ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ ; ನಟೋರಿಯಸ್‌ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡೇಟು

ಉಡುಪಿ : ಕೆಲವು ದಿನಗಳ ಹಿಂದೆ ಮಣಿಪಾಲ ಪೊಲೀಸರು ಹಾಗೂ ನೆಲಮಂಗಲದ ಪೊಲೀಸರಿಂದ ತಪ್ಪಿಸಿಕೊಂಡಿದ್ದ ನಟೋರಿಯಸ್‌ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡು ಹೊಡೆದ ಪೊಲೀಸರು ಆತನನ್ನು ಹೆಡೆಮುರಿ ಕಟ್ಟಿದ್ದಾರೆ. ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಇಸಾಕ್ ಹಿರಿಯಡ್ಕದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ … Continued

ಭೂಸ್ವಾಧೀನ ಪರಿಹಾರ ನೀಡದ ಆಡಳಿತ ; ಹಾವೇರಿ ಜಿಲ್ಲಾಧಿಕಾರಿ ಕಾರು ಜಪ್ತಿ

ಹಾವೇರಿ: ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ನಂತರ ಹಾವೇರಿ ಜಿಲ್ಲಾಧಿಕಾರಿಗಳ ಕಾರನ್ನೇ ಜಪ್ತಿ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ರುದ್ರಪ್ಪ ಬಸಪ್ಪ ಗುತ್ತಲ ಎಂಬವರ ಜಮೀನನ್ನು 1970ರಲ್ಲಿ ಸರ್ಕಾರದಿಂದ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲಾಧಿಕಾರಿಗಳು 2 ಎಕರೆ 29 ಗುಂಟೆ ಜಮೀನು ಭೂಸ್ವಾಧೀನಪಡಿಸಿಕೊಂಡು ಬಳಿಕ ಸಣ್ಣ ನೀರಾವರಿ ಇಲಾಖೆಗೆ … Continued

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ : ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು : ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ಅಧಿಕೃತ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಬಗ್ಗೆ ಸಿಐಡಿ ತನಿಖೆಗೆ ಸೂಚಿಸಿದ ಒಂದು ದಿನದ ನಂತರ, ರಾಜ್ಯ ಸರ್ಕಾರ ಬುಧವಾರ ತನ್ನ ಆದೇಶವನ್ನು ಹಿಂಪಡೆದಿದೆ. ಮಂಗಳವಾರ, ನಟಿ ರನ್ಯಾ ರಾವ್ ಬಂಧನದ ನಂತರ, ಅಧಿಕೃತ ಪ್ರೋಟೋಕಾಲ್ ಮತ್ತು ಸವಲತ್ತುಗಳ ದುರುಪಯೋಗದಲ್ಲಿ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದಾರೆಯೇ ಎಂಬ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಆದೇಶ ಮಾರ್ಚ್‌ 14ಕ್ಕೆ ಪ್ರಕಟ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್‌ 14ಕ್ಕೆ ಪ್ರಕಟಿಸುವುದಾಗಿ ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಬುಧವಾರ ಹೇಳಿದೆ. ನಟಿ ರನ್ಯಾ ರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಅವರು ನಡೆಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ … Continued

ತಂದೆ-ತಾಯಿ, ಹಿರಿಯರ ಆರೈಕೆ ಮಾಡದೇ ಇದ್ರೆ ಅವರ ಆಸ್ತಿಯಲ್ಲಿ ಪಾಲಿಲ್ಲ : ಕೃಷ್ಣ ಬೈರೇಗೌಡ

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ಅಂತಹ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್ ಅಥವಾ ದಾನ ಪತ್ರವನ್ನು (Will, Gift Deed) ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ ”ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007′ ನೀಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. … Continued

ಬೆಂಗಳೂರಿನಲ್ಲಿ ಸ್ಥಳೀಯ ಕ್ರಿಕೆಟ್‌ ಆಡುವಾಗ ರಾಹುಲ್‌ ದ್ರಾವಿಡಗೆ ಗಾಯ….!

