ಅಪೋಲೋ ಆಸ್ಪತ್ರೆ ವಿರುದ್ಧ ವಂಚನೆ ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣಗೊಂಡಿದೆ. ಇದನ್ನೇ ಲಾಭ ಮಾಡಿಕೊಂಡಿರುವ ಕೆಲವು ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರಿಂದ ಸುಲಿಗೆ ಮಾಡಲು ಆರಂಭಿಸಿವೆ. ಕೋವಿಡ್ 19 ಚಿಕಿತ್ಸೆ ಪಡೆದು ಮನೆಗೆ ತೆರಳಿದ ರೋಗಿಗಳ ಬಗ್ಗೆ ಸುಳ್ಳು ಮಾಹಿತಿ ಉಲ್ಲೇಖಿಸಿ ಸರ್ಕಾರಕ್ಕೆ ವಂಚನೆ ಮಾಡಿದ ಆರೋಪದ ಮೇಲೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಬನ್ನೇರುಘಟ್ಟ … Continued

ಮಹತ್ವದ ಸುದ್ದಿ.. ಲಾಕ್‌ಡೌನ್‌ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: ಕೊರೊನಾ ವೈರಸ್ ಪ್ರಕರಣಗಳ ಹರಡುವಿಕೆ ತಡೆಯುವ ಉದ್ದೇಶದಿಂದ, ಕರ್ನಾಟಕ ಸರ್ಕಾರವು 14 ದಿನಗಳ ಲಾಕ್‌ಡೌನ್‌ಗೆ ಮುಂಚಿತವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದು ನಾಳೆ, ಏಪ್ರಿಲ್ 27 ರಾತ್ರಿ 9 ರಿಂದ ಪ್ರಾರಂಭವಾಗಲಿದೆ ಮತ್ತು ಮೇ 12ರ ವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ. Covid-19 Guidelines 26.04.2021 * ಹೊಸ ಆದೇಶಗಳಲ್ಲಿ, ಶಾಲೆಗಳು, ಕಾಲೇಜುಗಳು, … Continued

ಮಹತ್ವದ್ದು…ವಿಟಿಯು ಪರೀಕ್ಷೆಗಳ ಮುಂದೂಡಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಕಾರಣ ರಾಜ್ಯದಲ್ಲಿ ಮಂಗಳವಾರದಿಂದ 14 ದಿನಗಳ ಕೊರೊನಾ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದ ( VTU) ಪರೀಕ್ಷೆಗಳು ಮುಂದೂಡಿಕೆಯಾಗಿದೆ ಎಂದು ವಿವಿ ಆದೇಶ ಹೊರಡಿಸಿದೆ. ಮುಂದಿನ ಆದೇಶದ ವರೆಗೂ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿಟಿಯು ಆದೇಶದಲ್ಲಿ ತಿಳಿಸಿದೆ. ಮಂಗಳವಾರ ರಾತ್ರಿಯಿಂದ 14 … Continued

ನಿರ್ಮಾಪಕ, ನಟಿ ಮಾಲಾಶ್ರೀ ಪತಿ ರಾಮು ಕೊರೊನಾದಿಂದ ನಿಧನ

ಬೆಂಗಳೂರು:  ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ಹಾಗೂ ಖ್ಯಾತ ನಟಿ ಮಾಲಾಶ್ರೀ ಪತಿ ರಾಮು ಅವರು ಕೊರೊನಾವೈರಸ್ ಸೋಂಕಿನಿಂದ ಸೋಮವಾರ ಮೃತಪಟ್ಟಿದ್ದಾರೆ. ವಾರದ ಹಿಂದೆಯಷ್ಟೇ ನಿರ್ಮಾಪಕ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ರಾಮು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರಾಮು ಅವರು ಸೋಮವಾರ … Continued

ಕರ್ನಾಟಕದಲ್ಲಿ ಸೋಮವಾರ 201 ಕೊರೊನಾ ಸಾವು, 30 ಸಾವಿರದ ಒಳಗೆ ದೈನಂದಿನ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಸೋಮವಾರ ಒಂದೇ ದಿನ ಬರೋಬ್ಬರಿ 201 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14,627ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 29,744 ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 13,68,945ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಸೋಮವಾರ … Continued

ಮಹತ್ವದ ಸುದ್ದಿ… ಕೋವಿಡ್ ನಿರ್ವಹಣೆಗಾಗಿ ರಾಜ್ಯ ಸರ್ಕಾರಿ ನೌಕರರ ‘1 ತಿಂಗಳ ವೇತನ’ ಕಡಿತಕ್ಕೆ ಕ್ಯಾಬಿನೆಟ್‌ನಲ್ಲಿ ನಿರ್ಧಾರ..!?

