ಸಿಡಿ ಯುವತಿಯ ತಾಯಿ ಆಸ್ಪತ್ರೆಗೆ ದಾಖಲು

ವಿಜಯಪುರ: ಸಿಡಿ ಪ್ರಕರಣದ ಯುವತಿಯ ತಾಯಿ ಅನಾರೋಗ್ಯದ ಕಾರಣದಿಂದಾಗಿ ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಯುವತಿಯ ತಾಯಿ ಆರೋಗ್ಯದಲ್ಲಿ ಏರುಪೇರಾದ ಕಾರಣದಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ.

ಎಸ್‌ಐಟಿ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ನೆಪವೇ: ಟ್ವೀಟ್‌ ಮೂಲಕ ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂಬುದನ್ನು ಕಾಂಗ್ರೆಸ್‌ ಲೇವಡಿ ಮಾಡಿದ್ದು, ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ಹೆಸರಿನ ನೆಪವೇ ಎಂದು ಪ್ರಶ್ನಿಸಿದೆ. ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಸೋಮವಾರ ಎಸ್‌ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಭಾನುವಾರ ರಾತ್ರಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು … Continued

ಕೋಲಾರ: ಅನಾಥಾಶ್ರಮದ 26 ವಿದ್ಯಾರ್ಥಿಗಳು , ಗಾರ್ಮೆಂಟ್‌ ಫ್ಯಾಕ್ಟರಿ 33 ಕಾರ್ಮಿಕರಿಗೆ ಕೊರೊನಾ ಸೋಂಕು..!

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಎರಡು ಕೊರೊನಾ ಕ್ಲಸ್ಟರ್‌ಗಳು ವರದಿಯಾಗಿದ್ದು, ಅಥಿಗಿರಿಕುಪ್ಪ ಗ್ರಾಮದಲ್ಲಿ ಟ್ರಸ್ಟ್ ನಿರ್ವಹಿಸುತ್ತಿರುವ ಅನಾಥಾಶ್ರಮದ 26 ವಿದ್ಯಾರ್ಥಿಗಳು ಹಾಗೂ ಬೆಂಗಳೂರು-ನರಸಪುರ ಹೆದ್ದಾರಿಯಲ್ಲಿರುವ ಫ್ಯಾಕ್ಟರಿಯ 33 ಗಾರ್ಮೆಂಟ್ ಕಾರ್ಮಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೋಲಾರ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಅನಾಥಾಶ್ರಮದ ಎಲ್ಲಾ ವಿದ್ಯಾರ್ಥಿಗಳು ಪ್ರತ್ಯೇಕರಾಗಿದ್ದಾರೆ. ಬಂಗಾರ್‌ಪೇಟ್‌ದಿಂದ ಐದು ಕಿಲೋಮೀಟರ್ ದೂರದಲ್ಲಿರುವ ಅಥಿಗಿರಿಕುಪ್ಪ ಗ್ರಾಮದಲ್ಲಿ ಟ್ರಸ್ಟ್ ನಿರ್ವಹಿಸುತ್ತಿರುವ ಅನಾಥಾಶ್ರಮಕ್ಕೆ … Continued

ಮಹಾರಾಷ್ಟ್ರದಲ್ಲಿ ಕೊರೊನಾ ದಿಢೀರ್‌ ಹೆಚ್ಚಳ: ಕರ್ನಾಟಕದಲ್ಲೂ ಕಠಿಣ ಕ್ರಮದ ಮುನ್ಸೂಚನೆ ನೀಡಿದ ಸಚಿವ ಸುಧಾಕರ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸುವುದು ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕಿನ ಅಟ್ಟಹಾಸ ಹೆಚ್ಚಾಗಿದೆ. ಶನಿವಾರ ಒಂದೇ ದಿನ ಆ ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದರು. ಕೊರೊನಾ ವೈರಸ್ ಸೋಂಕಿನ ಹೊಡೆತಕ್ಕೆ ಮಹಾರಾಷ್ಟ್ರ … Continued

ದೇವೇ ಗೌಡ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು : ಕೊರೊನಾ ಸೋಂಕಿನಿಂದಾಗಿ ನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಸೋಮವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ … Continued

ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ‘ಸುಪ್ರೀಂಕೋರ್ಟ್’ ತಡೆ :ಸಿಎಂ ಬಿಎಸ್ ವೈಗೆ ಬಿಗ್ ರಿಲೀಫ್;

