ಕೃಷ್ಣರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಟ್ಟುತ್ತಿದ್ದಾರೋ ಮುಗಿಸುತ್ತಿದ್ದಾರೋ ಗೊತ್ತಾಗ್ತಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಮೈಸೂರು ಜಿಲ್ಲೆಯ ಕೃಷ್ಣರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಕಟ್ಟುವ ಕಾರ್ಯ ನಡೆಯುತ್ತಿದೆಯೋ ಅಥವಾ ಕಾಂಗ್ರೆಸ್‌ ಮುಗಿಸೋ ಪ್ರಯತ್ನ ನಡೆಯುತ್ತಿದೆಯೋ ಗೊತ್ತಾಗುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಮೈಸೂರು ಮೇಯರ್‌ ಆಯ್ಕೆಗಾಗಿ ಜೆಡಿಎಸ್‌ನೊಂದಿಗೆ ಮೈತ್ರಿ ಕುರಿತು ಪಕ್ಷದ ವರಿಷ್ಠರು ಕಳಿಸಿದ ನೋಟೀಸ್‌ಗೆ ಉತ್ತರ ಕೊಟ್ಟಿದ್ದೇನೆ. ನನ್ನ ಮೇಲೆ ಯಾವ ಆರೋಪ ಇದೆ ಎಂಬುದೇ … Continued

ಸಿಡಿ ಪ್ರಕರಣ:ಕಾಂಗ್ರೆಸ್ ನಿಂದ ಪಾಠ ಕಲಿಯಬೇಕಿಲ್ಲ

ಬೆಂಗಳೂರು:ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿನ ಸತ್ಯಾಸತ್ಯತೆ ಹೊರ ಬರುವುದು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ಆಗುವುದು ಕಾಂಗ್ರೆಸ್ಸಿಗೆ ಬೇಕಾಗಿಲ್ಲ. ಹೀಗಾಗಿ  ಸಿಡಿ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಮಂಗಳವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದವರು ಸಿಡಿ ವಿಚಾರವನ್ನು ಮುಂದಿಟ್ಟುಕೊಂಡು … Continued

ಖ್ಯಾತ ಬಾಲಿವುಡ್‌ ನಟ ಗೋವಿಂದ ಹಾಡಿದ ರಾಜಕುಮಾರ ಸಿನೆಮಾದ ಹಾಡಿನ ತುಣುಕಿನ ವಿಡಿಯೋ ಈಗ ವೈರಲ್‌..!

ಕನ್ನಡಕ್ಕೂ ಹಿಂದಿ ಸಿನೆಮಾ ನಟ ಗೋವಿಂದ ಅವರಿಗೂ ಎಲ್ಲಿಯ ನಂಟು? ಡಾ. ರಾಜಕುಮಾರ ಅವರ ಅಭಿಮಾನಿಯಾಗಿರುವ ಅವರು ಡಾ.ರಾಜ್‌ಕುಮಾರ ಸಿನೆಮಾದ ಹಾಡಿನ ಸಾಲನ್ನು ಸ್ಫುಟವಾಗಿ ಹಾಡಿರುವ ವಿಡಿಯೋ ಈಗ ವೈರಲ್‌ ಆಗಿದೆ. 1974ರ ಎರಡು ಕನಸು ಸಿನೆಮಾದ ಎಂದೆಂದೂ ನಿನ್ನನು ಮರೆತು ನಾನಿರಲಾರೆ…ಈ ಹಾಡನ್ನು ಹಾಡಿರುವ 57 ವರ್ಷದ ಬಾಲಿವುಡ್‌ನ ಖ್ಯಾತ ನಟ ಗೋವಿಂದಅವರ ವಿಡಿಯೋ … Continued

ಕರ್ನಾಟಕದಲ್ಲಿ 2 ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ..ಬೇಕಿದೆ ಕಟ್ಟೆಚ್ಚರ..!!

ಬೆಂಗಳೂರು: ಕಳೆದ 24 ತಾಸಿನಲ್ಲಿ ಕರ್ನಾಟಕದಲ್ಲಿ 2,000ಕ್ಕು ಹೆಚ್ಚು ಪ್ರಕರನಗಳು ದಾಖಲಾಗಿವೆ. ಸೋಮವಾರ ಏರಿಕೆಗೆ ಬ್ರೇಕ್‌ ಬಿದ್ದಿದ್ದರಿಂದ ಕೊಂಚ ನಿಟ್ಟುಸಿರು ಬಿಟ್ಟಿದ್ದ ಜನರಿಗೆ ಮಂಗಳವಾರದ ದೈನಂದಿನ ಸೋಂಕು ಆತಂಕಕ್ಕೆ ಕಾರಣವಾಗಿದೆ. ಕರ್ನಾಕಟದ ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯವು 2,000 ಕ್ಕೂ ಹೆಚ್ಚು ಪ್ರಕರಣಗಳನ್ನು ಸೇರಿಸಿದ್ದರಿಂದ ಕರಣಾಟಕ ಮಂಗಳವಾರ ದೈನಂದಿನ ಕೋವಿಡ್ … Continued

