ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಬೊಮ್ಮಾಯಿ 

ಕಲಬುರಗಿ: ಉಪ ಚುನಾವಣೆ ನಡೆಯುತ್ತಿರುವ ಬೆಳಗಾವಿ, ಮಸ್ಕಿ ಹಾಗೂ ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಗಳು ನಿಸ್ಸಂಶಯವಾಗಿ ಗೆಲವು ಸಾಧಿಸಲಿದ್ದಾರೆ. ಅದರಲ್ಲೂ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಮಂಗಳಾ ಅಂಗಡಿ ಅವರು ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬಸವ ಕಲ್ಯಾಣಕ್ಕೆ ತೆರಳಲು ಬೆಂಗಳೂರಿನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ … Continued

ಮಂಗಲಾ ಅಂಗಡಿ ಜಯಭೇರಿ:ಸಿಎಂ ಬಿಎಸ್‌ವೈ ವಿಶ್ವಾಸ

ಬೆಳಗಾವಿ :ಉಪಚುನಾವಣೆಯಲ್ಲಿ ಮಂಗಲಾ ಅಂಗಡಿ ಜಯಭೇರಿ ಬಾರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಮಂಗಳವಾರ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ದಿ.ಸುರೇಶ ಅಂಗಡಿ ಬೆಳಗಾವಿಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಿದ್ದಾರೆ. ರಾಜ್ಯಕ್ಕೆ ನಿರೀಕ್ಷೆಗಿಂತಲು ಹೆಚ್ಚಿನ ಯೋಜನೆಗಳನ್ನು ಸುರೇಶ ಅಂಗಡಿಯವರು ತಂದಿದ್ದಾರೆ. ಅವರು ನಮ್ಮನ್ನು ಇಷ್ಟು ಬೇಗ ಬಿಟ್ಟು ಹೋಗಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದರು. ಇದು … Continued

ಸಿಡಿ ಪ್ರಕರಣದ ಯುವತಿ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಲು ಕೋರ್ಟ್ ಅನುಮತಿ, ಯಾವುದೇ ಕ್ಷಣದಲ್ಲಿ ಹಾಜರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಕೋರ್ಟ್ ಗೆ ಹಾಜರಾಗಿ ಹೇಳಿಕೆ ದಾಖಲಿಸಲು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಅನುಮತಿ ನೀಡಿದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪರ ವಕೀಲ ಜಗದೀಶ್ ಯುವತಿಗೆ ಎಸ್‌ಐಟಿ ಮೇಲೆ ಹಾಗೂ ಪೊಲೀಸರ ಮೇಲೆ ಯಾವುದೇ ನಂಬಿಕೆ ಇಲ್ಲ ಹಾಗಾಗಿ ಕೋರ್ಟ್ ಮುಂದೆ … Continued

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ, ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಎಂದ ಕಾರಜೋಳ

ಬೆಳಗಾವಿ :ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ ಅಂಗಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಆಗಮಿಸಿದ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ.ಕೆ.ಹರೀಶಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ದೇಶದಲ್ಲಿ … Continued

ಸಿದ್ದರಾಮಯ್ಯ ಯಾರ ಕಾಲು ಹಿಡಿದು ಸಿಎಂ ಆದ್ರೂ ಎನ್ನುವುದು ಗೊತ್ತಿದೆ:ಕಟೀಲು

ಬೆಳಗಾವಿ: ರಾಜ್ಯದ ಮೂರು ಉಪ ಚುಣಾವಣೆ ನಡೆಯಲಿರುವ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟಿಲು ಹೇಳಿದರು. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಪಕ್ಷದ ಪೂರ್ವ ತಯಾರಿ ನಡೆದಿದೆ. ಇಂದು ಮಂಗಲಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು. ಬಿಜೆಪಿ ಸಂಸದರು ಕೇಂದ್ರ ಸರಕಾರ … Continued

ಸತೀಶ ಜಾರಕಿಹೊಳಿ ಒಟ್ಟು ಆಸ್ತಿ ಮೌಲ್ಯ126.62 ಕೋಟಿ ರೂ.

