ಯುಜಿಸಿ ಹಿಂಬಾಕಿ ಪಾವತಿ ಬೇಡಿಕೆ ಶೀಘ್ರವೇ ಈಡೇರಿಕೆ

ಬೆಂಗಳೂರು:ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿದಮತೆ ಸರ್ಕಾರಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು. ಪ್ರಾಧ್ಯಾಪಕರ ರಾಷ್ಟ್ರೀಯ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರದ ಪಾಲು ತುಂಬಿಲ್ಲ. ತಕ್ಷಣ ತುಂಬಲಾಗುವುದು. 2006ರ ಯುಜಿಸಿ ವೇತನ ಹಿಂಬಾಕಿ ಮತ್ತು 2019ರ ಏಪ್ರಿಲ್ ತಿಂಗಳಿನಿಂದ ಪಾವತಿಯಾಗಬೇಕಿರುವ ವೇತನ ಕುರಿತು ಹಣಕಾಸು … Continued

ಪಿಎಂ ಆವಾಸ್ ಯೋಜನೆ: 15 ದಿನದಲ್ಲಿ ಲೀಡ್ ಬ್ಯಾಂಕ್ ಅರ್ಜಿ ಸಲ್ಲಿಕೆಗೆ ಸೂಚನೆ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು 15 ದಿನದೊಳಗಾಗಿ ಆಯಾ ಜಿಲ್ಲೆಗಳ ಲೀಡ್ ಬ್ಯಾಂಕ್ ಗಳಿಗೆ ಸಲ್ಲಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ. ಆಯಾ ಜಿಲ್ಲಾ ಲೀಡ್ ವ್ಯವಸ್ಥಾಪಕರು ಅರ್ಜಿಗಳನ್ನು ವಿವಿಧ ಬ್ಯಾಂಕ್ ಗಳಿಗೆ ಕಳುಹಿಸಿ, ತ್ವರಿತವಾಗಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ಗುರುವಾರ ಪ್ರಧಾನ ಮಂತ್ರಿ ಆವಾಸ್ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳ ಪ್ರಗತಿ … Continued

ಎಫ್‍ಡಿಎ ಪ್ರಶ್ನೆಪತ್ರಿಕೆ ಸೋರಿಕೆ :ಮತ್ತೊಬ್ಬನ ಸೆರೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಎಫ್‍ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗ. ಆರೋಪಿ ವೆಂಕಟೇಶ್ ಸಹ ಎಫ್‍ಡಿಎ ಪರೀಕ್ಷೆ ತೆಗೆದುಕೊಂಡಿದ್ದ. ಈತನ … Continued

ಕೊರೋನಾ ಲಸಿಕೆ ಪಡೆದವರಲ್ಲಿ ಕರ್ನಾಟಕದಲ್ಲಿ ಮಹಿಳೆಯರೇ ಹೆಚ್ಚು

ಬೆಂಗಳೂರು: ರಾಜ್ಯದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಮೊದಲ ಹಂತದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿನ ಸಿಬ್ಬಂದಿಗೆ ಲಸಿಕೆ ಹಾಕಲಾಗಿದ್ದು, ಈವರೆಗೆ ೨,೮೯,೭೮೭ ಮಹಿಳೆಯರು ಲಸಿಕೆ ಪಡೆದರೆ ೧,೭೪,೫೪೫ ಪುರುಷರು ಲಸಿಕೆ ಹಾಕಿಸಿಕೊಂಡಿದ್ದಾರೆ. ಆಶಾ ಕಾರ್ಯಕರ್ತೆಯರು, ಎಎನ್‌ಎಂ ಶುಶ್ರೂಷಕಿಯರ ಸಂಖ್ಯೆ ಹೆಚ್ಚಾಗಿದ್ದರಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಂಡಿದ್ದಾರೆ. ಪುರುಷರು ಲಸಿಕೆ ಪಡೆದುಕೊಳ್ಳಲು ಆಸಕ್ತಿ … Continued

ಎಸ್‌ಟಿಗೆ ಸೇರ್ಪಡೆ : ಕುರುಬರ ಹೋರಾಟದ ಹಿಂದೆ ಆರೆಸ್ಸೆಸ್‌ ಇದೆ

ಹುಬ್ಬಳ್ಳಿ: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆ ಮಾಡಬೇಕೆಂಬ ಹೋರಾಟದ ಹಿಂದೆ ಆರ್‌ಎಸ್‌ಎಸ್ ಇದೆ ಎಂದು ಪುನರುಚ್ಚರಿಸಿರುವ ವಿಧಾನಸಭೆಯ ಪ್ರತಿಪಕ್ಷದ ಪಕ್ಷದ ನಾಯಕ ಸಿದ್ದರಾಮಯ್ಯ ಸಚಿವ ಈಶ್ವರಪ್ಪ ಅವರನ್ನು ಎತ್ತಿಕಟ್ಟಿ ಮಾಡಿದ ಆರ್‌ಎಸ್‌ಎಸ್ ಪ್ರೇರಿತ ಹೋರಾಟ ಇದಾಗಿದೆ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಲಶಾಸ್ತ್ರ ಅಧ್ಯಯನದ ವರದಿ ಇನ್ನೂ ಬಂದಿಲ್ಲ. ಈ ವರದಿ … Continued

