ಧಾರವಾಡ : : ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಧಾರವಾಡ : ಧಾರವಾಡದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವ ಕಾಂಗ್ರೆಸ್‌ (youth congress) ಮುಖಂಡ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಶುಕ್ರವಾರ ರಾತ್ರಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ​ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ಶುಕ್ರವಾರ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ … Continued

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ತಪ್ಪಲಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ ೧೪ ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಇಂದು, ಶುಕ್ರವಾರ (ಏ.10) ಮಧ್ಯಾಹ್ನ ಪತ್ತೆಯಾಗಿದೆ ಎಂದು ವರದಿಯಾಗಿದೆ. ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಸಿಕ್ಕಿದೆ ಎಂದು ಹೇಳಲಾಗಿದೆ. ಕೇರಳದಿಂದ ಕಳೆದ … Continued

ಹುಲಿಕಲ್ ಘಾಟ್‌ನಲ್ಲಿ ಭೀಕರ ದುರಂತ: ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಸಾವು

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ  ಹುಲಿಕಲ್‌ ಘಾಟ್‌ನಲ್ಲಿ (ಬಾಳೇಬರೆ) ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ  ಕುಸಿತ (landslide) ಸಂಭವಿಸಿ ಮೂವರು ಕಾರ್ಮಿಕರು ಸಾವಿಗೀಡಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.  ಕಾಮಗಾರಿ ಮೇಲ್ವಿಚಾರಕ ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಕಾಮಗಾರಿ ಮೇಲ್ವಿಚಾರಕ ಚಕ್ಕಾರು ಗ್ರಾಮದ ರಾಘವೇಂದ್ರ (37), ಕಾರ್ಮಿಕರಾದ ಹಾವೇರಿ ಜಿಲ್ಲೆಯ ನೆಲಗಲು … Continued

ಪರೀಕ್ಷೆ ನಡೆಯುತ್ತಿರುವಾಗಲೇ ತಾಯಿಯ ಸಾವು; ದುಃಖದಲ್ಲಿಯೇ ಪರೀಕ್ಷೆ ಬರೆದು ರಾಜ್ಯಕ್ಕೆ ಟಾಪರ್‌ : 600 ಕ್ಕೆ 600 ಅಂಕ…!

ಮಂಗಳೂರು: ಜೀವನದಲ್ಲಿ ಎದುರಾಗುವ ಕಷ್ಟಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು ಎಂಬುದಕ್ಕೆ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ಒಂದು ನಿದರ್ಶನವಾಗಿ ಹೊರಹೊಮ್ಮಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವಾಗಲೇ ಹೆತ್ತ ತಾಯಿಯನ್ನು ಕಳೆದುಕೊಂಡ ತೀವ್ರ ದುಃಖದಲ್ಲೂ ಧೃತಿಗೆಡದ ದಿಶಾ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದಿದ್ದಷ್ಟೇ ಅಲ್ಲ, 600 ಕ್ಕೆ 600 ಅಂಕ … Continued

ಕರ್ನಾಟಕ ದ್ವಿತೀಯ ಪಿಯು ಫಲಿತಾಂಶ | ಯಾವ ಜಿಲ್ಲೆ ಪ್ರಥಮ ; ಯಾವ ಜಿಲ್ಲೆಗೆ ಕೊನೆಯ ಸ್ಥಾನ : ಟಾಪರ್ ಯಾರು? ಇಲ್ಲಿದೆ ಮಾಹಿತಿ

ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶೇ.86.48ರಷ್ಟು ದಾಖಲೆಯ ಫಲಿತಾಂಶ ಬಂದಿದೆ. ನಗರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) … Continued

ಮೂಡಿಗೆರೆ : ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ…!

ಚಿಕ್ಕಮಗಳೂರು :  ಮೃತಪಟ್ಟ ಪತಿಯ ಕೊಳೆತ ಶವದೊಂದಿಗೇ ಪತ್ನಿ 10 ದಿನಗಳ ಕಾಲ ಕಳೆದ ಆಘಾತಕಾರಿ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಣಕಲ್‌ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಮಾನಸಿಕ ಅಸ್ವಸ್ಥರಾಗಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಬಾಣಕಲ್ ನಿವಾಸಿ ಸಿರಿಲ್ ಮೋನಿಸ್ (77) ಮತ್ತು ಅವರ ಪತ್ನಿ ಸಿಸಿಲ್ (62) ಮಾತ್ರ ಮನೆಯಲ್ಲಿ … Continued

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಈ ಬಾರಿ ದಾಖಲೆ ಫಲಿತಾಂಶ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ಬಾರಿ ಹೆಚ್ಚಳವಾಗಿದೆ. ಏಪ್ರಿಲ್‌ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ … Continued

ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಸುತ್ತ 663 ಚದರ ಕಿಮೀ ‘ಪರಿಸರ ಸೂಕ್ಷ್ಮ ವಲಯ’ : ಕೇಂದ್ರದ ಕರಡು ಅಧಿಸೂಚನೆ

ನವದೆಹಲಿ: ಕರ್ನಾಟಕದ ಪ್ರಕೃತಿ ಸಂಪತ್ತಿನ ಪ್ರಮುಖ ಭಾಗವಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ (KTR) ಅಸ್ತಿತ್ವಕ್ಕೆ ಮತ್ತಷ್ಟು ರಕ್ಷಣೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಪ್ರದೇಶದ ಸುತ್ತಲಿನ 663.32 ಚದರ ಕಿಲೋಮೀಟರ್‌ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ವಲಯ (Eco-Sensitive Zone – ESZ) ಎಂದು ಕೇಂದ್ರ ಪರಿಸರ ಸಚಿವಾಲಯವು ಕರಡು … Continued

ವಿಜಯಪುರ: ಭೂತನಾಳ ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಮೂವರು ಸಾವು

ವಿಜಯಪುರ : ಪ್ರವಾಸಕ್ಕೆ ಬಂದಿದ್ದ ಮೂವರು ಕೆರೆಯಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ವಿಜಯಪುರ ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ (Bhutnal Lake) ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಆರ್.ಟಿ ನಗರದಿಂದ 14 ಜನ ಕುಟುಂಬಸ್ಥರು ಪ್ರವಾಸಕ್ಕೆಂದು ವಿಜಯಪುರಕ್ಕೆ ಬಂದಿದ್ದರು. ಈ ವೇಳೆ ಭೂತನಾಳ ಕೆರೆ ವೀಕ್ಷಣೆಗೆ ಹೋಗಿದ್ದರು. ಬಾಲಕನೊಬ್ಬ ನೀರಿಗೆ ಇಳಿದು ಆಟವಾಡುವಾಗ ಮುಳುಗಿದ್ದಾನೆ. … Continued

ಯಲ್ಲಾಪುರ : ಅರೆಬೈಲ್‌ ಘಟ್ಟದಲ್ಲಿ ಕಾರಿನಲ್ಲಿ ಸಜೀವ ದಹನವಾದ ಚಾಲಕ

ಕಾರವಾರ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರಿನೊಳಗಿದ್ದ ಚಾಲಕ ಸುಟ್ಟು ಕರಕಲಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾಕ್ಕೆ ಬರುತ್ತಿದ್ದ ವೋಕ್ಸ್‌ ವ್ಯಾಗನ್‌ (Volkswagen) ಕಾರಿನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ತೀವ್ರವಾಗಿದ್ದರಿಂದ ಕಾರಿನಲ್ಲಿದ್ದ ಚಾಲಕನಿಗೆ … Continued