ಕರ್ನಾಟಕ ಸೇರಿ 17 ರಾಜ್ಯಗಳಲ್ಲಿ ‘ಒಂದು ರಾಷ್ಟ್ರ ಒಂದು ರೇಷನ್ ಕಾರ್ಡ್’ ವ್ಯವಸ್ಥೆ ಕಾರ್ಯಗತ

ನವ ದೆಹಲಿ: ‘ಒನ್ ನೇಷನ್ ಒನ್ ರೇಷನ್ ಕಾರ್ಡ್ ವ್ಯವಸ್ಥೆಯನ್ನು’ ಹದಿನೇಳು ರಾಜ್ಯಗಳಲ್ಲಿ ಕಾರ್ಯರೂಪಕ್ಕೆ ಬಂದಿದೆ. ಈ ಸುಧಾರಣೆಯನ್ನು ಉತ್ತರಾಖಂಡ ಪೂರ್ಣಗೊಳಿಸಿದೆ. ಒನ್ ನೇಷನ್ ಒನ್ ರೇಷನ್ ಕಾರ್ಡ್ ವ್ಯವಸ್ಥೆ ಸುಧಾರಣೆ ಪೂರ್ಣಗೊಳಿಸುವ ರಾಜ್ಯಗಳು ಗ್ರಾಸ್ ಸ್ಟೇಟ್ ಡಿಸ್ಟ್ರಿಕ್ಟ್ ಪ್ರಾಡಕ್ಟ್ (ಜಿಎಸ್ ಡಿಪಿ) ಶೇ.0.25ರಷ್ಟು ಹೆಚ್ಚುವರಿ ಸಾಲ ಪಡೆಯಲು ಅರ್ಹತೆ ಪಡೆಯುತ್ತವೆ. ಇದರ ಪ್ರಕಾರ, ಈ … Continued

೧೩ರಂದು ರಾಜ್ಯದಲ್ಲಿ ಕೆಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಗಾಳಿ ಪ್ರತಿ ಗಂಟೆಗೆ ಜೋರಾಗಿ ಬೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಸಿದೆ. ಅರಬ್ಬಿ ಸಮುದ್ರದಲ್ಲಿ ಗಾಳಿ ಹೆಚ್ಚಾಗಿದ್ದು ಗಂಟೆಗೆ ೪೦-೫೦ ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಈ ಕಾರಣದಿಂದ ಮಾ.13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ … Continued

ಕೊರೊನಾ ಹೆಚ್ಚಳ ಆತಂಕ: ರಾತ್ರಿ ಪಾರ್ಟಿಗಳಿಗೆ ರಾಜ್ಯ ಸರ್ಕಾರ ನಿಷೇಧ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ರಾತ್ರಿ ಪಾರ್ಟಿಗಳಿಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಗುರುವಾರದಿಂದ (ಮಾ.೧೧) ರಾಜ್ಯಾದ್ಯಂತ, ಪ್ರಮುಖವಾಗಿ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ ರಾತ್ರಿ ಹೊತ್ತು ಪಾರ್ಟಿಗಳನ್ನು ನಡೆಸುವುದರ ಮೇಲೆ ನಿಷೇಧ ಹೇರಿದ್ದು, ಸ್ಟಾರ್ ಹೋಟೆಲ್, ರೆಸ್ಟೊರೆಂಟ್‍ಗಳಿಗೆ ಸೂಚಿಸಿರುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. … Continued

ಶಿವರಾತ್ರಿಯಂದು ಶ್ರೀಶೈಲ ಜಗದ್ಗುರುಗಳಿಂದ ಲಿಂಗ ದೀಕ್ಷೆ ಪಡೆದ ಮೊಹಮ್ಮದ್ ಮಸ್ತಾನ್

ಶ್ರೀಶೈಲ: ಶಿವ ಸಂಸ್ಕೃತಿಗೆ ಮಾರು ಹೋಗಿ ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರಿಂದ ಮೊಹಮ್ಮದ್‌ ಮಸ್ತಾನ್ ಎಂಬ ಇಸ್ಲಾಂ ಯುವಕ ಲಿಂಗ ದೀಕ್ಷೆ ಪಡೆದು ಶ್ರೀಶೈಲ ಮಲ್ಲಿಕಾರ್ಜುನ ದೇವರ ದರ್ಶನ ಮಾಡಿದ್ದಾನೆ. ಮೂಲತಃ ವಿಜಯವಾಡ ನಿವಾಸಿಯಾದ ಮೊಹಮ್ಮದ, ಮುಂಬೈ ಮಹಾನಗರದಲ್ಲಿ ಹರ್ಬಲ್ ಉದ್ಯಮ ಮಾಡುತ್ತಿರುವ ಇಸ್ಲಾಂ ಧರ್ಮೀಯ. ಇವರಿಗೆ ಮೊದಲಿನಿಂದಲೂ ಶಿವ ಸಂಸ್ಕೃತಿಯ … Continued

ಶಿವಮೊಗ್ಗ ವ್ಯಕ್ತಿಯಲ್ಲಿ ಮೊದಲ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ವೈರಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗಿದೆ. ದುಬೈನಿಂದ ಬಂದಿದ್ದ ಶಿವಮೊಗ್ಗ ಮೂಲದ ೫೩ ವರ್ಷದ ವ್ಯಕ್ತಿಯೊಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದುಬೈನಿಂದ ಬಂದಿದ್ದ ಈ ವ್ಯಕ್ತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಪಟ್ಟು ಶಿವಮೊಗ್ಗಗೆ … Continued

