ಕಾಂಗ್ರೆಸ್‌ ಜೆಡಿಎಸ್‌ ಬಿ ಟೀಮ್‌ ಎಂಬುದು ಮೈಸೂರು ಪಾಲಿಕೆಯಲ್ಲಿ ಸಾಬೀತು

ಹಗರಿಬೊಮ್ಮನಹಳ್ಳಿ: ‘ಕರ್ನಾಕದಲ್ಲಿ ಕಾಂಗ್ರೆಸ್ ಪಕ್ಷವು ಜೆಡಿಎಸ್ ಪಕ್ಷದ ‘ಬಿ’ ಟೀಮ್ ಎನ್ನುವುದು ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಆಯ್ಕೆ ವಿಚಾರದಲ್ಲಿ ಸಾಬೀತಾಗಿದೆ’ ಎಂದು ರಾಜ್ಯದ ಸಮಾಜ‌ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಹೇಳಿದರು. ನೂತನ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಉಪನಾಯಕನಹಳ್ಳಿ ಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ … Continued

ಕುರಿಗಾರರ ಹೋರಾಟಕ್ಕೆ ಸಿದ್ದರಾಮಯ್ಯ ಸಾಥ್‌

ಬೆಂಗಳೂರು: ಅನುಗ್ರಹ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ನಡೆದ ಕುರಿಗಾರರ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಥ್‌ ನೀಡಿದರು. ಕುರಿಗಳು ಸತ್ತರೆ ಪರಿಹಾರ ನೀಡುವ ಅನುಗ್ರಹ ಯೋಜನೆ ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಲದಿಂದ … Continued

ರಾಜ್ಯದ ೬೮ ಲಕ್ಷ ರೈತರಿಗೆ ಸ್ವಾಭಿಮಾನಿ ರೈತ ಕಾರ್ಡ್

ಧಾರವಾಡ: ರಾಜ್ಯದ ರೈತರಿಗೆ ಯಾವುದೇ ಬಗೆಯ ಗುರುತಿನ ಚೀಟಿ ಇಲ್ಲ. ಈ ನಿಟ್ಟಿನಲ್ಲಿ ರೈತರಿಗೆ ‘ಸ್ವಾಭಿಮಾನಿ ರೈತ’ ಎಂಬ ಗುರುತಿನ ಚೀಟಿ ವಿತರಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಧಾರವಾಡ ಜಿಲ್ಲೆಯ ನಲವಗುಂದ ತಾಲೂಕಿನಲ್ಲಿ ಆಯೋಜಿಸಲಾಗಿದ್ದ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮ ಮಾತನಾಡಿದ ಸಚಿವರು, ‘ರಾಜ್ಯದ ರೈತರಿಗೆ ಯಾವ ಗುರುತಿನ ಚೀಟಿಯೂ … Continued

ಕಾಲೇಜಿನ ೭ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಪ್ರತಿಷ್ಠಿತ ಕಾಲೇಜಿನ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ವಿವಿಪುರಂನಲ್ಲಿರುವ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ಪದವಿ ಓದುತ್ತಿದ್ದ ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಪ್ರಯೋಗಾಲಕ್ಕೆ ಬಂದಿದ್ದ ಜಯಂತ್ ರೆಡ್ಡಿ ಕಟ್ಟಡದ ಮೇಲಿನಿಂದ ಜಿಗಿದಿದ್ದು, ತಲೆಗೆ ತೀವ್ರ … Continued

ಕೆಟ್ಟುಹೋದ ವಿಧಾನ ಪರಿಷತ್ ಸಿಸಿಟಿವಿಗಳು: ಹೊರಟ್ಟಿ ಎಚ್ಚರಿಕೆ

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯ ನಿರ್ವಹಿಸದಿರುವುದಕ್ಕೆ ಅಸಮಾಧಾನಗೊಂಡಿರುವ ಸಭಾಪತಿ ಬಸವರಾಜ ಹೊರಟ್ಟಿ ಈ ಕುರಿತು ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ಈ ಕುರಿತು ಪತ್ರ ಬರೆದಿರುವ ಅವರು, ಸಚಿವಾಲಯದಲ್ಲಿ ಅಳವಡಿಸಲಾಗಿರುವ ಹಲವು ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅವುಗಳನ್ನು ಉದ್ದೇಶಪೂರ್ವಕವಾಗಿ ಕೆಲವರು ಹಾಳು ಮಾಡುತ್ತಿರುವ ದೂರುಗಳು ಬರುತ್ತಿವೆ. ಅಂಥವರ … Continued

ರೈತರ ಮೇಲಿನ ದಬ್ಬಾಳಿಕೆ ಕಡಿವಾಣಕ್ಕೆ ನೂತನ ಕೃಷಿ ಕಾಯ್ದೆ ಜಾರಿ

ಬೆಂಗಳೂರು: ಕಾಯ್ದೆಗಳ ಹೆಸರಿನಲ್ಲಿ ಕಳೆದ 3 ವರ್ಷಗಳಲ್ಲಿ ರೈತರಿಂದ ಸುಮಾರು 25 ಕೋಟಿ ದಂಡ ವಸೂಲಿ ಮಾಡಲಾಗಿದೆ. ಇಂತಹ ದಬ್ಬಾಳಿಕೆ ಕಡಿವಾಣಕ್ಕೆ ನೂತನ ಕೃಷಿ ಕಾಯ್ದೆ ಜಾರಿಗೊಳಿಸಲಾಗುತ್ತಿದೆ’ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಕೆಂಗೇರಿ ಉಪನಗರದ ಗಣೇಶ ಆಟದ ಮೈದಾನದಲ್ಲಿ ಕೆಂಗೇರಿ- ಉಪನಗರ ರೋಟರಿ ಸಂಸ್ಥೆಯ ರಜತ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿದ್ದ ‘ರೈತ ಸಂತೆ’ … Continued

