ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸದಾನಂದ ಗೌಡ…!

ಬೆಂಗಳೂರು : ‘ನಾನು ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಎಂದು ತೀರ್ಮಾನ ಮಾಡಿದ್ದೇನೆ’ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ರಾಜಕೀಯಕ್ಕೆ ನಿವೃತ್ತಿ ಪ್ರಕಟಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಹೆಚ್ಚಿನ ಲಾಭ ಪಡೆದುಕೊಂಡಿದ್ದೇನೆ. ಈಗ ನನಗೆ ಹೆಚ್ಚಿನ ಅಸೆ ಏನೂ ಇಲ್ಲ. ಇನ್ಮುಂದೆ ಚುನಾವಣಾ ರಾಜಕೀಯದಲ್ಲಿ ಮುಂದುವರಿಯಬಾರದು ನಿರ್ಧಾರ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಷರತ್ತು ಬದ್ಧ ಜಾಮೀನು

ಬೆಂಗಳೂರು: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ವಿಧಿಸಿ ಜಾಮೀನು ನೀಡಿದೆ. “ಪ್ರಕರಣದ ವಿಚಾರಣೆ ಮುಗಿಯುವರೆಗೆ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಬಾರದು. ಎರಡು … Continued

ಬೆಂಗಳೂರಿನ 15 ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್‌ಐಎ ದಾಳಿ

ನವದೆಹಲಿ/ಬೆಂಗಳೂರು: ಮಾನವ ಕಳ್ಳ ಸಾಗಣೆ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ(NIA) ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳ ವಿವಿಧ ಕಡೆಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಕರ್ನಾಟಕ, ತಮಿಳುನಾಡು, ತೆಲಂಗಾಣ, ತ್ರಿಪುರಾ, ಅಸ್ಸಾಂ, ಪಶ್ಚಿಮ ಬಂಗಾಳ, ಹರಿಯಾಣ, ಪುದುಚೇರಿ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಶೋಧ ನಡೆಸಿದೆ. … Continued

ಮಹಿಳೆಯರ ಕುರಿತು ಹೇಳಿಕೆ: ಕ್ಷಮೆ ಯಾಚಿಸಿದ ಬಿಹಾರ ಸಿಎಂ

ಪಾಟ್ನಾ : ಮಹಿಳೆಯರ ಕುರಿತು ಹೇಳಿಕೆ ಕೊಟ್ಟು ಟೀಕೆಗೆ ಗುರಿಯಾಗಿದ್ದ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಕ್ಷಮೆ ಯಾಚಿಸಿದ್ದಾರೆ. ತನ್ನ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನ ಹೇಳಿಕೆಯಲ್ಲಿ ಏನಾದರು ತಪ್ಪಾಗಿದ್ದರೆ, ಯಾರ ಮನಸ್ಸಿಗಾದರು ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಹಾಗೂ ಹೇಳಿಕೆ ಹಿಂಪಡೆಯುತ್ತೇನೆ” ಎಂದು ಹೇಳಿದ್ದಾರೆ. ನನ್ನ ಮಾತುಗಳು ಯಾರನ್ನೂ … Continued

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಸಾವು

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವ್ಯಾಪ್ತಿಯ ಹೆಡದಾಳು ಗ್ರಾಮದಲ್ಲಿ ಬುಧವಾರ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು 45 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಮಹಿಳೆ ಮತ್ತು ಇತರರು ತಮ್ಮ ಮನೆಯಿಂದ ಜಮೀನಿನ ಕಡೆಗೆ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹೆಡದಾಳು ಗ್ರಾಮದ ಬಳಿ ಸಾಗುತ್ತಿದ್ದಾಗ … Continued

ಮಂಡ್ಯದ ವಿಸಿ ನಾಲೆಗೆ ಬಿದ್ದ ಕಾರು: ಐವರ ಸಾವು

ಮಂಡ್ಯ : ಜಿಲ್ಲೆಯ ಪಾಂಡವಪುರ ಪಟ್ಟಣ ಹೊರವಲಯದ  ಬನಘಟ್ಟ ಗ್ರಾಮದ ಬಳಿ ಶ್ರೀರಂಗಪಟ್ಟಣ-ಜೇವರ್ಗಿ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಕಾರೊಂದು ವಿಶ್ವೇಶ್ವರಯ್ಯ ನಾಲೆಗೆ ಉರುಳಿ ಬಿದ್ದು ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಮೃತರನ್ನು ತುಮಕೂರು ಜಿಲ್ಲೆಯ  ತಿಪಟೂರು ತಾಲ್ಲೂಕು, ನೊಣವಿನಕೆರೆ ಬಳಿಯ ಕೈದಾಳ ಗ್ರಾಮದ ಚಂದ್ರಪ್ಪ, ಕೃಷ್ಣಪ್ಪ, ಧನಂಜಯ, ಬಾಬು, ಜಯಣ್ಣ ಎಂದು ಗುರುತಿಸಲಾಗಿದೆ. ಮೃತರೆಲ್ಲ ಸಂಬಂಧಿಗಳಾಗಿದ್ದು ಅದರಲ್ಲಿ … Continued

