ಬಿಜೆಪಿಯಿಂದ ಮಲ್ಲಿಕಾರ್ಜುನ ಖೂಬಾ ಉಚ್ಚಾಟನೆ

ಬೀದರ್; ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಉಪ ಚುನಾವಣೆಗೆ ಬಿಜೆಪಿ ಶರಣು ಸಲಗರಗೆ ಟಿಕೆಟ್ ನೀಡಿದೆ. ಇದರಿಂದಾಗಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ಅವರನ್ನು ಮನವೊಲಿಕೆ ಮಾಡಲು ಪ್ರಯತ್ನ ನಡೆಸಲಾಯಿತು. ಆದರೆ, … Continued

ವಿಧಾನಸೌಧ, ವಿಕಾಸ ಸೌಧ, ಎಂಎಸ್‌ ಬಿಲ್ಡಿಂಗ್‌ಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳವಾದ ಕಾರಣ ಈಗ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಈ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿದೆ. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಕೊರೊನಾ ವೈರಸ್ 2ನೇ ಅಲೆ … Continued

ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೊನಾ ಸೋಂಕು..

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಟ್ವೀಟರ್ನಲ್ಲಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಶನಿವಾರ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ” ಎಂದು ಹೇಳಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಟ್ವೀಟ್ … Continued

ವಿದ್ವಾನ್‌ ಉಮಾಕಾಂತ ಭಟ್ಟರಿಗೆ ಶೃಂಗೇರಿ ಜಗದ್ಗುರು ಪುರಸ್ಕಾರ

ಶಿರಸಿ: ನಾಡಿನ ಹೆಸರಾಂತ ವಿದ್ವಾಂಸ, ಖ್ಯಾತ ಯಕ್ಷಗಾನ ತಾಳಮದ್ದಲೆ ಅರ್ಥಧಾರಿ, ವಾಗ್ಮಿ, ಲೇಖಕ ವಿದ್ವಾನ್‌ ಉಮಾಕಾಂತ ಭಟ್ಟ ಕೆರೇಕೈ ಅವರಿಗೆ ಶೃಂಗೇರಿ ಜಗದ್ಗುರು ಪೀಠಾಧಿಪತಿ ಶ್ರೀಭಾರತೀತೀರ್ಥ ಪುರಸ್ಕಾರವನ್ನು ಪ್ರಕಟಿಸಲಾಗಿದೆ. ಸಂಸ್ಕೃತ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಕಷ್ಟು ಕಾರ್ಯಮಾಡಿದ ದೇಶದ ಎಪ್ಪತ್ತು ವಿದ್ವಾಂಸರಿಗೆ ನೀಡುವ ಪುರಸ್ಕಾರ ಇದಾಗಿದ್ದು, ಅವರಲ್ಲಿ ಉಮಾಕಾಂತ ಭಟ್ಟರು ಒಬ್ಬರು. ಪುರಸ್ಕಾರವು ಒಂದು ಲಕ್ಷ. … Continued

ಮೃತ ಚಾಲಕನ ಕುಟುಂಬಕ್ಕೆ ೩೦ ಲಕ್ಷ ರೂ. ಪರಿಹಾರ

ಹುಬ್ಬಳ್ಳಿ: ಬಾಗಲಕೋಟ ವಿಭಾಗದ ಜಮಖಂಡಿ ಘಟಕದ ಚಾಲಕರಾದ ರಬೀದ್‌ ರಸೂಲ್ ಕೆ. ಅವಟಿ (ವಯಸ್ಸು ೫೯)ಅವರು ಈ ವಿಜಾಪುರದಿಂದ ಜಮಖಂಡಿ ಮಾರ್ಗದ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ, ಕಿಡಗೇಡಿಗಳು ಬಸ್ಸಿನ ಮುಂಭಾಗದ ಗ್ಲಾಸ್‌ಗೆ ಕಲ್ಲೆಸೆದ ಪರಿಣಾಮವಾಗಿ ಮೃತಪಟ್ಟಿದ್ದಾರೆ. ಚಾಲಕನ ಕುತ್ತಿಗೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವದಿಂದಾಗಿ ಅವರನ್ನು ಜಮಖಂಡಿಯಲ್ಲಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ … Continued

ವಿಟಿಯು ಪ್ರಥಮ ಸೆಮಿಸ್ಟರ್  ಪರೀಕ್ಷೆ ಮುಂದೂಡಿಕೆ ಇಲ್ಲ

ಬೆಳಗಾವಿ:ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯ ಬಿ.ಇ./ಬಿ.ಟೆಕ್./ಬಿ.ಆರ್ಕ್/ ಬಿ.ಪ್ಲಾನ್. ಕೋರ್ಸಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಮುಂದೂಡಿಕೆ ಇಲ್ಲ ಎಂದು ವಿಟಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು ವಿದ್ಯಾರ್ಥಿಗಳು ವದಂತಿಗಳಿಗೆ ಕಿವಿಗೊಡದೆ ಪರೀಕ್ಷೆಗೆ ಹಾಜರಾಗಬೇಕೆಂದು ತಿಳಿಸಿದೆ.” ವಿ ಟಿ ಯು ಪರೀಕ್ಷೆ ಮುಂದೂಡಿಕೆ” ಎಂದು ಸುಳ್ಳು ಸುದ್ದಿಯು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಕಾರಣ “ಪರೀಕ್ಷೆ ಮುಂದೂಡಿಕೆ ಇಲ್ಲ” … Continued