ಸಿಡಿ ಪ್ರಕರಣ ತನಿಖೆಗೆ 20 ಅಧಿಕಾರಿಗಳ ಎಸ್‌ಐಟಿ ತಂಡ ರಚನೆ

ಬೆಂಗಳೂರು: ಮಾಜಿ ಸಚಿವ ಸಚಿವ ರಮೇಶ್​ ಜಾರಕಿಹೊಳಿ ಅವರದ್ದು ಎಂದು ಆರೋಪಿಸಲಾದ ಅಶ್ಲೀಲ ಸಿಡಿ ಪ್ರಕರಣದ ವಿಚಾರಣೆಗೆ ವಿಶೇಷ ತನಿಖಾ ತಂಡ ನೇಮಕ ಮಾಡಲಾಗಿದೆ. ರಮೇಶಜ ಜಾರಕಿಹೊಳಿ ಇದು ನಕಲಿ ಸಿಡಿ ಎಂದು ಹೇಳಿ ಠಾಣಗೆ ಪತ್ರ ಬರೆದ ನಂತರ ಹಾಗೂ ಈ ಪ್ರಕರಣದಲ್ಲಿ ದೂರುದಾರ ಅನಂತರದಲ್ಲಿ ಏಕಾಕೀ ಪ್ರಕರಣ ಹಿಂಪಡೆದ ನಂತರ ಈ ಪ್ರಕರಣದ … Continued

ಸಿಡಿ ಪ್ರಕರಣ ತನಿಖೆ :ಎಸ್‌ಐಟಿಗೆ ಪೂರ್ಣ ಸ್ವಾತಂತ್ರ್ಯ, ಸಮಯ ಮಿತಿ ಇಲ್ಲ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಹಿಂದೆ ಷಡ್ಯಂತ್ರವಿದೆ ಎಂದು ಪತ್ರ ಬರೆದಿದ್ದರು. ಹೀಗಾಗಿ ಎಸ್ಐಟಿ ತನಿಖೆಗೆ ಕೊಟ್ಟಿದ್ದೇವೆ. ಆದರೆ ತನಿಖೆಗೆ ಸಮಯ ನಿಗದಿ ಮಾಡಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜ್ಯದ ಜನತೆಗೆ ಸತ್ಯ ಗೊತ್ತಾಗಲಿ ಎಂದು ಶೀಘ್ರವಾಗಿ ವರದಿ ಕೊಡಿ ಎಂದು ಹೇಳಿದ್ದೇವೆ. … Continued

ನಟ ದರ್ಶನ ಕಟೌಟ್‌ಗೆ ಮದ್ಯಾಭಿಷೇಕ: ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸ

ತುಮಕೂರು :ಎಲ್ಲೆಡೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಗುರುವಾರ ಬಿಡುಗಡೆಯಾಗಿದೆ. ಈ ಸಂಭ್ರಮದ ಮಧ್ಯೆಯೇ ತುಮಕೂರಿನಲ್ಲಿ ದರ್ಶನ್ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನ ಕಟೌಟ್ಗೆ ಅಭಿಷೇಕ ಮಾಡಿದ ರೀತಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ನಟ ದರ್ಶನ್‌ ಕೆಲ ಅಭಿಮಾನಿಗಳು ಅವರ ಕಟೌಟ್‌ಗೆ ಮದ್ಯಾಭಿಷೇಕ ಮಾಡಿದ್ದು ಈಗ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಅವರ … Continued

ದೇವೇಗೌಡರು ಬೆಳೆಸಿದವರೆಲ್ಲ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ: ಎಚ್‌ಡಿಕೆ

ಮೈಸೂರು: ಅಧಿಕಾರ ಅನುಭವಿಸಿ ನಂತರ ಪಕ್ಷ ಬಿಟ್ಟು ಹೋಗುವುದು ದೇವೇಗೌಡರ ಕುಟುಂಬಕ್ಕೆ ಹೊಸದೇನು ಅಲ್ಲ, ದೇವೇಗೌಡರು ಯಾರ್ಯಾರನ್ನೆಲ್ಲ ಬೆಳೆಸಿದ್ದರೋ ಅವರೇ ಬೆನ್ನಿಗೇ ಚೂರಿ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಬಾಗಿಲು ತೆರೆದುಕೊಂಡೇ ಇದೆ. ಹೀಗಾಗಿ ಹೋಗುವವರು ಹೋಗಬಹುದು, ಬರುವವರು ಬರಬಹುದು. ಪಕ್ಷ ಬಿಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ … Continued

ದಿ.ಸುರೇಶ ಅಂಗಡಿ ತಾಯಿ ಸೋಮವ್ವ ಅಂಗಡಿ ನಿಧನ

ಬೆಳಗಾವಿ: ಕೇಂದ್ರದ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ತಾಯಿ ಸೋಮವ್ವ ಅಂಗಡಿ (೯೨)ಕೆಕೆಕೊಪ್ಪ ಗ್ರಾಮದ ನಾಗೇರಹಾಳ ಗ್ರಾಮದ ಸ್ವಗೃಹದಲ್ಲಿ ಗುರುವಾರ ಬೆಳಗ್ಗೆ 9.20ಕ್ಕೆ ನಿಧನರಾಗಿದ್ದಾರೆ. ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದ ನಾಗೇರಹಾಳ ಗ್ರಾಮದವರಾದ ಸೋಮವ್ವ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರಿಗೆ ಐವರು ಪುತ್ರರು ಹಾಗೂ ಓರ್ವಪುತ್ರಿ ಇದ್ದಾರೆ. ಕೇಂದ್ರ ಸಚಿವರಾಗಿದ್ದ ತಮ್ಮ … Continued