ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ

ಕುಂದಾಪುರ/ಹುಬ್ಬಳ್ಳಿ/ವಿಜಯಪುರ: ಕುಂದಾಪುರ ತಾಲೂಕಿನ ಹಲವಡೆ ಭಾನುವಾರ ಸಂಜೆ ಗಾಳಿ ಮಳೆಯಾಗಿದೆ. ಕೆಲವೆಡೆ ತೋಟದಲ್ಲಿ ಅಡಿಕೆ ಮರಗಳು, ಬಾಳೆ ಗಿಡಗಳು ಉರುಳಿಬಿದ್ದು ಅಪಾರ ಹಾನಿ ಸಂಭವಿಸಿದೆ.ಹಲವೆಡೆ ಆಲಿಕಲ್ಲುಗಳೂ ಬಿದ್ದಿವೆ. ಸಿದ್ದಾಪುರ, ಹೊಸಂಗಡಿ, ಹಳ್ಳಿಹೊಳೆ, ಅಜ್ರಿ, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಉಳ್ಳೂರು ಮೊದಲಾದೆಡೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ.ಗೋಳಿಯಂಗಡಿ ಪೇಟೆಯಲ್ಲಿ ಧಾರಾಕಾರ ಮಳೆ ಸುರಿದು ವಾರದ ಸಂತೆಗೆ ತೊಂದರೆಯಾಗಿತ್ತು. … Continued

ಕರ್ನಾಟಕದಲ್ಲಿ 10 ಸಾವಿರ ದಾಟಿದ ಏಕದಿನದ ಕೊರೊನಾ ಸ್ಟ್ರೈಕ್‌..! ಬೆಂಗಳೂರಲ್ಲೇ 7 ಸಾವಿರ ದಾಟಿದ ಪ್ರಕರಣ..!!

ಬೆಂಗಳೂರು:‌ ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುತ್ತಿದ್ದು, ಭಾನುವಾರ ದೈನಂದಿನ ಪ್ರಕರಣ 10 ಸಾವಿರ ದಾಟಿದೆ..! ಭಾನುವಾರ ಕರ್ನಾಟಕದಲ್ಲಿ ದೈನಂದಿನ 10,250 ಹೊಸ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸೋಂಕಿಗೆ ಒಳಗಾದವರ ಸಂಖ್ಯೆ 10,65,290 ಕ್ಕೆ ಏರಿಕೆಯಾಗಿದೆ. ಭಾನುವಾರ ಕೊರೊನಾ ಸೋಂಕಿಗೆ 40 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,889 ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ … Continued

ಬೆಂಗಳೂರಿನಲ್ಲಿ ಕ್ಯಾಮೆರಾದಲ್ಲಿ ಸೆರೆಸಿಕ್ಕ ಕೊವಿಡ್‌-19 ಪರೀಕ್ಷೆ ವಂಚನೆ, ನಕಲಿ ಸ್ವ್ಯಾಬ್ ಸಂಗ್ರಹ..!

ಬೆಂಗಳೂರಿನ ಕೊಡಿಗೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್‌ಸಿ) ಇಬ್ಬರು ಸಿಬ್ಬಂದಿ ನಕಲಿ ಸ್ವ್ಯಾಬ್ ಸಂಗ್ರಹದಲ್ಲಿ ಸಿಕ್ಕಿಬಿದ್ದಿದ್ದಾರೆ. ಕೊಡಿಗೆಹಳ್ಳಿ ಹಳ್ಳಿ ಪಿಎಚ್‌ಸಿಯ ವೈದ್ಯಕೀಯ ಅಧಿಕಾರಿ ದೂರಿನ ಆಧಾರದ ಮೇಲೆ ಕೊಡಿಗೆಹಳ್ಳಿ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ. ಈ ಕುರಿತು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ. ವರದಿ ಪ್ರಕಾರ,   ಪಿಎಚ್‌ಸಿ ಸಿಬ್ಬಂದಿ ಹೊಚ್ಚ ಹೊಸ ಸ್ವ್ಯಾಬ್‌ಗಳನ್ನು ತೆರೆಯುವುದನ್ನು ಮತ್ತು … Continued