ಬೆಂಗಳೂರು : ಕೊರೊನಾ ಸೋಂಕಿನ 2ನೇ ಅಲೆಯ ಅಬ್ಬರ ರಾಜ್ಯದಲ್ಲಿ ಅಬ್ಬರಿಸಿದೆ. ಈ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ನಾಳೆಯಿಂದ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಇದರ ಬೆನ್ನಿಗೇ ಆರೋಗ್ಯ ತುರ್ತು ಕ್ರಮಗಳಿಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತಗೊಳಿಸುವ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಆದರೆ ಅಧಿಕೃತ ಆದೇಶ … Continued

ಜಿಪಂ, ತಾಪಂ, ಕಸಾಪ ಸೇರಿದಂತೆ ಎಲ್ಲ ಚುನಾವಣೆ ಮುಂದೂಡಲು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಸೋಮವಾರ ನಡೆದ ಸಚಿ ಸಂಪುಟದ ಸಭೆಯಲ್ಲಿ ರಾಜ್ಯದಲ್ಲಿ ನಡೆಯುವ ಎಲ್ಲ ಚುನಾವಣೆಗಳನ್ನು ಮುಂದೂಡುವಂತೆ ಶಿಫರಾಸು ಮಾಡಲು ತೀರ್ಮಾ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರು ತಿಂಗಳುಗಳ ಕಾಲ ಎಲ್ಲ ಚುನಾವಣೆಯನ್ನು ಮುಂದೂಡಿಕೆ ಮಾಡಲು ನಿರ್ಧರಿಸಲಾಗಿದ್ದು, … Continued

14 ದಿನದ ಜನತಾ ಕರ್ಫ್ಯೂ: ಯಾವುದೆಲ್ಲ ಇರುತ್ತದೆ, ಯಾವುದು ಇರುವುದಿಲ್ಲ..?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಜನತಾ ಕರ್ಫ್ಯೂ ಜಾರಿ ಮಾಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಕೊರೊನಾ ಸೋಂಕು ನಿಯಂತ್ರಣಕ್ಕೆರಾಜ್ಯದಲ್ಲಿ ಮುಂದಿನ 2 ವಾರ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ … Continued

18ರಿಂದ 45 ವರ್ಷದವರಿಗೆ ಕೊರೋನಾ ಲಸಿಕೆ ಉಚಿತ; ಸಿಎಂ ಬಿಎಸ್​ವೈ ಘೋಷಣೆ

ಬೆಂಗಳೂರು: ಮೇ 1ರಿಂದ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಉಚಿತ ಕೋವಿಡ್‌ ಲಸಿಕೆ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಸೋಮವಾರ ನಡೆದ ರಾಜ್ಯ ಸಂಪುಟ ಸಭೆ ನಡೆದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆಯಿಂದ ಹದಿನಾಲ್ಕು ದಿನಗಳ ಕಠಿಣ ಕರ್ಫ್ಯೂ ಜಾರಿ ವಿಷಯವನ್ನು ಪ್ರಕಟಿಸಿದ ಬೆನ್ನಲ್ಲೇ ಎಲ್ಲರಿಗೂ ಉಚಿತ ಕೊರೋನಾ ಲಸಿಕೆ ಕೂಡ ನೀಡಲು ಸರ್ಕಾರ ನಿರ್ಧರಿಸಿದೆ ಎಂದು … Continued

ಕರ್ನಾಟಕದಲ್ಲಿ 14 ದಿನಗಳ ಜನತಾ ಕರ್ಫ್ಯೂ ಜಾರಿ, ಸಾರಿಗೆ ಬಂದ್‌, 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ

ಬೆಂಗಳೂರು : ನಾಳೆ ರಾತ್ರಿಯಿಂದ 14 ದಿನಗಳ ವರೆಗೆ ಕರ್ನಾಟಕದಲ್ಲಿ  ಜನತಾ ಕರ್ಫ್ಯೂ  ಜಾರಿ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆ ವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು ದೊಡ್ಡ … Continued