ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಪ್ರೊ. ವಸಂತ ಕುಷ್ಟಗಿ ನಿಧನ

ಯಾದಗಿರಿ : ಸಾಹಿತಿ, ಕಲ್ಯಾಣ ಕರ್ನಾಟಕದ ಜ್ಞಾನ ದೀವಿಗೆ, ಪ್ರಾಧ್ಯಾಪಕ, ಭಾಷಾ ವಿದ್ವಾoಸ ಪ್ರೊ. ವಸಂತ ಕುಷ್ಟಗಿ (85) ಶುಕ್ರವಾರ ನಿಧನರಾಗಿದ್ದಾರೆ. ಲೋ ಬಿಪಿಯಿಂದ ನಿಧನರಾದರೆಂದು ಕುಟುಂಬದ ಮೂಲಗಳು ತಿಳಿಸಿವೆ.  ಕಲ್ಯಾಣ ಕರ್ನಾಟಕದ ಐತಿಹಾಸಿಕ ಶತಮಾನ ಕಂಡ ಪ್ರತಿಷ್ಠಿತ ನೂತನ ವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿ ಪ್ರಾಂಶುಪಾಲರಾಗಿ ತಮ್ಮ ಜ್ಞಾನದ ದೀವಿಗೆಯಿಂದ ಅಸಂಖ್ಯಾತ ವಿದ್ಯಾರ್ಥಿಗಳ ಬಾಳನ್ನು ಬೆಳಗಿಸಿದ ವಸಂತ … Continued

ಎಸ್ಸೆಸ್ಸೆಲ್ಸಿ ಪರೀಕ್ಷೆ ಜುಲೈ ಮೂರನೇ ವಾರದಲ್ಲಿ , ಎರಡು ಪೇಪರ್‌ಗಳು

ಬೆಂಗಳೂರು; ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜುಲೈ ಮೂರನೇ ವಾರದಲ್ಲಿ ನಡೆಸಲು ನಿರ್ಧರಿಸಿದೆ.ಆದರೆ ಪರೀಕ್ಷೆಯ ಸ್ವರೂಪದಲ್ಲಿ ಬದಲಾವಣೆಯಾಗಲಿದೆ. ಬೆಂಗಳೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸ್ವರೂಪದಲ್ಲಿ ಬದಲಾವಣೆಯನ್ನು ಪ್ರಕಟಿಸಿದರು. ವಿದ್ಯಾರ್ಥಿಗಳಿಗೆ ಕೇವಲ ಎರಡು ಪರೀಕ್ಷೆಗಳಿವೆ. ಮೊದಲ ಪರೀಕ್ಷೆಯು ಕೋರ್ ವಿಷಯಗಳ ಮೇಲೆ ಇರುತ್ತದೆ – … Continued

ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್ ನಿಂದ ಕ್ಷಮೆಯಾಚನೆ

ಬೆಂಗಳೂರು: ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕನ್ನಡಿಗರು ತಿರುಗಿಬಿದ್ದಿದ್ದು ಕೊನೆಗೂ ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್ ಸಂಸ್ಥೆ ಕ್ಷಮೆಯಾಚಿಸಿದೆ. ಸಚಿವ ಅರವಿಂದ್ ಲಿಂಬಾವಳಿ ಸೇರಿದಂತೆ ರಾಜಕೀಯ ನಾಯಕರು, ಕನ್ನಡಿಗರು ಗೂಗಲ್ ವಿರುದ್ಧ ಕಿಡಿಕಾರಿದ್ದರು. ವ್ಯಾಪಕ ಟೀಕೆ ವ್ಯಕ್ತವಾಗಿದ್ದರಿಂದ ಇದೀಗ ಗೂಗಲ್ ತನ್ನ ಪುಟದಿಂದ “ಭಾರತದ ಅತ್ಯಂತ ಕೊಳಕು ಭಾಷೆ ಕನ್ನಡ ಎಂಬುದನ್ನು … Continued

ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ರಾಜೀನಾಮೆ ಸ್ವೀಕರಿಸುವುದಿಲ್ಲ: ಸಚಿವ ಸೋಮಶೇಖರ್

ಮೈಸೂರು: ಮೈಸೂರು ಜಿಲ್ಲಾ ವ್ಯವಹಾರಗಳ ಉಸ್ತುವಾರಿ ವಹಿಸಿರುವ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಶಿಲ್ಪಾ ನಾಗ್ ಅವರನ್ನು ಬೆಂಬಲಿಸಿದ್ದು, ಅವರ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಸಿಟಿ ಕಾರ್ಪೊರೇಷನ್ (ಎಂಸಿಸಿ) ಆಯುಕ್ತರಾದ ಶಿಲ್ಪಾ, ನಾಗರಿಕ ಸೇವೆಗಳಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಶಿಲ್ಪಾ … Continued

