ಎಸ್‌ಎಸ್‌ಎಲ್‌ಸಿ | ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದ್ದು, ಆದೇಶ ಮರುಪರಿಶೀಲಿಸಲು ನಿರಾಕರಿಸಿದೆ. ಹೈಕೋರ್ಟ್‌ ಆದೇಶದ ಮರುಪರಿಶೀಲನೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ಸಂಬಂಧ ಕೆಲವು ಮಾರ್ಪಾಡು … Continued

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಿನಲ್ಲಿ ಚೀನಾದ ‘ಕ್ಷಿಪಣಿ ತಯಾರಿಕೆ ರಾಸಾಯನಿಕ’? ನಿಕ್ಕಿ ಹ್ಯಾಲೆ ಸ್ಫೋಟಕ ಆರೋಪ

ವಾಷಿಂಗ್ಟನ್: ಇರಾನ್ ಮೇಲಿನ ನೌಕಾ ದಿಗ್ಬಂಧನದ ನಡುವೆ ಇತ್ತೀಚೆಗೆ ಅಮೆರಿಕ ವಶಪಡಿಸಿಕೊಂಡ ಹಡಗು ಚೀನಾದಿಂದ ಇರಾನ್‌ಗೆ ಕ್ಷಿಪಣಿ ತಯಾರಿಕೆಗೆ ಬೇಕಾದ ರಾಸಾಯನಿಕಗಳನ್ನು ಸಾಗಿಸುತ್ತಿತ್ತು ಎಂದು ಅಮೆರಿಕದ ರಿಪಬ್ಲಿಕನ್ ಪಕ್ಷದ ನಾಯಕಿ ನಿಕ್ಕಿ ಹ್ಯಾಲೆ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ (ಟ್ವಿಟರ್) ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ವಶಪಡಿಸಿಕೊಂಡ ಹಡಗು ಚೀನಾದಿಂದ ಇರಾನ್‌ಗೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ; ಕೆಲವಡೆ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ (Karnataka Weather)  ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂಬರುವ ದಿನಗಳಲ್ಲಿ  ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ … Continued

ಶಿರಸಿ : ಆಯುರ್ವೇದ ವೈದ್ಯನ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು ; ಚಿನ್ನದ ಆಸೆಗೆ ಪರಿಚಯಸ್ಥನಿಂದಲೇ ಕೊಲೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ(sirsi) ಕೆ.ಹೆಚ್.ಬಿ ಕಾಲೋನಿಯಲ್ಲಿ ಮದುವೆ ಸಿದ್ಧತೆಯಲ್ಲಿದ್ದ ವೈದ್ಯರನ್ನು ಹತ್ಯೆ ಮಾಡಿದ ಆರೋಪಿಯನ್ನು ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಬಂಗಾರದ ಸಮೇತ ಬಂಧಿಸಿದ್ದಾರೆ. ಡಾ. ರಮೇಶ್ ಕಲಗುಟಕರ (51) ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಮಂಜುನಾಥ ಪಿ.ಎಲ್‌. (70) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. … Continued

4 ಗಂಟೆ ಆಕಾಶದಲ್ಲೇ ಸುತ್ತಾಡಿದ ಹೈದರಾಬಾದ್-‌ ಹುಬ್ಬಳ್ಳಿ ವಿಮಾನ ; ಪ್ರಯಾಣಿಕರ ಆಕ್ರಂದನ, ಪ್ರಾರ್ಥನೆ….

ಬೆಂಗಳೂರು: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ ವಿಮಾನವೊಂದು ಹವಾಮಾನ ವೈಪರೀತ್ಯಕ್ಕೆ ಸಿಲುಕಿ, ಸುಮಾರು ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಸುದೀರ್ಘ ಹಾರಾಟ ನಡೆಸಿದ ಆತಂಕಕಾರಿ ಘಟನೆ ನಡೆದಿದೆ. ವಿಮಾನವು ತೀವ್ರವಾಗಿ ಅಲುಗಾಡತೊಡಗಿದಾಗ ಪ್ರಯಾಣಿಕರು ಪ್ರಾಣಭಯದಿಂದ ಕೂಗಿಕೊಂಡ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಫ್ಲೈ-91 (Fly91) ಸಂಸ್ಥೆಗೆ ಸೇರಿದ IC3401 ವಿಮಾನವು ಭಾನುವಾರ (ಏ.19) ಮಧ್ಯಾಹ್ನ 3 … Continued

