ರಾಜ್ಯದಲ್ಲಿ ಕೊರೊನಾ ರೂಪಾಂತರ ಸೋಂಕು ಕಾಣಿಸಿಕೊಂಡಿಲ್ಲ: ಡಾ. ರವಿ ಸ್ಪಷ್ಟನೆ

ರಾಜ್ಯದಲ್ಲಿ ಈವರೆಗೆ ರೂಪಾಂತರಗೊಂಡ ಕೊರೊನಾ ಸೋಂಕು ಕಾಣಿಸಿಕೊಂಡಿಲ್ಲ ಎಂದು ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ. ವಿ. ರವಿ ಸ್ಪಷ್ಟಪಡಿಸಿದ್ದಾರೆ. ಈವರೆಗೆ ಯಾರಲ್ಲೂ ಬ್ರಿಟನ್‌, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ಮಾದರಿ ಕೊರೊನಾ ಸೋಂಕು ಕಾಣಿಸಿಕೊಂಡಿಲ್ಲ. ಯಾವುದೇ ಕ್ಲಸ್ಟರ್‌ಗಳಲ್ಲಿ ಸೋಂಕಿತರಲ್ಲಿಯೂ ಸಿ.ಟಿ. ಮೌಲ್ಯ ೨೦ಕ್ಕಿಂತ ಕಡಿಮೆ ಇಲ್ಲ, ಆದ್ದರಿಂದ ಹೆಚ್ಚಿನ ಪರೀಕ್ಷೆಗೆ ಕಳಿಸುವ ಅವಶ್ಯಕತೆಯಿಲ್ಲ. ಕೊವಿಡ್‌-೧೯ … Continued

ಬಿಎಸ್‌ವೈ ದೂರಿನ ಹಿನ್ನೆಲೆ ಯತ್ನಾಳಗೆ ದೆಹಲಿ ಬುಲಾವ್‌: ಎಲ್ಲರ ಚಿತ್ತ ಬಿಜೆಪಿ ಹೈಕಮಾಂಡ್‌ನತ್ತ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ತಿರುಗಿಬಿದ್ದಿರುವ ವಿಜಯಪುರ ನಗರ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಂದ ತುರ್ತು ಬುಲಾವ್‌ ಹಿನ್ನೆಲೆಯಲ್ಲಿ ಅವರು ದೆಹಲಿಗೆ ಭಾನುವಾರ ರಾತ್ರಿ ದಿಢೀರ್‌ ತೆರಳಿದ್ದಾರೆ. ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಂಚಾಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡಬೇಕು … Continued

ಕೊವಿಡ್‌ ಕ್ರಮ: ದಕ್ಷಿಣ ಕನ್ನಡ ಜಿಲ್ಲೆ ಸಂಪರ್ಕಿಸುವ ಕೇರಳದ ೯ ರಸ್ತೆಗಳು ಬಂದ್‌

ಮಂಗಳೂರು: ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸೋಮವಾರದಿಂದ ಬೆಳಿಗ್ಗೆ 6ರಿಂದ ಕೇರಳ ರಾಜ್ಯವನ್ನು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯೊಂದಿಗೆ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿದೆ. ಜಿಲ್ಲೆಯನ್ನು ಕೇರಳದೊಂದಿಗೆ ಸಂಪರ್ಕಿಸುವ 14 ರಸ್ತೆಗಳಿದ್ದು, ಅವುಗಳಲ್ಲಿ ತಲಪಾಡಿ (ಮಂಗಳೂರು ತಾಲ್ಲೂಕು), ಸರಡ್ಕಾ (ಬಂಟ್ವಾಲ್), ಮೆನಾಲಾ (ಪುತ್ತೂರು), ನೆಟ್ಟಾನೀಗೆ ಮುಡ್ನೂರ್ (ಪುಟ್ಟೂರು) … Continued

ದೆಹಲಿಯಲ್ಲಿ ಉನ್ನತಮಟ್ಟದ ಅಧಿಕಾರಿಗಳ ಜತೆ ಸಚಿವ ಜಾರಕಿಹೊಳಿ ಸಭೆ

ನವ ದೆಹಲಿ: ಜಲ ಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಅವರ ನೇತೃತ್ವದಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಉನ್ನತಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಸೀನಿಯರ್ ಅಡ್ವೋಕೇಟ್ ಮೋಹನ ಕಾತರಕಿ, ಅಡ್ವೋಕೇಟ್ ವಿ.ಎನ್.ರಘುಪತಿ, ನಿಶಾಂತ ಪಾಟೀಲ್, ರಾಜೇಶ್ವರ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನಿಲ್ … Continued

ಕೇಂದ್ರ-ರಾಜ್ಯದ ಬಿಜೆಪಿ ಸರ್ಕಾರಗಳೇ ಕಾಂಗ್ರೆಸಿಗೆ ಅವಕಾಶ ಮನೆ ಬಾಗಿಲಿಗೆ ತಂದುಕೊಂಡುತ್ತಿವೆ:ಡಿಕೆಶಿ

ಬೆಂಗಳೂರು: ಕಾಂಗ್ರೆಸಿಗರು ಅವಕಾಶಗಳನ್ನು ಹುಡುಕಿಕೊಂಡು ಹೋಗಬೇಕಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳೇ ನಮ್ಮ ಮನೆ ಬಾಗಿಲಿಗೆ ಅವಕಾಶಗಳನ್ನು ತಂದು ಕೊಡುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಭಾನುವಾರ ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ದೇಶದಲ್ಲಿ ಯಾವ ವರ್ಗವು ಕೂಡ … Continued