ಇನ್ಮುಂದೆ ಪ್ರಸಿದ್ಧ ʼಅಮರನಾಥ ಗುಹೆʼ ವರೆಗೂ ವಾಹನದಲ್ಲಿ ಹೋಗಬಹುದು : 13000 ಅಡಿ ಎತ್ತರದಲ್ಲಿ ರಸ್ತೆ ನಿರ್ಮಾಣ, ಮೊದಲ ಬಾರಿಗೆ ವಾಹನ ಸಂಚಾರ | ಮೈ ಜುಂ ಎನ್ನುವ ದೃಶ್ಯ ವೀಕ್ಷಿಸಿ

ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO)ನವರು ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ʼಅಮರನಾಥ ಗುಹೆʼ ದೇಗುಲಕ್ಕೆ ರಸ್ತೆ ನಿರ್ಮಾಣವನ್ನು ಪೂರ್ಣಗೊಳಿಸಿದ್ದಾರೆ….! ಈ ದುರ್ಗಮ ರಸ್ತೆಯ ಪೂರ್ಣಗೊಳಿಸುವಿಕೆಯನ್ನು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಐತಿಹಾಸಿಕ ಎಂದು ಕರೆದಿದೆ ಮತ್ತು ಕಾಶ್ಮೀರ ಭಾಗದ ಹಿಮಾಲಯ ಪರ್ವತ ಪ್ರದೇಶಗಳಲ್ಲಿ 13000 ಅಡಿ ಎತ್ತರದಲ್ಲಿರುವ ದೇಗುಲಕ್ಕೆ ತನ್ನ ಮೊದಲ ವಾಹನಗಳನ್ನು ಓಡಿಸಿದೆ.ಮೊದಲ ಸೆಟ್ … Continued

ಬಿಗ್‌ಬಾಸ್‌ ಖ್ಯಾತಿಯ ‘ಕಲ್ಲೇಗ ಟೈಗರ್ಸ್‌’ ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ

ಮಂಗಳೂರು : ಕಳೆದ ಬಿಗ್‌ ಬಾಸ್ ಸೀಸನ್‌ನಲ್ಲಿ‌ ಹುಲಿ ಕುಣಿತ ಮಾಡಿ ಗಮನ ಸೆಳೆದಿದ್ದ ಪುತ್ತೂರಿನ ಖ್ಯಾತ ಹುಲಿ ವೇಷ ತಂಡ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ ಕಲ್ಲೇಗ (24) ಅವರನ್ನು ಬರ್ಬರ ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ನೆಹರು ನಗರ ಜಂಕ್ಷನ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅವರನ್ನು … Continued

ಹೈಕಮಾಂಡ್‌ ಬುಲಾವ್‌: ಡಿಸಿಎಂ ಡಿಕೆ ಶಿವಕುಮಾರ ದಿಢೀರ್‌ ದೆಹಲಿಗೆ

ಬೆಂಗಳೂರು : ಕಾಂಗ್ರೆಸ್‌ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರು ಇಂದು ಮಂಗಳವಾರ ದೆಹಲಿಗೆ ಹೊರಟಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಕುರ್ಚಿ ಬಗ್ಗೆ ರಾಜ್ಯ ಕಾಂಗ್ರೆಸ್‌ ನಲ್ಲಿ ನಡೆಯುತ್ತಿರುವ ಚರ್ಚೆಗಳ ಮಧ್ಯೆ ಅವರಿಗೆ ಪಕ್ಷ ಹೈಕಮಾಂಡ್‌ ಬುಲಾವ್‌ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಅವರು ಎಐಸಿಸಿ ಅಧ್ಯಕ್ಷ … Continued

ಬೆಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಲಿವ್​ ಇನ್ ರಿಲೇಷನ್ ಶಿಪ್ ನಲ್ಲಿದ್ದ ಪ್ರೇಮಿಗಳು

ಬೆಂಗಳೂರು: ಲಿವ್-ಇನ್ ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದ ಇಬ್ಬರು ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ 20 ವರ್ಷದಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ (ವಿವಾಹಿತೆ) ಹಾಗೂ ಆಕೆಯ 29 ವರ್ಷದ ಲಿವ್-ಇನ್ ಪಾಲುದಾರ ಭಾನುವಾರ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು … Continued