ಬೈಂದೂರು : ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿ ; ಇಬ್ಬರು ಸಾವು, ಹಲವರಿಗೆ ಗಾಯ

ಉಡುಪಿ:  ಟ್ಯಾಂಕರ್‌ ಹಾಗೂ ಪ್ರವಾಸಿ ಬಸ್‌ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ (Udupi Bus Accident) ಬೈಂದೂರು ತಾಲೂಕಿನ ತ್ರಾಸಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಅತಿ ವೇಗದಲ್ಲಿ ಬಂದ ಬಸ್ ಡಿಕ್ಕಿ ಹೊಡೆದಿದ್ದು, … Continued

ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ರಾಜ್ಯದ ಕರಾವಳಿ ಕರ್ನಾಟಕದ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ ಮೇ 1ರ ವರೆಗೆ ಗುಡುಗು, … Continued

ಬೆಂಗಳೂರು: ಬಾಡಿಗೆ ಮನೆಯಲ್ಲಿ ರಕ್ತದ ಮಡುವಿನಲ್ಲಿ ಯುವತಿಯ ನಗ್ನ ಶವ ಪತ್ತೆ

ಬೆಂಗಳೂರು: ಸಿಲಿಕಾನ್ ಸಿಟಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ 34 ವರ್ಷದ ಯುವತಿಯೊಬ್ಬಳು ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಜಾರ್ಖಂಡ್‌ನ ಧನ್‌ಬಾದ್ ಮೂಲದ ಪೂಜಾ ದತ್ತಾ ಎಂದು ಗುರುತಿಸಲಾಗಿದೆ. ಪೂಜಾ ದತ್ತಾ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಕಳೆದ ಮೂರು ವರ್ಷಗಳಿಂದ ಇವರು ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ಒಬ್ಬರೇ … Continued

ಇನ್ಮುಂದೆ ರಾಜ್ಯದ ಶಾಲೆಗಳಲ್ಲಿ ಪ್ರತಿನಿತ್ಯ 10-15 ನಿಮಿಷ ದಿನ ಪತ್ರಿಕೆ ಓದುವುದು ಕಡ್ಡಾಯ

ಬೆಂಗಳೂರು: ಮಕ್ಕಳಲ್ಲಿ ಹೆಚ್ಚುತ್ತಿರುವ ಡಿಜಿಟಲ್ ವ್ಯಸನವನ್ನು ನಿಯಂತ್ರಿಸಲು ಶಿಕ್ಷಣ ಇಲಾಖೆ ಹೊಸ ಕ್ರಮ ಕೈಗೊಂಡಿದ್ದು, ಇನ್ಮುಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದೆ. ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್ ಫೋನ್, ಸಾಮಾಜಿಕ ಜಾಲತಾಣಗಳು ಮತ್ತು ಇಂಟರ್ನೆಟ್ ವ್ಯಸನಕ್ಕೆ ತುತ್ತಾಗುತ್ತಿರುವುದನ್ನು ಗಮನಿಸಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ … Continued

ಮಂಗಳೂರು ಕುಕ್ಕರ್ ಬಾಂಬ್‌ ಸ್ಫೋಟ ಪ್ರಕರಣ : ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಮಂಗಳೂರಿನಲ್ಲಿ ನಡೆದಿದ್ದ  ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ  ರಾಷ್ಟ್ರೀಯ ತನಿಖಾ ದಳದ (NIA) ವಿಶೇಷ ನ್ಯಾಯಾಲಯವು10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನವೆಂಬರ್ 19, 2022 ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ತನಿಖಾ ಸಂಸ್ಥೆಗಳ ಪ್ರಕಾರ, ಶಾರಿಕ್ ಮಂಗಳೂರಿನ … Continued

ಮಡಿಕೇರಿ: ತಲೆಗೆ ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ: ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಶಿಕ್ಷಕಿಯನ್ನು ಚೇರಂಬಾಣೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ. ರೋಹಿಣಿ(51) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ … Continued

