ಗಣೇಶ ಹಬ್ಬ: ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ವಿಶೇಷ ಹೆಚ್ಚುವರಿ ಬಸ್ ಸಂಚಾರ

ಹುಬ್ಬಳ್ಳಿ: ಗಣೇಶ ಹಬ್ಬದ ಅಂಗವಾಗಿ ಅಗಸ್ಟ್ 26 ಮತ್ತು 27 ರಂದು ಪುಣೆ, ಮಹಾರಾಷ್ಟ್ರ, ಬೆಂಗಳೂರು ಹಾಗೂ ರಾಜ್ಯ ಮತ್ತು ಅಂತರ ರಾಜ್ಯದ ವಿವಿಧ ಪ್ರದೇಶಗಳಿಂದ ಹೆಚ್ಚಿನ ಪ್ರಯಾಣಿಕರು ಹಬ್ಬಕ್ಕಾಗಿ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ … Continued

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: ರಾಮಚಂದ್ರ, ಗೀತಾ ಗೌರವ ಪ್ರಶಸ್ತಿಗೆ ಆಯ್ಕೆ, ಶಿರಸಿಯ ಎಂ.ಪಿ.ಹೆಗಡೆ ಪಡಿಗೇರಿಗೆ ವಾರ್ಷಿಕ ಕರ್ನಾಟಕ ಕಲಾಶ್ರೀ ಪ್ರಶಸ್ತಿ

ಬೆಂಗಳೂರು: ಬೆಂಗಳೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2022-23ನೇ ಸಾಲಿನ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರಕಟಿಸಿದ್ದು, ‘ಗೌರವ ಪ್ರಶಸ್ತಿ’ಗೆ ಚನ್ನರಾಯಪಟ್ಟಣದ ಕರ್ನಾಟಕ ಸಂಗೀತ ಕಲಾವಿದ ಸಿ.ಆರ್. ರಾಮಚಂದ್ರ ಹಾಗೂ ಮಂಗಳೂರಿನ ನೃತ್ಯಗುರು ಗೀತಾ ಸರಳಾಯ ಭಾಜನರಾಗಿದ್ದಾರೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಅನೂರು ಅನಂತಕೃಷ್ಣ ಶರ್ಮ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಪ್ರಕಟಿಸಿದ್ದು, ಸೆಪ್ಟಂಬರ್‌ ಕೊನೆಯ … Continued

ಶಿರಾ ಬಳಿ ರಸ್ತೆ ಅಪಘಾತ : ಮೃತಪಟ್ಟ ಆರು ಜನರ ನೇತ್ರದಾನ ಮಾಡಿದ ಕುಟುಂಬಸ್ಥರು

ತುಮಕೂರು: ಇಂದು, ಗುರುವಾರ ಬೆಳಿಗ್ಗೆ ಜಿಲ್ಲೆಯ ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಜನರ ಪೈಕಿ, 6 ಮಂದಿಯ ಕಣ್ಣುಗಳನ್ನು ದಾನ ಮಾಡಲಾಗಿದೆ. ಮೃತಪಟ್ಟವರ ಕುಟುಂಬದವರು 6 ಜನರ ನೇತ್ರದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಶಿರಾ ತಹಶೀಲ್ದಾರ್ ಮಮತಾ ಮಾಧ್ಯಮಗಳಿಗೆ ಹೇಳಿದ್ದಾರೆ. ಕ್ರೂಸರ್‌ ಚಾಲಕ ಕೃಷ್ಣ, ಸುಜಾತಾ, ಪ್ರಭುಸ್ವಾಮಿ, … Continued

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅವಕಾಶವಿಲ್ಲ, ಯಥಾಸ್ಥಿತಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್(High Court) ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಇಂದು(ಆಗಸ್ಟ್‌ 25)  ಮಧ್ಯಂತರ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪಿಸಲು ಆವಕಾಶವಿಲ್ಲ. ಬಕ್ರೀದ್ ಹಾಗೂ ರಂಜಾನ್ ಪ್ರಾರ್ಥನೆಗೆ ಯಥಾಪ್ರಕಾರ ಅವಕಾಶವಿದೆ. ಚಾಮರಾಜಪೇಟೆ … Continued