ಫೆಬ್ರವರಿಯಲ್ಲಿ ನಸ್ಸೂರ್ ಸ್ಮಾರಕ ಶೀಲ್ಡ್‌ಗಾಗಿ ಮೂರನೇ ಡಿವಿಷನ್ (ಗುಂಪು I) ಪಂದ್ಯದಲ್ಲಿ ವಿಜಯಾ ಕ್ರಿಕೆಟ್ ಕ್ಲಬ್(ಮಾಲೂರು)ಗಾಗಿ ಸ್ಥಳೀಯ ಕ್ರಿಕೆಟ್ ಪಂದ್ಯ ಆಡುವಾಗ ರಾಜಸ್ಥಾನ ರಾಯಲ್ಸ್ (RR) ಕೋಚ್ ರಾಹುಲ್ ದ್ರಾವಿಡ್ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಫ್ರಾಂಚೈಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ನೊಂದಿಗೆ ಸುದ್ದಿಯನ್ನು ಬಹಿರಂಗಪಡಿಸಿದೆ. ಅಲ್ಲಿ ಅವರು ಬುಧವಾರ ಜೈಪುರದಲ್ಲಿ ತಮ್ಮ ಪೂರ್ವ ಐಪಿಎಲ್ 2025ರ ಸೀಸನ್ … Continued

ಕರ್ನಾಟಕದಲ್ಲೇ ಅತಿ ಹೆಚ್ಚು 42.9°C ಉಷ್ಣಾಂಶ ಉತ್ತರ ಕನ್ನಡದಲ್ಲಿ ದಾಖಲು…! ಕರಾವಳಿಯ 27 ಕಡೆ 38°Cಗಿಂತ ಹೆಚ್ಚು ತಾಪಮಾನ…!!

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗ ತಾಪಮಾನ ಹೆಚ್ಚಳದಿಂದ ಬಿಸಿ ಕೆಂಡವಾಗಿ ಮಾರ್ಪಟ್ಟಿದೆ. ಕರಾವಳಿ ಭಾಗದ ಅನೇಕ ಪ್ರದೇಶಗಳಲ್ಲಿ ತಾಪಮಾನ ಬುಧವಾರ ತಾಪಮಾನ 1.6°C ನಿಂದ 3.0°Cರಷ್ಟು ಹೆಚ್ಚಳವಾಗಿದೆ. ಬುಧವಾರ (ಮಾರ್ಚ್ 12) ಬೆಳಿಗ್ಗೆ 8:30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಾವಂತವಾಡ ಹೋಬಳಿಯಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಅಂದರೆ ಗರಿಷ್ಠ 42.9 … Continued

ಬೆಂಗಳೂರಿನ ಹಲವೆಡೆ ಮಳೆ

ಬೆಂಗಳೂರು: ಬಿಸಿಲ ಧಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಕೊನೆಗೂ ಮಳೆಯಾಗಿದ್ದು, ಮಂಗಳವಾರ ಸಂಜೆ ಮಳೆ ಸುರಿದಿದೆ. ಮಾರ್ಚ್ ತಿಂಗಳ ಮೊದಲ ಮಳೆಯಾಗಿದ್ದು, ನಗರದ ತಾಪಮಾನ ಇಳಿಕೆಯಾಗಿದೆ. ಮಂಗಳವಾರ ಸಂಜೆ 6 ಗಂಟೆ ಹೊತ್ತಿಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಕಾರ್ಪೊರೇಷನ್, ರಿಚ್ಮಂಡ್​ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್​, ಹಲಸೂರು, ಇಂದಿರಾನಗರ, ಬನಶಂಕರಿ, ಜಯನಗ ಸೇರಿದಂತೆ ಹಲವೆಡೆ ಮಳೆಯಾಗಿದೆ. … Continued

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಅಕ್ರಮದ ತನಿಖೆ ವೇಳೆ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ವಕೀಲೆ ಜೀವಾ ತನ್ನ ಆತ್ಮಹತ್ಯೆಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ರಾಜ್ಯ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ … Continued

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ ; ಸರ್ಪ ಸಂಸ್ಕಾರ ಸೇವೆ

ಮಂಗಳೂರು : ಖ್ಯಾತ ಬಾಲಿವುಡ್ ನಟಿ ಕತ್ರಿನಾ ಕೈಫ್ ಮಂಗಳವಾರ (ಮಾರ್ಚ್‌ 11) ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ಕ್ಷೇತ್ರದಲ್ಲಿ ನಡೆಯುವ ಪ್ರಮುಖ ಸರ್ಪಸಂಸ್ಕಾರ ಸೇವೆಯನ್ನು ನೆರವೇರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಅವರು ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಆಶ್ಲೇಷ ನಕ್ಷತ್ರದ ದಿನವಾದ ಮಂಗಳವಾರ ಬೆಳಗ್ಗೆ ಕ್ಷೇತ್ರದ ಆದಿ … Continued