ಸಿಎಂ ಬಿಎಸ್ ವೈಗೆ ಬಿಗ್ ರಿಲೀಫ್ : ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸುವಂತೆ ಕೋರಿದ್ದ ಅರ್ಜಿ ವಜಾ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಆಪ್ತರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ತನಿಖೆ ನಡೆಸಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. 2021ರ ಜೂನ್ 6 ರಂದು ಟಿ.ಜೆ.ಅಬ್ರಹಾಂ ಭ್ರಷ್ಟಾಚಾರ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪುತ್ರ … Continued

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಬೆಳೆವಿಮೆ : ಮುಂಚಿತವಾಗಿ ಕಂತು ಪಾವತಿಸಿ

posted in: ರಾಜ್ಯ | 0

ಗದಗ: ಕರ್ನಾಟಕ ರೈತ ಸುರಕ್ಷಾ ಫಸಲ್ ಬಿಮಾ ಯೋಜನೆಯಡಿ ಮುಂಗಾರು ಬೆಳೆಗಳಾದ ಹೆಸರು ಬೆಳೆಗೆ ವಿಮಾ ಕಂತು ತುಂಬಲು ಜುಲೈ 15 ಕೊನೆಯ ದಿನವಾಗಿದೆ. ಶೇಂಗಾ, ಮುಸುಕಿನ ಜೋಳ, ಜೋಳ, ಹತ್ತಿ, ಸಜ್ಜೆ, ಒಣ ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳೆಗಳಿಗೆ ವಿಮಾ ಕಂತು ತುಂಬಲು ಜುಲೈ 31 ಹಾಗೂ ಸೂರ್ಯಕಾಂತಿ ಬೆಳೆಗೆ ಅಗಸ್ಟ 16 ಕೊನೆಯ … Continued

ಗದಗ: ಆಗಸ್ಟ 14 ರಂದು ಮೆಗಾ ಲೋಕ್ ಅದಾಲತ್

posted in: ರಾಜ್ಯ | 0

ಗದಗ: ಅಗಸ್ಟ 14 ರಂದು ಜಿಲ್ಲಾದ್ಯಂತ  ನಡೆಯುವ ಮೆಗಾ ಲೋಕ್ ಅದಾಲತ್‌ ನಲ್ಲಿ ಸಾರ್ವಜನಿಕರು ಹೆಚ್ಚು ಹೆಚ್ಚು ಪಾಲ್ಗೊಂಡು ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥ್ಯ ಮಾಡಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶ್ರೀಮತಿ ಎಸ್. ಮಹಾಲಕ್ಷ್ಮಿ ನೇರಳೆ ಅವರು ಹೇಳಿದರು. ಜಿಲ್ಲಾ ನ್ಯಾಯಾಯಲದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು … Continued

ಮಹತ್ವದ ಬೆಳವಣಿಗೆಯಲ್ಲಿ ಧಾರವಾಡ ಜಿಪಂ ಸದಸ್ಯ ಯೋಗೇಶ್ ಹತ್ಯೆ ಪ್ರಕರಣದಲ್ಲಿ ಗದಗ ಎಪಿಎಂಸಿ ಕಾರ್ಯದರ್ಶಿ ಬಂಧನ..!

posted in: ರಾಜ್ಯ | 0

ಗದಗ: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಜೈಲಿನಲ್ಲಿದ್ದು, ಹಿಂದೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ   ಸದ್ಯ ಗದಗ ಎಪಿಎಂಸಿ ಕಾರ್ಯದರ್ಶಿ  ಸೋಮು ನ್ಯಾಮಗೌಡ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಸ್ತುತ ಗದಗ ಎಪಿಎಂಸಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಎಸ್ ಅಧಿಕಾರಿ … Continued

ವಿದ್ಯಾರ್ಥಿಗಳಿಗೆ ಈ ವರ್ಷವೂ ಸೈಕಲ್ ಭಾಗ್ಯ ಮರೀಚಿಕೆ ..?

posted in: ರಾಜ್ಯ | 0

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಅದರಲ್ಲೂ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ವರ್ಷವೂ ಸಹ ಸರಕಾರದ ಸೈಕಲ್ ಭಾಗ್ಯ ಮರೀಚೆಕೆಯಾಗಿದೆ ರಾಜ್ಯದ ೮ ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಕೊರೊನಾ ಕಾರಣದಿಂದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ೮ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ನೀಡುವುದು ಅನುಮಾನ ಎನ್ನಲಾಗಿದೆ. … Continued