ಕೆಲಸ ಕೊಡುವಂತೆ ಆಗ್ರಹಿಸಿ ಸಕ್ಕರೆ ಕಾರ್ಖಾನೆ ಚಿಮಣಿ ಏರಿದ ಬೋರೆಗೌಡ

ಹಾವೇರಿ: ಮತ್ತೆ ಕೆಲಸಕ್ಕೆ ತೆಗೆದುಕೊಳ್ಳದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಜಿ ನೌಕರನೊಬ್ಬ ತಾಲೂಕಿನ ಸಂಗೂರು ಸಕ್ಕರೆ ಕಾರ್ಖಾನೆಯ ೧೫೦ ಅಡಿ ಎತ್ತರದ ಚಿಮಣಿ ಏರಿದ ಘಟನೆ ಶುಕ್ರವಾರ ನಡೆದಿದೆ. ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲೂಕಿನ ಬೋರೇಗೌಡ ಆತ್ಮಹತ್ಯೆ ಬೆದರಿಕೆ ಹಾಕಿದನು. ಶುಕ್ರವಾರ ಬೆಳಗ್ಗೆ ೧೦ ಗಂಟೆ ಸುಮಾರಿಗೆ ಚಿಮಣಿ ಏರಿದ ಬೋರೇಗೌಡ ನನಗೆ ನ್ಯಾಯ ಸಿಗದಿದ್ದರೆ ನಾನು … Continued

ಪ್ರಧಾನಿ ಕಾರ್ಯಾಲಯದಲ್ಲಿ ಡೆಪ್ಯುಟಿ ಸೆಕ್ರೆಟರಿ ಹುದ್ದೆಗೇರಿದ ಉತ್ತರಕನ್ನಡ ಜಿಲ್ಲೆಯ ಡಾ. ಕಾರ್ತಿಕ ಹೆಗಡೆಕಟ್ಟೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಡಾ. ಕಾರ್ತಿಕ ಹೆಗಡೆಕಟ್ಟೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಾಲಯದಲ್ಲಿ ಡೆಪ್ಯುಟಿ ಸೆಕ್ರೆಟರಿಯಾಗಿ ಪದೋನ್ನತಿ ಹೊಂದಿದ್ದಾರೆ. ಇದರೊಂದಿಗೆ ಕಾರ್ತಿಕ ಪ್ರಧಾನಿ ಕಾರ್ಯಾಲಯದಲ್ಲಿ ಅತ್ಯಂತ ಕಿರಿಯ ವಯಸ್ಸಿನ ಉಪಕಾರ್ಯದರ್ಶಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಡಾ. ಕಾರ್ತಿಕ ಬ್ಲಾಕ್‌ಚೆನ್‌ ಟೆಕ್ನಾಲಜಿ ಹಾಗೂ ಕ್ರಿಪ್ಟೊ ಕರೆನ್ಸಿಯಲ್ಲಿ ಪರಿಣಿತಿ ಪಡೆದಿದ್ದು, ಈ ವಿಷಯಗಳ ಕುರಿತು ವಿವಿಧ … Continued

ಶಾಸಕ ರಮೇಶ ಜಾರಕಿಹೊಳಿಗೆ ಎಸ್‌ಐಟಿ ನೊಟೀಸ್‌

ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಎಪ್ರಿಲ್‌ ೨೦ರಂದು ಸಂಜೆ ೪:೦೦ ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ರಮೇಶ ಜಾರಕಿಹೊಳಿ ಅವರಿಗೆ ನೊಟೀಸ್‌ ನೀಡಿದ್ದಾರೆ. ಎಸ್‌ಐಟಿಯ ಇಬ್ಬರು ಅಧಿಕಾರಿಗಳು ಶುಕ್ರವಾರ ಬೆಳಗಾವಿಗೆ ಭೇಟಿ ನೀಡಿ ಖುದ್ದಾಗಿ ನೊಟೀಸ್‌ ನೀಡಲು ಬಂದಿದ್ದರು. ಆದರೆ ಅಧಿಕಾರಿಗಳಿಗೆ ಶಾಸಕರು … Continued

ಕರ್ನಾಟಕದಲ್ಲಿ ಶುಕ್ರವಾರವೂ ಹದಿನೈದು ಸಾವಿರ ಸಮೀಪಕ್ಕೇ ಬಂದ ದೈನಂದಿನ ಕೊರೊನಾ ಸೋಂಕು, 78 ಜನರ ಸಾವು

ಬೆಂಗಳೂರು: ರಾಜ್ಯದಲ್ಲಿ ಗುರುವಾರವೂ ಕೊರೊನಾ  ಸೋಂಕಿನ ಉಲ್ಬಣ ಮುಂದುವರಿದಿದ್ದು, ಹೊಸದಾಗಿ 14,859 ಜನರಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ.ಇದೇ ಸಮಯದಲ್ಲಿ ರಾಜ್ಯದಲ್ಲಿ 78 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,24,509 ಕ್ಕೆ ಏರಿಕೆಯಾಗಿದೆ. ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13,190 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 1,07,315 ಸಕ್ರಿಯ ಪ್ರಕರಣಗಳಿದ್ದು, 577 ಜನ … Continued