ವೃತ್ತಿ ಕೋರ್ಸುಗಳಿಗೆ ಸಿಇಟಿ ಅಂಕ ಮಾತ್ರ ಪರಿಗಣನೆ: ಸಚಿವ ಸುರೇಶಕುಮಾರ ಸಲಹೆಗೆ ಶೀಘ್ರವೇ ಅಧಿಕಾರಿಗಳ ಸಭೆ

ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆ ಇಲ್ಲದೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ, ನೀಟ್ ಅಂಕಗಳನ್ನು ಮಾತ್ರ ಪರಿಗಣಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶಕುಮಾರ ಅವರು ಕೊಟ್ಟಿರುವ ಸಲಹೆ ಬಗ್ಗೆ ಸದ್ಯದಲ್ಲೇ ಪರಿಶೀಲನೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು. … Continued

ವಾಕರಸಾ ಸಂಸ್ಥೆ: 115 ಸಿಬ್ಬಂದಿ ವರ್ಗಾವಣೆ ರದ್ದು, 8 ಸಿಬ್ಬಂದಿ ಅಮಾನತು ತೆರವು

ಹುಬ್ಬಳ್ಳಿ:ರಾಜ್ಯ ಹೈಕೋರ್ಟ್‌ ಸಾರಿಗೆ ಸಂಸ್ಥೆ ಮುಷ್ಕರ ನಿರತ ಸಿಬ್ಬಂದಿಗೆ ಕೂಡಲೇ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಮತ್ತು ಮುಷ್ಕರ ನಿರತ ಸಿಬ್ಬಂದಿ ವರ್ಗಾವಣೆ ಮತ್ತು ಶಿಸ್ತು ಕ್ರಮ ಕೈಗೊಂಡಿರುವ ಪ್ರಕರಣಗಳಲ್ಲಿ ಅವರಿಂದ ಮನವಿ ಸ್ವೀಕರಿಸಿ ಕಾಲಮಿತಿಯಲ್ಲಿ ಮರುಪರಿಶೀಲಿಸುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೆಲವು ಸಿಬ್ಬಂದಿ ವರ್ಗಾವಣೆ ರದ್ದುಗೊಳಿಸಿದೆ. ಹಾಗೂ … Continued

ಗಮನಿಸಿ…ಜೂ.7ರಿಂದ ಐದು ದಿನಗಳ ವರೆಗೆ ಬ್ಯಾಂಕಿಂಗ್ ಸಮಯದಲ್ಲಿ ಬದಲಾವಣೆ

ಹುಬ್ಬಳ್ಳಿ:ಇತ್ತೀಚೆಗೆ ರಾಜ್ಯ ಸರ್ಕಾರವು ಜೂನ್ 14ರ ವರೆಗೆ ಕರ್ನಾಟಕದಲ್ಲಿ ಲಾಕ್ ಡೌನ್  ಮುಂದುವರೆಸಿದ ಹೊರಡಿಸಿದ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಬ್ಯಾಂಕರ್ ಗಳ ಸಮಿತಿಯು ಶನಿವಾರ ಬೆಂಗಳೂರಿನಲ್ಲಿ ಸಭೆ ಸೇರಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬ್ಯಾಂಕುಗಳ ಶಾಖೆಗಳು, ವಲಯ/ ಕ್ಷೇತ್ರೀಯ ಕಾರ್ಯಾಲಯಗಳಿಗೆ ಬ್ಯಾಂಕುಗಳ ಪರಿಷ್ಕೃತ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಬ್ಯಾಂಕಿಂಗ್ ವ್ಯವಹಾರದ ಸಮಯವು ಬೆಳಿಗ್ಗೆ 10.00 … Continued

ಕನ್ನಡ ಧ್ವಜದ ಚಿತ್ರವಿರುವ ಒಳಉಡುಪು ಮಾರಾಟಕ್ಕಿಟ್ಟ ಅಮೆಜಾನ್, ಗೂಗಲ್ ಆಯ್ತು ಈಗ ಅಮೆಜಾನ್‌ನಿಂದ ಕನ್ನಡಕ್ಕೆ ಅವಮಾನ

ಬೆಂಗಳೂರು: ಎರಡು ದಿನಗಳ ಹಿಂದೆ ಕನ್ನಡ ಭಾರತದ ಅತ್ಯಂತ ಕೊಳಕು ಭಾಷೆ ಎಂದು ಗೂಗಲ್​ ಸರ್ಚ್​ನಲ್ಲಿ ತೋರಿಸುವ ಮೂಲಕ ಕನ್ನಡಿಗರ ವಿರೋಧವನ್ನು ಎದುರಿಸಿತ್ತು. ಈಗ ಅಮೆಜಾನ್ ಇದೇ ರೀತಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದೆ. ಗೂಗಲ್​ನಲ್ಲಿ ಕನ್ನಡ ಭಾಷೆಗೆ ಅವಹೇಳನ ಮಾಡಿ, ಕ್ಷಮೆ ಕೇಳಿದ ಬೆನ್ನಲ್ಲೇ ಜಗತ್ತಿನ ಅತ್ಯಂತ ದೊಡ್ಡ ಆನ್​ಲೈನ್ ಶಾಪಿಂಗ್ ವೇದಿಕೆ ಅಮೆಜಾನ್​ನಲ್ಲಿ ಕನ್ನಡ … Continued

