ರಂಭಾಪುರಿ ಶ್ರೀಗಳ ಬಳಿ ನೋವು ತೋಡಿಕೊಂಡಿಲ್ಲ, ಆಗಿದ್ದನ್ನು ವಿವರಿಸಿದ್ದೇನೆ : ಸಿದ್ದರಾಮಯ್ಯ

ಹಾಸನ: ನಾನು ರಂಭಾಪುರಿ ಶ್ರೀಗಳ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ, ಆದರೆ ಏನಾಯ್ತು ಎಂಬುದರ ಬಗ್ಗೆ ಅವರಿಗೆ ವಿವರಿಸಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ರಂಭಾಪುರಿ ಶ್ರೀ ಭೇಟಿಯಾಗಿದ್ದ ಸಿದ್ದರಾಮಯ್ಯ ಅವರು, ಧರ್ಮ ಒಡೆಯುವುದು ಉದ್ದೇಶವಾಗಿರಲಿಲ್ಲ. ನನ್ನನ್ನು ಕೆಲವರು ದಾರಿ ತಪ್ಪಿಸಿದ್ದಾರೆ ಎಂದು ನೋವು ತೋಡಿಕೊಂಡಿದ್ದಾರೆ, ಪಶ್ಚಾತಾಪ ಪಟ್ಟಿದ್ದಾರೆ ಎಂದು ಹೇಳಿದ್ದರು ಎಂಬುದು … Continued

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಭದ್ರತೆ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಜೊತೆ ಖುದ್ದು ಮಾತಾಡಿದ್ದೇನೆ ಹಾಗೂ ಅವರಿಗೆ ಸೂಕ್ತ ಭದ್ರತೆ ಒದಗಿಸಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶುಕ್ರವಾರ ಮಾಧ್ಯದವರ ಜೊತೆ ಮಾತನಾಡಿದ ಅವರು, ಯಾರಿಂದಲಾದರೂ ಬೆದರಿಕೆ ಕರೆ ಬಂದಿದೆಯಾ ಎಂದು ಸಿದ್ದರಾಮಯ್ಯ ಅವರನ್ನೇ … Continued

ಸಾರ್ವಜನಿಕ ಗಣೇಶೋತ್ಸವ ಸಾವರ್ಕರ್ ಭಾವಚಿತ್ರ ಇಟ್ಟು ಆಚರಣೆ: ಮುತಾಲಿಕ

ಬೆಂಗಳೂರು: ಸ್ವಾತಂತ್ರ್ಯ ವೀರ ಸಾವರ್ಕರ್ ಮಹಾ ಕ್ರಾಂತಿಕಾರಿ.. ಹೀಗಾಗಿ ಬರುವ ಸಾರ್ವಜನಿಕ ಗಣೇಶೋತ್ಸವದಲ್ಲಿ ‘ಸಾವರ್ಕರ್ ಭಾವಚಿತ್ರ ಇಟ್ಟು ಉತ್ಸವ’ ಆಚರಿಸಲು ನಿರ್ಧರಿಸಲಾಗಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದರು. ಪ್ರೆಸ್​ಕ್ಲಬ್​ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶನ ಮೂರ್ತಿ ಕೂಡ್ರಿಸುವ ಸ್ಥಳಗಳಲ್ಲಿ ಸಾವರ್ಕರ್ ಭಾವಚಿತ್ರ ಇಡುವಂತೆ ಸಂಘಟಕರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು. ಅದೇ ರೀತಿ … Continued

ಧರ್ಮ ಒಡೆಯುವ ಉದ್ದೇಶವಿರಲಿಲ್ಲ : ರಂಭಾಪುರೀ ಶ್ರೀಗಳ ಮುಂದೆ ಸಿದ್ದರಾಮಯ್ಯ ಪಶ್ಚಾತ್ತಾಪ

ಚಿಕ್ಕಮಗಳೂರು: ಧರ್ಮ ಒಡೆಯುವುದು ನನ್ನ ಉದ್ದೇಶ ಆಗಿರಲಿಲ್ಲ, ಲಿಂಗಾಯತ ಧರ್ಮದ ವಿಚಾರದಲ್ಲಿ ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಮತ್ತೆ ಧರ್ಮದ ವಿಷಯಕ್ಕೆ ಕೈಹಾಕುವುದಿಲ್ಲ ಎಂದು ತಮ್ಮೆದುರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ ಎಂದು ರಂಭಾಪುರೀ ಶ್ರೀಗಳು ಹೇಳಿದ್ದಾರೆ. ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ಶುಕ್ರವಾರ, ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೂ … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಐವರು ಆರೋಪಿಗಳನ್ನು ವಶಕ್ಕೆ ಪಡೆದ ಎನ್‌ಐಎ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ ನೆಟ್ಟಾರೆ ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದೆ. ಐವರು ಆರೋಪಿಗಳಾದ ರಿಯಾಜ್ (27), ನೌಫಲ್ (28), ಸೈನುಲ್ ಅಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ಎಂಬವರನ್ನು ಎನ್‌ಐಎ ಆರು ದಿನಗಳ ಕಾಲ … Continued

