2022ರ ಆದೇಶ ಹಿಂಪಡೆದ ಸರ್ಕಾರ ; ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ

ಬೆಂಗಳೂರು: ಕರ್ನಾಟಕ ಸರ್ಕಾರವು ಫೆಬ್ರವರಿ 2022 ರಲ್ಲಿ ಶಾಲಾ ಸಮವಸ್ತ್ರಗಳ ಕುರಿತು ತನ್ನ ಆದೇಶವನ್ನು ಹಿಂತೆಗೆದುಕೊಂಡಿದೆ ಮತ್ತು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಗದಿತ ಸಮವಸ್ತ್ರಗಳ ಜೊತೆಗೆ ಸಾಂಪ್ರದಾಯಿಕ ಮತ್ತು ಧರ್ಮ ಆಧಾರಿತ ಚಿಹ್ನೆಗಳನ್ನು ಸೀಮಿತ ಶ್ರೇಣಿಯಲ್ಲಿ ಧರಿಸಲು ವಿದ್ಯಾರ್ಥಿಗಳಿಗೆ ಅನುಮತಿ ನೀಡುವ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸರ್ಕಾರದ … Continued

ಹೊನ್ನಾವರ : ಯಕ್ಷಗಾನದ ಖ್ಯಾತ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಇನ್ನಿಲ್ಲ

ಹೊನ್ನಾವರ : ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಬಡಗುತಿಟ್ಟು ಯಕ್ಷಗಾನದ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದ ಕಪ್ಪೆಕೆರೆ ಸುಬ್ರಾಯ  ಹೆಗಡೆ (79) ಬುಧವಾರ (ಮೇ 13) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.  ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. 1947೭ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ … Continued

ಯಕ್ಷಗಾನ ಭರತನ ನಾಟ್ಯಶಾಸ್ತ್ರದ ಜೀವಂತ ಪ್ರಯೋಗ ; ಶುದ್ಧ ಯಕ್ಷಗಾನವು ಭಾರತೀಯ ಸಾಂಸ್ಕೃತಿಕತೆಯ ಸಾರ ; ಅಶೋಕ ಹಾಸ್ಯಗಾರ

ಬೆಂಗಳೂರು : ಯಕ್ಷಗಾನವು ಭರತಮುನಿಯ ನಾಟ್ಯಶಾಸ್ತ್ರದ ಜೀವಂತ ಪ್ರಯೋಗವಾದುದರಿಂದ ಇದು ಭಾರತೀಯ ಸಾಂಸ್ಕೃತಿಕತೆಯ ಉನ್ನತ ಪ್ರದರ್ಶನವಾಗಿದೆ ಎಂದು ಸಂಶೋಧಕ ಹಾಗೂ ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ ಅಭಿಪ್ರಾಯಪಟ್ಟರು. ಅವರು ಇಲ್ಲಿಯ ಕೋರಮಂಗಲದ ಇಂಡಿಯನ್ ಹೆರಿಟೇಜ್ ಅಕಾಡೆಮಿಯು ಮೇ ೮, ೨೦೨೬ ರಂದು ಕಶ್ಯಪ ಸಭಾಂಗಣದಲ್ಲಿ ಏರ್ಪಡಿಸಿದ್ದ “ಭಾರತೀಯ ಸಾಂಸ್ಕೃತಿಕತೆ, ನಾಟ್ಯಶಾಸ್ತ್ರ ಮತ್ತು ಯಕ್ಷಗಾನ” ಎಂಬ ವಿಷಯದ … Continued

ಕನ್ನಡ ಸಿನೆಮಾ-ಕಿರುತೆರೆಯ ಖ್ಯಾತ ನಟ ದಿಲೀಪ ರಾಜ ನಿಧನ

ಬೆಂಗಳೂರು : ಕನ್ನಡ ಸಿನೆಮಾ ಹಾಗೂ ಕಿರುತೆರೆಯ ಖ್ಯಾತ ನಟ, ನಿರ್ಮಾಪಕ, ಕಂಠದಾನ ಕಲಾವಿದ ದಿಲೀಪ ರಾಜ (48) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಯಕ ನಟ, ಪೋಷಕ ನಟ, ನಿರ್ಮಾಪಕ ಹೀಗೆ ವಿವಿಧ ರಂಗಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸಿನೆಮಾ ಹಾಗೂ ಕಿರುತೆರೆ ಎರಡರಲ್ಲೂ ತೊಡಗಿಸಿಕೊಂಡಿದ್ದರು. ರಾತ್ರಿ ಮಲಗಿದ್ದ ದಿಲೀಪರಾಜ ((Dilip Raj) ಅವರಿಗೆ ಹೃದಯಾಘಾತವಾಗಿದೆ. ತಕ್ಷಣ … Continued