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಸತೀಶ್‌ ಜಾರಕಿಹೊಳಿ   ಅವರ ಚರಾಸ್ತಿ 13.62 ಕೋಟಿ ರೂ.ಗಳು ಹಾಗೂ ಸ್ಥಿರಾಸ್ತಿ ಮೌಲ್ಯ 113 ಕೋಟಿ ರೂ. ಎಂದು ಘೋಷಿಸಿಕೊಂಡಿದ್ದಾರೆ. ಚುನಾವಣಾಧಿಕಾರಿಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅವರು ತಮ್ಮ ಆಸ್ತಿ ವಿವರ ಘೋಷಿಸಕೊಂಡಿದ್ದು ಅವರ ಚರಾಸ್ತಿ ಹಾಗೂ ಸ್ತಿರಾಸ್ತಿ ಸೇರಿ ಒವರ ಒಟ್ಟು ಆಸ್ತಿ … Continued

ಗುತ್ತಿಗೆ ಆಧಾರದಲ್ಲಿ 1500 ಬಸ್‌ಗಳಿಗೆ ಬಿಎಂಟಿಸಿ ಟೆಂಡರ್ ಆಹ್ವಾನ, ಖಾಸಗೀಕರಣದ ಆರಂಭವೇ..?

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಗುತ್ತಿಗೆ ಆಧಾರದಲ್ಲಿ 1500 ಡೀಸೆಲ್ ಬಸ್ ಪಡೆಯಲು ಟೆಂಡರ್ ಆಹ್ವಾನಿಸಿದೆ. ಕೇಂದ್ರದ ಫೇಮ್ ಯೋಜನೆ ಎರಡನೇ ಹಂತದ ಅನುದಾನ ಬಳಸಿಕೊಂಡು ಗುತ್ತಿಗೆ ಮಾದರಿಯಲ್ಲಿ 300 ವಿದ್ಯುತ್ ಬಸ್ ಪಡೆಯುವ ಸಂಬಂಧ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇದರ ಬೆನ್ನಲ್ಲೇ ಗುತ್ತಿಗೆ ಮಾದರಿಯಲ್ಲಿ 1500 ಡೀಸೆಲ್ ಪಡೆಯುವ ಸಂಬಂಧ ಬಿಎಂಟಿಸಿ … Continued

ಸಾರಿಗೆ ನೌಕರರೇ ಎಪ್ರಿಲ್‌ ೭ರಿಂದ ಕರೆ ನೀಡಿದ ಅನಿರ್ದಿಷ್ಟ ಮುಷ್ಕರ ಕೈಬಿಡಿ: ಸಾರಿಗೆ ಸಚಿವರ ಮನವಿ

ಬೆಂಗಳೂರು: ಎಪ್ರಿಲ್‌ ೭ರಿಂದ ಕರೆ ನೀಡಿರುವ ಅನಿರ್ದಿಷ್ಟ ಮುಷ್ಕರವನ್ನು ರದ್ದುಗೊಳಿಸುವಂತೆ ರಾಜ್ಯದ ರಸ್ತೆ ಸಾರಿಗೆ ನೌಕರರ ಒಕ್ಕೂಟಕ್ಕೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ. ನಾವು ಈಗಾಗಲೇ ಒಕ್ಕೂಟ ಮಂಡಿಸಿದ ಒಂಬತ್ತು ಬೇಡಿಕೆಗಳಲ್ಲಿ ಎಂಟನ್ನು ಪೂರೈಸಿದ್ದೇವೆ. ಬಾಕಿ ಉಳಿದಿರುವ ಏಕೈಕ ಬೇಡಿಕೆಯೆಂದರೆ ಸಂಬಳವನ್ನು ಪರಿಷ್ಕರಿಸುವುದು. 6 ನೇ ವೇತನ ಆಯೋಗದ ಶಿಫಾರಸುಗಳಿಗೆ … Continued

ಯಲ್ಲಾಪುರದಲ್ಲಿ ಒಂದೇ ಶಾಲೆಯ 21 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು..!

ಯಲ್ಲಾಪುರ:ಇಲ್ಲಿನ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ 21 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಿಗೆ ಸೋಮವಾರ ಕೊರೊನಾ ಸೋಂಕು ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ 10ನೇ ತರಗತಿಯ ಒಬ್ಬ ವಿದ್ಯಾರ್ಥಿನಿಗೆ ಈ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ 123 ಜನರ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ … Continued

ಕರ್ನಾಟಕದಲ್ಲಿ ಸೋಮವಾರವೂ ದೈನಂದಿನ ಪ್ರಕರಣಗಳ ಹೆಚ್ಚಳ..ಬೆಂಗಳೂರಲ್ಲೇ ಶೇ.60ಕ್ಕಿಂತ ಹೆಚ್ಚು ಪ್ರಕರಣ..!

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ದೈನಂದಿನ ಪ್ರಕರಣದಲ್ಲಿ ಸೋಮವಾರವೂ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 2,792 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಒಟ್ಟು ೧೬ ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,89,804ಕ್ಕೆ ಏರಿಕೆಯಾಗಿದೆ.ಒಂದೇ ದಿನದಲ್ಲಿ 1,964 ಸೋಂಕಿತರು ಬಿಡುಗಡೆಯಾಗಿದ್ದು, 9,53,416 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continued