ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರಕ್ಕೆ ಖಿನ್ನತೆಗೊಳಗಾದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪ್ಯದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಂಪ್ಯ ಬೈಲಾಡಿ ನಿವಾಸಿ ಪುತ್ರಿ ನಿಶಾ (17) ಎಂಬವರು ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ ಒಂದು ವಾರದ ಹಿಂದೆ ವಿಷ ಸೇವಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು : ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಚುರುಕು ಪಡೆದಿದೆ. ಇಂದಿನಿಂದ (ನವೆಂಬರ್‌ 26) ಡಿಸೆಂಬರ್‌ 2ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಭಾನುವಾರ ಸಂಜೆ ವೇಳೆಗೆ ಬೆಂಗಳೂರು ನಗರದ ಹಲವೆಡೆ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಬೆಂಗಳೂರು … Continued

ಎಲೆ-ಅಡಿಕೆ ತಿನ್ನಿಸಿ 9 ತಿಂಗಳ ಶಿಶು ಕೊಲೆ ಮಾಡಿದಳೇ ಅಜ್ಜಿ..? ; ಆರೋಪಿಸಿ ಮೃತ ಶಿಶುವಿನ ತಾಯಿಯಿಂದ ದೂರು ದಾಖಲು

ಗದಗ: ವೃದ್ಧೆಯೊಬ್ಬರು ತನ್ನ ಒಂಬತ್ತು ತಿಂಗಳ ಮೊಮ್ಮಗನನ್ನು ಕೊಂದಿದ್ದಾರೆ ಎಂಬ ಆರೋಪಿಸಿ ಗದಗ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವಿನ ತಾಯಿ ತನ್ನ ಅತ್ತೆಯ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ನವೆಂಬರ್ 22ರಂದು ಘಟನೆ ನಡೆದಿದೆ ಎನ್ನಲಾಗಿದೆ. ಮಗುವಿನ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ, ಪ್ರಕರಣ … Continued

ಬೆಳಗಾವಿ ದಂಡು ಮಂಡಳಿ ಸಿಇಒ ಆತ್ಮಹತ್ಯೆ

ಬೆಳಗಾವಿ : ಬೆಳಗಾವಿ ದಂಡು ಮಂಡಳಿಯ ಸಿಇಒ ಕೆ.ಆನಂದ (40) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಬೆಳಗಾವಿ ದಂಡು ಮಂಡಳಿಯಲ್ಲಿ ಒಂದೂವರೆ ವರ್ಷಗಳಿಂದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಆನಂದ ಅವರು ಮೂಲತಃ ತಮಿಳುನಾಡಿನವರು. ಇಂದು, ಶನಿವಾರ ಅವರ … Continued

ಅಮಿತ್ ಶಾ ಬಂದು ಮನೆಯಲ್ಲಿ 2 ಗಂಟೆ ಕೂತು ಜೀವ ತೆಗೆದ್ರು : 2 ಕಡೆ ಸ್ಪರ್ಧೆ ವಿಚಾರಕ್ಕೆ ಸೋಮಣ್ಣ ಬೇಸರ

ತುಮಕೂರು: ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಒಂದು ಕಾಲನ್ನು ಪಕ್ಷದಿಂದ ಹೊರಗಿಟ್ಟಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು, ಗೃಹ ಸಚಿವ ಅಮಿತ್ ಶಾ ಬಗ್ಗೆ ಶನಿವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಸಂದರ್ಭದಲ್ಲಿ ವಿ ಸೋಮಣ್ಣ ಅವರು ಸಿದ್ದಲಿಂಗ ಸ್ವಾಮೀಜಿ ಬಳಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ … Continued