ಕರ್ನಾಟಕದಲ್ಲಿ ಹೊಸದಾಗಿ 1243 ಹೊಸ ಇವಿ ಚಾರ್ಜಿಂಗ್‌ ಸ್ಟೇಷನ್‌ ಸ್ಥಾಪನೆ : ಎಚ್‌.ಡಿ. ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ದೇಶದ ಆಟೋಮೊಬೈಲ್ ವಲಯವನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕಗೊಳಿಸಲು ಮತ್ತು ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ವಿವಿಧ ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನ (EV) ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿಗಾಗಿ ಒಟ್ಟು ₹503.86 ಕೋಟಿ ಮೌಲ್ಯದ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಲ್ಲಿ ಕರ್ನಾಟಕಕ್ಕೆ ₹123.26 ಕೋಟಿ ಹಂಚಿಕೆಯಾಗಿದೆ ಎಂದು ಕೇಂದ್ರ … Continued

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಮಂಗಳವಾರ ಸಿಹಿ ಸುದ್ದಿ ನೀಡಿದ್ದು, ಕೆಎಸ್‌ಆರ್‌ಟಿಸಿ ಸೇರಿ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ನೌಕರರು, ಅಧಿಕಾರಿಗಳ ವೇತನ ಶೇಕಡಾ 12.5 ರಷ್ಟು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ … Continued

ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ

ಬೆಂಗಳೂರು :  ಕರ್ನಾಟಕ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಮತ್ತು ವಿತರಣೆಗೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್‌ಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಗ್ರಾಹಕರ ಹಿತದೃಷ್ಟಿಯಿಂದ ಹಾಗೂ ಸುರಕ್ಷತೆಯ ಕಾರಣಗಳಿಗಾಗಿ ನಿಯಂತ್ರಿತ ಇಂಧನ ವಿತರಣಾ ಪದ್ಧತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಇಲಾಖೆ ಎಲ್ಲಾ ಇಂಧನ ಕೇಂದ್ರಗಳಿಗೆ ನಿರ್ದೇಶನ ನೀಡಿದೆ ಮಾರ್ಗಸೂಚಿಯ ಪ್ರಕಾರ, … Continued

ಗೋವಾ ಕರಾವಳಿಯಲ್ಲಿ ಕಾರವಾರದ ಬೋಟ್ ಮುಳುಗಡೆ : 22 ಮೀನುಗಾರರ ರಕ್ಷಣೆ

ಬೆತುಲ್ (ಗೋವಾ): ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಪರ್ಶಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾದ ಬೆತುಲ್ ಕರಾವಳಿ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 22 ಮೀನುಗಾರರನ್ನು ಹತ್ತಿರದಲ್ಲಿದ್ದ ಇತರ ಮೀನುಗಾರರು ರಕ್ಷಿಸಿದ್ದು, ಭಾರಿ ದುರಂತವೊಂದು ತಪ್ಪಿದಂತಾಗಿದೆ. ಕಾರವಾರದ ಮುದಗಾ ನಿವಾಸಿ ದಿನೇಶ ಕಾಂಚನ್ ಎಂಬವರಿಗೆ ಸೇರಿದ “ಶ್ರೀ ಅಮ್ಮ” ಹೆಸರಿನ ಬೋಟ್ ಸುಮಾರು … Continued

ಬೆಂಗಳೂರು : ಶೆಡ್‌ಗೆ ಬೆಂಕಿ ತಗುಲಿ ಇಬ್ಬರು ಮಕ್ಕಳು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ ಮನಕಲಕುವ ದುರಂತವೊಂದು ಸಂಭವಿಸಿದ್ದು, ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪುರದಲ್ಲಿ ಕೂಲಿ ಕಾರ್ಮಿಕರು ವಾಸವಿದ್ದ ತಾತ್ಕಾಲಿಕ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸಜೀವ ದಹನವಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಗ್ನಿ ಅವಘಡದಲ್ಲಿ ಮೃತಪಟ್ಟ ಮಕ್ಕಳನ್ನು ಐದು ವರ್ಷದ ಅರ್ಜುನ್ ಮತ್ತು ಮೂರು ವರ್ಷದ … Continued

ಮರು ಎಣಿಕೆ’ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ

ನವದೆಹಲಿ: ಕರ್ನಾಟಕದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮರು ಎಣಿಕೆಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದೆ. ಹಾಗೂ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಲು ಸೂಚಿಸಿದೆ. 2023ರ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುಮಾರು … Continued