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಚಿವ ಧ್ರುವನಾರಾಯಣ್ ಭಾನುವಾರ ಅಧಿಕಾರ ಸ್ವೀಕರಿಸಿದರು. ನಗರದ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಘೋಷಣೆ ನಡುವೆ ಪಕ್ಷದ ನೂತನ ಕಾರ್ಯಾಧ್ಯಕ್ಷರ ಜವಾಬ್ದಾರಿಯನ್ನು ಮಾಜಿ ಸಚಿವ ರಾಮಾಲಿಂಗಾರೆಡ್ಡಿ ಹಾಗೂ ಮಾಜಿ ಸಂಸದ ಧ್ರುವನಾರಾಯಣ್ ವಹಿಸಿಕೊಂಡರು. … Continued

ಐಎಂಎ ಹಗರಣದಲ್ಲಿ ನನ್ನ ಪಾತ್ರವಿಲ್ಲ: ಎಚ್‌ಡಿಕೆ ಸ್ಪಷ್ಟನೆ

ಐಎಂಎ ಹಗರಣದಲ್ಲಿ ನನ್ನ ಪಾತ್ರ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಗರಣ ಬೆಳಕಿಗೆ ಬಂದಿತ್ತು. ನಾನು ಸಿಸಿಬಿ ತನಿಖೆಗೆ ಆದೇಶಿಸಿದ್ದೆ. ಆ ವೇಳೆಗೆ ಹಗರಣದ ರೂವಾರಿ ದುಬೈಗೆ ಪರಾರಿಯಾಗಿದ್ದ. ಅಧಿಕಾರಿಗಳು ಅವನನ್ನು ಬಂಧಿಸಿ ತಂದರು. ನಾನೇ ತನಿಖೆಗೆ ಆದೇಶ ನೀಡಿದ ಮೇಲೆ ಹಗರಣದಲ್ಲಿ ನನ್ನ ಪಾತ್ರ ಎಲ್ಲಿರುತ್ತದೆ ಎಂದರು. … Continued

ಆರ್ ಟಿ ಪಿಸಿಆರ್ ಪರೀಕ್ಷೆ ಹೆಚ್ಚಿಸಿ: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

ದೇಶದಲ್ಲಿ ಕೊರೊನಾ ಸೋಂಕು ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಆರ್ ಟಿ ಪಿಸಿಆರ್ ಪರೀಕ್ಷೆಗಳನ್ನು ನಡೆಸಲು ರಾಜ್ಯಗಳು ಗಮನಹರಿಸಬೇಕೆಂದು ಕೇಂದ್ರ ಸರ್ಕಾರ ಸೂಚಿಸಿದೆ. ಆರ್ ಟಿ ಪಿಸಿಆರ್ ಪರೀಕ್ಷೆಗಳನ್ನು ಹೆಚ್ಚು ಹೆಚ್ಚು ನಡೆಸಬೇಕು ಹಾಗೂ ಕಡ್ಡಾಯವಾಗಿ ನೆಗೆಟಿವ್ ಫಲಿತಾಂಶ ಪ್ರಮಾಣವನ್ನು ದೃಢಪಡಿಸಿಕೊಳ್ಳಬೇಕೆಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕಳೆದ ಕೆಲ ದಿನಗಳಿಂದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ … Continued

ಹುಬ್ಬಳ್ಳಿಯಲ್ಲಿ ಸನ್ಯಾಸ ದೀಕ್ಷಾ ಸಮಾರಂಭದ ಪ್ರಯುಕ್ತ ಗಿರಿನಾರ ಭಾವಯಾತ್ರೆ

ಹುಬ್ಬಳ್ಳಿ: ಜೈನ ಮರುಧರ ಸಂಘ ಹಾಗೂ ಕೇಶ್ವಾಪುರ ಜೈನ ಸಂಘದ ಆಶ್ರಯದಲ್ಲಿ ೧೦ ಜನರ ಸನ್ಯಾಸ ದೀಕ್ಷಾ ಸಮಾರಂಭದ ನಿಮಿತ್ತ ಗಿರಿನಾರ ಭಾವಯಾತ್ರೆ ನಡೆಯಿತು. ಕೇಶ್ವಾಪುರದ ಅರಿಹಂತ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಚಾರ್ಯ ಅಭಯಶೇಖರ ಸುರೀಶ್ವರಜಿ, ಆಚಾರ್ಯ ಅಜಿತಶೇಖರ ಸುರೀಶ್ವರಜಿ, ಆಚಾರ್ಯ ವಿಮಲಬೋಧಿ ಸುರೀಶ್ವರಜಿ, ಸಾಧ್ವಿ ಚರಿತ್ರವರ್ಧನನಾಶ್ರೀಜಿ, ಸಾಧ್ವಿ ಜ್ಯೋತಿವರ್ಧನಾಶ್ರೀಜಿ ಭಾವಯಾತ್ರೆಯನ್ನು ಬೀಳ್ಕೊಟ್ಟರು. ನಂತರ ಸನ್ಯಾಸ … Continued

೨ಎ ಮೀಸಲಾತಿಗೆ ಸೇರ್ಪಡೆ ಮಾಡಿ: ಬೆಂಗಳೂರು ಸಮಾವೇಶದಲ್ಲಿ ಪಂಚಮಸಾಲಿಗಳ ಹಕ್ಕೊತ್ತಾಯ

ಬೆಂಗಳೂರು: ೨ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶಕ್ಕೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಯಿತು. ಸಮಾವೇಶಕ್ಕೆ ವಿಶೇಷವಾಗಿ ಲಿಂಗಾಯತ ಪಂಚಮಸಾಲಿ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವ ಕಲಬುರಗಿ, ಬಾಗಲಕೋಟೆ, ವಿಜಯಪುರ,ಯಾದಗಿರಿ, ಬೀದರ್, ರಾಯಚೂರು,ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಮೊದಲಾದ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. … Continued