ಸಾರಿಗೆ ನೌಕರರ ಮುಷ್ಕರ ಕಾನೂನು ಬಾಹಿರ,ಸಂಘಕ್ಕೆ ಗೌರವಾಧ್ಯಕ್ಷರ ನೇಮಕಕ್ಕೂ ಅನುಮತಿ ಇಲ್ಲ:ಕಾರ್ಮಿಕ ಸಚಿವ ಹೆಬ್ಬಾರ

ಕಲಬುರಗಿ: ಸಾರಿಗೆ ನೌಕರರು ಕಳೆದ ಐದು ದಿನಗಳಿಂದ ನಡೆಸುತ್ತಿರುವ ಸಾರಿಗೆ ಮುಷ್ಕರ ಕಾನೂನು ಬಾಹಿರವಾಗಿದೆ. ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಒದಗಿಸಬೇಕಾದ ಸಾರಿಗೆ ನೌಕರರು ಈ ರೀತಿ ಮುಷ್ಕರ ನಡೆಸುವುದು ನಿಯಮಾವಳಿಯಲ್ಲಿ ಇಲ್ಲ. ಹಾಗೂ ಸಂಘಕ್ಕೆ ಗೌರವ ಅಧ್ಯಕ್ಷರನ್ನು ನೇಮಿಸಿಕೊಳ್ಳಲೂ ಅನುಮತಿ ಇಲ್ಲ. ಹೀಗಾಗಿ ಕೂಡಲೇ ಮುಷ್ಕರವನ್ನು ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕಾರ್ಮಿಕ ಸಚಿವ ಶಿವರಾಮ … Continued

ಮಾತುಕತೆಗೆ ಕರೆಯಲ್ಲ, ಮುಷ್ಕರ ಕೈಬಿಡದ್ದರೆ ಶಿಸ್ತು ಕ್ರಮ:ಸಿಎಂ ಬಿಎಸ್‌ವೈ ಎಚ್ಚರಿಕೆ

ರಾಯಚೂರು:ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಾಕ್‌ ನೀಡಿದ್ದಾರೆ. ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ ವೇತನ ಕಡಿತ ಮಾಡುವುದಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಾರಿಗೆ ನೌಕರರ ಮುಷ್ಕರ ವಿಚಾರಕ್ಕೆ ಸಂಬಂಧಿಸಿದಂತೆ ಯಾರನ್ನೂ ಕೂಡಾ ಮಾತುಕತೆಗೆ ಕರೆಯುವುದಿಲ್ಲ. ನೌಕರರು ಕರ್ತವ್ಯಕ್ಕೆ … Continued

ಬಿಜೆಪಿಗೆ ಸೇರ್ಪಡೆಯಾದ ಮಾಜಿ ಶಾಸಕ ಪ್ರಕಾಶ್ ಖಂಡ್ರೆ

ಬಸವಕಲ್ಯಾಣ: ಬಾಲ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಅವರು ಭಾನುವಾರ ಬಸವಕಲ್ಯಾಣದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜು  ಬೊಮ್ಮಾಯಿ,  ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಸತಿ ಸಚಿವರಾದ ವಿ. ಸೋಮಣ್ಣ ಮೊದಲಾದವರು ಉಪಸ್ಥಿತರಿದ್ದರು.