ನವ ದೆಹಲಿ: ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಡಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಬೆಂಗಳೂರಿನ ಬೆಳ್ಳಂದೂರು ಬಳಿಯ 24 ಎಕರೆ ಭೂಮಿಯ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಸಿಜೆಐ ಪೀಠ ತಡೆಯಾಜ್ಞೆ ನೀಡಿದೆ. ಈ ಹಿಂದೆ ಇದೇ ಪ್ರಕರಣದ ವಿಚಾರಣೆ … Continued

ಶಾಸಕ ಕವಟಗಿಮಠಗೆ ಕೊರೊನಾ 

ಬೆಳಗಾವಿ :ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಈ ಕಾರನದಿಂದ ಬೆಳಗಾವಿ ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ಬಂದಿಲ್ಲ.  ಕೊರೊನಾ ಸೋಂಕು ಬಾರದಂತೆ ಅವರು ಇತ್ತೀಚೆಗೆ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ಆದರೆ, ಈಗ ಸೋಂಕು ತಗುಲಿರುವುದು ದೃಢಪಟ್ಟಿದೆ

ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ:ಗೋಕಾಕ ಟಿಎಚ್ಒ‌

ಗೋಕಾಕ್ : ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೂ ಏಪ್ರಿಲ್ 1ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಭಾನುವಾರ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು ಎಂಬುದಾಗಿ ಗೋಕಾಕ್ ತಾಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಏಪ್ರಿಲ್ … Continued

ರಮೇಶ ಜಾರಕಿಹೊಳಿಗೆ ಕೊರೊನಾ ಹೀಗಾಗಿ ಪ್ರಚಾರಕ್ಕೆ ಬಂದಿಲ್ಲ ಎಂದ ಬೈರತಿ

ಬೆಳಗಾವಿ :ಮಾಜಿ ಸಚಿವ ರಮೇಶ ಜಾರಕಿಹೊಳಿಯವರು ಕೊರೋನಾ ಸೋಂಕು ತಗುಲಿರುವ ಕಾರಣ ಬೆಳಗಾವಿ ಲೋಕಸಭಾ ಚುನಾವಣೆ ಪ್ರಚಾರದಿಂದ ದೂರ ಉಳಿದಿದ್ದಾರೆ ಎಂದು ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹುಷಾರಾದ ನಂತರ ಚುನಾವಣಾ ಪ್ರಚಾರಕ್ಕೆ ಬರುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ರಮೇಶ ಜಾರಕಿಹೊಳಿ‌ ಬೆಂಗಳೂರಿನಲ್ಲಿಯೇ ಇದ್ದಾರೆ, ಕೇವಲ ಚುನಾವಣಾ ಪ್ರಚಾರ ಕುರಿತು … Continued

ಜಿಎಸ್‌ಟಿಯಲ್ಲಿ ರಾಜ್ಯದ ಪಾಲು ತರಲು ಏನು ಮಾಡುತ್ತಿದ್ದೀರಿ: ಸಂಸದ ತೇಜಸ್ವಿ ಸೂರ್ಯಗೆ ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಜಿಎಸ್‌ಟಿಯಲ್ಲಿ ರಾಜ್ಯದ ಪಾಲು ಪಡೆಯಲು ಸಂಸದರಾಗಿ ಏನು ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್‌ ಸಂಸದ ತೇಜಸ್ವಿ ಸೂರ್ಯ ಅವರನ್ನು ಪ್ರಶ್ನಿಸಿದೆ. ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕೊಯಿಮತ್ತೂರು ಹೊಟೇಲ್‌ನಲ್ಲಿ ಕ್ಯಾಶಿಯರ್‌ ನಿರಾಕರಿಸಿದ್ದರೂ ಬಿಲ್‌ ಪಾವತಿಸಿದ್ದನ್ನು ಸಂಸದ ತೇಜಸ್ವಿ ಸೂರ್ಯ ಟ್ವೀಟರ್‌ನಲ್ಲಿ ತಿಳಿಸಿದ್ದರು. ಎಲ್ಲರನ್ನು ಗೌರವಿಸುವ ಪಕ್ಷ ಬಿಜೆಪಿ. ಸಣ್ಣ ವ್ಯಾಪಾರಿಗಳಿಂದ ರೋಲ್‌ಕಾಲ್‌ ಮಾಡಲು ನಾವು ಡಿಎಂಕೆ … Continued