ಕಾಂಗ್ರೆಸ್ ಶಾಸಕ ಹ್ಯಾರಿಸ್ ಮನೆ ಸೇರಿ 17 ಕಡೆ ಇ.ಡಿ. ದಾಳಿ

ಬೆಂಗಳೂರು:  ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್‌ ಅವರಿಗೆ ಇ.ಡಿ (E.D) ಶಾಕ್ ನೀಡಿದ್ದು, ಅವರ ನಿವಾಸ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಬೆಂಗಳೂರಿನ ಗರುಡಾ ಮಾಲ್ ಹಿಂಭಾಗದಲ್ಲಿರುವ ಹ್ಯಾರಿಸ್ ಅವರ ಮನೆ ಸೇರಿದಂತೆ 17 ಕಡೆಗಳಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಹ್ಯಾರಿಸ್ ಪುತ್ರ ಮೊಹಮ್ಮದ್ … Continued

ಶಿರಸಿ : ಆಯುರ್ವೇದ ವೈದ್ಯನ ಕೊಲೆ

ಶಿರಸಿ:  ಆಯುರ್ವೇದ  ವೈದ್ಯರೊಬ್ಬರ ತಲೆಗೆ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಎಚ್.ಬಿ. ಕಾಲೋನಿಯ ಮನೆಯೊಂದರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಾಲಿ ಶಿರಸಿ ನಗರದ ಕೆ.ಎಚ್.ಬಿ ಕಾಲೋನಿ ನಿವಾಸಿಯಾಗಿರುವ ರಮೇಶ ಕಲಘುಟಕರ್ (51) ಕೊಲೆಯಾದ ಆಯುರ್ವೇದ ವೈದ್ಯ ಎಂದುಗುರುತಿಸಲಾಗಿದೆ. ಶನಿವಾರ … Continued

ಕಾರವಾರ ಶಾಸಕ ಸತೀಶ ಸೈಲ್‌ ಪುತ್ರಿಗೆ ಒಲಿದ ಫೆಮಿನಾ ಮಿಸ್‌ ಇಂಡಿಯಾ-2026ರ ಕಿರೀಟ

ಭುವನೇಶ್ವರ : ಇಲ್ಲಿನ ಕಳಿಂಗಾ ಇನ್ಸ್‌ಟಿಟ್ಯೂಟ್‌ ಆಫ್‌ ಇಂಡಸ್ಟ್ರೀಯಲ್‌ ಟೆಕ್ನಾಲಜಿ (ಕೆಐಐಟಿ) ಕ್ಯಾಂಪಸ್‌ನಲ್ಲಿ ನಡೆದ ಫೆಮಿನಾ ಮಿಸ್‌ ಇಂಡಿಯಾ 2026 ಗ್ರ್ಯಾಂಡ್‌ ಫಿನಾಲೆಯಲ್ಲಿ ಸಾಧ್ವಿ ಸತೀಶ್‌ ಸೈಲ್‌ ವಿಜೇತರಾಗಿದ್ದಾರೆ. ಇವರು ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕರಾದ ಸತೀಶ ಸೈಲ್‌ ಅವರ ಪುತ್ರಿ. ಮಹಾರಾಷ್ಟ್ರದ ರಾಜನಂದಿನಿ ಪವಾರ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಶ್ರೀ … Continued

ಯಲ್ಲಾಪುರ : ಅರೆಬೈಲ್ ಘಟ್ಟದಲ್ಲಿ ಚಾಲಕನ ಸಮೇತ ಕಾರು ಸುಟ್ಟುಹೋದ ಪ್ರಕರಣ ; ಮೂವರ ಬಂಧನ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರಿನ ಸಮೇತ ಚಾಲಕ ಸುಟ್ಟುಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ವ್ಯಕ್ತಿಯನ್ನು ಕೊಲೆ ಮಾಡಿ, ನಂತರ ಕೃತ್ಯವನ್ನು ಮುಚ್ಚಿಹಾಕಲು ಅರೆಬೈಲ್‌ ಘಟ್ಟದಲ್ಲಿ ಕಾರು ಸಮೇತ ವ್ಯಕ್ತಿಯನ್ನು ಸುಟ್ಟು ಹಾಕಿ ಇದನ್ನು ರಸ್ತೆ ಅಪಘಾತ ಎಂದು ಬಿಂಬಿಸಲು … Continued

ಕರ್ನಾಟಕಕ್ಕೆ ಬಿಸಿ ಗಾಳಿಯ ಆತಂಕ : ತಾಪಮಾನ 45 ಡಿಗ್ರಿ ತಲುಪುವ ಸಾಧ್ಯತೆ, ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನದ ಬೇಗೆ ಮಿತಿಮೀರಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನದಲ್ಲಿ ಭಾರೀ ಏರಿಕೆಯಾಗಿದ್ದು, ಜನಜೀವನ ತತ್ತರಿಸಿದೆ. ಮುಂದಿನ ಎರಡು ದಿನಗಳಲ್ಲಿ ಬಿಸಿಗಾಳಿ (Heatwave) ಮತ್ತಷ್ಟು ತೀವ್ರಗೊಳ್ಳಲಿದ್ದು, ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ  ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಸದ್ಯ ತೀವ್ರ ಸೆಖೆ ಆವರಿಸಿದೆ. ಮುಂಬರುವ … Continued