ವಿಧಾನಸಭೆ ಅಧಿವೇಶನ ಸಿದ್ಧತೆಗೆ ಸ್ಪೀಕರ್ ಕಾಗೇರಿ ಸೂಚನೆ

posted in: ರಾಜ್ಯ | 0

ಬೆಂಗಳೂರು: ವಿಧನಸಭೆ ಅಧಿವೇಶನ ಯಾವಾಗ ಮತ್ತು ಎಲ್ಲಿ ನಡೆಯಬೇಕು ಎಂಬುದನ್ನು ನಿರ್ಧರಿಸುವುದು ಸರ್ಕಾರದ ಹಕ್ಕು. ಅಧಿವೇಶನ ಸುಗಮವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಆರಂಭಿಸಿ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಂಪರ್ಕತಡೆ ಮತ್ತು ಲಾಕ್ ಡೌನ್ ಮೋಡ್ ನಿಂದ ಹೊರಬಂದು ಶಾಸಕಾಂಗ ಅಧಿವೇಶನಕ್ಕೆ ಸಿದ್ಧತೆ ಆರಂಭಿಸುವಂತೆ ನಿರ್ದೇಶನ ನೀಡಿರುವ ಸ್ಪೀಕರ್ … Continued

NO2 ಹೊರಸೂಸುವಿಕೆಯಲ್ಲಿ ನಾಟಕೀಯ ಏರಿಕೆ ಕಂಡ ದೆಹಲಿ, ಬೆಂಗಳೂರು, ಚೆನ್ನೈ, ಹೈದರಾಬಾದ್: ವರದಿ

ಬೆಂಗಳೂರು: ಗ್ರೀನ್‌ಪೀಸ್ ಇಂಡಿಯಾದ ಇತ್ತೀಚಿನ ವರದಿಯು ಅಧ್ಯಯನ ಮಾಡಿದ ಎಲ್ಲ ಎಂಟು ಭಾರತೀಯ ನಗರಗಳಲ್ಲಿ ಸಾರಜನಕ ಡೈಆಕ್ಸೈಡ್ (NO2) ಹೊರಸೂಸುವಿಕೆಯಲ್ಲಿ ನಾಟಕೀಯ ಹೆಚ್ಚಳ ದಾಖಲಿಸಿದೆ ಎಂದು ಹೇಳಿದೆ. ಈ ಪಟ್ಟಿಯಲ್ಲಿ ಮುಂಬೈ, ದೆಹಲಿ, ಕೋಲ್ಕತ್ತಾ, ಜೈಪುರ ಮತ್ತು ಲಕ್ನೋ ಮತ್ತು ದಕ್ಷಿಣ ರಾಜ್ಯಗಳಲ್ಲಿ ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈ ಸೇರಿವೆ. ವರದಿಯ ಪ್ರಕಾರ, ಹಿಂದಿನ ವರ್ಷದ … Continued

ಕರ್ನಾಟಕ: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.1ರಷ್ಟು ಮೀಸಲಾತಿ

posted in: ರಾಜ್ಯ | 0

ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಉದ್ಧೇಶದಿಂದ ರಾಜ್ಯ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದ್ದು, ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳುವ ಎಲ್ಲಾ ರೀತಿಯ ಅಂದರೆ ಗ್ರೂಪ್ ’ಎ’ ನಿಂದ ಗ್ರೂಪ್ ’ಡಿ’ ವರೆಗಿನ ಹುದ್ದೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇ.೧ರಷ್ಟು ಮೀಸಲಾತಿ ನೀಡಬೇಕೆಂದು ಆದೇಶಿಸಿದೆ. ಹಿಂದಿನ ಸರಕಾರದಲ್ಲಿ ಕಾನೂನು ಸಚಿವರಾಗಿದ್ದ ಟಿ.ಬಿ. ಜಯಚಂದ್ರ … Continued

ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಗೊಳಿಸಲು ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್‌

ಬೆಂಗಳೂರು: ಕೋವಿಡ್‌ -19 ಸಾಂಕ್ರಾಮಿಕ ರೋಗದ ಮಧ್ಯೆ ಎಸ್‌ಎಸ್‌ಎಲ್‌ಸಿ ಅಥವಾ 10 ನೇ ತರಗತಿ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಈ ಕುರಿತು ಬಾರ್‌ಎಂಡ್‌ಬೆಂಚ್‌  ವರದಿ ಮಾಡಿವೆ. ಹೆಚ್ಚಿನ ರಾಜ್ಯಗಳು ಈ ವರ್ಷ 10 ಮತ್ತು 12 ನೇ … Continued

ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಮುಂಗಾರು ಚುರುಕು: ಹವಾಮಾನ ಇಲಾಖೆ

ಬೆಂಗಳೂರು: ಮುಂಗಾರು ರಾಜ್ಯಕ್ಕೆ ಪ್ರವೇಶ ಪಡೆದು ಒಂದು ತಿಂಗಳಾಗಿದ್ದರೂ ಸಹ ಈವರೆಗೆ ಉತ್ತಮ ಮಳೆಯಾಗಿಲ್ಲ. ಆದರೆ ಮುಂದಿನ ನಾಲ್ಕೈದು ದಿನಗಳಲ್ಲಿ ಕರ್ನಾಟಕದಲ್ಲಿ ಮುಂಗಾರು ಚುರುಕಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ. ಪಶ್ಚಿಮ ಘಟ್ಟ – ಮಲೆನಾಡನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆಯಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಮುಂಗಾರು ಚುರುಕಾಗಲಿದೆ. ಜುಲೈ ಎರಡನೇ ವಾರದಲ್ಲಿ … Continued