ರಾಜ್ಯದಲ್ಲಿ ಸಿಎಂ ಬಿಎಸ್‌ವೈ ಬದಲಾವಣೆ ಇಲ್ಲ: ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದ ಬಿಜೆಪಿ ಸರ್ಕಾರದಲ್ಲಿ ಭುಗಿಲೆದ್ದಿರುವ ನಾಯಕತ್ವ ಬದಲಾವಣೆ ಕುರಿತಾದ ವಿವಾದಕ್ಕೆ ಬಿಜೆಪಿ ದೆಹಲಿ ಹೈಕಮಾಂಡ್‌ ತೆರೆ ಎಳೆದಿದ್ದು, ಬಿಜೆಪಿಯ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಟಿವಿ-9 ವರದಿ ಮಾಡಿದೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಎಂಬುದು ಊಹಅಪೋಹ ಎಂದು ಹೇಳಿರುವ ಅರುಣ್ … Continued

ಭೂ ಹಗರಣಗಳ ತನಿಖಾಧಿಕಾರಿಯಾಗಿ ರೋಹಿಣಿಯವರನ್ನೇ ನೇಮಿಸಿ: ಮಾಜಿ ಸಚಿವ ವಿಶ್ವನಾಥ

ಮೈಸೂರು: ಮೈಸೂರಿನಲ್ಲಿ ಕೇಳಿಬರುತ್ತಿರುವ ಸರ್ಕಾರಿ ಜಮೀನಿನ ಅಕ್ರಮ ಕಳ್ಳತನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಹೆಚ್ ವಿಶ್ವನಾಥ್ ಒತ್ತಾಯಿಸಿದ್ದಾರೆ. ಜಿಲ್ಲೆಯ ಸುತ್ತಮುತ್ತ ಆಗಿರುವ ಭೂ ಹಗರಣಗಳ ಬಗ್ಗೆ ತನಿಖೆ ನಡೆಸಲು ರೋಹಿಣಿ ಸಿಂಧೂರಿ ಅವರನ್ನೇ ವಿಶೇಷ ತನಿಖಾಧಿಕಾರಿಯಾಗಿ ನೇಮಿಸಬೇಕು ಎಂದು ಅವರು ರಾಜ್ಯ ಸರ್ಕಾರಕ್ಕೆ … Continued

ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಟೆಕ್ನಾಲಜಿ ಅಳವಡಿಕೆ: ಡಿಸಿಎಂ ಸವದಿ

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮೊದಲ ಬಾರಿಗೆ ಎ.ಐ(ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಟೆಕ್ನಾಲಜಿ ಅಳವಡಿಸುವ ಮಹತ್ವದ ಯೋಜನೆಗೆ ಹೆಜ್ಜೆ ಇಡಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ‌. ಕೆಲವೇ ಮುಂದುವರಿದ ರಾಷ್ಟ್ರಗಳಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ನಮ್ಮ ಸರ್ಕಾರಿ ಸಾರಿಗೆ ಕ್ಷೇತ್ರದ ಇತಿಹಾಸದಲ್ಲಿ ಇದೊಂದು ವಿನೂತನ ಪ್ರಯೋಗ ಎನ್ನಲಾಗಿದೆ. ಸಿಡಬ್ಲ್ಯುಎಸ್ ಮತ್ತು … Continued

ತಜ್ಞರ ಸಲಹೆ ಆಧರಿಸಿ ಲಾಕ್‌ಡೌನ್‌ ತೆರವು ಸ್ವರೂಪ ನಿರ್ಧಾರ : ಸಚಿವ ಸುಧಾಕರ

ಬೆಂಗಳೂರು: ಒಂದೇ ಬಾರಿಗೆ ಎಲ್ಲ ಚಟುವಟಿಕೆಗಳಿಗೆ ಅವಕಾಶ ನೀಡಿದರೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಬಹುದು. ಹೀಗಾಗಿ ಅನ್ ಲಾಕ್ ಸ್ವರೂಪದ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಚಟುವಟಿಕೆಗೆ ನಿರ್ಬಂಧ ಹೇರಿ, ಇನ್ನೂ ಕೆಲ ಚಟುವಟಿಕೆಗಳಿಗೆ ಅವಕಾಶ ನೀಡಬಹುದು. ಸಕಾರಾತ್ಮಕ ದರ … Continued