ಈ ವರ್ಷ ಮಾತ್ರ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣಿಸಿ:ಡಿಸಿಎಂಗೆ ಸಚಿವ ಸುರೇಶಕುಮಾರ ಮನವಿ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಅಂಕಗಳನ್ನು ಮಾತ್ರ ಪರಿಗಣಿಸಬೇಕು. ದ್ವೀತಿಯ ಪಿಯುಸಿ ಪರೀಕ್ಷೆ ಅಂಕ ಅಥವಾ ಗ್ರೇಡಿಂಗ್ ಗಳನ್ನು ಪರಿಗಣಿಸಬಾರದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ್ ಉನ್ನತ ಶಿಕ್ಷಣ ಇಲಾಖೆಗೆ ಸಲಹೆ ನೀಡಿದ್ದಾರೆ. ಉಪಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರಿಗೆ ಈ … Continued

ಜೂ.14ರ ನಂತರ ಹಂತಹಂತವಾಗಿ ಲಾಕ್ಡೌನ್‌ ತೆರವು: ಸುಳಿವು ಕೊಟ್ಟ ಸಿಎಂ

ಬೆಂಗಳೂರು: ಜೂನ್ 14ರ ನಂತರ ಬೆಂಗಳೂರು ಸೇರಿದಂತೆ ಹಲವೆಡೆ ಲಾಕ್ ಡೌನ್ ತೆರವು ಆಗಬಹುದು ಎಂಬ ಸುಳಿವನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊರೊನಾ ಪಾಸಿಟಿವಿಟಿ ದರ ಕಡಿಮೆ ಇರುವ ಕಡೆ ಲಾಕ್ ಡೌನ್ ನ್ನು ಸಡಿಲಿಕೆ ಮಾಡಿ ಅನ್ ಲಾಕ್ ಪ್ರಕ್ರಿಯೆ ಬಗ್ಗೆ ಪರಿಶೀಲನೆ ನಡೆಸಲಾಗುವುದು. … Continued

ಕಾರವಾರ ಜಿಪಂ ಕಟ್ಟಡದಲ್ಲಿ ಬೆಂಕಿ ಅವಘಡ; ಮೂರು ಮಹಡಿಗೂ ವ್ಯಾಪಿಸಿದ ಬೆಂಕಿ

ಕಾರವಾರ :ಜಿಲ್ಲಾ ಪಂಚಾಯತ ಅಭಿಲೇಖಾಲಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಶನಿವಾರ ನಡೆದಿದೆ. ವಿದ್ಯುತ್‌ ಶಾರ್ಟ್‌ ಸಕ್ಯೂಟಿನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಕಾರವಾರದ ಎಂ.ಜಿ ರಸ್ತೆಯಲ್ಲಿರುವ ಜಿಲ್ಲಾ ಪಂಚಾಯತ ಅಭಿಲೇಖಾಲಯದಲ್ಲಿ ಶನಿವಾರ ಬೆಳಿಗ್ಗೆ ವಿದ್ಯುತ್ ಶಾರ್ಟ್‌ ಸೆರ್ಕ್ಯೂಟ್ ನಿಂದ ಮೂರು ಅಂತಸ್ಥಿನ ಕಟ್ಟಡಕ್ಕೆ ಬೆಂಕಿ ವ್ಯಾಪಸಿದೆ. … Continued

ಮಹತ್ವದ ಸುದ್ದಿ.. ಎಸ್ಸೆಸ್ಸೆಲ್ಸಿಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ : ಸಚಿವ ಸುರೇಶಕುಮಾರ

ಬೆಂಗಳೂರು :ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸಿರುವುದುನ್ನು ಪ್ರಕಟಿಸಿದ್ದರು. ವಿದ್ಯಾರ್ಥಿಗಳನ್ನು ಪ್ರಥಮ ಪಿಯುಸಿ ಅಂಕ ಆಧರಿಸಿ ಪಾಸ್ ಮಾಡುವುದಾಗಿ ತಿಳಿಸಿದ್ದರು. ಇಂದು (ಶನಿವಾರ) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಮಾಹಿತಿ ನೀಡಿದ್ದು, ಎಸ್ಎಸ್ಎಲ್‌ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದುಗಿ … Continued

ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್​ ಘೋಷಣೆ

ಬೆಂಗಳೂರು: ಕರ್ನಾಟಕಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಇಂದಿನಿಂದ (ಶನಿವಾರದಿಂದ) ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದೆ. ಇಂದು, ನಾಳೆ ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅರಬ್ಬೀ ಸಮುದ್ರದಲ್ಲಿ ಮೇಲ್ಮೈ … Continued

ಕೆಎಸ್‌ಆರ್‌ಟಿಸಿ ಹೆಸರು ಕರ್ನಾಟಕದಿಂದ ಕೈ ತಪ್ಪುವ ಭಯ ಬೇಡ: ಡಿಸಿಎಂ ಸವದಿ

ಬೆಂಗಳೂರು:ಕೆ.ಎಸ್ಆರ್ ಟಿಸಿ ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೆ.ಎಸ್.ಆರ್.ಟಿಸಿ ಎಂಬ ಹೆಸರನ್ನು ಮುಂದೆಯೂ ಕರ್ನಾಟಕವು ಬಳಸಲು ಸ್ವತಂತ್ರವಾಗಿದೆ. … Continued