ರವಾಹದಿಂದಾಗಿ ಜಿಲ್ಲೆಯ ಗೋಕಾಕ್ ನಗರ ಭಾಗಶಃ ಮುಳುಗಡೆಯಾಗಿದೆ. ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆರ್ಭಟದಿಂದ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಘಟಪ್ರಭಾ, ಮಾರ್ಕಂಡೇಯ, ಹಿರೇಣ್ಯಕೇಶಿ ಹಾಗೂ ಬಳ್ಳಾರಿ ನಾಲಾ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಎಲ್ಲಾ ನದಿಗಳ ನೀರು … Continued

ನಾಯಕತ್ವ ಬದಲಾವಣೆ ಸುದ್ದಿ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಪ್ರಲ್ಹಾದ ಜೋಶಿ- ಬೊಮ್ಮಾಯಿ ಗುಪ್ತ ಮಾತುಕತೆ

ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೈಕಮಾಂಡ್ ಸಂದೇಶಕ್ಕಾಗಿ ಕಾಯುತ್ತಿರುವ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಹುಬ್ಬಳ್ಳಿಯಲ್ಲಿ ದಿಢೀರ್ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದಾರೆ.ಇದು ಕುತೂಹಲಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯ ಮಯೂರಿ ಎಸ್ಟೇಟ್ ಪ್ರಹ್ಲಾದ್ ಜೋಶಿ ಮನೆಗೆ ದಿಢೀರ್ ಭೇಟಿ ನೀಡಿದ ಸಚಿವ ಬಸವರಾಜ ಬೊಮ್ಮಾಯಿ, ಒಂದು ಗಂಟೆಗೂ … Continued

ಕರ್ನಾಟಕ ಸಿಎಂ ರೇಸಲ್ಲಿ ನಾನಿಲ್ಲ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಮುಖ್ಯಮಂತ್ರಿ ರೇಸಿನಲ್ಲಿ ಹೆಸರು ಕೇಳಿಬರುತ್ತಿರುವವರಲ್ಲಿ ಒಬ್ಬರಾದ ಮುಖ್ಯಮಂತ್ರಿ ಸ್ಥಾನದ ಫ್ರಂಟ್ ರನ್ನರ್ ತಾವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಫ್ರಂಟ್ ಲೈನ್ ನಲ್ಲಿ ಯಾರಿದ್ದರೋ ನನಗೆ ಗೊತ್ತಿಲ್ಲ. ನಾನಂತೂ ಯಾವ ರೇಸಲ್ಲಿ ಇಲ್ಲ ಎಂದು ಪ್ರಹ್ಲಾದ್ ಜೋಶಿ ಹೇಲಿದ್ದಾರೆ.ಪಕ್ಷದ ಕೇಂದ್ರದ ವರಿಷ್ಠರು ಈ ಬಗ್ಗೆ ನನ್ನ … Continued

ಕರ್ನಾಟಕದಲ್ಲಿ ಶನಿವಾರ 1,857 ಹೊಸ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಶನಿವಾರ (ಜುಲೈ 24) ಹೊಸದಾಗಿ 1,857 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,93,556 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 29 ಸಾವು ಸಂಭವಿಸಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36352 ಜನರ ಸಾವು ಸಂಭವಿಸಿದೆ. ರಾಜ್ಯದಲ್ಲಿ 23,905 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು … Continued

ಸ್ವರ್ವಣಲ್ಲೀ ಗಂಗಾಧರೇಂದ್ರ ಶ್ರೀಗಳ ೩೧ನೇ ಚಾತುರ್ಮಾಸ್ಯ ಆರಂಭ

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ೩೧ನೇ ಚಾತುರ್ಮಾಸ್ಯ ವ್ರತಕ್ಕೆ ಶನಿವಾರ ಸಂಕಲ್ಪ ಮಾಡಿದರು. ಬಳಿಕ ಆಶೀರ್ವವಚನ ನೀಡಿದ ಶ್ರೀಗಳು, ಇಂದು ಸಾಮೂಹಿಕ ಆಚರಣೆಯಿಂದ ದೂರ ಸರಿದ ಪರಿಣಾಮ ಮನಸ್ಸುಗಳು ವಿಕೃತಗೊಳ್ಳುತ್ತಿವೆ. ಸಣ್ಣ ಸಣ್ಣ ಸಂಗತಿಗಳಿಗೂ ಬೇಸರ ಆಗುತ್ತಿದೆ. ಹಳ್ಳಿಗಳಲ್ಲಿ ಸಾಮೂಹಿಕ ಆಚರಣೆ ಬಿಟ್ಟು ಹೋಗಿದ್ದು ಇದಕ್ಕೆ ಕಾರಣ. ಜನರಲ್ಲಿ … Continued

ಕರ್ನಾಟಕ: ಬಿಜೆಪಿ ಕೇಂದ್ರ ನಾಯಕತ್ವಕ್ಕೆ ಬಿಎಸ್‌ವೈ ಮುಂದಿನ ನಡೆ ಏನೆಂದು ಅರಿಯುವುದೇ ಒಂದು ಸವಾಲು

