ಶಿವಮೊಗ್ಗ ಕಲ್ಲು ತೂರಾಟದ ಘಟನೆ: 24 ಎಫ್‌ಐಆರ್‌ ದಾಖಲು, 60 ಮಂದಿ ಅರೆಸ್ಟ್‌

ಶಿವಮೊಗ್ಗ: ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆ, ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಎಫ್‌ಐಆರ್‌ಗಳು ದಾಖಲಾಗಿದೆ ಹಾಗೂ 60 ಮಂದಿಯನ್ನು ಬಂಧಿಸಲಾಗಿದೆ. ಈ ಕುರಿತು ಎಸ್‌ಪಿ ಮಿಥುನಕುಮಾರ ಅವರು ಪ್ರತಿಕ್ರಿಯಿಸಿದ್ದು, ಗಲಭೆಯಲ್ಲಿ ಒಂದು ಕಾರು, ಒಂದು ತ್ರಿಚಕ್ರ ವಾಹನ, ಎರಡು ದ್ವಿಚಕ್ರ ವಾಹನಕ್ಕೆ ಹಾನಿಯಾಗಿದೆ. ಗಲಭೆಯಲ್ಲಿ 7 ಮನೆ ಗಾಜು ಪುಡಿಪುಡಿಯಾಗಿದೆ. ಸೋಮವಾರ … Continued

ಮಾಜಿ ಶಾಸಕ ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರ ಪ್ರಕರಣ ಮತ್ತೆ ಮುನ್ನೆಲೆಗೆ

ಬೆಂಗಳೂರು: ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪುತ್ರಿ ಅವರ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್‌. ಚೇತನ ಸೇರಿದಂತೆ ನಾಲ್ವರ ಮೇಲೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಿಗೆ (ಎಡಿಜಿಪಿ) ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು … Continued

ಸಿದ್ದಾಪುರ: ಯಕ್ಷಗಾನದ ಭಾಗವತ ಕೆ.ಪಿ.ಹೆಗಡೆಗೆ ‘ಅನಂತ ಶ್ರೀ’ ಪ್ರಶಸ್ತಿ ಪ್ರದಾನ

ಸಿದ್ದಾಪುರ: ಓರ್ವ ನಿಗರ್ವಿ ಕಲಾವಿದ‌ನ ಹೆಸರಿನಲ್ಲಿ ನೀಡುವ, ಒಡನಾಡಿ ಹೆಸರಿನ ಪ್ರಶಸ್ತಿ ಸಿಕ್ಕಿದ್ದನ್ನು ಅನಂತ ಪ್ರೀತಿಯಿಂದ ಸ್ವೀಕರಿಸಿದ್ದೇನೆ ಎಂದು ಪ್ರಸಿದ್ಧ ಯಕ್ಷಗಾನ ಭಾಗವತ ಹಾಗೂ ಪ್ರಾಚಾರ್ಯ ಕೆ.ಪಿ.ಹೆಗಡೆ ಗೋಳಗೋಡ ಹೇಳಿದ್ದಾರೆ. ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರಿನ ದೇವಸ್ಥಾನದಲ್ಲಿ ಭಾನುವಾರ ಆಯೋಜಿಸಿದ್ದ ಹಿರಿಯ ಯಕ್ಷಗಾನ ಕಲಾವಿದ ಕೊಳಗಿ ಅನಂತ ಹೆಗಡೆ ಅವರ ಹೆಸರಿನಲ್ಲಿ … Continued

ಶಿವಮೊಗ್ಗ : ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ ; 144 ಸೆಕ್ಷನ್‌ ಜಾರಿ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಘರ್ಷಣೆಯಾಗಿ ಕಲ್ಲು ತೂರಾಟ ಮಾಡಿರುವ ಘಟನೆ ಶಿವಮೊಗ್ಗದ (Shivamogga) ರಾಗಿಗುಡ್ಡದಲ್ಲಿ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು. ಪೊಲೀಸರು ಲಾಠಿ ಚಾರ್ಜ್‌ ಮಾಡಿ ಗುಂಪನ್ನು ಚದುರಿಸಿದ್ದಾರೆ. ನಿರ್ದಿಷ್ಟ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ … Continued

ಕಾರವಾರ: ಭಾರೀ ಗಾಳಿ-ಮಳೆ ಮುನ್ಸೂಚನೆ, ಸಮುದ್ರ ಪ್ರಕ್ಷುಬ್ಧ, ಕಡಲತೀರಕ್ಕೆ ಮರಳಿದ ಮೀನುಗಾರಿಕಾ ಬೋಟ್‌ಗಳು

