ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಸಾಹಿತ್ಯ ವಿಮರ್ಶಕ ಪ್ರೊ. ಎಂ.ಎಚ್​.ಕೃಷ್ಣಯ್ಯ ನಿಧನ

ಬೆಂಗಳೂರು: ಹಿರಿಯ ಸಾಹಿತಿ ಹಾಗೂ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಎಚ್ ಕೃಷ್ಣಯ್ಯ ಅವರು, ಇಂದು, ಶುಕ್ರವಾರ   ನಿಧನರಾಗಿದ್ದಾರೆ. ಪ್ರೊ. ಕೃಷ್ಣಯ್ಯ ಅವರಿಗೆ 85 ವರ್ಷ ವಯಸ್ಸಾಗಿತ್ತು. ಉತ್ತಮ ಬರಹಗಾರರು, ಪ್ರಸಿದ್ಧ ಸಾಹಿತ್ಯ ವಿಮರ್ಶಕರು ಮತ್ತು ಕಲಾಪ್ರೇಮಿಗಳಾಗಿದ್ದರು.ಇವರ ಅಂತಿಮ ಸಂಸ್ಕಾರವು ಬೆಂಗಳೂರಿನ ಗಾಯತ್ರಿನಗರದ ಹರಿಶ್ಚಂದ್ರ ಘಾಟ್​ನಲ್ಲಿ ನಾಳೆ (ಶನಿವಾರ) 11 ಗಂಟೆಗೆ ನಡೆಯಲಿದೆ ಎಂದು … Continued

‘ಅಸಾಧಾರಣ’ ಗಾಯಕ, ಕನ್ನಡದ ಮನೆ ಮಾತಾಗಿದ್ದರು : ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಕನ್ನಡ ಸಿನೆಮಾ ಹಾಡಿಗೆ ಹಿನ್ನೆಲೆ ಗಾಯನಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಸುಗಮ ಸಂಗೀತದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸುಬ್ಬಣ್ಣ ಕನ್ನಡ ಹಾಡುಗಳ ಮೂಲಕ ಕನ್ನಡದ ಜನರ ಅವರು ಮನೆಮಾತಾಗಿದ್ದರು ಎಂದು ಉಲ್ಲೇಖಿಸಿದ್ದಾರೆ. ಟ್ವೀಟ್‌ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಸುಬಣ್ಣ ಅವರ … Continued

ಸಮಯಕ್ಕೆ ದೊರಕದ ಬ್ರಿಟನ್‌ ವೀಸಾ: ಅಂತಾರಾಷ್ಟ್ರೀಯ ವಿದಾರ್ಥಿ ಕ್ರೀಡಾಕೂಟಕ್ಕೆ ತೆರಳಲಾಗದೆ ಬೆಂಗಳೂರು ವಿದ್ಯಾರ್ಥಿಗಳಿಗೆ ನಿರಾಸೆ

ಬೆಂಗಳೂರು: ಬೆಂಗಳೂರು ಸ್ಕೂಲ್ ಸ್ಪೋರ್ಟ್ಸ್ ಫೌಂಡೇಶನ್‌ನ ವಿದ್ಯಾರ್ಥಿ-ಕ್ರೀಡಾಪಟುಗಳು ಬ್ರಿಟನ್‌ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಕ್ಕಳ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವರ ವೀಸಾ ಅರ್ಜಿಗಳಿಗೆ ಸರಿಯಾದ ಸಮಯಕ್ಕೆ ಸ್ಪಂದಿಸದ ಕಾರಣ ಕಂಗಾಲಾಗಿದ್ದಾರೆ ಮತ್ತು ಈಗ ಉದ್ಘಾಟನಾ ಸಮಾರಂಭ ಮುಗಿದರೂ ಅವರಿಗೆ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಒಲಿಂಪಿಕ್ಸ್ ಎಂದೂ ಕರೆಯಲ್ಪಡುವ ಅಂತಾರಾರಾಷ್ಟ್ರೀಯ ಮಕ್ಕಳ ಕ್ರೀಡಾಕೂಟವನ್ನು ಇಂಗ್ಲೆಂಡ್‌ನ ಕೋವೆಂಟ್ರಿಯಲ್ಲಿ 2022 ಆಗಸ್ಟ್ 11 … Continued

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್: ಶಿಕ್ಷಕರ ನೇಮಕಾತಿ ವಯೋಮಿತಿ ಹೆಚ್ಚಳ, ‘ಕಟಾಫ್‌ ಅಂಕ’ ಇಳಿಸಿದ ಸರ್ಕಾರ

ಬೆಂಗಳೂರು: ಶಿಕ್ಷಕರ ನೇಮಕಾತಿಗೆ ವಯೋಮಿತಿ ಏರಿಕೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದ್ದು, ಶಿಕ್ಷಕರ ನೇಮಕಾತಿ ಹೊಸ ನಿಯಮಾವಳಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಈ ಮೂಲಕ ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಸಿಕ್ಕಿದೆ. ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ … Continued