ಬೆಳಗಾವಿ ; ವಕೀಲೆ ಮನೆ ಮೇಲೆ ಗುಂಡಿನ ದಾಳಿ

ಬೆಳಗಾವಿ: ನಗರದ ಮಾಂಡೋಳಿ ರಸ್ತೆಯಲ್ಲಿರುವ ವಕೀಲೆ ಪೂಜಾ ಕಾಕತಕರ ಅವರ ಮನೆಯ ಮೇಲೆ ತಡರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆದಿರುವುದು ವರದಿಯಾಗಿದೆ. ಕಳೆದ 18 ವರ್ಷಗಳಿಂದ ಹೈ-ಪ್ರೊಫೈಲ್ ಕೇಸ್‌ಗಳ ಪರ ವಾದ ಮಂಡಿಸುತ್ತಿರುವ ಪೂಜಾ ಕಾಕತಕರ ಅವರ ನಿವಾಸವನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ಮಧ್ಯರಾತ್ರಿ ವೇಳೆ ಕಿಡಿಗೇಡಿಗಳು ಮನೆಯ ಮೊದಲ ಮಹಡಿಗೆ ಗುಂಡು ಹಾರಿಸಿದ್ದಾರೆ. … Continued

ಮೈಸೂರು: ಕುಡಿತದ ಚಟ, ಕಿರುಕುಳಕ್ಕೆ ಬೇಸತ್ತು ಮಗನನ್ನೇ ಸಾಯಿಸಿದ ವೃದ್ಧೆ

 ಮೈಸೂರು:  ತಾಯಿಯೊಬ್ಬಳು ತನ್ನ ಮಗನ ಅತಿಯಾದ ಕುಡಿತದ ಚಟ ಮತ್ತು ಆತ ನೀಡುತ್ತಿದ್ದ ನಿರಂತರ ಕಿರುಕುಳ ತಾಳಲಾರದೆ ಆತನನ್ನೇ ಸಾಯಿಸಿದ ಘಟನೆ ವರದಿಯಾಗಿದೆ. ಪೊಲೀಸರು ಈ ಭೀಕರ ಕೊಲೆ ಪ್ರಕರಣವನ್ನು ಭೇದಿಸಿದ್ದು, 61 ವರ್ಷದ ಮಂಜುಳ ಎಂಬಾಕೆಯನ್ನು ಬಂಧಿಸಿದ್ದಾರೆ. ಕೇಸರೆಯ ಕುರಿಮಂಡಿ ನಿವಾಸಿ ರಮೇಶ (44) ಕೊಲೆಯಾದವ ಎಂದು ಗುರುತಿಸಲಾಗಿದೆ. ಏಪ್ರಿಲ್ 15ರಂದು ಚಾಮುಂಡಿ ಬೆಟ್ಟದ … Continued

ಯೋಗೀಶ್‌ ಗೌಡ ಕೊಲೆ ಪ್ರಕರಣ : ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ವಿನಯ ಕುಲಕರ್ಣಿ

ಬೆಂಗಳೂರು : ಧಾರವಾಡ ಜಿಲ್ಲೆಯ ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಶುಕ್ರವಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜೀವಾವಧಿ ಶಿಕ್ಷೆ ವಿಧಿಸಿರುವ ತೀರ್ಪನ್ನು ಬದಿಗೆ ಸರಿಸಬೇಕು ಎಂದು ಕೋರಿ ವಿನಯ ಕುಲಕರ್ಣಿ ಅರ್ಜಿ ಸಲ್ಲಿಸಿದ್ದು, … Continued

ಮುಂಡಗೋಡ ; ಹೊಟೇಲ್‌ ಒಳಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ

ಕಾರವಾರ: ಸ್ನೇಹಿತನೊಂದಿಗೆ ಊಟಕ್ಕಾಗಿ ಹೋಟೆಲ್‌ಗೆ ಬಂದಿದ್ದಾಗ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಅತ್ಯಂತ ಭೀಕರವಾಗಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಹೋಟೆಲ್‌ ಒಂದರಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮುಂಡಗೋಡು ಬಸ್ ನಿಲ್ದಾಣದ ಎದುರಿಗಿರುವ ಹೋಟೆಲ್‌ನಲ್ಲಿ ಈ ಕೃತ್ಯ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜಮೀರ್ ಅಹಮದ್ ದರ್ಗಾವಾಲೆ (39) … Continued