ಕಾರವಾರ : ವಾಯುಭಾರ ಕುಸಿತದಿಂದ ಹವಮಾನ ವೈಪರೀತ್ಯದಿಂದಾಗಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಮೀನುಗಾರಿಕಾ ಬೋಟ್‌ಗಳು ಕರಾವಳಿ ತೀರದ ಕಡಲತೀರಗಳಲ್ಲಿ ಲಂಗರು ಹಾಕಿ ಆಶ್ರಯ ಪಡೆದುಕೊಂಡಿದೆ. ಹಾಗೂ ಮೀನುಗಾರಿಕೆಗೆ ತೆರಳಿದ ಬೋಟ್‌ಗಳು ಸಹ ವಾಪಸ್ಸಾಗುತ್ತಿವೆ. ಸಮುದ್ರದಲ್ಲಿ ಅಲೆಗಳ ಭೋರ್ಗರೆತ ಜೋರಾಗಿದ್ದು, ಪ್ರವಾಸಿಗರಿಗೆ ಎಚ್ಚರಿಕೆಯಾಗಿ ರೆಡ್ ಫ್ಲ್ಯಾಗ್‌ಗಳನ್ನು ಅಳವಡಿಸಲಾಗಿದೆ. ಎರಡ್ಮೂರು ದಿನಗಳಿಂದ ಕರಾವಳಿಯಲ್ಲಿ ಮಳೆಯಾಗುತ್ತಿರುವ ಕಾರಣ … Continued

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಮಾಸಾಶನವನ್ನು (monthly pension) ಮುಂದಿನ ಬಜೆಟ್‌ನಲ್ಲಿ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ … Continued

ನಾಲೆಗೆ ಬಿದ್ದ ಮಗಳನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ಸಾವು

ಮೈಸೂರು : ಒಂದೇ ಕುಟುಂಬದ ಮೂವರು ನೀರು ಪಾಲಾದ ಘಟನೆ ಮೈಸೂರು ಜಿಲ್ಲೆ ಎಚ್.ಡಿ‌.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದ ವರದಿಯಾಗಿದೆ. ಕೈಕಾಲು ತೊಳೆಯಲು ಹೋದಾಗ ಮಗಳು ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ವೇಳೆ ಅವಳನ್ನು ರಕ್ಷಿಸಲು ಹೋಗಿ ಅಪ್ಪ, ಅಮ್ಮ, ಮಗಳು ಮೂವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮಹಮ್ಮದ್ ಕಪೀಲ್ (42), … Continued

ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ, ಈ ಹೇಳಿಕೆಗೆ ನಾನು ಬದ್ಧ: ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ : ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗುತ್ತಿದೆ. ಈ ಕುರಿತು‌ ಮೊನ್ನೆ ಬೆಂಗಳೂರಿನಲ್ಲಿ‌ ನಡೆದ ಹಾನಗಲ್ ಕುಮಾರಸ್ವಾಮೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೇಳಿದ್ದೆ. ಆ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ಮಾಜಿ ಸಚಿವ ಹಾಗೂ‌ ಅಖಿಲ ಭಾರತ ವೀರಶೈವ ಮಹಾ ಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanur Shivashankarappa) ಹೇಳಿದ್ದಾರೆ. ನಗರದಲ್ಲಿ … Continued

ಶಿರಸಿ : ರಾಷ್ಟ್ರಧ್ವಜ ವಿರೂಪಗೊಳಿಸಿದ ಆರೋಪ, ವ್ಯಕ್ತಿಯ ಬಂಧನ

ಶಿರಸಿ : ರಾಷ್ಟ್ರದ್ವಜಕ್ಕೆ  ವಿರೂಪಗಳಿಸಿ ಅಪಮಾನ ಪ್ರಕರಣದಲ್ಲಿ ಶಿರಸಿ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ರಾಮನಬೈಲಿನ ಉಮರ್ ಫಾರೂಕ್ ಶೇಕ್ (38 )ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಈದ್ ಮಿಲಾದ್ ಹಬ್ಬದಂದು ರಾಷ್ಟ್ರದ್ವಜದಲ್ಲಿದ್ದ ಆಶೋಕ ಚಕ್ರ ಇರುವ ಜಾಗದಲ್ಲಿ ಗುಮ್ಮಟದ ಚಿತ್ರ ಅಳವಡಿಸಿ ಧರ್ಮದ ಘೋಷಣೆಯ ಅಕ್ಷರ ಅಳವಡಿಸಿ … Continued

₹2,000 ಕರೆನ್ಸಿ ನೋಟು ಬದಲಾಯಿಸಿಕೊಳ್ಳಲು ಇಂದೇ ಕೊನೆಯ ದಿನ : ಡೆಡ್‌ಲೈನ್‌ ಮುಗಿದ ನಂತರ ಏನಾಗುತ್ತದೆ…?

ನವದೆಹಲಿ: ₹2,000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ಹಿಂದಿರುಗಿಸಲು ಅಥವಾ ಬದಲಾಯಿಸಲು ಇಂದು (ಸೆಪ್ಟಂಬರ್‌ 30) ಕೊನೆಯ ದಿನಾಂಕವಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರಕಾರ, ಅಕ್ಟೋಬರ್ 1 ರಿಂದ ಬ್ಯಾಂಕ್ ನೋಟು ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತದೆ ಮತ್ತು ಅದು ಕೇವಲ ಒಂದು ಕಾಗದದ ತುಂಡು ಆಗಿರುತ್ತದೆ. ₹ 2,000 ನೋಟುಗಳನ್ನು ಚಲಾವಣೆಯಿಂದ ತೆಗೆದುಹಾಕಲಾಗುವುದು ಎಂದು ಕೇಂದ್ರ … Continued