ಸಿಡಿ ಪ್ರಕರಣ: ವಿಧಾನಸಭೆಯಲ್ಲಿ ಮುಂದುವರಿದ ಕಾಂಗ್ರೆಸ್‌ ಧರಣಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವುದು ಹಾಗೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ 6 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಕಾಂಗ್ರೆಸ್ ಸದನದಲ್ಲಿ ಧರಣಿ ಮುಂದುವರೆಸಿದ್ದರಿಂದ ವಿಧಾನಸಭಾ ಕಲಾಪದಲ್ಲಿ ಮಂಗಳವಾರ ಕೂಡ ಕೋಲಾಹಲ ನಡೆಯಿತು. ಕಲಾಪ ಆರಂಭವಾಗುತ್ತಿದ್ದಂತೆ ಮೊದಲು ಸಭಾಧ್ಯಕ್ಷ ಕಾಗೇರಿ ಮಾಜಿ ಸಚಿವ ಬಿ.ಡಿ.ಬಸವರಾಜ್ ಅವರಿಗೆ ಸಂತಾಪ … Continued

ಕ್ಷೇತ್ರಗಳ ಪುನರ್ ವಿಂಗಡಣೆ ಮಾನದಂಡಗಳ ಪರಿಷ್ಕರಣೆ: ಬೊಮ್ಮಾಯಿ

ಬೆಂಗಳೂರು- ಜಿಲ್ಲಾ ಪಂಚಾಯತ ಮತ್ತು ತಾಲ್ಲೂಕು ಪಂಚಾಯತ ಕ್ಷೇತ್ರ ವಿಂಗಡಣೆ ವೈಜ್ಞಾನಿಕವಾಗಿ ನಡೆದಿಲ್ಲ.  ಹೀಗಾಗಿ  ಕ್ಷೇತ್ರಗಳ  ವಿಂಗಡಣೆಗೆ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಗುರುವಾರ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಮುಖಂಡರ ಸಭೆ ನಡೆಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಬಿಜೆಪಿಯ ಸುನೀಲ್‌ಕುಮಾರ್ ಈ  … Continued

ಸಿಡಿ ಪ್ರಕರಣ: ಅಪರಾಧಿಗಳು ಎಷ್ಟೇ ದೊಡ್ಡವರಿದ್ದರೂ ಶಿಕ್ಷೆ ತಪ್ಪಿದ್ದಲ್ಲ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಈ ಪ್ರಕರಣದಲ್ಲಿ ಭಾಗಿಯಾಗಿರುವವರು ಯಾರೇ ಆಗಿರಲಿ ಎಷ್ಟೇ ದೊಡ್ಡವರು ಆಗಿರಲಿ ಅವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ನಿಯಮ 69ರ ಅಡಿ ಮಂಡಿಸಿದ … Continued

ಸಿಎಂ ಬಿಎಸ್‌ವೈ ಭೇಟಿ ಮಾಡಿದ ಹಲವು ಶಾಸಕರು: ಯತ್ನಾಳ ಮೇಲೆ ಕ್ರಮಕ್ಕೆ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಿಜೆಪಿಯ ಸುಮಾರು ೩೦ ಶಾಸಕರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸೋಮವಾರ ರಾತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಈ ಶಾಸಕರು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೇ ವಾಗ್ದಾಳಿ ಮುಂದುವರಿಸಿದ್ದಾರೆ. ಇಂತಹ … Continued

 ಬೆಳಗಾವಿ ಲೋಕಸಭಾ ಉಪ ಚುನಾವಣೆ: 18.07 ಲಕ್ಷ ಮತದಾರರು

ಬೆಳಗಾವಿ : ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಮಂಗಳವಾರ ಅಧಿಸೂಚನೆ ಪ್ರಕಟಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಮಾರ್ಚ್ 30 ಕಡೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ. ಲೋಕಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರಗಳ ಪರಿಶೀಲನೆ ಮಾರ್ಚ್ 31 ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಏಪ್ರಿಲ್ 3 ಕಡೆಯ ದಿನವಾಗಿದೆ. … Continued

ಕರ್ನಾಟಕದಲ್ಲಿ ನಿರಂತರ ಏರಿಕೆಗೆ ಬ್ರೇಕ್‌…ಸ್ವಲ್ಪ ಕುಸಿತಕಂಡ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ದಿನದಿಂದ ದಿನಕ್ಕೆ ಏರುತ್ತಿದ್ದ ಕೊರೊನಾ ದೈನಂದಿನ ಸೋಂಕು ಸೋಮವಾರ ಸ್ವಲ್ಪ ಕಡಿಮೆಯಾಗಿದೆ. ಆದರೆ ಸಾವಿ ಸಂಖ್ಯೆ ಕೆಲ ತಿಂಗಳ ನಂತರ ಮತ್ತೆ ಎರಡಂಕಿ ತಲುಪಿದೆ. ಕಳೆದ 24 ತಾಸಿನಲ್ಲಿ ರಾಜ್ಯದಲ್ಲಿ 1445 ಜನರಿಗೆ ಸೊಂಕು ದೃಢ ಪಟ್ಟಿದೆ. 10 ಸೋಂಕಿತರು ಮೃತಪಟ್ಟಿದ್ದು, ಬೆಂಗಳೂರು ನಗರ ದಲ್ಲಿನಾಲ್ವರು ಮೃತಪಟ್ಟಿದ್ದಾರೆ ದಕ್ಷಿಣ ಕನ್ನಡ ,ಧಾರವಾಡ, ಕಲಬುರಗಿ ಮೈಸೂರು, … Continued