  ರಘುಪತಿ ಯಾಜಿ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಬಲ ನಾಯಕ ಬಿ.ಎಸ್. ಯಡಿಯೂರಪ್ಪ ತಮ್ಮನ್ನು ತಾವು ಬಿಜೆಪಿಯ ಶಿಸ್ತಿನ ಸಿಪಾಯಿ” ಎಂದು ಹೇಳಿಕೊಂಡಿದ್ದಾರೆ ಮತ್ತು ಹೈಕಮಾಂಡ್‌ನ ನಿರ್ಧಾರಕ್ಕೆ ತಾವು ಬದ್ಧ ಎಂದು ಹೇಳಿದ್ದಾರೆ ಹಾಗೂ ತಮ್ಮ ಬೆಂಬಲಿಗರಿಗೂ ಯಾವುದೇ ಕಾರಣಕ್ಕೂ ಪ್ರತಿಭಟನೆ ಮಾಡದೆ ಶಾಂತವಾಗಿರಬೇಕು ಎಂದು ಸೂಚನೆಯನ್ನೂ ನೀಡಿದ್ದಾರೆ. ಆದರೆ ಸದ್ಯ ಯಡಿಯೂರಪ್ಪ ನಾಯಕತ್ವ … Continued

ಕರ್ನಾಟಕದಲ್ಲಿ ವರುಣನ ಆರ್ಭಟಕ್ಕೆ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ, ಏಳು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಬೆಂಗಳೂರು: ಮಳೆಯ ಆರ್ಭಟಕ್ಕೆ ಕರ್ನಾಟಕದ ಕರಾವಳಿ ಮಲೆನಾಡು, ಹಾಗೂ ಮಹಾರಾಷ್ಟ್ರದಲ್ಲಿ ಸುಇದ ಮಳೆಗೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಸಂಪೂರ್ಣ ಜಲಾವೃತವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರ ಹಾಗೂ ಉತ್ತರ ಕನ್ನಡದ … Continued

ರಾಘವೇಶ್ವರ ಶ್ರೀಗಳ ವಿಶ್ವವಿದ್ಯಾ ಚಾತುರ್ಮಾಸ್ಯ ಆರಂಭ: ಧನ-ಜನಕ್ಕಿಂತ ಜ್ಞಾನಶಕ್ತಿ ಶ್ರೇಷ್ಠ: ಸ್ವಾಮೀಜಿ

ಬೆಂಗಳೂರು: ಜನ ಅಥವಾ ಧನ ಶಕ್ತಿಯಿಂದ ದೇಶ ಬದಲಿಸಲಾಗದು; ಸೈನ್ಯ, ಕೋಶ ಅಥವಾ ಜನಸ್ತೋಮ ಇಲ್ಲದೆಯೇ ಶಂಕರಾಚಾರ್ಯರು ತಮ್ಮ ಜ್ಞಾನಪ್ರಭೆಯಿಂದ ಅಖಂಡ ಭಾರತದ ಪುನರುತ್ಥಾನ ಮಾಡಿದಂತೆ, ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಪ್ರಾಚೀನ ಜ್ಞಾನಪರಂಪರೆಯ ತಳಹದಿಯಲ್ಲಿ ದೇಶದ ಪುನರ್ ನಿರ್ಮಾಣಕ್ಕೆ ಹೊರಟಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಶನಿವಾರ (ಜುಲೈ24) ಗಿರಿನಗರ ಶ್ರೀರಾಮಾಶ್ರಮದಲ್ಲಿ 28ನೇ … Continued

ಪ್ರವಾಹ ಪರಿಸ್ಥಿತಿ, ಬಿಎಸ್‌ವೈ ಪರ ಸ್ವಾಮೀಜಿಗಳ ಪ್ರದರ್ಶನ:ಆದ್ರೂ ಹೈಕಮಾಂಡಿನಿಂದ ನಾಳೆಯೇ ಸಂದೇಶವೂ? ಬಿಸಿ ತಣ್ಣಗಾಗುವ ವರೆಗೆ ವಿಳಂಬವೋ..?

ಬೆಂಗಳೂರು: ಹೈಕಮಾಂಡ್‍ನಿಂದ ನಾಳೆ (ಜುಲೈ 25) ಸೂಚನೆ ಬಂದ ನಂತರ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ಅವರ ನಡೆ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. ಯಡಿಯೂರಪ್ಪ ಪರವಾಗಿ ನಾಳೆಯೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸ್ವಾಮೀಜಿಗಳ ಸಮಾವೇಶ ನಡೆಯಲಿದೆ. ಸುಮಾರು ಒಂದು ಸಾವಿರ ಸ್ವಾಮೀಜಿಗಳು ಸೇರಿಲಿದ್ದಾರೆ ಎಂದು ಹೇಳಲಾಗಿದೆ. ಯಡಿಯೂರಪ್ಪ ಅವರನ್ನು … Continued