ಹೊನ್ನಾವರ: ಸೊಳ್ಳೆ ನಾಶಕ ಲಿಕ್ವಿಡ್‌ ಕುಡಿದು ಎರಡು ವರ್ಷದ ಮಗು ಸಾವು

ಹೊನ್ನಾವರ: ಸೊಳ್ಳೆ ನಾಶಕ ಲಿಕ್ವಿಡ್‌ ಕುಡಿದು ಎರಡು ವರ್ಷದ ಮಗು ಸಾವು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಕಾವೂರು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಆರವ್ ಮಹೇಶ ನಾಯ್ಕ(2) ಮೃತ ದುರ್ದೈವಿ ಮಗು ಎಂದು ಗುರುತಿಸಲಾಗಿದೆ. ಸೊಳ್ಳೆ ನಿವಾರಣೆಗೆಂದು ತಂದಿದ್ದ ಸೊಳ್ಳೆ ನಾಶಕ ಲಿಕ್ವಿಡ್‌ ಅನ್ನು ಮನೆಯಲ್ಲಿ ನೆಲಕ್ಕೆ ಇಟ್ಟಿದ್ದರು. ಆಟವಾಡುತ್ತಿದ್ದ ಮಗುವಿನ … Continued

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಮಡಿಕೇರಿ: ರಾಜ್ಯ ವಿಧಾನಸಭೆ ವಿಪಕ್ಷ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆ ಸಂಬಂಧಿಸಿದಂತೆ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಕೊಡಗು ಜಿಲ್ಲೆಯ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಡರಾತ್ರಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಗುರುವಾರ ಇಲ್ಲಿಗೆ ಬಂದಿದ್ದ … Continued

ಬೆಳಗಾವಿ ಐಟಿಬಿಪಿ ಶಿಬಿರದಲ್ಲಿ ಎಕೆ-47 ರೈಫಲ್​ಗಳ ಕಳ್ಳತನ

ಬೆಳಗಾವಿ: ಬೆಳಗಾವಿಯ ಇಂಡೋ ಟಿಬೆಟ್‌ ಗಡಿ ಪೋಲಿಸ್​ (ಐಟಿಬಿಪಿ) ತರಬೇತಿ ಕ್ಯಾಂಪಸ್ ಪ್ರದೇಶದಲ್ಲಿ ಎರಡು ಎಕೆ-47 ರೈಫಲ್​ಗಳು ಕಳ್ಳತನವಾಗಿದೆ ಎಂದು ವರದಿಯಾಗಿದ್ದು,  ಆತಂಕಕ್ಕೆ ಕಾರಣವಾಗಿದೆ. ಬೆಳಗಾವಿ ತಾಲೂಕಿನ ಹಾಲಭಾವಿಯಲ್ಲಿರುವ ಐಟಿಬಿಪಿ ಕ್ಯಾಂಪಿನಲ್ಲಿ ಮಧುರೈನ 45ನೇ ಬೆಟಾಲಿಯನ್‌ ಪೊಲೀಸ್‌ ಪಡೆಯ ರಾಜೇಶಕುಮಾರ, ಸಂದೀಪ ಮೀನಾ ಎಂಬವರು ನಕ್ಸಲ್ ನಿಗ್ರಹ ದಳದ ತರಬೇತಿ ಪಡೆಯುತ್ತಿದ್ದರು. ಅವರಿಗೆ ಸೇರಿದ ಎರಡು … Continued

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ನ್ಯಾ. ಸುಭಾಷ್ ಆಡಿ ನೇತೃತ್ವದ ಸಮಿತಿ ಕಾರ್ಯಾಚರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ಬೆಂಗಳೂರು: ವೀರಶೈವ-ಲಿಂಗಾಯತ ಪಂಚಮಸಾಲಿ ಉಪಪಂಗಡವನ್ನು 2ಎಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಮುಂದಿನ ಆದೇಶದ ವರೆಗೆ ಮುಂದುವರಿಯದಂತೆ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ. ಕಾನೂನಿಗೆ ವಿರುದ್ಧವಾಗಿ ಉನ್ನತಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. … Continued

ಮಧ್ಯಾಹ್ನ ಬಿಸಿಯೂಟ ಯೋಜನೆ ಅಡುಗೆ ತಯಾರಕರು ಕನಿಷ್ಠ ವೇತನ ಕಾಯಿದೆಯಡಿ ಸಂಬಳ ಪಡೆಯಲು ಅರ್ಹರಲ್ಲ: ಹೈಕೋರ್ಟ್‌ ತೀರ್ಪು

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ಸಹಾಯಕರು ಕನಿಷ್ಠ ವೇತನ ಕಾಯಿದೆಯಡಿ ವೇತನ ಪಡೆಯಲು ಅರ್ಹರಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆ ತಯಾಕರು ಮತ್ತು ಅಡುಗೆ ಸಹಾಯಕರಿಗೆ ಕನಿಷ್ಠ ವೇತನ ಕಾಯ್ದೆ … Continued