ಕರ್ನಾಟಕದಲ್ಲಿ ಬುಧವಾರ ದೈನಂದಿನ ಕೊರೊನಾ ಸೋಂಕು ಅಲ್ಪಹೆಚ್ಚಳ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ದೈನಂದಿನ ಸೋಂಕಿತರ ಮತ್ತೆ 10 ಸಾವಿರದ ಗಡಿ ದಾಟಿದೆ. ಬುಧವಾರ 10,959 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 192 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 27,28,248ಕ್ಕೆ ಏರಿಕೆಯಾಗಿದ್ದು, 24,80,411 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 32,291 ಜನರು ಮೃತಪಟ್ಟಿದ್ದಾರೆ. 2,15,525 ಸಕ್ರಿಯಪ್ರಕರಣಗಳಿವೆ. ಬೆಂಗಳೂರಿನಲ್ಲಿ … Continued

ಚಿಕ್ಕೋಡಿ ಕೋವಿಡ್ ಪ್ರಯೋಗಾಲಯ ತಕ್ಷಣ ಆರಂಭಿಸಲು ಡಿಸಿಎಂ ಕಾರಜೋಳ ಸೂಚನೆ

ಬೆಳಗಾವಿ : ಚಿಕ್ಕೋಡಿಯಲ್ಲಿ ಕೋವಿಡ್ ಪರೀಕ್ಷೆಯ ಆರ್.ಟಿ-ಪಿಸಿಆರ್ ಪ್ರಯೋಗಾಲಯ ಸ್ಥಾಪನೆಗೆ ಅನುಮತಿ ಲಭಿಸಿರುವುದರಿಂದ ಸಿವಿಲ್ ಕಾಮಗಾರಿಗೆ ಕಾಲಹರಣ ಮಾಡದೇ ಲಭ್ಯವಿರುವ ಕಟ್ಟಡಗಳನ್ನು ಬಳಸಿಕೊಂಡು ಕೂಡಲೇ ಪ್ರಯೋಗಾಲಯ ಆರಂಭಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು. ಕೋವಿಡ್ ಹಾಗೂ ನೆರೆಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪ್ರವಾಸಿಮಂದಿರದಲ್ಲಿ … Continued

ಗೆಸ್ಟ್​ಹೌಸ್ ಅತಿಕ್ರಮ ಪ್ರವೇಶದ ಆರೋಪ: ಎಚ್‌ಡಿಕೆ ವಿರುದ್ಧ ಜಮೀರ್ ಅಹ್ಮದ್ ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ದೂರು ನೀಡಿದ್ದಾರೆ. ಆಪ್ತ ಸಹಾಯಕ ಫಾರೂಕ್ ಮೂಲಕ ಬೆಂಗಳೂರಿನ ಸದಾಶಿವ ನಗರ ಪೊಲೀಸ್​ ಠಾಣೆಗೆ ದೂರು ಸಲ್ಲಿಸಿದ್ದಾರೆ. ಸದಾಶಿವ ನಗರದ ಗೆಸ್ಟ್​​ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಸದಾಶಿವ ನಗರದ ಗೆಸ್ಟ್​​ಹೌಸ್​​ಗೆ ಗನ್​ಮ್ಯಾನ್​ಗಳು ಪ್ರವೇಶ ಮಾಡಿದ್ದಾರೆ. ಮಾಜಿ … Continued