ಸಿದ್ದರಾಮಯ್ಯನವರ ತವರಿನಲ್ಲಿಯೇ ಜೆಡಿಎಸ್‌ ತಾಕತ್ತು ತೋರಿಸಿದ್ದೇವೆ: ಜೆಡಿಎಸ್‌ ಶಾಸಕ ಸಾ.ರಾ. ಮಹೇಶ

ಮೈಸೂರು ಮಹಾನಗರ ಪಾಲಿಕೆ ಮೈತ್ರಿ ಗೊಂದಲಕ್ಕೆ ಕಾರಣರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರ ತವರು ಜಿಲ್ಲೆಯಲ್ಲಿಯೇ ಜೆಡಿಎಸ್‌ ತಾಕತ್ತು ತೋರಿಸಿದ್ದೇವೆ ಎಂದು ಶಾಸಕ ಸಾ.ರಾ.ಮಹೇಶ ತಿಳಿಸಿದ್ದಾರೆ. ಪ್ರಾದೇಶಿಕ ಪಕ್ಷವನ್ನು ಹಗುರವಾಗಿ ನೋಡಬೇಡಿ. ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಆಗಲು ಶಾಸಕ ಜಿ.ಟಿ.ದೇವೇಗೌಡ ಹಾಗೂ ಸಂದೇಶ್ ನಾಗರಾಜ್ ಕಾರಣ. ಮಾತಿನಂತೆ ಮುಂದಿನಂತೆ ಬಾರಿ ಕಾಂಗ್ರೆಸ್‌ಗೆ … Continued

ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗೆ ಆದ್ಯತೆ

ಶಿವಮೊಗ್ಗ : ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದ್ದು, ಮುಂದಿನ ತಿಂಗಳ ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಈಕುರಿತು ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಬಜೆಟ್ ಸಂಬಂಧಿಸಿದಂತೆ ಹಲವು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಹಲವು ಮೂಲಗಳಿಂದ ಹಣಕಾಸಿನ ಸಂಗ್ರಹದ ಬಗ್ಗೆ ಮಾಹಿತಿ ಸಂಗರಹಿಸಿದ್ದೇನೆ. ಬಜೆಟ್ ನಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಮತ್ತು ರಾಜ್ಯದ ನೀರಾವರಿ … Continued

ಮಾ.೨ರಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದಿಂದ ಸತ್ಯಾಗ್ರಹ

ಬೆಂಗಳೂರು: ಸರ್ಕಾರ ವಿರುದ್ಧದ ಹೋರಾಟಕ್ಕೆ ಮತ್ತೆ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಮುಂದಾಗಿದ್ದು, ವಿವಿಧ ಬೇಡಿಕೆಗೆ ಆಗ್ರಹಿಸಿ ಮಾರ್ಚ್​ 2ರಂದು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದೆಧರಣಿಯ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ದು, ‘ಈ ಹಿಂದೆ ನಡೆಸಿದ ಧರಣಿ ವೇಳೆ ಸರ್ಕಾರ ಕೊಟ್ಟ ಭರವಸೆ ವಿಳಂಬವಾದ … Continued

ಮಾ.೧ರಿಂದ ಎರಡನೇ ಹಂತದ ಲಸಿಕೆಗೆ ಭಾರತ ಸಜ್ಜು

60 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ 45 ವರ್ಷ ಮೇಲ್ಪಟ್ಟ ಅನಾರೋಗ್ಯ ಹೊಂದಿರುವವರಿಗೆ ಮಾ.೧ರಿಂದ ಕೊರೊನಾ ಲಸಿಕೆ ನೀಡಲು ಭಾರತ ಸಜ್ಜಾಗುತ್ತಿದೆ. ಸೋಮವಾರದಿಂದ ನಡೆಯಲಿರುವ ಕೊರೊನಾ ಲಸಿಕೆ ನೋಂದಣಿ ನಾಳೆ ಬೆಳಗ್ಗೆ 9 ಗಂಟೆಯಿಂದ ಆರಂಭವಾಗಲಿದೆ. https://www.cowin.gov.in/home ಲಿಂಕ್​ ಮೂಲಕ ಕೋವಿನ್​ ಪೋರ್ಟಲ್​ನ್ನು ಪ್ರವೇಶಿಸಬಹುದಾಗಿದೆ.ಇ ಪೋರ್ಟಲ್​​ ಅಥವಾ ಆರೋಗ್ಯ ಸೇತು ಮುಂತಾದ ಅಪ್ಲಿಕೇಶನ್​ಗಳ ಮೂಲಕ ಸಾರ್ವಜನಿಕರು … Continued