ನಿನ್ನೆ ನೇಮಕ ಮಾಡಿದ್ದ ಎಲ್ಲ 21 ಟ್ರಸ್ಟ್‌, ಪ್ರತಿಷ್ಠಾನಗಳ ನೇಮಕಾತಿ ರದ್ದುಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ನೇಮಿಸಿ ಹೊರಡಿಸಿದ್ದ ಆದೇಶವನ್ನು ತಕ್ಷಣದಿಂದಲೇ ಹಿಂಪಡೆದಿದೆ. ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ 9 ಮಂದಿಯನ್ನ ನೇಮಿಸಲಾಗಿದೆ. ಈ‌‌ ಪ್ರತಿಷ್ಠಾನದಲ್ಲಿ ಮೃತಪಟ್ಟಿರುವ ರಾಜೇಶ್ವರಿ ‌ಪೂರ್ಣಚಂದ್ರ ತೇಜಸ್ವಿ ಅವರನ್ನೂ ಸದಸ್ಯರನ್ನಾಗಿ ನೇಮಿಸಿ ಸರ್ಕಾರ ಎಡವಟ್ಟು ಮಾಡಿಕೊಂಡಿದೆ. … Continued

ತುಮಕೂರು: ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಒಂಬತ್ತು ಮಂದಿ ಸ್ಥಳದಲ್ಲೇ ಸಾವು

ತುಮಕೂರು: ಲಾರಿ ಮತ್ತು ಕ್ರೂಸರ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿದ್ದು, 4ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ (ಆಗಸ್ಟ್‌ 25) ಮುಂಜಾನೆ ನಡೆದಿದೆ. ಕ್ರೂಸರಿನಲ್ಲಿ 24 ಜನರಿದ್ದು, ಎಲ್ಲರೂ ರಾಯಚೂರು ಜಿಲ್ಲೆಯರು ಎಂದು ಹೇಳಲಾಗಿದೆ. ಗಾಯಾಳುಗಳನ್ನ ಶಿರಾ ತಾಲೂಕು ಆಸ್ಪತ್ರೆಗೆ … Continued

ಲೇಖಕಿ, ನಿವೃತ್ತ ಆಕಾಶವಾಣಿ ನಿರ್ದೇಶಕಿ ಜ್ಯೋತ್ಸ್ನಾ ಕಾಮತ್‌ ಇನ್ನಿಲ್ಲ

ಕುಮಟಾ: ಸಂಶೋಧಕಿ ಹಾಗೂ ಲೇಖಕಿ ಜ್ಯೋತ್ಸ್ನಾ ಕಾಮತ್ (86) ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಮಲ್ಲೇಶ್ವರದ ನಿವಾಸದಲ್ಲಿ ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ. ಮೃತರು ಮಗ ವಿಕಾಸ್ ಕಾಮತ್, ಸೊಸೆ ಕಿಮ್ ಕಾಮತ್ ಹಾಗೂ ಮೊಮ್ಮಗಳು ಮೀನಾ ಕಾಮತ್ ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ. ಜ್ಯೋತ್ಸ್ನಾ ಕಾಮತ್‌ ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ 1937ರಲ್ಲಿ ಜನಿಸಿದ್ದರು. … Continued

ಸರ್ಕಾರದಿಂದ ಎಡವಟ್ಟು : ಜೀವಂತವಾಗಿಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ…!

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್‌ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿದೆ. ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನವನ್ನು ಸರ್ಕಾರ ನೀಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಬರುವಂತ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ … Continued

ಮದರಸಾಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಸ್ವರೂಪ ಬದಲಾವಣೆ: ಸಚಿವ ನಾಗೇಶ

ಬೆಂಗಳೂರು : ಹಲವಾರು ಮುಸ್ಲಿಂ ಪೋಷಕರ ಆಶಯದಂತೆ ಮದರಸಾಗಳಲ್ಲೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಲು ಶಿಕ್ಷಣ ಮಂಡಳಿ ರಚಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ರಾಜ್ಯದ ಮದರಸಾಗಳಲ್ಲಿ ನೀಡುತ್ತಿರುವ ಶಿಕ್ಷಣದ ಗುಣಮಟ್ಟ, ಮೂಲಸೌಕರ್ಯ ಮತ್ತು ಶಿಕ್ಷಣದ ಸ್ವರೂಪ ತಿಳಿಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮದರಸಾಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ 15 … Continued

ಪಂಚಮಸಾಲಿ ಮೀಸಲಾತಿ ಪ್ರಕರಣ: ನ್ಯಾ. ಸುಭಾಷ್‌ ಆಡಿ ನೇತೃತ್ವದ ಸಮಿತಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ವೀರಶೈವ-ಲಿಂಗಾಯತ ಪಂಚಮಸಾಲಿ ಉಪ ಪಂಗಡವನ್ನು 3ಎ ಪ್ರವರ್ಗದಿಂದ 2ಎಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಆಕ್ಷೇಪಣೆ ಸಲ್ಲಿಸಲು ಬುಧವಾರ ನೋಟಿಸ್‌ ಜಾರಿ ಮಾಡಿರುವ ಕರ್ನಾಟಕ ಹೈಕೋರ್ಟ್‌, ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿದೆ ಎಂದು ಬಾರ್‌ … Continued