ಧಾರವಾಡ; ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಧಾರವಾಡ : ಕೆರೆಗೆ ಈಜಲು ಹೋಗಿದ್ದ ಮೂವರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಸಿಂಗನಳ್ಳಿ ಗ್ರಾಮದ ಸಮೀಪದ ಕರೆಮ್ಮನ ಕೆರೆಯಲ್ಲಿ ಶನಿವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸಿಂಗನಳ್ಳಿ ಗ್ರಾಮದ ನಿವಾಸಿಗಳಾದ ಅನ್ವರ್ ಇಬ್ರಾಹಿಂ ವಟ್ನಾಳ (13), ಸುಭಾನಿ ಇಸಾಕ್ ಬಾಗಜಿಕೊಪ್ಪ (12) ಹಾಗೂ ಮೆಹಬೂಬ್ ಸುಭಾನಿ ದಾದಾಪೀರ್ ವಡ್ನಾಳ (15) … Continued

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ ಆಯ್ಕೆ : ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣ ವಚನ

ಬೆಂಗಳೂರು: ವಿಧಾನ ಸೌಧದಲ್ಲಿ ನಡೆದ  ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ಅಧಿಕೃತವಾಗಿ ನೂತನ ಸಿಎಲ್​ಪಿ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ, ಜೂನ್ 3 ರಂದು ಡಿ.ಕೆ. ಶಿವಕುಮಾರ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಉನ್ನತ … Continued

ಬೆಂಗಳೂರು ಶಾಲೆಯಲ್ಲಿ ಭಾರೀ ಅಗ್ನಿ ಅವಘಡ

ಬೆಂಗಳೂರು : ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ಸ್ಥಳೀಯ ಶಾಲಾ ಕಟ್ಟಡವೊಂದರಲ್ಲಿ ಇಂದು, ಶನಿವಾರ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಇದರಿಂದಾಗಿ ‘ಕೌಸಲ್ಯ ಶಾಲೆ’ಯ (Kousalya School) ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಕಟ್ಟಡದಿಂದ ದಟ್ಟವಾದ ಹೊಗೆ ಆಕಾಶಕ್ಕೆ ಮುಟ್ಟುವಂತೆ ಹರಡಿದೆ. ಶನಿವಾರ ಬೆಳಿಗ್ಗೆ 10:15 ರ ಸುಮಾರಿಗೆ ಶಾಲೆಯ 4ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ … Continued

ಅಂಕೋಲಾ : ಖಾಸಗಿ ಬಸ್‌ ಪಲ್ಟಿ ; ಓರ್ವ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಕಾರವಾರ: ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಖಾಸಗಿ ಸ್ಲೀಪರ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಓರ್ವ ಪ್ರಯಾಣಿಕ ಮೃತಪಟ್ಟು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಡ್ಲೂರು ಕಂಚಿನ ಬಾಗಿಲಿನ ಸಮೀಪ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತದ … Continued

ಚಡಚಣ | ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಬರ್ಬರ ಹತ್ಯೆ

ವಿಜಯಪುರ: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಘಟನೆ ಜಿಲ್ಲೆಯ ಚಡಚಣದ ಗೋವಿಂದಪುರದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಿರಾಳೆ ಕುಟುಂಬದವರ ಮೇಲೆ ದುಷ್ಕರ್ಮಿಗಳ ಗುಂಪು ಏಕಾಏಕಿ ದಾಳಿ ನಡೆಸಿ, ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದೆ. ಎರಡು ಕುಟುಂಬಗಳ … Continued

ನಾಳೆ (ಮೇ 30) ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ : ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ ಆಯ್ಕೆ ಬಹುತೇಕ ಖಚಿತ

ಬೆಂಗಳೂರು : ಇಲ್ಲಿನ ವಿಧಾನ ಸೌಧದಲ್ಲಿ ಶನಿವಾರ (ಮೇ 30) ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಿಗದಿಯಾಗಿದ್ದು, ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಶಿವಕುಮಾರ ಅವರನ್ನು ಹೆಸರಿಸಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ … Continued

ಡಿಕೆ ಶಿವಕುಮಾರ ಉತ್ತರಾಧಿಕಾರಿ ಯಾರು? ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಸತೀಶ ಜಾರಕಿಹೊಳಿ ಫ್ರಂಟ್‌ ರನ್ನರ್..?

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಹಠಾತ್ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಮಿಟಿ (KPCC)ಯ  ಪುನರ್ರಚನೆಗೆ ಹೈಕಮಾಂಡ್ ಮುಂದಾಗಿದೆ. ಡಿ.ಕೆ. ಶಿವಕುಮಾರ  ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗುತ್ತಿರುವುದರಿಂದ ಅವರಿಂದ ತೆರವಾಗಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನಕ್ಕೆ ಇದೀಗ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ … Continued

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರು ಇಂದು ಶುಕ್ರವಾರ ಅಂಗೀಕರಿಸಿದ್ದಾರೆ. ಬೇರೆ ವ್ಯವಸ್ಥೆ ಆಗುವವರೆಗೂ ಉಸ್ತುವಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ. ಅವರ … Continued

ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡಿಂಗ್‌

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಮುಂದಿನ ಉತ್ತರಾಧಿಕಾರಿ ಆಯ್ಕೆ ಹಾಗೂ ಸಂಪುಟ ರಚನೆ ಕುರಿತು ಚರ್ಚಿಸಲು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿದ್ದ ವಿಶೇಷ ವಿಮಾನವು ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ದೆಹಲಿ ಬದಲು ಜೈಪುರದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ಗುರುವಾರ ಈ ಕುರಿತು ಅಧಿಕೃತ ಮಾಹಿತಿ ನೀಡಿರುವ … Continued

ಬೆಳಗಾವಿ | ಎಸ್‌ಡಿಆರ್‌ಎಫ್‌ ಸಿಪಿಐ ಆತ್ಮಹತ್ಯೆ

ಬೆಳಗಾವಿ: ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್)ಯ ಸಿಪಿಐ ಶ್ರೀಶೈಲ ಚೌಗಲಾ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಚೌಗಲೆ ಅವರು ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ … Continued