ಲೋಕಾಯುಕ್ತ ದುರ್ಬಲಗೊಳಸಲು ರಾಜಕಾರಣಿಗಳಿಂದ ಒಳ ಒಪ್ಪಂದ, ಆದರೆ ಹೈಕೋರ್ಟ್‌ ತೀರ್ಪಿನಿಂದ ಲೋಕಾಯುಕ್ತಕ್ಕೆ ಬಲ : ಸಂತೋಷ್‌ ಹೆಗ್ಡೆ

ಮೈಸೂರು: ಕರ್ನಾಟಕದ ಮೂರು ಪಕ್ಷದವರೂ ಹೈಕೋರ್ಟ್‌ ಎಸಿಬಿ ರದ್ದುಪಡಿಸಿದ ತೀರ್ಪನ್ನು ವಿರೋಧಿಸಬಹುದು ಆದರೆ, ಈ ತೀರ್ಪಿನಿಂದ ಲೋಕಾಯುಕ್ತಕ್ಕೆ ಬಲ ಬಂದಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಇದ್ದ ವೇಳೆ ಸಾಕಷ್ಟು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಶಿಕ್ಷೆ ಆಗಿತ್ತು ಹೀಗಾಗಿ ಹೈಕೋರ್ಟ್‌ ತೀರ್ಪಿನ ನಂತರ ಎಲ್ಲ ಪಕ್ಷಗಳ ಭ್ರಷ್ಟಾಚಾರಿಗಳಿಗೆ … Continued

ಬೆಳಗಾವಿ ನಂತರ ಈಗ ಮೂಡಲಗಿಯ ಧರ್ಮಟ್ಟಿಯಲ್ಲೂ ಚಿರತೆ ಪ್ರತ್ಯಕ್ಷ

ಬೆಳಗಾವಿ : ಬೆಳಗಾವಿ ಮಹಾನಗರದಲ್ಲಿ ವಾರದ ಹಿಂದೆ ಚಿರತೆ ಪ್ರತ್ಯಕ್ಷವಾಗಿ ಜನರ ಆತಂಕಕ್ಕೆ ಕಾರಣವಾಗಿದೆ. ಅದನ್ನು ಹಿಡಿಯುವ ಪ್ರಯತ್ನದಲ್ಲಿ ಜಿಲ್ಲಾಡಳಿತ ನಿರತವಾಗಿರುವಾಗಲೇ ಜಿಲ್ಲೆಯ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿ ಜನರಿಗೆ ಭೀತಿ ಮೂಡಿಸಿದೆ. ಧರ್ಮಟ್ಟಿಯ ಅನಿಲ್ ಮಂದ್ರೋಳಿ ಎಂಬುವರಿಗೆ ಸೇರಿದ ಎಮ್ಮೆ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಅದರ ಕತ್ತಿಗೆ ಬಾಯಿ … Continued

ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ, ದತ್ತಾತ್ರೇಯ ಹೊಸಬಾಳೆ ಸಿದ್ದರಾಮಯ್ಯ ಸೇರಿ ಹಲವರ ಸಂತಾಪ

ಬೆಂಗಳೂರು: ಸುಗಮ ಸಂಗೀತ ಕ್ಷೇತ್ರದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಗುರುವಾರ ನಿಧನರಾಗಿದ್ದು, ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಆರ್​ಎಸ್​ಎಸ್​ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್​ ನಾಯಕ ಎಚ್​.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ ಸೇರಿದಂತೆ ಹಲವು … Continued

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಬೆಂಗಳೂರು: ಕನ್ನಡ ಸಿನೆಮಾಕ್ಕೆ ಮೊದಲ ರಾಷ್ಟ್ರಪ್ರಶಸ್ತಿ ತಂದುಕೊಟ್ಟ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರನ್ನು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ. ಮಗಳು ‘ದಿ ಹಿಂದೂ’ ದಿನ ಪತ್ರಿಕೆಯ ಸ್ಥಾನಿಕ ಸಂಪಾದಕಿ ಭಾಗೇಶ್ರಿ, ಮಗ ಶ್ರೀರಂಗ, … Continued

ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಹಾರಾಡಿದ ಎಬಿವಿಪಿ ಧ್ವಜ ; ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು

ತುಮಕೂರು: ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕೇಸರಿ ಧ್ವಜ ಹಾರಾಡಿದ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ತುಮಕೂರು ಜಿಲ್ಲಾ ಪೊಲೀಸರಿಗೆ ದೂರು ನೀಡಲಾಗಿದ್ದು, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ವಿ ಹರಿಪ್ರಸಾದ ಅವರು ಸಚಿವ ನಾಗೇಶ್ ವಿರುದ್ಧ ತಿಪಟೂರು ಡಿವೈಎಸ್​ಪಿಯವರಿಗೆ ದೂರು ನೀಡಿದ್ದಾರೆ. … Continued

ಆಗಸ್ಟ್‌ 12 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ; ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ

ಹುಬ್ಬಳ್ಳಿ: ರಾಜ್ಯಾದ್ಯಂತ ಆಗಸ್ಟ್‌ 12 ರಿಂದ 25ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ನಿಯೋಜಿತ ಪರೀಕ್ಷಾ ಕೇಂದ್ರದಿಂದ ಹಿಂದಿರುಗುವಾಗ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ … Continued