ಖಾನಾಪುರ | ಕುಸಮಳಿ ಸನಿಹ ಮಲಪ್ರಭಾ ನದಿಯ ಸೇತುವೆ ಬಳಿ ಭೂ ಕುಸಿತ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆರಂಭವಾಗುತ್ತಿದ್ದಂತೆ ಭೂ ಕುಸಿತಗಳು ಕಂಡು ಬಂದಿವೆ. ಖಾನಾಪುರ ತಾಲೂಕು ಕುಸಮಳಿ ಬಳಿ ಮಲಪ್ರಭಾ ನದಿಗೆ ನಿರ್ಮಿಸಲಾದ ತಾತ್ಕಾಲಿಕ ಸೇತುವೆ ಬಳಿ ನೀರಿನ ಹರಿವು ಹೆಚ್ಚಿದೆ. ಇದರಿಂದ ಸೇತುವೆಯ ರಸ್ತೆಯ ಮೇಲೆ ಭೂಕುಸಿತ ಕಂಡು ಬಂದಿದೆ. ಹೀಗಾಗಿ ಭಾನುವಾರ ಸಂಜೆಯಿಂದ ಈ ಮಾರ್ಗವಾಗಿ ವಾಹನ ಸಂಚಾರವನ್ನು ತಡೆಹಿಡಿಯಲಾಗಿದೆ. ಬೆಳಗಾವಿ ಮತ್ತು … Continued

ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ

ಬೆಳಗಾವಿ : ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯ ದರೂರ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಲಕ್ಷ್ಮಣ ಸವದಿ ಅವರು ಅಥಣಿಯಿಂದ ಗೋಕಾಕ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರ ಕಾರಿಗೆ ಗೂಡ್ಸ್ ವಾಹನ … Continued

ವೀಡಿಯೊಗಳು | ಒಂದು ಅಡಿ ಉದ್ದದ ಚಾಕು ನುಂಗಿ ಒದ್ದಾಡಿದ ನಾಗರಹಾವು ; ಯಶಸ್ವಿಯಾಗಿ ಹೊರತೆಗೆದ ಪಶುವೈದ್ಯ-ಉರಗ ತಜ್ಞ ; ವೀಕ್ಷಿಸಿ

ಕುಮಟಾ: ನಾಗರಹಾವು ಇಲಿ, ಕೋಳಿ ಮೊಟ್ಟೆ, ಹಾಗೆಯೇ ಹಾವುಗಳನ್ನೇ ನುಂಗುವುದನ್ನು ಕೇಳಿದ್ದೇವೆ. ಆದರೆ ಚಾಕುವನ್ನೇ ತನ್ನ ಆಹಾರ ಎಂದು ಭ್ರಮಿಸಿ ನುಂಗಿದರೆ ಅದರ ಕತೆ ಏನಾಗಬಹುದು..? ಆದರೆ ಇಂಥದ್ದೇ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಡೆಯ ಗೋವಿಂದ ನಾಯ್ಕ ಎಂಬವರ ಮನೆಯಲ್ಲಿ ನಡೆದಿರುವುದು ವರದಿಯಾಗಿದೆ. ಚಾಕುವನ್ನು ನುಂಗಿದ ನಾಗರ ಹಾವು ಅದನ್ನು ಜೀರ್ಣಿಸಿಕೊಳ್ಳಲೂ … Continued

ಬೆಂಗಳೂರು : ಪ್ರಿಯತಮೆಯನ್ನು ಹೋಟೆಲಿಗೆ ಕರೆಯಿಸಿಕೊಂಡು ಬರ್ಬರ ಹತ್ಯೆ ; 17 ಬಾರಿ ಇರಿದ ಟೆಕ್ಕಿ…

ಬೆಂಗಳೂರು: ಘಟನೆ ನಡೆದು ಎರಡು ದಿನಗಳ ನಂತರ ಭಾನುವಾರ ನಗರದ ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿರುವ ಹೋಟೆಲ್ ಕೋಣೆಯೊಳಗೆ 36 ವರ್ಷದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ವರದಿಯ ಪ್ರಕಾರ, ಹರಿಣಿ (36) ಎಂದು ಗುರುತಿಸಲಾದ ಮಹಿಳೆಯನ್ನು ಗೆಳೆಯ 25 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಯಶಸ್ ಎಂಬಾತ 17 ಬಾರಿ ಇರಿದು ಕೊಂದ … Continued

ಬೆಂಗಳೂರು ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ನೀಡಿರುವ ಪರಿಹಾರದ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಿದ್ದ ಪರಿಹಾರ ಮೊತ್ತವನ್ನು 10 ಲಕ್ಷ ರೂ.ಗಳಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಜೂನ್ 4 ರಂದು ಐಪಿಎಲ್ 2025 ವಿಜೇತರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ತಂಡಕ್ಕೆ ಸನ್ಮಾನ ಸಮಾರಂಭದ ವೇಳೆ ಬೆಂಗಳೂರಿನ ಎಂ. … Continued

ಮಂಗಳೂರು | ಸೆಮಿನಾರ್ ತಪ್ಪಿಸಿಕೊಳ್ಳಲು ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಮಾಡಿ ಕೊನೆಗೂ ಸಿಕ್ಕಿಬಿದ್ದ ವೈದ್ಯಕೀಯ ವಿದ್ಯಾರ್ಥಿನಿ…!

 ಮಂಗಳೂರು : ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಬಾಂಬ್ ಬೆದರಿಕೆ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದ್ದು, ವಿಚಾರ ಸಂಕಿರಣವನ್ನು ತಪ್ಪಿಸಿಕೊಳ್ಳಲು ಹುಸಿ ಕರೆ ಮಾಡಿದ ಆರೋಪದ ಮೇಲೆ ಸ್ನಾತಕೋತ್ತರ (ಪಿಜಿ) ವೈದ್ಯಕೀಯ ವಿದ್ಯಾರ್ಥಿನಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಜೂನ್ 4 ರಂದು ಬೆಳಿಗ್ಗೆ 8:45 ರ ಸುಮಾರಿಗೆ ಆಸ್ಪತ್ರೆಯ ಆವರಣದಲ್ಲಿ ಬಾಂಬ್ ಇಡಲಾಗಿದೆ … Continued

ಬೆಂಗಳೂರು | ಪತ್ನಿಯ ಶಿರಚ್ಛೇದ ಮಾಡಿದ ಗಂಡ; ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದ…!

 ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ  ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ … Continued

ಕರ್ನಾಟಕದಲ್ಲಿ ಜೂನ್‌ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಮೇ 21 ರಿಂದ ಜೂನ್ 2 ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದೆ. ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ … Continued

ಬೆಂಗಳೂರು ಕಾಲ್ತುಳಿತದ ಘಟನೆ : ನೈತಿಕ ಹೊಣೆ ಹೊತ್ತು ಕೆಎಸ್‌ ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು :  ಬೆಂಗಳೂರಿನ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ ಮತ್ತು ಖಜಾಂಚಿ ಇ ಜೈರಾಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ. ಗುರುವಾರ ರಾತ್ರಿ ಕೆಎಸ್‌ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ … Continued

ಶಾಸಕ ವಿನಯ ಕುಲಕರ್ಣಿಗೆ ಸಂಕಷ್ಟ ; ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ (yogesh gowda Murder Case) ಬಂಧಿತರಾಗಿ ಜಾಮೀನಿನ ಮೇಲೆ ಹೊರಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ(Vinay Kulkarni) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್​ ವಿನಯ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿದೆ. ಹಾಗೂ ಒಂದು ವಾರದಲ್ಲಿ ಕೋರ್ಟ್ … Continued