ಬಿಸಿಲನಾಡಿನ 9 ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ

ಯಾದಗಿರಿ: ಬಿಸಲನಾಡಿನ ಕಲಬುರಗಿ ವಿಭಾಗಧ ಏಳು ಹಾಗೂ ಬೆಳಗಾವಿ ವಿಭಾಗದ 2 ಜಿಲ್ಲೆಗಳಲ್ಲಿ ಏಪ್ರಿ‌ಲ್‌ ಮತ್ತು ಮೇ ತಿಂಗಳ ಬಿಸಲಿನ ತಾಪ ಹೆಚ್ಚಾಗಿರವು ಹಿನ್ನೆಲೆಯಲ್ಲಿ ಸರಕಾರಿ ಕಚೆರಿಯ ಸಮಯ ಬದಲಿಸಿ ಸರಕಾರ ಆದೇಶ ಹೊರಡಿಸಿದೆ. ಪ್ರತಿ ವರ್ಷವೂ ಎರಡು ತಿಂಗಳ ಕಲ ಸರಕಾರಿ ಕಚೇರಿ ಸಮಯವನ್ನು ಬೆಳಿಗ್ಗೆ 8 ರಿಂದ ªಮದ್ಯಾಹ್ನ 1.30 ಗಂಟೆಯ ವರೆಗೆ … Continued

ಕೊವಿಡ್‌: ಮೋದಿ ಸಿಎಂಗೆ ದೂರವಾಣಿ ಕರೆ ಮಾಡಿದ ಬೆನ್ನಲ್ಲೇ ಕಟ್ಟುನಿಟ್ಟಿನ ಕ್ರಮದ ಮುನ್ಸೂಚನೆ ನೀಡಿದ ಸಚಿವ ಡಾ.ಸುಧಾಕರ

ಬೆಂಗಳೂರು:ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಭಾನುವಾರ ಬೆಳಿಗ್ಗೆ ದೂರವಾಣಿಯಲ್ಲಿ ಮಾತನಾಡಿದ ಬೆನ್ನಲ್ಲೇ ರಾಜ್ಯ ಆರೋಗ್ಯ ಸಚಿವ ಕೊವಿಡ್‌-19 ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಅನಿವಾರ್ಯವಾಗಿ ಮಹಾರಾಷ್ಟ್ರದ ರೀತಿ ಲಾಕ್‌ಡೌನ್‌ನಂತಹ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ನಗರದ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯಲ್ಲಿ ಭಾನುವಾರ (ಏ.೧೧) ಲಸಿಕೆ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, … Continued

ಬೆಂಗಳೂರು-ಮಂಗಳೂರು-ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು; ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕದಲ್ಲಿ ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ರೈಲ್ವೆ ಜನರ ಅನುಕೂಲಕ್ಕಾಗಿ ರೈಲುಗಳ ಸಂಚಾರ ಆರಂಭಿಸಿದೆ. ಯಶವಂತಪುರ- ಮಂಗಳೂರು ಜಂಕ್ಷನ್ ಹಾಗೂ ಕಾರವಾರ ಮಾರ್ಗದಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ನಡೆಸಲಿದೆ. ಸಾಮಾನ್ಯ ದರದಲ್ಲಿ ಈ ರೈಲುಗಳಲ್ಲಿ ಜನರು ಸಂಚಾರ ನಡೆಸಬಹುದು ಎಂದು ಪ್ರಕಟಣೆ ತಿಳಿಸಿದೆ. ರೈಲುಗಳ ವೇಳಾಪಟ್ಟಿ: * 06557 … Continued

 ಬಿಎಸ್‌ವೈಗೆ ಭಾನುವಾರ ಬೆಳ್ಳಂ ಬೆಳಿಗ್ಗೆ ದೂರವಾಣಿ ಕರೆ ಮಾಡಿದ ಮೋದಿ ..

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೂರವಾಣಿ  ಕರೆ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ ದೂರವಾಣಿ ಕರೆ ಮಾಡಿದ್ದ ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಕರ್ನಾಟಕದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು. ರಾಯಚೂರು ಜಿಲ್ಲೆಯ ಮಸ್ಕಿಯಲ್ಲು ಉಪಚುನಾವಣೆ ಪ್ರಚಾರದಲ್ಲಿರುವ ಯಡಿಯೂರಪ್ಪ ಅವರ ಜೊತೆ ಮೋದಿ ಸುಮಾರು 10 ನಿಮಿಷಕ್ಕೂ ಹೆಚ್ಚು … Continued