೬೪ ಲಕ್ಷ ರೂ.ದೋಚಿದ್ದ ವಾಹನ ಚಾಲಕ ಕೊನೆಗೂ ಸೆರೆಸಿಕ್ಕ

ಬೆಂಗಳೂರು: ಎಟಿಎಂಗೆ ಸೇರಿದ 64 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದ ವಾಹನ ಚಾಲಕ ಎಚ್‍ಡಿ ಕೋಟೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಈತ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲ್ಲೂಕಿನ ದೊಡ್ಡಯಾಚನಹಳ್ಳಿ ಗ್ರಾಮದವ.   ಈತನಿಂದ 36 ಲಕ್ಷ ಹಣವನ್ನು ಉತ್ತರ ವಿಭಾಗದ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು,  ಉಳಿದ ಹಣವನ್ನು ಎಲ್ಲಿಟ್ಟಿದ್ದಾನೆ ಎಮಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಟಿಎಂಗಳಿಗೆ … Continued

ಸಾಲ ವಿತರಣೆ ವಿಳಂಬ: ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ಬೆಂಗಳೂರು:  ಪ್ರಧಾನಮಂತ್ರಿಗಳ ಸ್ವನಿಧಿ ಯೋಜನೆಯಡಿ ಸಾರ್ವಜನಿಕರಿಗೆ ಸರಿಯಾಗಿ ಸಾಲ ಸೌಲಭ್ಯ ನೀಡದೆ ಸತಾಯಿಸುವ ಬ್ಯಾಂಕ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಚಳಿ ಬಿಡಿಸಿದರು. ವಿಧಾನಸೌಧದಲ್ಲಿ ಸ್ವನಿಧಿ ಮತ್ತು ಪ್ರಧಾನ ಮಂತ್ರಿಗಳ ಆವಾಸ್ ಯೋಜನೆ, ಬೆಂಗಳೂರು ವಸತಿ ಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಾರ್ವಜನಿಕರಿಗೆ ಸಾಲ ವಿತರಣೆ ಮಾಡಲು ವಿಳಂಬ ಧೋರಣೆ … Continued

ಕರ್ನಾಟಕದಲ್ಲಿ ಅಂಗನವಾಡಿ ಆರಂಭಕ್ಕೆ ಆದೇಶ, ನಿಯಮ ಪಾಲನೆ ಕಡ್ಡಾಯ

ಮೈಸೂರು: ರಾಜ್ಯದಲ್ಲಿ ಅಂಗನವಾಡಿಗಳನ್ನು ಶೀಘ್ರವಾಗಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾಡಳಿತಗಳಿಗೆ ಸೂಚಿಸಿದೆ. ಆದರೆ ಅಂಗನವಾಡಿಗಳನ್ನು ಆರಂಭಿಸುವ ಮುನ್ನ ೧೬ ನಿಯಮಗಳನ್ನು ವಿಧಿಸಿದೆ. ಪಾಲಕರ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಅಂಗನವಾಡಿ ಸಿಬ್ಬಂದಿ ೩ ರಿಂದ ೬ ವರ್ಷದವರೆಗಿನ ಮಕ್ಕಳಿಗೆ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಚಟುವಟಿಕೆಗಳು ಬೆಳಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೧೨ ರವರೆಗೆ ನಡೆಯಬೇಕು. … Continued

ಕೊರೋನಾ: ೪೧೫ ಜನರಿಗೆ ಸೋಂಕು ದೃಢ, ಮೂವರ ಸಾವು

ಬೆಂಗಳೂರು,: ಕಳೆದ ೨೪ ತಾಸಿನಲ್ಲಿ ರಾಜ್ಯದಲ್ಲಿ 415 ಜನರಿಗೆ ಸೋಂಕು ದೃಡಪಟ್ಟಿದೆ. 322 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ , ಮೂವರು ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಮೂವರು, ಸೋಂಕಿತರು ಕೊರೊನಾದಿಂದ ಮೃತಪಟ್ಟಿದ್ದು ಉಳಿದ ಜಿಲ್ಲೆಗಳಲ್ಲಿ ಕೊರೋನಾ ಮರಣ ಸಂಭವಿಸಿಲ್ಲ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 943627ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟಾರೆ 5875ಸಕ್ರಿಯ ಪ್ರಕರಣಗಳಿವೆ ,141 … Continued

 ಪಿಯುಸಿ  ದಾಖಲಾತಿ ಅವಧಿ ಫೆ.೨೦ರ ವರೆಗೆ ವಿಸ್ತರಣೆ

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ದಾಖಲಾತಿ ಹಾಗೂ ಕಾಲೇಜು ಬದಲಾವಣೆಗೆ ಫೆಬ್ರವರಿ 20ರ ವರೆಗೂ ಕಾಲಾವಕಾಶ ನೀಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ದಾಖಲಾತಿ ಹಾಗೂ ಕಾಲೇಜು ಬದಲಾವಣೆ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ಪದವಿ ಪೂರ್ವ ಕಾಲೇಜುಗಳ ದಾಖಲಾತಿ ದಿನಾಂಕವನ್ನು ವಿಸ್ತರಿಸುವಂತೆ … Continued