ಕರ್ನಾಟಕದಲ್ಲಿ ಗುರುವಾರ ಕೊರೊನಾ ಹೊಸ ಸೋಂಕು, ಸಾವು ಎರಡೂ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗುರುವಾರ ಮತ್ತೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 18,324 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2653446ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದೇ ಸಮಯದಲ್ಲಿ 514 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 30531 … Continued

ರೋಹಿಣಿ ಸಿಂಧೂರಿ ಕಾರ್ಯವೈಖರಿಗೆ ಅಸಮಾಧಾನ: ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ರಾಜೀನಾಮೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್‌ ಅವರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ ಹೊರಹಾಕಿದ್ದು, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಗುರುವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಂತಹ ಉಸಿರುಗಟ್ಟಿಸುವ ವಾತಾವರಣದಲ್ಲಿ ನನಗೆ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಕೇವಲ ಪಾಲಿಕೆ ಅಯುಕ್ತರ ಹುದ್ದೆಗಷ್ಟೇ ಅಲ್ಲ, ಐಎಎಸ್‌ ಹುದ್ದೆಗೂ ರಾಜೀನಾಮೆ ನೀಡುತ್ತಿದ್ದೇನೆ. ರಾಜೀನಾಮೆ … Continued

ಕನ್ನಡಕ್ಕೆ ಅವಹೇಳನ: ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ

ಬೆಂಗಳೂರು: ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಭಾರತದ ಕೆಟ್ಟ ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್‌ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರವನ್ನು ಸಚಿವ ಅರವಿಂದ ಲಿಂಬಾವಳಿ ಅವರ ಗಮನಕ್ಕೆ … Continued

ಪರಿಹಾರ ಪ್ಯಾಕೇಜಿಗೆ ಸ್ವಾಗತ, ಆದರೆ ಎಂಎಸ್‌ಎಂಇ ನಿರೀಕ್ಷಿಸಿದಷ್ಟು ಇಲ್ಲ: ಕಾಸಿಯಾ

ಬೆಂಗಳೂರು: ಎಂಎಸ್‌ಎಂಇಗಳಿಗೆ ಮೇ ಮತ್ತು ಜೂನ್ ತಿಂಗಳುಗಳಿಗೆ ನಿಗದಿತ ಮಾಸಿಕ ವಿದ್ಯುತ್ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿರುವುದು ಮತ್ತು ವಿದ್ಯುತ್ ಮಗ್ಗದ ಕಾರ್ಮಿಕರಿಗೆ 3000 ರೂ.ಗಳ ಪರಿಹಾರ ನೀಡಿರುವುದನ್ನು ಕಾಸಿಯಾ ಸ್ವಾಗತಿಸುತ್ತದೆ. ಆದರೆ ಕೋವಿಡ್ -19 ರ ಎರಡನೇ ಅಲೆಯೊಂದಿಗೆ ಹೋರಾಡತ್ತಿರುವ ಸೂಕ್ಷ್ಮ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಸರ್ಕಾರ ಇನ್ನೂ … Continued

ಅನುದಾನ ರಹಿತ ಶಾಲಾ ಶಿಕ್ಷಕರಿಗೆ, ಆಶಾ ಕಾರ್ಯಕರ್ತೆಯರಿಗೂ ಆರ್ಥಿಕ ಪ್ಯಾಕೇಜ್‌

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಒಂದುವಾರ ಲಾಕ್‌ ಡೌನ್ ವಿಸ್ತರಣೆ ಮಾಡಿದ್ದಾರೆ. ಅಂದರೆ ಜೂನ್.14ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಣೆ ಮಾಡಿದ್ದಾರೆ. ಅಲ್ಲದೆ, 2ನೇ ಹಂತದ ವಿಶೇಷ ಆರ್ಥಿಕ ಪ್ಯಾಕೇಜ್ ಆಗಿ 500 ಕೋಟಿ ಘೋಷಿಸಿದ್ದಾರೆ. ಇದರಲ್ಲಿ ರಾಜ್ಯದ ಅನುದಾನ ರಹಿತ ಶಾಲಾ ಶಿಕ್ಷಕರಿಗೆ, ಸಿಹಿ ಸುದ್ದಿ ನೀಡಿದ್ದು, 5 ಸಾವಿರ ರೂ.ವಿಶೇಷ … Continued

ಜೂನ್14ರ ವರೆಗೆ ಲಾಕ್ ಡೌನ್ ವಿಸ್ತರಣೆ, 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು : ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಅನ್ನು ಜೂ.14ರ ವರೆಗೆ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಗುರುವಾರ ಈ ವಿಷಯ ಪ್ರಕಟಿಸಿದ್ದಾರೆ. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ … Continued