ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ವಿಚಾರಣೆಗೆ ಸಿಎಂ ಲಗಾಮು

ಬೆಂಗಳೂರು:ರಾಜ್ಯ ಸರ್ಕಾರಿ ಅಧಿಕಾರಿ, ನೌಕರರು ಮುಕ್ತ ಮತ್ತು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಹಾಗೂ ಆಡಳಿತ ವ್ಯವಸ್ಥೆಯಲ್ಲಿನ ಕಾನೂನಿನ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಸರ್ಕಾರಿ ನೌಕರರ ವಿರುದ್ದ ಅನಾಮಧೇಯ ದೂರುಗಳ ತನಿಖೆಗೆ ಏಕಾಏಕಿ ಒಳಪಡಿಸಬಾರದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ದೂರು ಹೆಚ್ಚಾಗುತ್ತಿರುವುದು ನೌಕರರ ಆತ್ಮಸ್ಥೈರ್ಯ ಕಳೆದುಕೊಳ್ಳುವಂತಾಗಿದೆ, ಹೀಗಾಗಿ ಏಕಾಏಕೀ ತನಿಖೆಗೆ … Continued

ಬಸವಕಲ್ಯಾಣ ಉಪಚುನಾವಣೆ ಗೆಲ್ಲಲು ಬಿಜೆಪಿ ರಣತಂತ್ರ

ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಯವರಾದ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ಟಿಕೇಟ್‌ ಆಕಾಂಕ್ಷಿಗಳ ಹಾಗೂ ಮುಖಂಡರ ಸಭೆ ನಡೆಯಿತು. ಈ ಸಭೆಯಲ್ಲಿ ಸಚಿವರಾದ ಪ್ರಭು ಚೌವ್ಹಾಣ, ವಿ. ಸೋಮಣ್ಣ, ಬೀದರ್ ಕ್ಷೇತ್ರದ ಸಂಸದ ಭಗವಂತ ಖೂಬಾ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್, ಶಾಸಕರಾದ … Continued

ಪ್ರತ್ಯೇಕ ಜಿಲ್ಲೆಗೆ ಒತ್ತಾಯಿಸಿ ಶಿರಸಿ ಬಂದ್‌

ಶಿರಸಿ: ಉತ್ತರ ಕನ್ನಡದ ಕರಾವಳಿಯಿಂದ ಪ್ರತ್ಯೇಕಿಸಿ ಪ್ರತ್ಯೇಕ ಶಿರಸಿ ಜಿಲ್ಲೆ ಮಾಡುವಂತೆ ಆಗ್ರಹಿಸಿ ಬುಧವಾರ ಶಿರಸಿ ತಾಲೂಕು ಬಂದ್ ಮಾಡಲಾಯಿತು. ಶಿರಸಿ ಜಿಲ್ಲಾ ಹೋರಾಟ ಸಮಿತಿ ಪ್ರತಿಭಟನೆಯನ್ನೂ ನಡೆಸಿತು. ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ,ಸಿದ್ದಾಪುರ,ಮುಂಡಗೋಡು,ಯಲ್ಲಾಪುರ,ಜೋಯಿಡಾ,ಹಳಿಯಾಳ ಸೇರಿಸಿ ಶಿರಸಿ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಲಾಯಿತು. ಶಿವಾಜಿ ಸರ್ಕಲ್ ನಿಂದ ಪ್ರತಿಭಟನೆ ಆರಂಭಿಸಿದ ಪ್ರದರ್ಶನಕಾರರು … Continued

