ಕರ್ನಾಟಕದ ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಜೋರು, ಉಳಿದೆಡೆ ಸಾಧಾರಣ

ಬೆಂಗಳೂರು: ಮೂರ್ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಮುಂಗಾರು ಮಳೆಯ ಶುರುವಾಗಿದ್ದು, ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಮಂಗಳವಾರ(ಜೂನ್‌8ರಿಂದ) ಜೂನ್ 11ರ ವರೆಗೆ ಮಳೆ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು (ಸೋಮವಾರ) ಮತ್ತು ನಾಳೆ ಸಾಮಾನ್ಯ ಮಳೆ ಸುರಿಯಲಿದ್ದು, ಜೂನ್ 10 ಮತ್ತು … Continued

ರಾಜ್ಯ ಆರೋಗ್ಯ ಮೂಲಸೌಲಭ್ಯ ಹೆಚ್ಚಳಕ್ಕೆ 1,500 ಕೋಟಿ ವೆಚ್ಚದ ಕ್ರಿಯಾ ಯೋಜನೆಗೆ ಕಾರ್ಯಪಡೆ ಒಪ್ಪಿಗೆ

ಬೆಂಗಳೂರು: ಸಂಭವನೀಯ ಕೋವಿಡ್‌ ಮೂರನೇ ಅಲೆ ಸೇರಿ ಭವಿಷ್ಯದಲ್ಲಿ ಎದುರಾಗಬಹುದಾದ ಯಾವುದೇ ಆರೋಗ್ಯ ಬಿಕ್ಕಟ್ಟನ್ನು ಎದುರಿಸಲು ರಾಜ್ಯವನ್ನು ಸನ್ನದ್ಧಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ 1,500 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ಮೂಲಸೌಲಭ್ಯ ಕಲ್ಪಿಸಲು ಮುಂದಾಗಿದೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಕೋವಿಡ್‌ ಕಾರ್ಯಪಡೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ … Continued

ಕರ್ನಾಟಕದಲ್ಲಿ ಸೋಮವಾರ 12 ಸಾವಿರಕ್ಕಿಂತ ಕಡಿಮೆಯಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು; ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 11,958 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದಾಖಲಾಗಿದ್ದು, 340 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ಒಟ್ಟಾರೆ ಸೋಂಕಿತರ 27,07481ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 31,920ಕ್ಕೆ ಏರಿದೆ. ಇದೇ ಸಮಯದಲ್ಲಿ ಸೋಂಕಿನಿಂದ ಚೇತರಿಸಿಕೊಂಡು 27,299 ಜನರು … Continued

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವರದಿಗಳ ಮಧ್ಯೆ, ‘ಬಿಎಸ್‌ವೈ ಬೆಂಬಲಿಸಿ 65 ಕ್ಕೂ ಹೆಚ್ಚು ಶಾಸಕರ ಸಹಿ ಇದೆ ಎಂದ ರೇಣುಕಾಚಾರ್ಯ

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ಹಿನ್ನೆಲೆಯಲ್ಲಿ ಹೊನ್ನಳ್ಳಿ ಶಾಸಕ ರೇಣುಕಾಚಾರ್ಯ ಸೋಮವಾರ ಬಿ.ಎಸ್. ಯಡಿಯೂರಪ್ಪ ಅವರನ್ನು ರಾಜ್ಯದ ಮುಖ್ಯಮಂತ್ರಿಯಾಗಿ ಬೆಂಬಲಿಸಿ 65 ಕ್ಕೂ ಹೆಚ್ಚು ಶಾಸಕರು ಬರೆದು ಸಹಿ ಹಾಕಿದ್ದಾರೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಯಡಿಯುರಪ್ಪ ಅವರ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾಚಾರ್ಯ ಅವರು ಕರ್ನಾಟಕದ ಉಸ್ತುವಾರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ … Continued

ಬಿಜೆಪಿಯಲ್ಲಿ ಸಹಿ ಸಂಗ್ರಹ, ಒತ್ತಡ ಇಂತಹ ವಿಷಯಗಳಿಗೆ ಆಸ್ಪದವಿಲ್ಲ:ಕಟೀಲು

ಹುಬ್ಬಳ್ಳಿ: ನಮ್ಮದು ಶಾಸನ ಬದ್ಧ ಪಕ್ಷ. ಹೀಗಾಗಿ ಬಿಜೆಪಿಯಲ್ಲಿ ಸಹಿ ಸಂಗ್ರಹ ,ಒತ್ತಡ, ಒತ್ತಾಯ ಇಂತಹ ವಿಷಯಗಳಿಗೆ ಯಾವುದೇ ಆಸ್ಪದವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರ ಸಹಿ ಸಂಗ್ರಹ ಮಾಡಿದ್ದೆ ಎಂಬ ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಬಿಜೆಪಿಯಲ್ಲಿ ಯಡಿಯೂರಪ್ಪ … Continued

ಯಾವುದೇ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿಲ್ಲ; ಅದರ ಅಗತ್ಯವೂ ಇಲ್ಲ: ಸಚಿವ ಜೋಶಿ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬದಲಾವಣೆ ವಿಚಾರವೂ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ಬದಲಾವಣೆ ವಿಚಾರ ಹಾಗೂ ಶಾಸಕರ ಸಹಿ ಸಂಗ್ರಹ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಊಹಾಪೋಹ. ಮುಖ್ಯಮಂತ್ರಿ ಪರ ಅಥವಾ ವಿರುದ್ಧ ಯಾವುದೇ ಸಹಿ ಸಂಗ್ರಹ ಅಭಿಯಾನವೂ ನಡೆಯುತ್ತಿಲ್ಲ. ಅಂತಹ … Continued