ಶಿಕ್ಷಣ ತಜ್ಞ, ಮಂಗಳೂರು ವಿವಿ ನಿವೃತ್ತ ಉಪಕುಲಪತಿ ಎಂ.ಐ. ಸವದತ್ತಿ ನಿಧನ

ಹುಬ್ಬಳ್ಳಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಎಂ.ಐ. ಸವದತ್ತಿ (89) ಅವರು ಧಾರವಾಡದಲ್ಲಿ ಬುಧವಾರ ನಿಧನರಾದರು. ಕುಟುಂಬದ ಮೂಲಗಳ ಪ್ರಕಾರ, ಮನೆಯಲ್ಲಿ ಅವರು ಹೃದಯ ಸ್ತಂಭನದಿಂದಾಗಿ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಮತ್ತು ಒಬ್ಬ ಮಗಳು ಇದ್ದಾರೆ. ಸರ್ ಎಂ. ವಿಶ್ವೇಶ್ವರಯ್ಯ ಜೀವಮಾನ ಸಾಧನೆ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು … Continued

ಲಾಕ್‌ಡೌನ್‌ ತೆರವು ಕುರಿತು ಸಚಿವ ಅಶೋಕ ಮಹತ್ವದ ಹೇಳಿಕೆ

ಬೆಂಗಳೂರು: ಲಾಕ್ ಡೌನ್ ಏಕಾಏಕಿ ತೆರವುಗೊಳಿಸುವುದಿಲ್ಲ. ಎಲ್ಲಾ ಸಚಿವರು ಸಭೆ ಮಾಡಿದ್ದೇವೆ. ಐದು ಹಂತದಲ್ಲಿ ತೆರವುಗಳಿಸಲು ಯೋಜಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು. ವೈದ್ಯರಿಗೆ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಪಾರ್ಕ್ ನಲ್ಲಿ ವಾಕ್ ಮಾಡಲು ಅವಕಾಶ ನೀಡಲು ಸರ್ಕಾರದ ಹಂತದಲ್ಲಿ ಚಿಂತನೆ ನಡೆಯುತ್ತಿದೆ. ಬೆಳಗ್ಗೆ 6 ಗಂಟೆಯಿಂದ 10 ಗಂಟೆ … Continued

ಬೀದಿ ನಾಯಿ ಹಿಡಿಯಲು ಬೆಳಗಾವಿ ಪಾಲಿಕೆಯಿಂದ 3 ವರ್ಷದಲ್ಲಿ 47. 55 ಲಕ್ಷ ರೂ.ವೆಚ್ಚ..ಒಂದು ನಾಯಿಗೆ 730 ರೂ.ಖರ್ಚು..!

ಬೆಳಗಾವಿ :ಬೆಳಗಾವಿಯಲ್ಲಿ ಬೀದಿನಾಯಿ ಹಾವಳಿ ಎಲ್ಲೆಂದರಲ್ಲಿ  ಹೆಚ್ಚಾಗಿ ಕಂಡು ಬರುತ್ತಿದೆ. ಮಹಾನಗರಪಾಲಿಕೆ ಸಭೆಯಲ್ಲಂತೂ ಬೀದಿನಾಯಿಗಳ ಹಾವಳಿ ಬಗ್ಗೆ ಸದಸ್ಯರು ರಂಪಾಟ ಮಾಡಿದ್ದರು.ಇದಕ್ಕೆ ಕಡಿವಾಣ ಹಾಕಲು ಮುಂದಾದ ಪಾಲಿಕೆ ಮುಂದಾಗಿ ಸಾರ್ವಜನಿಕರ ಹಣವನ್ನು ಜಾಸ್ತಿಯೇ ಖರ್ಚು ಮಾಡಿದ್ದು ಬೆಳಕಿಗೆ ಬಂದಿದೆ. ನಾಯಿ ಹಿಡಿಯುವ ಹೆಸರಿನಲ್ಲಿ ಲಕ್ಷ ಲಕ್ಷ ರೂ ಖರ್ಚು ಮಾಡಿದ್ದು ಈಗ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. … Continued