ಬಾಲ್ ಕ್ಯಾಚ್​ ಹಿಡಿಯುವಾಗ ವಿದ್ಯುತ್ ಸ್ಪರ್ಶ: ಬಾಲಕ ಸಾವು

ಧಾರವಾಡ : ಗೆಳೆಯರೊಂದಿಗೆ ಸೇರಿ ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕನನ್ನು ಎ‌ಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಶ್ರೇಯಸ್ ಶಿನ್ನೂರ(16 ವರ್ಷ) ಎಂದು ಗುರುತಿಸಲಾಗಿದೆ. ಸ್ನೇಹಿತನ ಪ್ರಾಣವನ್ನು ಉಳಿಸಲು ಯತ್ನಿಸಿದ ಮತ್ತೋರ್ವ ಬಾಲಕನಿಗೆ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೇಯಸ್‌ ಶುಕ್ರವಾರ … Continued

ಇಂದು ಹುತಾತ್ಮ ಸೇನಾಧಿಕಾರಿ ಕ್ಯಾ.ಪ್ರಾಂಜಲ್ ಅಂತ್ಯಕ್ರಿಯೆ, ಅಂತಿಮ ದರ್ಶನಕ್ಕೆ ಅವಕಾಶ: 50 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು : ಕ್ಯಾಪ್ಟನ್​ ಪ್ರಾಂಜಲ್ ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿಯೇ ಬೆಂಗಳೂರು ತಲುಪಿದೆ. ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಪಡೆಯ ವಿಮಾನದಲ್ಲಿ ಪಾರ್ಥಿವ ಶರೀರ ಆಗಮಿಸಿದೆ. ಆ ಬಳಿಕ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರಕ್ಕೆ ಅವರ ತಂದೆ-ತಾಯಿ ಮೊದಲಿಗೆ ಪುಷ್ಪಗುಚ್ಛ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದರು. ಆ ಬಳಿಕ ರಾಜ್ಯಪಾಲ ಥಾವರ್​ಚಂದ್ … Continued

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸೇವಾವಧಿ ಎರಡು ತಿಂಗಳು ವಿಸ್ತರಣೆ

ಬೆಂಗಳೂರು: ಜಾತಿ ಗಣತಿ ವರದಿ ಕುರಿತಂತೆ ವ್ಯಾಪಕ ಚರ್ಚೆಗಳಾಗುತ್ತಿರುವ ಮಧ್ಯೆಯೇ ರಾಜ್ಯ ಸರ್ಕಾರ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ. ಹಿಂದುಳಿದ ವರ್ಗಗಳ ಆಯೋಗದ (Backward Classes Commission) ಅಧ್ಯಕ್ಷ ಮತ್ತು ಸದಸ್ಯರ ಅವಧಿ ಎರಡು ತಿಂಗಳು ವಿಸ್ತರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ … Continued

ಗೋವಾದಿಂದ ಬೆಳಗಾವಿಗೆ ತರುತ್ತಿದ್ದ 25 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

ಬೆಳಗಾವಿ :ಗೋವಾದಿಂದ ಬೆಳಗಾವಿಗೆ ಸಾಗಿಸುತ್ತಿದ್ದ ಅಕ್ರಮ ಮದ್ಯವನ್ನು ಅಬಕಾರಿ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 25 ಲಕ್ಷ ಅಕ್ರಮ ಮದ್ಯವನ್ನು ಬೆಳಗಾವಿಯ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು ಈ ಸಂಬಂಧ ಬಿಹಾರದ ಸುಬೋಧ ಮಹತೊ ಎಂಬಾತನನ್ನು ಬಂಧಿಸಿದ್ದಾರೆ. ಗೋವಾದಿಂದ ಬೆಳಗಾವಿಗೆ ತರುತ್ತಿದ್ದ ಲಾರಿಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದಾಗ ಅದರಲ್ಲಿ 90 ಬಾಕ್ಸ್ ನಲ್ಲಿದ್ದ … Continued

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯಲು ಕ್ಯಾಬಿನೆಟ್ ತೀರ್ಮಾನ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ರದ್ದು ಮಾಡುವ ಪ್ರಸ್ತಾವೆನೆಗೆ ರಾಜ್ಯ ಸಚಿವ ಸಂಪುಟದ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿ ನವೆಂಬರ್‌ ೨೫ರಂದು ಬಿಜೆಪಿ ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದರು, ಮಾಜಿ ಸಚಿವರು, ಶಾಸಕರು … Continued