ಮ್ಯಾನ್‌ಹೋಲ್‌ನಲ್ಲಿ ಒತ್ತಾಯ ಪೂರ್ವಕವಾಗಿ ಇಳಿಸಿದ್ದಕ್ಕೆ ಪೌರ ಕಾರ್ಮಿಕ ಆತ್ಮಹತ್ಯೆ

ಕರ್ನಾಟಕ ಮಂಡ್ಯ ಜಿಲ್ಲೆಯ ಮದ್ದೂರ ಪಟ್ಟಣದ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದ ಪೌರ ಕಾರ್ಮಿಕ ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಂತೆ ಪುರಸಭೆ ಅಧಿಕಾರಿಗಳು ಒತ್ತಡ ಹೇರಿದ್ದನ್ನು ಖಂಡಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾರಾಯಣ (೩೪) ಮೃತ ವ್ಯಕ್ತಿ. ಪುರಸಭೆಯ ಅಧಿಕಾರಿಗಳು ೨೦೨೦ರ ನವಂಬರ್‌ಲ್ಲಿ ಮ್ಯಾನ್‌ಹೋಲ್‌ನಲ್ಲಿ ಇಳಿಯುವಂತೆ ಒತ್ತಡ ಹೇರಿದ್ದರು. ನಾರಾಯಣ ನಿರಾಕರಿಸಿದ್ದಕ್ಕೆ ಅವನ ಸಂಬಳವನ್ನು ೬೦೦೦ರೂ.ಗಳಿಗೆ ಕಡಿತಗೊಳಿಸಲಾಗಿತ್ತು. ಇದನ್ನು ಖಂಡಿಸಿ ನಾರಾಯಣ … Continued

ಹೊಸ ತಂತ್ರಜ್ಞಾನದ ಮೂಲಕ ಖನಿಜ ಸಂಪತ್ತು ಸಮೀಕ್ಷೆ :ನಿರಾಣಿ

ಮಂಗಳೂರು: ಹೊಸ ತಂತ್ರಜ್ಞಾನದ ಮೂಲಕ ರಾಜ್ಯದಲ್ಲಿರುವ ಖನಿಜ ಸಂಪತ್ತನ್ನು ಸಮೀಕ್ಷೆ ನಡೆಸಿ ಸಂರಕ್ಷಣೆ ಮಾಡುವ  ಚಿಂತನೆಯಿದೆ ಎಂದು ಗಣಿ ಮತ್ತು  ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಬುಧವಾರ ಇಲ್ಲಿನ ಪ್ರವಾಸ ಮಂದಿರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಖನಿಜ ಸಂಪತ್ತನ್ನು … Continued

ಹಿರೇನಾಗವಲ್ಲಿ ಸ್ಫೋಟ ಪ್ರಕರಣ: ಪಿಎಸ್‌ಐ ಅಮಾನತು

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಜಿಲೆಟಿನ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್  ಗೋಪಾಲ ರೆಡ್ಡಿ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ. ಸ್ಫೋಟ ಪ್ರಕರಣದ ತನಿಖೆ ಮತ್ತು ಆರೋಪಿಗಳನ್ನು ಪತ್ತೆ ಮಾಡುವಲ್ಲಿ ತೋರಿದ ಅತೀವ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶ … Continued

ಯತ್ನಾಳ ಪರ ವಿಶ್ವನಾಥ ಬ್ಯಾಟಿಂಗ್‌

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಮಾಡಿರುವ ಆರೋಪದಲ್ಲಿ ನ್ಯಾಯವಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ ಯತ್ನಾಳ ಅವರು ಪಕ್ಷ, ಸರ್ಕಾರದ ವಿರುದ್ಧ ಹೇಳಿಕೆ ನೀಡಿಲ್ಲ ಅಲ್ಲದೆ ಜನ ವಿರೋಧಿ ಭಾಷಣಗಳನ್ನೂ ಮಾಡಿಲ್ಲ, ಸರ್ಕಾರದ … Continued