ಸಿಎಂ ಬದಲಾವಣೆ ವಿಚಾರ: ಪರ-ವಿರೋಧ ಸಹಿ ಸಂಗ್ರಹ ಮಾಡಬೇಡಿ:ಶಾಸಕರಿಗೆ ಸಿಎಂ ಬಿಎಸ್‌ವೈ ಖಡಕ್‌ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಗಂಭೀರ ಸ್ವರೂಪಕ್ಕೆ ತಿರುಗುತ್ತಿದ್ದು ಇದರ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕಠಿಣ ಸಂದೇಶವೊಂದನ್ನು ರವಾನಿಸಿದ್ದಾರೆ. ಒಂದೆಂಡೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಕೆಲ ಬಿಜೆಪಿ ನಾಯಕರು ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದರೆ ಇದಕ್ಕೆ ಪ್ರತಿಯಾಗಿ ಯಡಿಯೂರಪ್ಪನವರ ಪರ ಇರುವವರು ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಇದೆಲ್ಲವನ್ನು ಸೂಕ್ಷ್ಮವಾಗಿ … Continued

ಕೋವಿಡ್ 3ನೇ ಅಲೆ, ತಜ್ಞರ ಎಚ್ಚರಿಕೆ ಗಂಭೀರವಾಗಿ ಪರಿಗಣಿಸಿ : ಖಾಸಾಮಠ ಶ್ರೀಗಳು 

ಯಾದಗಿರಿ: ತಜ್ಞರು ಕೊರೊನಾ ವೈರಸ್ 3ನೇ ಅಲೆ ಮಕ್ಕಳಿಗೆ ಅಪಾಯಕಾರಿ ಎಂದು ಎಚ್ಚರಿಕೆ ನೀಡಿರುವುದನ್ನು ನಾವೆಲ್ಲರೂ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಗುರುಮಠಕಲ್ ಖಾಸಾಮಠದಶ್ರೀ ಶಾಂತವೀರ ಸ್ವಾಮಿಗಳು ಹೇಳಿದ್ದಾರೆ. ಸೋಮವಾರ ಪತ್ರಿಕಾ ಭವನದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಾಡಿನಲ್ಲಿ ಈ ವರ್ಷ ಕೊರೊನಾ ವೈರಸ್ ಎರಡನೇ ಅಲೆ ಉಲ್ಬಣದಿಂದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಸದ್ಯ ಅದರ … Continued

ಸಿಎಂ ಬದಲಾವಣೆ ಚರ್ಚೆಯಿಂದ ಸರ್ಕಾರ, ಪಕ್ಷದ ವರ್ಚಸ್ಸಿಗೆ ಧಕ್ಕೆ: ಸಚಿವ ಶೆಟ್ಟರ

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ವಿಷಯ ಪದೇ ಪದೇ ಯಾಕೆ ಚರ್ಚೆ ಆಗುತ್ತಿದೆ ಎಂಬುದು ತಿಳಿಯುತ್ತಿಲ್ಲ. ಇದರಿಂದ ಸರ್ಕಾರಕ್ಕೆ ಹಾಗೂ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ’ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದಾರು ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ‌. ಇದು ಎಲ್ಲಿ ಸೃಷ್ಟಿಯಾಯಿತು ಎಂದು ತಿಳಿಯುತ್ತಿಲ್ಲ.ಇಂತಹ ಚರ್ಚೆಯಿಂದ ಕೆಲಸ ಮಾಡಲು ಆಗುತ್ತಿಲ್ಲ. … Continued

ಕುಮಟಾ ನರ್ಸಿಂಗ್‌ ಹೋಂನಿಂದ ಅಗತ್ಯ ಇರುವವರಿಗೆ ಉಚಿತ ಆಮ್ಲಜನಕ ಪೂರೈಕೆ  

ಕುಮಟಾ : ಕೋವಿಡ್‌ ಬಿಕ್ಕಟ್ಟಿನಲ್ಲಿ   ಜನರ ಹಿತದ ದೃಷ್ಟಿಯಿಂದ  ಕುಮಟಾ ತಾಲೂಕು ವ್ಯಾಪ್ತಿಯಲ್ಲಿ  ಕುಮಟಾ ನರ್ಸಿಂಗ್ ಹೋಂನಿಂದ ಅಗತ್ಯ ಇರುವವರಿಗೆ ಉಚಿತವಾಗಿ ಆಮ್ಲಜಕ ಪೂರೈಸಲಾಗುವುದು. ಜೀವನ ಗಂಗಾ ಕೇಂದ್ರದಿಂದ ದಿನದ 24 ಗಂಟೆಯೂ ಈ ಸೇವೆ ನೀಡಲಾಗುತ್ತದೆ ಎಂದು ಡಾ. ಅನಿಲ ಹೆಗಡೆ ತಿಳಿಸಿದ್ದಾರೆ. ಆಮ್ಲಜನಕ ಸಾಂದ್ರಕ (ಆಕ್ಸಿಜನ್‌ ಕಾನ್ಸಂಟ್ರೇಟರ್ಸ್‌) ಅಗತ್ಯ ಇರುವ ಸಾರ್ವಜನಿಕರು, ಸಮಾಜದ … Continued