ಮಗಳ ಬಗ್ಗೆ ಅಪಪ್ರಚಾರ : ತಮ್ಮನನ್ನೇ ಕೊಲೆಗೈದ ಅಣ್ಣ

ಬೆಳಗಾವಿ: ಮೂಡಲಗಿ ತಾಲೂಕು ಕಲ್ಲೋಳಿ ಗ್ರಾಮದಲ್ಲಿ ತಮ್ಮನನ್ನು ಸ್ವತಃ ಅಣ್ಣನೆ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದವನನ್ನು ವಿಠಲ್ ಚವಾಣ ಎಂದು ಗುರುತಿಸಲಾಗಿದೆ. ಭೀಮಪ್ಪ ಚವಾಣ ಕೊಲೆ ಮಾಡಿರುವ ಆರೋಪಿ. ಅಣ್ಣ ಭೀಮಪ್ಪನ ಮಗಳು ಪಕ್ಕದ ಊರಿನ ಯುವಕನನ್ನು ಪ್ರೀತಿಸಿದ್ದಳು. ಆತ ಸರ್ಕಾರಿ ನೌಕರಿಯಲ್ಲಿದ್ದಾನೆ ಎಂದು ನಂಬಿಸಲಾಗಿತ್ತು. ಆದರೆ ಮದುವೆಯಾದ ಮೂರು ತಿಂಗಳ ನಂತರ … Continued

ಇನ್ನೂ ಮಳೆಯಿದೆ…ಆಕಾಶ ತತ್ವದ ಪ್ರಕಾರ ತೊಂದರೆ ಆಗಬಹುದು…ರಾಜನ ಮೇಲೆ ಭಂಗ ಬೀರಲಿದೆ ; ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ : ದೇಶದಲ್ಲಿ ಮಳೆ ಇನ್ನೂ ಮುಂದುವರಿಯಲಿದೆ. ನಾನು ಈ ಹಿಂದೆ ಪ್ರಾಕೃತಿಕ ದೋಷವಿದೆ ಎಂದು ಹೇಳಿದಂತೆ ಅದಿನ್ನೂ ಸಂಭವಿಸುತ್ತದೆ. ಈ ಬಾರಿ ಆಕಾಶದಿಂದ ದೊಡ್ಡ ಆಪತ್ತು ಕಾದಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಪಂಚ ಭೂತಗಳಿಂದಲೂ ದೇಶಕ್ಕೆ ತೊಂದರೆ ಇದೆ. ಆದರೆ ಆಗಸದಿಂದ … Continued

ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನ

ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಹಾಲಿ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿದ್ದರು. ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ಕನ್ನಡ ಪ್ರಭ ಮೊದಲಾದ ಪತ್ರಿಕೆಗಳಲ್ಲಿ ಕೆಲಸ … Continued

ಮಧುಗಿರಿ | ಎರಡು ಕಾರುಗಳ ನಡುವೆ ಡಿಕ್ಕಿ : ಐವರು ಸಾವು

ತುಮಕೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯದ ಬಳಿ ಭಾನುವಾರ ರಾತ್ರಿ 7ರ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ. ಒಂದು ಕಾರಿನಲ್ಲಿದ್ದ ನಾಲ್ವರು ಹಾಗೂ ಮತ್ತೊಂದು ಕಾರಿನಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ ಒಂದೇ ಕುಟುಂಬದ ನಾಲ್ವರು … Continued

ಕಾರವಾರ | ಗಣೇಶ ಚತುರ್ಥಿ ಖರ್ಚಿನ ವಿಚಾರವಾಗಿ ಸಹೋದರರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ…!

ಕಾರವಾರ : ಮನೆಯಲ್ಲಿ ಗಣೇಶನ ಪೂಜೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ಜಗಳ ಕೊಲೆಯಲ್ಲಿ ಮುಕ್ತಾಯವಾದ ಘಟನೆ ಜಿಲ್ಲೆಯ ಕಾರವಾರದ ಸಾಯಿಕಟ್ಟಾ ಬಿಂದು ಮಾಧವ ದೇವಸ್ಥಾನದ ಬಳಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಸಂದೇಶ ಪ್ರಭಾಕರ ಬೋರ್ಕರ್ ಎಂದು ಗುರುತಿಸಲಾಗಿದೆ. ಮನೀಶ್ ಕಿರಣ ಬೋರ್ಕರ್ ಎಂಬಾತ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಸಂದೇಶ … Continued

ರಿವರ್ ಕ್ರಾಸಿಂಗ್ ತರಬೇತಿ ವೇಳೆ ಬೋಟ್ ಮುಳುಗಿ ಬೆಳಗಾವಿ ಇಬ್ಬರು ಕಮಾಂಡೊಗಳ ಸಾವು

ಬೆಳಗಾವಿ: ಮಹಾರಾಷ್ಟ್ರದ ತಿಲಾರಿ‌ ಡ್ಯಾಂ ನಲ್ಲಿ ಬೋಟ್ ಮುಳುಗಿ ರಿವರ್ ಕ್ರಾಸಿಂಗ್ ತರಬೇತಿಗೆಂದು ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್ ನ ಇಬ್ಬರು ಕಮಾಂಡೋಗಳು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಜೆ.ಎಲ್. ವಿಂಗ್ ಕಮಾಂಡೋ ತರಬೇತಿ ಕೇಂದ್ರದ ರಾಜಸ್ಥಾನದ ವಿಜಯಕುಮಾ‌ರ ದಿನವಾಲ್ (28) ಹಾಗೂ ಪಶ್ಚಿಮ ಬಂಗಾಳದ ದಿವಾಕ‌ರ ರಾಯ್ (26) ಮೃತಪಟ್ಟವರಾಗಿದ್ದಾರೆ. ಬೋಟ್ … Continued

ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಎರಡು ದಿನದ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಸಾವು, ಪತಿ ಸ್ಥಿತಿ ಗಂಭೀರ

ಮಂಗಳೂರು : ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ನವವಿವಾಹಿತೆ ಮೃತಪಟ್ಟಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಬಂಟ್ವಾಳದ ತಲಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ ಎಂದು ವರದಿಯಾಗಿದೆ. ಇವರು ಎರಡು ದಿನಗಳ ಹಿಂದಷ್ಟೇ ವಿವಾಹವಾಗಿದ್ದರು ಎಂದು ಹೇಳಲಾಗಿದೆ. ಮೃತ ನವವಿವಾಹಿತೆಯನ್ನು ಮಾನಸ ಎಂದು ಗುರುತಿಸಲಾಗಿದೆ. ಪತಿ, ಪೆರ್ನೆ ಸಮೀಪದ ಒಡ್ಯದಗಯ … Continued

ಕಾರವಾರ : ರೈಲ್ವೆ ಟ್ರ್ಯಾಕ್​​ಮ್ಯಾನ್ ಸಮಯ ಪ್ರಜ್ಞೆಯಿಂದ ತಪ್ಪಿತು ಸಂಭಾವ್ಯ ರೈಲು ದುರಂತ…!

ಕಾರವಾರ: ರೈಲ್ವೆ ಟ್ರ್ಯಾಕ್ ಮ್ಯಾನ್ ಮಹಾದೇವ  ನಾಯ್ಕ ಅವರ ಸಮಯ ಪ್ರಜ್ಞೆಯಿಂದ ಸಂಭನೀಯ ರೈಲು ದುರಂತವೊಂದು ತಪ್ಪಿದೆ. ಟ್ರ್ಯಾಕ್ ಮ್ಯಾನ್ ಮಹಾದೇವ ಅವರ ಕಾರ್ಯಕ್ಕೆ ಕೊಂಕಣ ರೈಲ್ವೆ ವಲಯದ ಅಧಿಕಾರಿಗಳು ಶ್ಲಾಘಿಸಿದ್ದಾರೆ. ಮಹಾದೇವ ಅವರ ಕಾರ್ಯವನ್ನು ಕೊಂಕಣ ರೈಲ್ವೆ ವಲಯ ಟ್ವೀಟ್ ಮಾಡಿ ಅಭಿನಂದಿಸಿದೆ. ಕೊಂಕಣ ರೈಲ್ವೆಯ ಕುಮಟಾ-ಹೊನ್ನಾವರ ನಡುವೆ ಹಳಿಗಳ ಜೋಡಣೆಯ ವೆಲ್ಡಿಂಗ್ ಬಿಟ್ಟುಹೋಗಿತ್ತು. … Continued

ಆರೋಪಿ ನಟ ದರ್ಶನ್ ಸೆಲ್‌ಗೆ ಟಿವಿ ಅಳವಡಿಕೆ

ಬಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನಗೆ ಟಿವಿ ನೀಡಲಾಗಿದೆ. ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ.ದರ್ಶನ್ ಅವರ ಬೇಡಿಕೆಯನ್ನು ಜೈಲಧಿಕಾರಿಗಳು ಈಡೇರಿಕೆ ಮಾಡಿದ್ದಾರೆ. ಐದು ದಿನಗಳ ಹಿಂದೆ ಟಿವಿಗೆ ಆರೋಪಿ ದರ್ಶನ್ ಬೇಡಿಕೆ ಇಟ್ಟಿದ್ದರು. ಕಳೆದ ಮಂಗಳವಾರ ಟಿವಿ ನೀಡಬೇಕೆಂದು ದರ್ಶನ್ ಮನವಿ ಮಾಡಿದ್ದರು. ಜೈಲು ನಿಯಮದ ಪ್ರಕಾರ ಟಿವಿ ನೀಡಬಹುದು. … Continued

ಜಾತ್ರೆ ವೇಳೆ ಬೈಕ್​ ವೀಲ್ಹಿಂಗ್​ ಹುಚ್ಚಾಟ ​; ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ

ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳದಲ್ಲಿ ಯುವಕರಿಬ್ಬರ ಬೈಕ್ ವ್ಹೀಲಿಂಗ್ ಹುಚ್ಚಿಗೆ ನಾಲ್ವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಮಧ್ಯರಾತ್ರಿ ಕುಂಟೋಜಿ ಗ್ರಾಮದ ಹತ್ತಿರ ಮುದ್ದೇಬಿಹಾಳ-ತಾಳಿಕೋಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೈಕ್ ಸವಾರ ಗೋಟಖಂಡಕಿ ಗ್ರಾಮದ ನಿವಾಸಿ ನಿಂಗರಾಜ ಚೌಧರಿ(22), ಹಿಂಬದಿ ಸವಾರ ದೇವರಹಿಪ್ಪರಗಿ ತಾಲೂಕಿನ ಹಂಚಲಿ ಗ್ರಾಮದ ನಿವಾಸಿ ಅನಿಲ … Continued