ಯತ್ನಾಳ ದಿಢೀರ್‌ ದೆಹಲಿ ಭೇಟಿ ಕಾರಣ ಬಹಿರಂಗ

ಶಾಸಕ ಬಸನಗೌಡ ಪಾಟೀಲ ಯತ್ನಾಳ ದೆಹಲಿಗೆ ಭೇಟಿ ನೀಡಿದ ಕಾರಣ ಬಹಿರಂಗಗೊಂಡಿದೆ. ವಿಜಯಪುರದ ಶ್ರೀ ಸಿದ್ದೆಶ್ವರ ಸಂಸ್ಥೆಯ ಅಡಿಯಲ್ಲಿ ನಿರ್ಮಿಸಲಾದ ಭಾರತ ರತ್ಬ ಅಟಲ್‌ ಬಿಹಾರಿ ವಾಜಪೇಯಿ ಶಿಶು ನಿಕೇತನ ಶಾಲೆಯ ಸಿಬಿಎಸ್‌ಇ ನೋಂದಣಿ ಕಾರ್ಯಕ್ಕಾಗಿ ಯತ್ನಾಳ ದೆಹಲಿಗೆ ಹೋಗಿದ್ದಾರೆ. ಪಕ್ಷದ ಹೈಕಮಾಂಡ್‌ನಿಂದ ಯಾವುದೇ ಬುಲಾವ್‌ ಬಂದಿಲ್ಲ. ಯಾವುದೇ ಮುಖಂಡರನ್ನು ಭೇಟಿ ಮಾಡಲು ಹೋಗಿಲ್ಲ ಎಂದು ಯತ್ನಾಳ … Continued

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸ್ವಾಮೀಜಿಗಳ ನೇತೃತ್ವ, ಕಾಂಗ್ರೆಸ್‌ ಪ್ರಾಯೋಜಕತ್ವವಲ್ಲ

ಪಂಚಮಸಾಲಿ ೨ಎ ಮೀಸಲಾತಿ ಹೋರಾಟ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿದೆಯೇ ಹೊರತು ಕಾಂಗ್ರೆಸ್‌ ಪ್ರಾಯೋಜಕತ್ವದಲ್ಲಿ ಅಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ. ಕಾಂಗ್ರೆಸ್‌ ಪ್ರಾಯೋಜಕತ್ವದಲ್ಲಿ ಹೋರಾಟ ನಡೆದಿದೆ ಎಂದು ಸಚಿವ ಮುರಗೇಶ ನಿರಾಣಿ ಹೇಳಿಕೆ ನೀಡಿರುವುದು ಸರಿಯಲ್ಲ. ಸಮಾಜದ ಒಳಿತಿಗಾಗಿ ಪಕ್ಷಾತೀತವಾಗಿ ಅನೇಕರು ಹೋರಾಟಕ್ಕೆ ಕೈಜೋಡಿಸಿದ್ದಾರೆ. ನಿರಾಣಿಯವರ ಆರೋಪ ಸತ್ಯಕ್ಕೆ ದೂರವಾಗಿದೆ ಎಂದರು. ಹಿಂದೆ ಸಚಿವ … Continued

ಕೊರೊನಾ ಕ್ರಮ: ಬೆಂಗಳೂರಲ್ಲಿ ಎರಡು ಮದುವೆಗೆ ಬಂದ ಮಾರ್ಷಲ್‌ಗಳು…!

ಬೆಂಗಳೂರು:ಕೊರೊನಾ ಉಲ್ಬಣಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದು, ಈಗ ಬೆಂಗಲೂರಲ್ಲಿ ಮದುವೆ ಮನೆಗಳು ಅಥವಾ ಮದುವೆ ನಡಯುವ ಹಾಲ್‌ಗಳಿಗೆ ಮಾರ್ಷಲ್‌ಗಳು ಬರಲಿದ್ದಾರೆ ಅಲ್ಲ, ಬಂದಿದ್ದಾರೆ. ಬೆಂಗಳೂರಿನಲ್ಲಿ ಎರಡು ಕಡೆ ಮದುವೆ ಸಮಾರಂಭಕ್ಕೆ ಮಾರ್ಷಲ್‌ಗಳು ಬಂದ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಒಂದು ಕ್ಲಯಾಣ ಮಂಟಪ ಹಾಗೂ ಬಾಣಸವಾಡಿ ರಸ್ತೆಯಲ್ಲಿರುವ ಒಂದು … Continued