ಬೆಳಗಾವಿ ಗ್ರಾಮೀಣದಲ್ಲಿ ರಮೇಶ ಜಾರಕಿಹೊಳಿ ಅಭಿಮಾನದ ಕಾರ್ಯಕರ್ತರ ಬೃಹತ್‌ ಸಮಾವೇಶ : ಲಕ್ಷ್ಮೀ ಹೆಬ್ಬಾಳ್ಕರ ವಿರುದ್ಧ ಗುಡುಗಿದ ರಮೇಶ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯಲ್ಲಿರುವ ಸರ್ವ ಪಕ್ಷದ ಮುಖಂಡರನ್ನು ಒಂದುಗೂಡಿಸುವ ಮೂಲಕ ಬಿಜೆಪಿಗೆ ಕರೆತರುವ ಕಾರ್ಯ ಭರದಿಂದ ಸಾಗಿದ್ದು, 2023 ರಲ್ಲಿ ಬೆಳಗಾವಿ ಗ್ರಾಮೀಣ ಸೇರಿ ಜಿಲ್ಲೆಯ 14 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದಾಗಿ ಗೋಕಾಕ ಶಾಸಕ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಂಕಲ್ಪ ಮಾಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ರಮೇಶ … Continued

ಮೈಸೂರು: ಚಿರತೆ ದಾಳಿಗೆ ಮೂರನೇ ಸಾವು ; ಸೌದೆ ತರಲು ಮನೆಯಿಂದ ಹೊರ ಹೋಗಿದ್ದ ವೃದ್ಧೆ ಮೇಲೆ ಎರಗಿದ ಚಿರತೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾರೆ. ಟಿ.ನರಸೀಪುರ ತಾಲೂಕಿನಲ್ಲಿ ಈವರೆಗೆ ಚಿರತೆ ದಾಳಿಯಿಂದ ಮೂವರು ಮೃತಪಟ್ಟಿದ್ದಾರೆ. ಕನ್ನನಾಯಕನಹಳ್ಳಿ ನಿವಾಸಿ ಸಿದ್ದಮ್ಮ (60) ಚಿರತೆ ದಾಳಿಯಿಂದ ಮೃತಪಟ್ಟ ಮಹಿಳೆಯಾಗಿದ್ದು, ಮನೆಯ ಹೊರಗಿದ್ದ ಸೌದೆ ಎತ್ತಿಕೊಳ್ಳಲು ಹೋಗಿದ್ದ ವೇಳೆ ಸಿದ್ದಮ್ಮ ಅವರ ಮೇಲೆ ಚಿರತೆ ದಾಳಿ ನಡೆಸಿ ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು … Continued

ಬೆಂಗಳೂರು : ಕಾರಿನ ಬಾನೆಟ್‌ ಮೇಲೆ ವ್ಯಕ್ತಿ ಜೋತು ಬಿದ್ದಾಗಲೂ ಒಂದು ಕಿಮೀ ಕಾರು ಚಾಲನೆ ಮಾಡಿದ ಮಹಿಳೆ | ವೀಕ್ಷಿಸಿ

ಬೆಂಗಳೂರು: ಮತ್ತೊಂದು ವಿದ್ಯಮಾನದಲ್ಲಿ ವ್ಯಕ್ತಿಯೊಬ್ಬನನ್ನು ಕಾರಿನ ಬಾನೆಟ್ ಮೇಲೆ ಸುಮಾರು 1 ಕಿಲೋಮೀಟರ್ ಎಳೆದೊಯ್ದಿರುವ ಘಟನೆ ಶುಕ್ರವಾರ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯ ವೀಡಿಯೋದಲ್ಲಿ ವ್ಯಕ್ತಿಯೊಬ್ಬ ಕಾರಿನ ಬಾನೆಟ್‌ಗೆ ಅಂಟಿಕೊಂಡಿದ್ದರೂ ಚಾಲಕ ಕಾರನ್ನು ಓಡಿಸುವುದನ್ನು ಮುಂದುವರೆಸಿರುವುದು ಕಂಡುಬರುತ್ತದೆ. ಜ್ಞಾನಭಾರತಿ ಪಿಎಸ್ ವ್ಯಾಪ್ತಿಯ ಉಳ್ಳಾಲ ಮುಖ್ಯರಸ್ತೆ ಬಳಿ ಘಟನೆ ನಡೆದಿದೆ. ಘಟನೆಯ ನಂತರ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ … Continued

ಫೆಬ್ರವರಿ 10ರಿಂದ ವಿಧಾನಮಂಡಲ‌ ಅಧಿವೇಶನ ಆರಂಭ: 17ರಂದು ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನವನ್ನು ಫೆಬ್ರವರಿ 10ರಿಂದ ನಡೆಸಲು ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಹಾಗೂ ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ್‌ ಬಜೆಟ್‌ ಮಂಡಿಸಲಿದ್ದಾರೆ. ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಫೆಬ್ರವರಿ 10ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ … Continued

ಪಿಎಸ್ಐ ನೇಮಕಾತಿ ಅಕ್ರಮ ಕಿಂಗ್‌ಪಿನ್‌ ಆರ್.ಡಿ.ಪಾಟೀಲ ಪರಾರಿ

ಕಲಬುರಗಿ: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ ಸಿಐಡಿ ಅಧಿಕಾರಿಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡವು ನಗರದ ಅಕ್ಕಮಹಾದೇವಿ ಕಾಲೋನಿಯ ಆರೋಪಿ ರುದ್ರಗೌಡ ಪಾಟೀಲ್ ನಿವಾಸಕ್ಕೆ ಬಂದಿದ್ದು ವಿಚಾರಣೆಗೆ ಮುಂದಾದಾಗ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಗುರುವಾರ ರಾತ್ರಿ ಹಗರಣದ ಆರೋಪಿ … Continued

ನಾಳೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನಾಳೆ, ಶನಿವಾರ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿಯ ವಿಜಯಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ, ನಾಳೆಯಿಂದ ವಿಜಯ ಸಂಕಲ್ಪ ಅಭಿಯಾನ ಆರಂಭಿಸುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವಿಜಯಪುರದ ನಾಗಠಾಣಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಜಯ … Continued

2022ರಲ್ಲಿ ಅತಿ ಹೆಚ್ಚು ವಿವಾಹ ಆಯೋಜಿಸಿದ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ 2ನೇ ಸ್ಥಾನ : ಮದುವೆ ವೆಚ್ಚಗಳು 2021ಕ್ಕಿಂತ 33%ರಷ್ಟು ಹೆಚ್ಚಳ

ನವದೆಹಲಿ: 2022 ರಲ್ಲಿ ಅತಿ ಹೆಚ್ಚು ವಿವಾಹಗಳನ್ನು ಆಯೋಜಿಸಿದ ಭಾರತೀಯ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ ಎಂದು ವೆಡ್ಡಿಂಗ್ ವೈರ್ ವೆಡ್ಡಿಂಗ್ ಟೆಕ್ನಾಲಜಿ ಪ್ಲಾಟ್‌ಫಾರ್ಮ್‌ನ ವಾರ್ಷಿಕ ವರದಿ ತಿಳಿಸಿದೆ. ರಾಷ್ಟ್ರ ರಾಜಧಾನಿ ದೆಹಲಿ ಮೊದಲ ಸ್ಥಾನದಲ್ಲಿದ್ದರೆ ಮುಂಬೈ ಮೂರನೇ ಸ್ಥಾನದಲ್ಲಿದೆ. ಕೋವಿಡ್‌ ಕಾರಣದಿಂದ ಎರಡು ವರ್ಷಗಳ ವಿರಾಮದ ನಂತರ, ಭಾರತದಲ್ಲಿ ಮತ್ತೆ ಮದುವೆಗಳು ಜೋರಾಗಿ … Continued

ದಾರುಣ ಘಟನೆ: ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣು

ತುಮಕೂರು: ಜಿಲ್ಲೆಯಲ್ಲಿ ಮೂವರು ಸಹೋದರಿಯರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, 9 ದಿನಗಳ ನಂತರ ಪ್ರಕರಣ ಪ್ರಕರಣ ಬೆಳಕಿಗೆ ಬಂದಿದೆ. ಶವ ಕೊಳೆತು ದುರ್ವಾಸನೆ ಬಂದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕನಾಯಕನಹಳ್ಳಿ ತಾಲೂಕು, ಹುಳಿಯಾರು ಹೋಬಳಿಯ ಬರಕನಹಾಲ್ ತಾಂಡ್ಯದ ರಂಜಿತಾ (24), ಚಂದನಾ (21 ) ಹಾಗೂ ಬಿಂದು (18) ಆತ್ಮಹತ್ಯೆ ಮಾಡಿಕೊಂಡ … Continued

ಹಿಂದಿನ ಸರ್ಕಾರಗಳಿಂದ ಬಂಜಾರ ಸಮುದಾಯದ ನಿರ್ಲಕ್ಷ್ಯ, ಆದ್ರೆ ನಾವು ಅವರಿಗೆ ಈಗ ಹಕ್ಕು ಕೊಟ್ಟಿದ್ದೇವೆ: ಪ್ರಧಾನಿ ಮೋದಿ

ಕಲಬುರಗಿ: ಹಿಂದಿನ ಸರ್ಕಾರ ಬಂಜಾರ ಸಮುದಾಯವನ್ನು (Banjara Community) ನಿರ್ಲಕ್ಷ್ಯ ಮಾಡಿತ್ತು. ಆದರೆ ನಮ್ಮ ಸರ್ಕಾರ ಅವರಿಗೆ ಹಕ್ಕು ಪತ್ರ ನೀಡುವ ಮೂಲ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಡಬಲ್‌ ಎಂಜಿನ್‌ ಸರ್ಕಾರ ಜನರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಲಬುರಗಿಯ ಮಳಖೇಡದಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಬಳ್ಳಾರಿ, ವಿಜಯನಗರ … Continued

‘ನ್ಯಾಯ ಬೇಕು ಮೋದಿ’ ಪೋಸ್ಟರ್ ಅಭಿಯಾನದಲ್ಲಿ ಪ್ರಧಾನಿಗೆ 12 ಪ್ರಶ್ನೆ ಕೇಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ..

ಬೆಂಗಳೂರು: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಕಲಬುರಗಿ ಹಾಗೂ ಯಾದಗಿರಿಗೆ ಗುರುವಾರ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ 12 ಪ್ರಶ್ನೆಗಳನ್ನು ಕೇಳಿದ್ದಾರೆ. ʻನ್ಯಾಯ ಬೇಕು ಮೋದಿʼ ಎಂದು ರಾಜ್ಯದ ಪಿಎಸ್‌ಐ ಹಗರಣ ಸೇರಿದಂತೆ ರಾಜ್ಯದ ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರಧಾನಿಗಳಿಗೆ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಸಿದ್ದರಾಮಯ್ಯ ಪ್ರಧಾನಿ … Continued